Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 17:17 - ಕನ್ನಡ ಸತ್ಯವೇದವು C.L. Bible (BSI)

17 ಫರೋಹನೂ ಅವನ ಮಹಾಸೈನ್ಯವೂ ದೊಡ್ಡ ಪರಿವಾರವೂ ಬಂದು ಬಹುಜನರನ್ನು ಕೊಲ್ಲುವುದಕ್ಕೆ ದಿಬ್ಬಗಳನ್ನು ಹಾಕಿ, ಬುರುಜುಗಳನ್ನು ಕಟ್ಟಿದರೂ ಯುದ್ಧದಲ್ಲಿ ಇವನಿಗೆ ಏನೂ ಸಹಾಯವಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಫರೋಹನೂ, ಅವನ ಮಹಾಸೈನ್ಯವೂ, ದೊಡ್ಡ ಪರಿವಾರವೂ ಬಂದು ಬಹಳ ಜನರನ್ನು ಕೊಲ್ಲುವುದಕ್ಕೆ ದಿಬ್ಬಗಳನ್ನು ಹಾಕಿ, ಕೋಟೆಗಳನ್ನು ಕಟ್ಟಿದರೂ ಯುದ್ಧದಲ್ಲಿ ಇವನಿಗೆ ಏನೂ ಸಹಾಯವಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಫರೋಹನೂ ಅವನ ಮಹಾಸೈನ್ಯವೂ ದೊಡ್ಡ ಪರಿವಾರವೂ ಬಂದು ಬಹುಜನರನ್ನು ಕೊಲ್ಲುವದಕ್ಕೆ ದಿಬ್ಬಗಳನ್ನು ಹಾಕಿ ಬುರುಜುಗಳನ್ನು ಕಟ್ಟಿದರೂ ಯುದ್ಧದಲ್ಲಿ ಇವನಿಗೆ ಏನೂ ಸಹಾಯವಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಈಜಿಪ್ಟಿನ ರಾಜನು ಯೆಹೂದದ ರಾಜನನ್ನು ರಕ್ಷಿಸಲು ಸಾಧ್ಯವಿಲ್ಲ. ಅವನು ಬಹಳ ಸೈನಿಕರನ್ನು ಕಳುಹಿಸಬಹುದು, ಆದರೆ ಈಜಿಪ್ಟಿನ ಶಕ್ತಿಯು ಯೆಹೂದವನ್ನು ರಕ್ಷಿಸಲಾರದು. ನೆಬೂಕದ್ನೆಚ್ಚರನ ಸೈನ್ಯವು ಕೆಸರಿನ ಇಳಿಜಾರುಗಳನ್ನೂ ತಡೆಗಟ್ಟುಗಳನ್ನೂ ಕಟ್ಟಿ ಪಟ್ಟಣವನ್ನು ವಶಪಡಿಸಿಕೊಳ್ಳುವುದು. ಎಷ್ಟೋ ಮಂದಿ ಸಾಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಫರೋಹನೂ, ಅವನ ಮಹಾಸೈನ್ಯವೂ, ದೊಡ್ಡ ಪರಿವಾರವೂ ಬಂದು ಬಹಳ ಜನರನ್ನು ಕೊಲ್ಲುವುದಕ್ಕೆ ದಿಬ್ಬಗಳನ್ನೂ, ಕೋಟೆಗಳನ್ನೂ ಕಟ್ಟಿದರೂ ಯುದ್ಧದಲ್ಲಿ ಅವನಿಗೆ ಏನೂ ಪ್ರಯೋಜನವಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 17:17
10 ತಿಳಿವುಗಳ ಹೋಲಿಕೆ  

“ಇಸ್ರಯೇಲರ ದೇವರಾದ ಸರ್ವೇಶ್ವರ ಹೀಗೆ ಎನ್ನುತ್ತಾರೆ - ನನ್ನ ಅಭಿಪ್ರಾಯವನ್ನು ವಿಚಾರಿಸಲು ನಿಮ್ಮನ್ನು ನನ್ನ ಬಳಿಗೆ ಕಳಿಸಿದ ಜುದೇಯದ ಅರಸನಿಗೆ ಹೀಗೆಂದು ಹೇಳಿರಿ: ‘ಇಗೋ, ನಿಮ್ಮ ಸಹಾಯಕ್ಕೆ ಹೊರಟಿರುವ ಫರೋಹನ ಸೈನ್ಯವು ಸ್ವದೇಶಕ್ಕೆ ಹಿಂದಿರುಗುವುದು.


ಆ ನಕ್ಷೆಯ ಸುತ್ತಲು ದಿಬ್ಬಹಾಕಿ, ಒಡ್ಡುಕಟ್ಟಿ, ಪಾಳೆಯಗಳನ್ನು ಮಾಡಿ, ಭಿತ್ತಿಭೇದಕ ಯಂತ್ರಗಳನ್ನು ನಿಲ್ಲಿಸಿ, ಅದನ್ನು ಮುತ್ತು.


ಮುರಿದ ಜೊಂಡಿಗೆ ಸಮಾನವಾದ ಈಜಿಪ್ಟ್ ಎಂಬ ಊರುಗೋಲಿನ ಮೇಲೆ ನಿನಗೆ ಭರವಸೆಯಿದೆಯಷ್ಟೆ. ಆದರೆ ಅದು ಊರಿಕೊಳ್ಳುವವನ ಕೈಯನ್ನು ಚುಚ್ಚಿ ತಿವಿಯುವ ಕೋಲು. ಈಜಿಪ್ಟಿನ ರಾಜ ಫರೋಹನಲ್ಲಿ ಭರವಸೆಯಿಟ್ಟವರಿಗೆ ಆಗುವ ಗತಿ ಇದೇ.


ಅಷ್ಟರಲ್ಲಿ ಫರೋಹನ ಸೈನ್ಯವು ಈಜಿಪ್ಟಿನಿಂದ ಹೊರಟಿತ್ತು. ಈ ಸಂಗತಿಯನ್ನು ಕೇಳಿ, ಜೆರುಸಲೇಮನ್ನು ಈಗಾಗಲೆ ಮುತ್ತಿದ್ದ ಬಾಬಿಲೋನಿಯದ ಸೈನಿಕರು ಅದನ್ನು ಬಿಟ್ಟುಹೋಗಿದ್ದರು.


ಮಬ್ಬಾಯಿತು ಕಣ್ಣು ವ್ಯರ್ಥವಾಗಿ ನೆರವನ್ನು ನಿರೀಕ್ಷಿಸುತ ರಕ್ಷಿಸಲಾಗದ ರಾಷ್ಟ್ರಕ್ಕಾಗಿ ಕೋವರದಲ್ಲಿ ಕಾದು ನೋಡುತ.


ಅವನು ಚಿದ್ಕೀಯನ ಆಳ್ವಿಕೆಯ ಒಂಬತ್ತನೆಯ ವರ್ಷದ ಹತ್ತನೆಯ ತಿಂಗಳಿನ ಹತ್ತನೆಯ ದಿನ ಸರ್ವಸೈನ್ಯ ಸಮೇತ ಜೆರುಸಲೇಮಿಗೆ ಬಂದ. ಅಲ್ಲಿ ಪಾಳೆಯ ಮಾಡಿಕೊಂಡು ಅದರ ಸುತ್ತಲು ಮಣ್ಣಿನ ದಿಬ್ಬವನ್ನು ಎಬ್ಬಿಸಿದ.


ಈ ಊರಿನವರು ಬಾಬಿಲೋನಿಯರ ವಿರುದ್ಧ ಕದನಕ್ಕೆ ಹೊರಟರೆ ಏನು ಪ್ರಯೋಜನ? ತಮ್ಮ ಹೆಣಗಳಿಂದ ಅವರನ್ನು ತೃಪ್ತಿಪಡಿಸುವರಷ್ಟೆ. ಇವರ ಅಧರ್ಮದ ನಿಮಿತ್ತ ಈ ನಗರಕ್ಕೆ ವಿಮುಖವಾಗಿ, ಕಡುಕೋಪಾವೇಶನಾಗಿ ನಾನೇ ಇವರನ್ನು ಸದೆಬಡಿಯುವೆನು.


ಉತ್ತರರಾಜನು ಬಂದು, ಮುತ್ತಿಗೆಹಾಕಿ, ಕೋಟೆಕೊತ್ತಲದ ನಗರವನ್ನು ಹಿಡಿಯುವನು. ದಕ್ಷಿಣದ ಭುಜಬಲವು ಅವನನ್ನು ನಿಲ್ಲಿಸಲಾರದು. ಅಲ್ಲಿನ ಮಹಾವೀರರು ತಡೆಯಲಾರರು. ಎದುರಿಸುವ ಯಾವ ಶಕ್ತಿಯೂ ಇರದು.


ತಿನ್ನತಕ್ಕ ಹಣ್ಣು ಕೊಡುವುದಿಲ್ಲ ಎಂದು ನೀವು ತಿಳಿದ ಮರಗಳನ್ನು ಮಾತ್ರ ಕಡಿದು ಹಾಳುಮಾಡಬಹುದು. ಅವುಗಳಿಂದ ಯುದ್ಧ ಯಂತ್ರಗಳನ್ನು ಮಾಡಿಕೊಂಡು ನಿಮಗೆ ವಿರುದ್ಧ ಆಗಿರುವ ಆ ಪಟ್ಟಣ ಬೀಳುವ ತನಕ ಅದಕ್ಕೆ ಮುತ್ತಿಗೆ ಹಾಕಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು