Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 17:20 - ಕನ್ನಡ ಸತ್ಯವೇದವು C.L. Bible (BSI)

20 ನಾನು ಅವನಿಗೆ ನನ್ನ ಬಲೆಯೊಡ್ಡುವೆನು; ನಾನು ಹಾಕಿದ ಉರುಳಿನಲ್ಲಿ ಸಿಕ್ಕಿಬೀಳುವನು. ಅವನನ್ನು ಬಾಬಿಲೋನಿಗೆ ತಂದು, ಅಲ್ಲೇ ಅವನೊಂದಿಗೆ ವಾದಿಸಿ, ಅವನು ನನಗೆ ಮಾಡಿದ ಅಪರಾಧವನ್ನು ಅವನ ಮೇಲೆ ಹೊರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಾನು ಅವನಿಗೆ ನನ್ನ ಬಲೆಯೊಡ್ಡುವೆನು, ನಾನು ಹಾಕಿದ ಉರುಲಿನಲ್ಲಿ ಸಿಕ್ಕಿಬೀಳುವನು, ಅವನನ್ನು ಬಾಬಿಲೋನಿಗೆ ತಂದು ಅಲ್ಲೇ ಅವನೊಂದಿಗೆ ವಾದಿಸಿ, ಅವನು ನನಗೆ ಮಾಡಿದ ಅಪರಾಧವನ್ನು ಅವನ ಮೇಲೆ ಹೊರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನಾನು ಅವನಿಗೆ ನನ್ನ ಬಲೆಯೊಡ್ಡುವೆನು, ನಾನು ಹಾಕಿದ ಉರುಲಿನಲ್ಲಿ ಸಿಕ್ಕಿಬೀಳುವನು, ಅವನನ್ನು ಬಾಬೆಲಿಗೆ ತಂದು ಅಲ್ಲೇ ಅವನೊಂದಿಗೆ ವಾದಿಸಿ ಅವನು ನನಗೆ ಮಾಡಿದ ಅಪರಾಧವನ್ನು ಅವನ ಮೇಲೆ ಹೊರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನಾನು ಅವನಿಗೆ ಉರುಲನ್ನೊಡ್ಡುವೆನು; ಅವನು ಅದರೊಳಗೆ ಸಿಕ್ಕಿಕೊಳ್ಳುವನು. ನಾನು ಅವನನ್ನು ಬಾಬಿಲೋನಿಗೆ ತಂದು ಅಲ್ಲಿ ಶಿಕ್ಷಿಸುವೆನು. ಯಾಕೆಂದರೆ ಅವನು ನನಗೆ ಅಪನಂಬಿಗಸ್ತನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನಾನು ಅವನ ಮೇಲೆ ನನ್ನ ಬಲೆಯನ್ನು ಬೀಸುತ್ತೇನೆ. ಆಗ ಅವನು ನನ್ನ ಉರುಲಿನಲ್ಲಿ ಸಿಕ್ಕಿಬೀಳುವನು. ನಾನು ಅವನನ್ನು ಬಾಬಿಲೋನಿಗೆ ಕರೆತಂದಿದ್ದೇನೆ ಮತ್ತು ಅವನು ನನಗೆ ನಂಬಿಕೆದ್ರೋಹ ಮಾಡಿದ ಕಾರಣ ಅಲ್ಲಿ ಅವನಿಗೆ ನ್ಯಾಯತೀರ್ಪು ವಿಧಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 17:20
24 ತಿಳಿವುಗಳ ಹೋಲಿಕೆ  

ನಾನು ಅವನಿಗೆ ನನ್ನ ಬಲೆಯೊಡ್ಡುವೆನು, ನಾನು ಹಾಕಿದ ಉರುಲಿನಲ್ಲಿ ಸಿಕ್ಕಿಬೀಳುವನು: ಬಾಬಿಲೋನಿಯಾ ದೇಶದ ಬಾಬಿಲೋನ್ ನಗರಕ್ಕೆ ಅವನನ್ನು ಒಯ್ಯುವೆನು; ಅಲ್ಲೇ ಇದ್ದು ಸಾಯುವನು, ಆದರೂ ಆ ದೇಶವನ್ನು ನೋಡನು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ಗುಂಪಾಗಿ ಕೂಡಿದ ಬಹುಜನಾಂಗಗಳ ಕೈಯಿಂದ, ನಾ ನಿನ್ನ ಮೇಲೆ ಬೀಸುವೆ ಬಲೆಯೊಂದ.


“ನೀವಾದರೋ, ‘ನಾವು ನಿರ್ದೋಷಿಗಳು, ಸರ್ವೇಶ್ವರನ ಕೋಪ ನಮ್ಮ ಮೇಲಿಂದ ತೊಲಗಿಹೋಗಿದೆ, ಇದು ನಿಶ್ಚಯ’ ಎಂದುಕೊಂಡಿದ್ದೀರಿ. ‘ನಾವು ಪಾಪಮಾಡಿಲ್ಲ’ ಎಂದು ನೀವು ಹೇಳಿದ ಕಾರಣ ನಿಮ್ಮನ್ನು ನ್ಯಾಯತೀರ್ಪಿಗೆ ಗುರಿಮಾಡಿಯೇ ತೀರುವೆನು.


ನಾನು ಗೋಗನ ಸಂಗಡ ವ್ಯಾಜ್ಯವಾಡುತ್ತಾ ಅವನನ್ನು ವ್ಯಾಧಿಗೂ ವಧೆಗೂ ಗುರಿಮಾಡುವೆನು. ಅವನ ಮೇಲೂ ಅವನ ಪಡೆಗಳ ಮೇಲೂ ಅವನೊಂದಿಗಿರುವ ಬಹು ಜನಾಂಗಗಳ ಮೇಲೂ ವಿಪರೀತ ಮಳೆ, ದೊಡ್ಡ ದೊಡ್ಡ ಆನೆಕಲ್ಲು, ಬೆಂಕಿ, ಗಂಧಕ, ಇವುಗಳನ್ನು ಸುರಿಸುವೆನು.


ಜಗತ್ತಿನ ಎಲ್ಲಾ ನಿವಾಸಿಗಳೂ ಅದಕ್ಕೆ ಸಿದ್ಧರಾಗಿರಬೇಕು.


“ಬೆಟ್ಟಗಳೇ, ಸರ್ವೇಶ್ವರಸ್ವಾಮಿಯ ಆಪಾದನೆಯನ್ನು ಕೇಳಿರಿ. ಭೂಮಿಯ ಸ್ಥಿರವಾದ ಅಸ್ತಿಭಾರಗಳೇ, ಕಿವಿಗೊಡಿ. ಆ ಸ್ವಾಮಿಗೆ ತನ್ನ ಪ್ರಜೆಯ ಮೇಲೆ ವ್ಯಾಜ್ಯವಿದೆ; ಅವರು ಇಸ್ರಯೇಲಿನ ವಿರುದ್ಧ ವಾದಿಸುವುದನ್ನು ಗಮನಿಸಿರಿ.”


ಅವರು ಹೋಗುವಾಗ ನನ್ನ ಬಲೆಯನ್ನು ಅವರ ಮೇಲೆ ಬೀಸುವೆನು. ಆಕಾಶದ ಪಕ್ಷಿಗಳಂತೆ ಅವರನ್ನು ಕೆಳಕ್ಕೆ ಎಳೆದುಬಿಡುವೆನು. ಅವರ ದುಷ್ಕೃತ್ಯಗಳಿಗನುಸಾರ ಅವರನ್ನು ದಂಡಿಸುವೆನು.


ಮಕ್ಕಳೇ, ವಾದಿಸಿರಿ; ನಿಮ್ಮ ತಾಯಿಯೊಡನೆ ವಾದಿಸಿರಿ. ಅವಳು ನನ್ನ ಪತ್ನಿಯಲ್ಲ, ನಾನು ಅವಳ ಪತಿಯಲ್ಲ. ತನ್ನ ಮುಖದಿಂದ ವೇಶ್ಯಾಚಾರದ ಸೋಗನ್ನೂ ಸ್ತನಮಧ್ಯದಿಂದ ವ್ಯಭಿಚಾರದ ಬೆಡಗನ್ನೂ ತ್ಯಜಿಸಲಿ.


ಯಾವನನ್ನು ಕುರಿತು ನಾವು: “ನಮ್ಮ ಬಾಳಿನ ಉಸಿರು, ದೇವರಿಂದ ಅಭಿಷಿಕ್ತನು, ಇವನ ಆಶ್ರಯದಿಂದಲೆ ರಾಷ್ಟ್ರಗಳ ನಡುವೆ ನಮಗೆ ಉಳಿವು” ಎಂದುಕೊಂಡೆವೋ ಅಂಥವನೇ ಸಿಕ್ಕಿಬಿದ್ದಿದ್ದಾನೆ ಹಗೆಗಳು ತೋಡಿದ ಗುಳಿಯೊಳಗೆ!


“ಆಕಾಶದಿಂದ ಆತ ಸುರಿಸಿದ್ದಾನೆ ಅಗ್ನಿಯನ್ನೆ ಅದು ದಹಿಸುತ್ತಿದೆ ನನ್ನೊಳಗಿನ ಎಲುಬುಗಳನ್ನೆ ನನ್ನ ಕಾಲುಗಳಿಗೆ ಬಲೆಯೊಡ್ಡಿದ್ದಾನೆ ಅದು ನನ್ನನ್ನೆಳೆಯುತ್ತಿದೆ ನೆಲಕ್ಕೆ ಹಾಳುಬಿದ್ದ ನಾನು ಸದಾ ಬಳಲುತ್ತಿದ್ದೇನೆ.”


ಬಾಬಿಲೋನಿಯರಿಗೆ ನಿತ್ಯ ನೆಲೆಯಾದ ಗೋಮಾಳಕ್ಕೆ ಇಗೋ, ಜೋರ್ಡನ್ ದಟ್ಟಡವಿಯಿಂದ ಸಿಂಹದೋಪಾದಿ ನಾನು ಏರಿಬರುವೆನು. ಕ್ಷಣಮಾತ್ರದಲ್ಲಿ ಆ ಬಾಬಿಲೋನಿಯರನ್ನು ಅಲ್ಲಿಂದ ಓಡಿಸಿಬಿಡುವೆನು. ಅದನ್ನು ಪಾಲಿಸುವುದಕ್ಕೆ ನಾನು ಆರಿಸಿಕೊಂಡವನನ್ನೇ ನೇಮಿಸುವೆನು. ನನಗೆ ಸಮಾನನು ಯಾರು? ನ್ಯಾಯವಿಚಾರಣೆಗೆ ನನ್ನನ್ನು ಎಳೆಯಬಲ್ಲ ವ್ಯಕ್ತಿ ಯಾರು? ಮಂದೆಯನ್ನು ಕಾಯುವ ಯಾವನು ತಾನೆ ನನ್ನೆದುರಿಗೆ ನಿಲ್ಲಬಲ್ಲನು?


"ಆದಕಾರಣ ಸರ್ವೇಶ್ವರನಾದ ನಾನು ನಿಮ್ಮೊಡನೆ ಇನ್ನೂ ವ್ಯಾಜ್ಯಮಾಡುತ್ತೇನೆ; ನಿಮ್ಮ ಸಂತಾನದವರೊಂದಿಗೂ ವ್ಯಾಜ್ಯವಾಡುವೆನು,” ಎನ್ನುತ್ತಾರೆ ಸರ್ವೇಶ್ವರ.


ತನ್ನ ನಿಶ್ಚಿತಕಾಲ ಯಾವಾಗ ಬರುವುದೆಂದು ಮಾನವನಿಗೆ ತಿಳಿಯದು. ಮೀನುಗಳು ಮೋಸಬಲೆಗೂ, ಹಕ್ಕಿಗಳು ಉರುಲುಬಲೆಗೂ, ಸಿಕ್ಕಿ ಬೀಳುವಂತೆ ನರಮಾನವರು ತಮ್ಮ ಮೇಲೆ ತಟ್ಟನೆ ಬೀಳುವ ಕಾಲಪಾಶಕ್ಕೆ ಸಿಕ್ಕಿಕೊಳ್ಳುತ್ತಾರೆ.


ನಾನು ತಲೆಯೆತ್ತಿದರೆ ಬೇಟೆಯಾಡುವೆ ನನ್ನನ್ನು ಸಿಂಹದಂತೆ ಮತ್ತೆ ನಿನ್ನ ಶಕ್ತಿ ಸಾಮರ್ಥ್ಯವನ್ನು ನನ್ನ ಮೇಲೆ ಪ್ರಯೋಗಿಸುವೆ.


ಆದುದರಿಂದ ಅಸ್ಸೀರಿಯದ ಅರಸನ ಸೈನ್ಯಾಧಿಪತಿಗಳನ್ನು ಅವನ ಮೇಲೆ ಬರಮಾಡಿದರು. ಆ ಸೇನಾಧಿಪತಿಗಳು ಮನಸ್ಸೆಯನ್ನು ಹಿಡಿದು ಅವನನ್ನು ಬಂಧಿಸಿ, ಬೇಡಿಹಾಕಿ, ಬಾಬಿಲೋನಿಗೆ ಒಯ್ದರು.


ಅಬ್ಷಾಲೋಮನು ದಾವೀದನ ಸೇವಕರ ಕೈಗೆ ಸಿಕ್ಕಿದನು. ಅದು ಹೇಗೆಂದರೆ, ಅವನು ಹತ್ತಿದ್ದ ಹೇಸರಗತ್ತೆ ಒಂದು ದೊಡ್ಡ ಓಕ್ ಮರದ ಕೆಳಗೆ ಹಾದುಹೋಗುವಾಗ ಅವನ ತಲೆ ನಿಬಿಡವಾದ ಅದರ ಕೊಂಬೆಗಳಲ್ಲಿ ಸಿಕ್ಕಿಕೊಂಡಿತು; ಆ ಹೇಸರಗತ್ತೆ ಅವನ ಕೆಳಗಿನಿಂದ ಓಡಿಹೋಯಿತು. ಅವನು ಭೂಮಿಗೂ ಆಕಾಶಕ್ಕೂ ಮಧ್ಯೆ ನೇತಾಡಬೇಕಾಯಿತು.


ಬಳಿಕ ಅರಸ ಚಿದ್ಕೀಯನು ಅವನನ್ನು ಕರೆಯಿಸಿ, “ದೇವರಿಂದ ಯಾವುದಾದರು ಸಂದೇಶ ದೊರೆಯಿತೊ?” ಎಂದು ಮನೆಯಲ್ಲಿ ಗುಟ್ಟಾಗಿ ವಿಚಾರಿಸಿದನು. ಯೆರೆಮೀಯನು, “ಹೌದು, ದೊರೆಯಿತು. ತಾವು ಬಾಬಿಲೋನಿನ ಅರಸನ ಕೈಗೆ ಸಿಕ್ಕಿಬೀಳುವಿರಿ,” ಎಂದನು.


ಅವರು ದ್ರೋಹ ಮಾಡಿದ್ದರಿಂದ ನಾಡು ಕಾಡಾಗುವುದು ನನ್ನಿಂದ.” ಇದು ಸರ್ವೇಶ್ವರನಾದ ದೇವರ ನುಡಿ.


“ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನನ್ನ ಜೀವದಾಣೆ, ನನಗೆ ಮಾಡಿದ ಪ್ರಮಾಣವನ್ನು ಅವನು ತಿರಸ್ಕರಿಸಿ ನನ್ನ ಒಡಂಬಡಿಕೆಯನ್ನು ಮೀರಿದ ದೋಷವನ್ನು ಅವನ ತಲೆಯ ಮೇಲೆ ಹೊರಿಸುವೆನು.


ಆದರೆ ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು, ಅಧರ್ಮಮಾಡಿ, ದುಷ್ಟನು ನಡೆಸುವ ದುರಾಚಾರಗಳನ್ನೆಲ್ಲಾ ನಡೆಸಿದರೆ, ಅವನು ಜೀವಿಸುವನೇ? ಅವನು ಮಾಡಿದ ಯಾವ ಸುಕೃತ್ಯವೂ ಅವನ ಲೆಕ್ಕಕ್ಕೆ ಸೇರಿಸಲ್ಪಡದು, ಅವನು ಮಾಡುತ್ತಿರುವ ಪಾಪಾಪರಾಧಗಳಿಂದಲೇ ಸಾಯುವನು.


ಜುದೇಯದ ಅರಸ ಚಿದ್ಕೀಯನನ್ನೂ ಅವನ ಮಂತ್ರಿಗಳನ್ನೂ ಅವರ ಶತ್ರುಗಳಿಗೆ ಅಂದರೆ, ಅವರ ಪ್ರಾಣಹತ್ಯಕ್ಕಾಗಿ ಕಾದಿರುವ, ತಕ್ಷಣಕ್ಕೆ ಹಿಂದಿರುಗಿಹೋಗಿರುವ, ಬಾಬಿಲೋನಿಯದ ಅರಸನ ಕೈಗೆ ಕೊಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು