ಯೆಹೆಜ್ಕೇಲನು 17:12 - ಕನ್ನಡ ಸತ್ಯವೇದವು C.L. Bible (BSI)12 “ದ್ರೋಹಿವಂಶದ ಈ ಜನರಿಗೆ ಹೀಗೆ ಹೇಳು - ಇದರ ಅರ್ಥ ನಿಮಗೆ ತಿಳಿಯಲಿ; ಇಗೋ, ಬಾಬಿಲೋನಿನ ಅರಸನು ಜೆರುಸಲೇಮಿಗೆ ಬಂದು ಅಲ್ಲಿನ ಅರಸನನ್ನೂ ಪ್ರಧಾನರನ್ನೂ ಹಿಡಿದು ಬಾಬಿಲೋನಿಗೆ ತೆಗೆದುಕೊಂಡು ಹೋದ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 “ದ್ರೋಹಿ ವಂಶದವರಾದ ಈ ಜನರಿಗೆ ಹೀಗೆ ಹೇಳು, ಇದರ ಅಭಿಪ್ರಾಯವು ನಿಮಗೆ ಗೊತ್ತಿಲ್ಲವೋ? ಇಗೋ, ಬಾಬೆಲಿನ ಅರಸನು ಯೆರೂಸಲೇಮಿಗೆ ಬಂದು ಅಲ್ಲಿನ ಅರಸನನ್ನೂ ಮತ್ತು ಪ್ರಧಾನರನ್ನೂ ಹಿಡಿದು ಬಾಬಿಲೋನಿಗೆ ತೆಗೆದುಕೊಂಡು ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ದ್ರೋಹಿವಂಶದವರಾದ ಈ ಜನರಿಗೆ ಹೀಗೆ ಹೇಳು - ಇದರ ಅಭಿಪ್ರಾಯವು ನಿಮಗೆ ಗೊತ್ತಿಲ್ಲವೋ? ಇಗೋ, ಬಾಬೆಲಿನ ಅರಸನು ಯೆರೂಸಲೇವಿುಗೆ ಬಂದು ಅಲ್ಲಿನ ಅರಸನನ್ನೂ ಪ್ರಧಾನರನ್ನೂ ಹಿಡಿದು ಬಾಬೆಲಿಗೆ ಒಯ್ದುಕೊಂಡು ಹೋದನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 “ದಂಗೆಕೋರರಿಗೆ ಇದನ್ನು ಹೇಳು: ಈ ಸಂಗತಿಗಳ ಅರ್ಥವು ನಿಮಗೆ ಗೊತ್ತಿಲ್ಲವೇ? ಅವರಿಗೆ ಹೇಳು: ಮೊದಲಿನ ಗರುಡ ಪಕ್ಷಿ ಬಾಬಿಲೋನ್ ರಾಜನಾದ ನೆಬೂಕದ್ನೆಚ್ಚರನು. ಅವನು ಜೆರುಸಲೇಮಿಗೆ ಬಂದು ಅದರ ರಾಜನನ್ನೂ ಅದರ ಹಿರಿಯರನ್ನೂ ಬಂಧಿಸಿ, ಅವರನ್ನು ತನ್ನ ರಾಜ್ಯವಾದ ಬಾಬಿಲೋನಿಗೆ ಕೊಂಡೊಯ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 “ ‘ಇದರ ಅಭಿಪ್ರಾಯ ನಿಮಗೆ ತಿಳಿಯುವುದಿಲ್ಲವೋ?’ ಎಂದು ತಿರುಗಿಬೀಳುವ ಮನೆಯವರಿಗೆ ಹೇಳು ಮತ್ತು ಅವರಿಗೆ, ‘ಇಗೋ, ಬಾಬಿಲೋನಿನ ಅರಸನು ಯೆರೂಸಲೇಮಿಗೆ ಬಂದು ಅದರ ಅರಸನನ್ನೂ, ಅದರ ಪ್ರಧಾನರನ್ನೂ ಕರೆದುಕೊಂಡು ತನ್ನ ಬಳಿಗೆ ಒಯ್ದಿದ್ದಾನೆ. ಅಧ್ಯಾಯವನ್ನು ನೋಡಿ |