Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 17:18 - ಕನ್ನಡ ಸತ್ಯವೇದವು C.L. Bible (BSI)

18 ಏಕೆಂದರೆ ಇವನು ಇಟ್ಟ ಆಣೆಯನ್ನು ತಿರಸ್ಕರಿಸಿ ಒಪ್ಪಂದವನ್ನೂ ಮೀರಿದನಲ್ಲವೇ? ಕೈಯ ಮೇಲೆ ಕೈಯಿಟ್ಟು ಭಾಷೆಮಾಡಿ ಪ್ರಯೋಜನವೇನು? ಅದನ್ನೆಲ್ಲಾ ಮುರಿದುಬಿಟ್ಟನಲ್ಲವೇ? ಇವನು ನನ್ನಿಂದ ಪಾರಾಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಏಕೆಂದರೆ ಇವನು ಇಟ್ಟ ಆಣೆಯನ್ನು ತಿರಸ್ಕರಿಸಿ ಒಡಂಬಡಿಕೆಯನ್ನು ಮೀರಿದನಲ್ಲವೇ? ಕೈಯ ಮೇಲೆ ಕೈಯಿಟ್ಟು ಆಣೆಮಾಡಿದರೆ ಪ್ರಯೋಜನವೇನು? ಇದನ್ನೆಲ್ಲಾ ಮಾಡಿದ್ದರಿಂದ ಇವನು ಪಾರಾಗನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಇವನು ಇಟ್ಟ ಆಣೆಯನ್ನು ತಿರಸ್ಕರಿಸಿ ಒಡಂಬಡಿಕೆಯನ್ನು ಮೀರಿದನಲ್ಲವೇ; [ಕೈಯ ಮೇಲೆ] ಕೈ ಇಟ್ಟರೇನು? ಇದನ್ನೆಲ್ಲಾ ಮಾಡಿಬಿಟ್ಟನಲ್ಲವೇ? ಇವನು ಪಾರಾಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆದರೆ ಯೆಹೂದದ ರಾಜನಿಗೆ ತಪ್ಪಿಸಿಕೊಳ್ಳಲು ಸಾಧ್ಯವಾಗುವದಿಲ್ಲ. ಯಾಕೆಂದರೆ ಅವನು ತನ್ನ ಪ್ರಮಾಣವನ್ನು ತಿರಸ್ಕರಿಸಿದನು ಮತ್ತು ತಾನು ಮಾಡಿಕೊಂಡ ಒಡಂಬಡಿಕೆಯನ್ನು ಮುರಿದುಹಾಕಿದನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅವನು ಒಡಂಬಡಿಕೆಯನ್ನು ಮುರಿದು, ಪ್ರಮಾಣ ವಚನವನ್ನು ತಿರಸ್ಕರಿಸಿದನು. ಅವನು ಒಡಂಬಡಿಕೆಯಲ್ಲಿ ತನ್ನ ಹಸ್ತವನ್ನಿಟ್ಟಿದ್ದರೂ ಈ ಎಲ್ಲಾ ಸಂಗತಿಗಳನ್ನು ಮಾಡಿದ್ದರಿಂದ ಅವನು ತಪ್ಪಿಸಿಕೊಳ್ಳಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 17:18
9 ತಿಳಿವುಗಳ ಹೋಲಿಕೆ  

ಎಲ್ಲಾ ಅಧಿಪತಿಗಳು, ದಂಡಿನವರು, ಹಾಗೂ ಅರಸ ದಾವೀದನ ಎಲ್ಲಾ ಮಕ್ಕಳು ಅವನಿಗೆ ಅಧೀನರಾದರು.


ಈಗ ನಿಮ್ಮ ಪೂರ್ವಜರಂತೆ ಆಜ್ಞೆಗೆ ಮಣಿಯದವರಾಗಬೇಡಿ. ಸರ್ವೇಶ್ವರನಿಗೆ ಅಧೀನರಾಗಿರಿ. ನಿಮ್ಮ ದೇವರಾದ ಸರ್ವೇಶ್ವರ ಸದಾಕಾಲಕ್ಕೂ ಪ್ರತಿಷ್ಠಿಸಿಕೊಂಡ ಪವಿತ್ರಾಲಯಕ್ಕೆ ಬಂದು ಅವರನ್ನು ಅವಲಂಬಿಸಿರಿ. ಆಗ ನಿಮ್ಮ ಮೇಲಿರುವ ಅವರ ಉಗ್ರಕೋಪ ತೊಲಗಿಹೋಗುವುದು.


ಹೊಟ್ಟೆಪಾಡಿಗಾಗಿ ಕೈ ಒಡ್ಡಿದ್ದೇವೆ ಈಜಿಪ್ಟರಿಗೆ, ಅಶ್ಶೂರ್ಯರಿಗೆ.


ಯೇಹುವು ಅಲ್ಲಿಂದ ಮುಂದೆ ಹೋಗುತ್ತಿರುವಾಗ ತನ್ನನ್ನು ಎದುರುಗೊಳ್ಳುವುದಕ್ಕಾಗಿ ಬಂದ ರೇಕಾಬನ ಮಗನಾದ ಯೆಹೋನಾದಾಬನನ್ನು ಕಂಡು ವಂದಿಸಿದನು. “ನಿನ್ನ ವಿಷಯದಲ್ಲಿ ನನ್ನ ಮನಸ್ಸು ಯಥಾರ್ಥವಾಗಿರುವಂತೆ ನಿನ್ನ ಮನಸ್ಸು ಯಥಾರ್ಥವಾಗಿ ಇರುತ್ತದೋ?’ ಎಂದು ಕೇಳಿದನು. ಅವನು, “ಹೌದು,” ಎಂದು ಉತ್ತರಕೊಟ್ಟನು. ಆಗ ಯೇಹುವು, “ಹಾಗಾದರೆ ನಿನ್ನ ಕೈಕೊಡು,” ಎನ್ನಲು ಅವನು ಕೈಕೊಟ್ಟನು. ಯೇಹುವು ಅವನನ್ನು ತನ್ನ ರಥದಲ್ಲಿ ಕುಳ್ಳಿರಿಸಿಕೊಂಡನು.


ದೇವರ ಮೇಲೆ ಇಟ್ಟ ಆಣೆಯ ನಿಮಿತ್ತ ಅರಸನ ಆಜ್ಞೆಯನ್ನು ಕೈಗೊಳ್ಳಬೇಕೆಂಬುದು ನನ್ನ ಬೋಧೆ.


ಆದರೆ ಅವನು ಬಾಬಿಲೋನಿನ ಅರಸನ ವಿರುದ್ಧ ದಂಗೆಯೆದ್ದು ಕುದುರೆಗಳನ್ನೂ ಬಹುಮಂದಿ ಸೈನಿಕರನ್ನೂ ನಮಗೆ ಒದಗಿಸೆಂದು ಈಜಿಪ್ಟಿಗೆ ರಾಯಭಾರಿಗಳನ್ನು ಕಳುಹಿಸಿದ. ಆದರೂ ಇವನು ಗೆಲ್ಲುವನೇ? ಇಂಥಾ ಕೃತ್ಯಗಳನ್ನು ನಡೆಸಿದವನು ಪಾರಾಗುವನೇ? ಒಪ್ಪಂದವನ್ನು ಮೀರಿದವನು ತಪ್ಪಿಸಿಕೊಂಡಾನೇ?


“ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನನ್ನ ಜೀವದಾಣೆ, ಇವನು ಯಾವನಿಂದ ಅರಸನಾಗಿ ನೇಮಕಗೊಂಡನೋ, ಯಾವನಿಗೆ ಮಾಡಿದ ಪ್ರಮಾಣವನ್ನು ತಿರಸ್ಕರಿಸಿದನೋ, ಯಾವನ ಒಪ್ಪಂದವನ್ನು ಮೀರಿದನೋ, ಆ ಅರಸನ ಬಳಿಯಲ್ಲೆ, ಅಂದರೆ ಬಾಬಿಲೋನೆಂಬ ಅವನ ವಾಸಸ್ಥಾನದಲ್ಲೆ, ಇವನು ಸಾಯುವುದು ಖಂಡಿತ.


“ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನನ್ನ ಜೀವದಾಣೆ, ನನಗೆ ಮಾಡಿದ ಪ್ರಮಾಣವನ್ನು ಅವನು ತಿರಸ್ಕರಿಸಿ ನನ್ನ ಒಡಂಬಡಿಕೆಯನ್ನು ಮೀರಿದ ದೋಷವನ್ನು ಅವನ ತಲೆಯ ಮೇಲೆ ಹೊರಿಸುವೆನು.


ಆದರೆ ಪುರನಿವಾಸಿಗಳು ತಾವು ಆ ಅರಸನಿಂದ ಮಾಡಿಸಿಕೊಂಡ ಪ್ರಮಾಣಗಳಲ್ಲಿ ಭರವಸೆಯಿಟ್ಟು, ಈ ಶಕುನವು ಸುಳ್ಳೆಂದು ಭಾವಿಸುವರು; ಆದರೆ ಅವರು ತನ್ನ ಕೈಗೆ ಸಿಕ್ಕಿಬೀಳಲೆಂದು ಅವರ ಅಧರ್ಮವನ್ನು ಅವನು ಬೆಳಕಿಗೆ ತರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು