Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 16:9 - ಕನ್ನಡ ಸತ್ಯವೇದವು C.L. Bible (BSI)

9 “ಆಗ ನಾನು ನೀರಿನಲ್ಲಿ ನಿನಗೆ ಸ್ನಾನ ಮಾಡಿಸಿ, ನಿನ್ನ ಮೇಲಿನ ರಕ್ತವನ್ನು ತೊಳೆದುಬಿಟ್ಟು, ನಿನಗೆ ತೈಲವನ್ನು ಹಚ್ಚಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “ಆಗ ನಾನು ನೀರಿನಲ್ಲಿ ನಿನ್ನನ್ನು ಸ್ನಾನಮಾಡಿಸಿ ನಿನ್ನ ಮೇಲಣ ರಕ್ತವನ್ನು ತೊಳೆದುಬಿಟ್ಟು ನಿನಗೆ ತೈಲವನ್ನು ಹಚ್ಚಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆಗ ನಾನು ನೀರಿನಲ್ಲಿ ನಿನ್ನನ್ನು ಸ್ನಾನಮಾಡಿಸಿ ನಿನ್ನ ಮೇಲಣ ರಕ್ತವನ್ನು ತೊಳೆದುಬಿಟ್ಟು ನಿನಗೆ ತೈಲವನ್ನು ಹಚ್ಚಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “‘ನಾನು ನಿನ್ನನ್ನು ನೀರಿನಲ್ಲಿ ತೊಳೆದೆನು. ನಿನ್ನ ರಕ್ತವನ್ನು ತೊಳೆದೆನು. ನಿನ್ನ ಮೈಗೆ ಎಣ್ಣೆ ಹಚ್ಚಿ ಉಜ್ಜಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ ‘ಆಮೇಲೆ ನಿನ್ನನ್ನು ನೀರಿನಿಂದ ತೊಳೆದೆನು; ನಿನ್ನ ರಕ್ತವನ್ನು ನಿನ್ನಿಂದ ತೊಳೆದೆನು, ನಿನಗೆ ಎಣ್ಣೆಯಿಂದ ಅಭಿಷೇಕ ಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 16:9
16 ತಿಳಿವುಗಳ ಹೋಲಿಕೆ  

ಸಜ್ಜುಗೊಳಿಸುವೆ ನೀ ಶತ್ರುಗಳ ಕಣ್ಮುಂದೆಯೆ ನನಗೌತಣವನು I ಹಚ್ಚುವೆ ತಲೆಗೆ ತೈಲವನು, ತುಂಬಿತುಳುಕಿಸುವೆ ಪಾನಪಾತ್ರೆಯನು II


ನೀನು ಸ್ನಾನಮಾಡಿಕೊಂಡು ಸುಗಂಧ ತೈಲವನ್ನು ಹಚ್ಚಿ, ಸೊಗಸಾದ ಉಡುಪನ್ನು ತೊಟ್ಟುಕೊ. ಆಮೇಲೆ ಕಣಕ್ಕೆ ಹೋಗು. ಅವನು ಅನ್ನಪಾನಮಾಡಿ ಮುಗಿಸುವವರೆಗೂ ಅವನಿಗೆ ಕಾಣಿಸಿಕೊಳ್ಳಬೇಡ.


ಹೀಗೆ ಪವಿತ್ರಾತ್ಮ, ಜಲ ಮತ್ತು ರಕ್ತವೆಂಬ ಮೂರು ಸಾಕ್ಷಿಗಳು ಇವೆ. ಈ ಮೂರೂ ಕೊಡುವ ಸಾಕ್ಷ್ಯ ಒಂದೇ.


ನೀವು ಕ್ರಿಸ್ತಯೇಸುವಿನಿಂದ ಅಭಿಷಿಕ್ತರಾಗಿದ್ದೀರಿ. ಆ ಅಭಿಷೇಕವು ನಿಮ್ಮಲ್ಲಿ ನೆಲೆಸಿದೆ. ಆದ್ದರಿಂದ ಯಾರೂ ನಿಮಗೆ ಬೋಧಿಸುವ ಅವಶ್ಯಕತೆಯಿಲ್ಲ. ಆ ಅಭಿಷೇಕವೇ ನಿಮಗೆ ಎಲ್ಲವನ್ನೂ ಬೋಧಿಸುತ್ತಾ ಬರುತ್ತದೆ. ಈ ಬೋಧನೆ ಸತ್ಯವಾದುದು, ಮಿಥ್ಯವಾದುದಲ್ಲ. ಅದರ ಪ್ರಕಾರವೇ ಕ್ರಿಸ್ತಯೇಸುವಿನಲ್ಲಿ ನೆಲೆಸಿರಿ.


ಹಿಂದೆ ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ. ಆದರೆ ಈಗ ಪ್ರಭು ಯೇಸುಕ್ರಿಸ್ತರ ನಾಮದಲ್ಲಿ ಮತ್ತು ದೇವರಾತ್ಮನಲ್ಲಿ ನೀವು ಶುದ್ಧರಾಗಿದ್ದೀರಿ, ಪುನೀತರಾಗಿದ್ದೀರಿ ಹಾಗೂ ದೇವರೊಡನೆ ಸತ್ಸಂಬಂಧ ಹೊಂದಿದ್ದೀರಿ.


ನೀವಾದರೋ ಪರಿಶುದ್ಧವಾದವರಿಂದ ಅಭಿಷಿಕ್ತರಾಗಿದ್ದೀರಿ. ಸತ್ಯವನ್ನು ಅರಿತವರಾಗಿದ್ದೀರಿ.


ನಿಮ್ಮನ್ನೂ ನಮ್ಮನ್ನೂ ಕ್ರಿಸ್ತಯೇಸುವಿನಲ್ಲಿ ಒಂದಾಗಿಸಿ ಸ್ಥಿರಪಡಿಸಿದವರು ದೇವರೇ. ನಮ್ಮನ್ನು ಅಭಿಷೇಕಿಸಿದವರೂ ಮೀಸಲಾಗಿಟ್ಟವರೂ ದೇವರೇ.


ಹೀಗೆ ಅವರು ಮೋಡದಲ್ಲಿಯೂ ಸಮುದ್ರದಲ್ಲಿಯೂ ಸ್ನಾನದೀಕ್ಷೆಯನ್ನು ಪಡೆದು ಮೋಶೆಗೆ ಶಿಷ್ಯರಾದರು.


ನಾನು ನಿಮ್ಮ ಮೇಲೆ ನಿರ್ಮಲೋದಕವನ್ನು ಪ್ರೋಕ್ಷಿಸುವೆನು, ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ ಸಕಲ ವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.


ನಿನ್ನ ಜನನವನ್ನು ಕುರಿತು ಏನು ಹೇಳಲಿ! ನೀನು ಹುಟ್ಟಿದ ದಿನದಂದು ಯಾರೂ ನಿನ್ನ ಹೊಕ್ಕಳು ಕೊಯ್ದು ಕಟ್ಟಲಿಲ್ಲ. ನಿನ್ನನ್ನು ನೀರಿನಿಂದ ತೊಳೆದು ಶುಚಿಮಾಡಲಿಲ್ಲ, ನಿನಗೆ ಉಪ್ಪನ್ನು ಸ್ವಲ್ಪವು ಸವರಲಿಲ್ಲ, ನಿನ್ನನ್ನು ಬಟ್ಟೆಯಲ್ಲಿ ಸುತ್ತಲೇ ಇಲ್ಲ.


ಆಗ ಒಡೆಯರಾದ ಸ್ವಾಮಿ ನ್ಯಾಯನಿರ್ಣಯ ಮಾಡುವ ತಮ್ಮ ಚೈತನ್ಯದಿಂದಲೂ ಸುಟ್ಟು ಶುಚಿಮಾಡುವ ಚೈತನ್ಯದಿಂದಲೂ ಸಿಯೋನಿನ ಮಹಿಳೆಯರ ಕಲ್ಮಶವನ್ನು ತೊಡೆದುಹಾಕುವರು.


ಹಿಸ್ಸೋಪಿನಿಂದ ನೀ ಚಿಮುಕಿಸೆ, ನಾ ಶುದ್ಧನಾಗುವೆ I ನೀ ತೊಳೆದೆಯಾದರೆ, ಹಿಮಕ್ಕಿಂತ ನಾ ಬೆಳ್ಳಗಾಗುವೆ II


ಇದಲ್ಲದೆ ಕಸೂತಿಯ ಬಟ್ಟೆಯನ್ನು ನಿನಗೆ ತೊಡಿಸಿ, ಕಡಲು ಹಂದಿಯ ತೊಗಲಿನ ಕೆರಗಳನ್ನು ನಿನ್ನ ಕಾಲಿಗೆ ಮೆಟ್ಟಿಸಿ, ನಯವಾದ ನಾರುಮಡಿಯನ್ನು ನಿನಗೆ ಉಡಿಸಿ, ರೇಷ್ಮೆಯ ಹೊದಿಕೆಯನ್ನು ನಿನಗೆ ಹೊದಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು