Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 17:23 - ಕನ್ನಡ ಸತ್ಯವೇದವು C.L. Bible (BSI)

23 ಹೌದು, ನೆಡುವೆನು ಇಸ್ರಯೇಲಿನಾ ಪರ್ವತಾಗ್ರದಲ್ಲಿ. ಆಗುವುದದು ಸೊಂಪಾದ ದೇವದಾರು ಮರ, ರೆಂಬೆಗಳನದು ಹರಡಿಕೊಂಡು ಕೊಡುವುದು ಫಲ. ಸಕಲವಿಧ ಪಕ್ಷಿಗಳು ವಾಸಿಸುವುವು ಅದರಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನಾನು ಅದನ್ನು ಇಸ್ರಾಯೇಲಿನ ಉನ್ನತ ಪರ್ವತಾಗ್ರದಲ್ಲಿ ನೆಡಲು, ಅದು ಸೊಂಪಾದ ದೇವದಾರು ಮರವಾಗಿ ರೆಂಬೆಗಳನ್ನು ಹರಡಿ ಫಲಕೊಡುವುದು; ಅದರಲ್ಲಿ ಸಕಲವಿಧವಾದ ಪಕ್ಷಿಗಳು ವಾಸಿಸುತ್ತಾ ಅದರ ರೆಂಬೆಗಳ ನೆರಳನ್ನು ಆಶ್ರಯಿಸುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನಾನು ಅದನ್ನು ಇಸ್ರಾಯೇಲಿನ ಪರ್ವತಾಗ್ರದಲ್ಲಿ ನೆಡಲು ಅದು ಸೊಂಪಾದ ದೇವದಾರುಮರವಾಗಿ ರೆಂಬೆಗಳನ್ನು ಹರಡಿಸಿ ಫಲಕೊಡುವದು; ಅದರಲ್ಲಿ ಸಕಲವಿಧಪಕ್ಷಿಗಳು ವಾಸಿಸುತ್ತಾ ಅದರ ರೆಂಬೆಗಳ ನೆರಳನ್ನು ಆಶ್ರಯಿಸುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಸ್ವತಃ ನಾನೇ ಅದನ್ನು ಇಸ್ರೇಲಿನ ಉನ್ನತವಾದ ಪರ್ವತದ ಮೇಲೆ ನೆಡುವೆನು. ಅದು ಕೊಂಬೆಗಳನ್ನು ಬೆಳೆಸಿ, ಫಲವನ್ನು ಫಲಿಸಿ, ಅಮೋಘವಾದ ದೇವದಾರು ಮರವಾಗುವುದು; ಅದರ ಕೊಂಬೆಗಳ ಮೇಲೆ ಅನೇಕ ಬಗೆಯ ಪಕ್ಷಿಗಳು ವಾಸಿಸುವವು. ಅದರ ಕೊಂಬೆಯ ನೆರಳಿನಲ್ಲಿ ವಿವಿಧ ಬಗೆಯ ಪಕ್ಷಿಗಳು ವಾಸಿಸುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಇಸ್ರಾಯೇಲಿನ ಉನ್ನತ ಪರ್ವತದಲ್ಲಿ ನಾನು ಅದನ್ನು ನೆಡುವೆನು. ಅದು ಕೊಂಬೆಗಳಲ್ಲಿ ಹುಟ್ಟಿಕೊಂಡು ಫಲಫಲಿಸುವುದು; ಸೊಂಪಾದ ದೇವದಾರು ಆಗುವುದು. ರೆಕ್ಕೆಗಳುಳ್ಳ ಪ್ರತಿಯೊಂದು ಪಕ್ಷಿಗಳೂ, ಅದರ ಕೊಂಬೆಗಳ ನೆರಳಿನ ಕೆಳಗೆ ವಾಸಮಾಡುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 17:23
34 ತಿಳಿವುಗಳ ಹೋಲಿಕೆ  

ಕಾಳುಗಳಲ್ಲಿ ಅತಿ ಸಣ್ಣದಾದ ಇದನ್ನು ಬಿತ್ತಿದಾಗ ಎಲ್ಲ ಸಸ್ಯಗಳಿಗಿಂತಲೂ ದೊಡ್ಡದಾಗಿ ಬೆಳೆದು ಮರವಾಗುತ್ತದೆ. ಆಕಾಶದಲ್ಲಿ ಹಾರಾಡುವ ಹಕ್ಕಿಗಳು ಬಂದು ಇದರ ರೆಂಬೆಗಳಲ್ಲಿ ಗೂಡು ಕಟ್ಟಿ ವಾಸಿಸುತ್ತವೆ.”


ಆ ರೆಂಬೆಗಳಲ್ಲಿ ಗೂಡುಮಾಡಿದ್ದವು ಆಕಾಶದ ಪಕ್ಷಿಗಳೆಲ್ಲವು ಅದರಡಿಯಲಿ ಮರಿಗಳನೀಯುತ್ತಿದ್ದವು ಭೂಜಂತುಗಳೆಲ್ಲವು ಅದರ ನೆರಳನಾಶ್ರಯಿಸುತ್ತಿದ್ದವು ಮಹಾಜನಾಂಗಗಳೆಲ್ಲವು.


ಸರ್ವೇಶ್ವರನ ಶ್ರೀನಿವಾಸದ ಪರ್ವತವು ಅಂತಿಮ ಕಾಲದಂದು ಪ್ರತಿಷ್ಠೆಗೊಳ್ಳುವುದು, ಗುಡ್ಡಬೆಟ್ಟಗಳಿಗಿಂತ ಎತ್ತರವಾಗಿ ಬೆಳೆದು ಬರುವುವು ಅದರತ್ತ ಸಕಲ ರಾಷ್ಟ್ರಗಳು ಜಲಧಾರೆಯಂತೆ ಹರಿದು ಬರುವುವು.


ಇಂಥ ಹೊಸ ಜೀವನದಲ್ಲಿ ಯೆಹೂದ್ಯ-ಗ್ರೀಕ, ಸುನ್ನತಿ ಹೊಂದಿದವ-ಸುನ್ನತಿ ಇಲ್ಲದವ, ನಾಗರಿಕ-ಅನಾಗರಿಕ, ಯಜಮಾನ-ಗುಲಾಮ ಎಂಬ ಭಿನ್ನಭೇದಗಳಿಲ್ಲ, ಕ್ರಿಸ್ತಯೇಸುವೇ ಸಮಸ್ತದಲ್ಲಿ ಸಮಸ್ತವೂ ಆಗಿದ್ದಾರೆ.


ನೀವೆಲ್ಲರೂ ಕ್ರಿಸ್ತಯೇಸುವಿನಲ್ಲಿ ಒಂದಾಗಿದ್ದೀರಿ. ಎಂದೇ, ಇನ್ನು ಮೇಲೆ ಯೆಹೂದ್ಯ-ಯೆಹೂದ್ಯನಲ್ಲದವ, ದಾಸ-ದಣಿ, ಗಂಡು-ಹೆಣ್ಣು, ಎಂಬ ಭೇದವಿಲ್ಲ.


ಮರಳಿ ಆಶ್ರಯಿಸುವರು ನನ್ನ ನೆರಳನ್ನು ಆ ಜನತೆ ಅಭಿವೃದ್ಧಿಯಾಗುವರು ಉದ್ಯಾನವನದಂತೆ ಫಲಪ್ರದವಾಗುವರು ಆ ಜನರು ದ್ರಾಕ್ಷಾಲತೆಯಂತೆ ಸುಪ್ರಸಿದ್ಧ ಅವರ ಕೀರ್ತಿ ಲೆಬನೋನಿನ ದ್ರಾಕ್ಷಾರಸದಂತೆ.


ಏಳನೆಯ ದೂತನು ತನ್ನ ತುತೂರಿಯನ್ನು ಊದಿದನು. ಆಗ ಸ್ವರ್ಗದಲ್ಲಿ ಮಹಾಶಬ್ದಗಳು ಉಂಟಾಗಿ ಹೀಗೆ ಮೊಳಗಿದವು : “ವಿಶ್ವವನ್ನಾಳುವ ಅಧಿಕಾರವು ನಮ್ಮ ಸರ್ವೇಶನದು ಹಾಗು ಅವರಿಂದ ಅಭಿಷಿಕ್ತನಾದ ಲೋಕೋದ್ಧಾರಕನದು. ಇನ್ನಾತನು ಆಳುವನು ಎಂದೆಂದಿಗೂ".


ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ; ಗೋದಿಯಕಾಳು ಭೂಮಿಯಲ್ಲಿ ಬಿದ್ದು ಸಾಯದಿದ್ದರೆ ಅದು ಒಂಟಿಯಾಗಿ ಉಳಿಯುತ್ತದೆ; ಅದು ಸತ್ತರೆ ಮಾತ್ರ ಸಮೃದ್ಧಿಯಾದ ಫಲವನ್ನು ಕೊಡುತ್ತದೆ.


ಕಣ್ಣೆತ್ತಿ ಸುತ್ತಮುತ್ತಲು ನೋಡು : ಬರುತಿಹರು ನಿನ್ನ ಬಳಿಗೆ ಅವರೆಲ್ಲರು ಕೂಡಿಕೊಂಡು. ನನ್ನ ಜೀವದಾಣೆ ನಿನಗೆ ಹೇಳುವುದೇನೆಂದರೆ : ‘ವಧುವು ಒಡವೆಗಳನು ಧರಿಸಿಕೊಳ್ಳುವಂತೆ ಅವರಾಗುವರು ನಿನಗೆ ಆಭರಣಗಳಂತೆ.’


ಮುಂಬರುವ ಕಾಲದಲಿ ಬೇರೂರುವುದು ಯಕೋಬ ಸಂತಾನ. ಚಿಗುರಿ ಹೂ ಬಿಡುವುದು ಇಸ್ರಯೇಲ್ ಮನೆತನ, ಆ ವೃಕ್ಷಫಲದಿಂದ ತುಂಬಿರುವುದು ಜಗದೆಲ್ಲ ಜನ.


ರಾಜ್ಯಾಧಿಕಾರ ಪಡೆದವನು ಬರುವ ತನಕ ರಾಷ್ಟ್ರಗಳು ಆತನಿಗೆ ತಲೆಬಾಗುವ ತನಕ ತಪ್ಪದು ರಾಜದಂಡ ಯೆಹೂದನ ಕೈಯಿಂದ ಕದಲದು ಮುದ್ರೆಕೋಲು ಅವನ ವಂಶದಿಂದ.


ಸಾಸಿವೆಕಾಳು ಚಿಕ್ಕದಾಗಿದ್ದರೂ ಬಿತ್ತನೆಯ ತರುವಾಯ ಮೊಳೆತು ಎಲ್ಲಾ ಕಾಯಿಪಲ್ಯದ ಸಸ್ಯಗಳಿಗಿಂತಲೂ ದೊಡ್ಡದಾಗಿ ಬೆಳೆಯುತ್ತದೆ. ಹಕ್ಕಿಗಳು ಕೂಡ ಬಂದು ಅದರ ನೆರಳಿನಲ್ಲಿ ಗೂಡುಕಟ್ಟಿ ವಾಸಿಸುವಷ್ಟು ದೊಡ್ಡದಾದ ರೆಂಬೆಗಳನ್ನು ಅದು ತಳೆಯುತ್ತದೆ,” ಎಂದರು.


ಅದನ್ನು ಯಾವುದಕ್ಕೆ ಹೋಲಿಸಲಿ? ಅದು ಒಂದು ಸಾಸಿವೆಕಾಳಿನಂತೆ ಇದೆ. ಒಬ್ಬನು ಅದನ್ನು ತೆಗೆದುಕೊಂಡು ಹೋಗಿ ತನ್ನ ತೋಟದಲ್ಲಿ ಬಿತ್ತಿದನು. ಅದು ಬೆಳೆದು ಮರವಾಯಿತು. ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಅದರ ರೆಂಬೆಗಳಲ್ಲಿ ಗೂಡುಕಟ್ಟಿ ವಾಸಮಾಡತೊಡಗಿದವು,” ಎಂದರು.


ಈಜಿಪ್ಟಿನಿಂದ ದ್ರಾಕ್ಷಾಲತೆಯೊಂದನು ನೀ ತಂದೆ I ಅನ್ಯಜನತೆಯನು ಹೊರದೂಡಿ ಅದನು ನಾಟಿಮಾಡಿದೆ II


ಅವನ ಕಾಲುಗಳು ಅಪರಂಜಿಯ ಸುಣ್ಣಪಾದಗಳ ಮೇಲೆ ನಿಂತಿರುವ ಚಂದ್ರಕಾಂತ ಸ್ತಂಭಗಳು. ಅವನ ಗಾಂಭೀರ್ಯ ಲೆಬನೋನಿಗೆ ಸಮಾನ ದೇವದಾರು ಮರಗಳಂತೆ ರಮಣೀಯ.


ಅವರು ಬಂದು ಹಾಡುವರು ಸಿಯೋನ್ ಶಿಖರದಲ್ಲಿ ಬರುವರು ಪ್ರವಾಹ ಪ್ರವಾಹವಾಗಿ ಧಾನ್ಯ, ದ್ರಾಕ್ಷಾರಸ, ಎಣ್ಣೆ, ಕುರಿ, ಕುರಿಮರಿ, ಸರ್ವೇಶ್ವರನ ಈ ವರದಾನಗಳನ್ನು ಅನುಭವಿಸಲಿಕ್ಕಾಗಿ. ಹದವಾಗಿ ನೀರುಹಾಯಿಸಿದ ಉದ್ಯಾನವನದಂತೆ ಅವರ ಜೀವನ ಇನ್ನು ಅವರಿಗಿರದು ವ್ಯಸನ.


ಇಸ್ರಯೇಲಿನ ಪರ್ವತಗಳೇ, ನಿಮ್ಮ ಗಿಡಗಳು ರೆಂಬೆಗಳನ್ನು ಹರಡಿಕೊಂಡು ನನ್ನ ಜನರಾದ ಇಸ್ರಯೇಲರಿಗೆ ಫಲಕೊಡುವುವು; ಅವರ ಬರುವಿಕೆ ಸಮೀಪವಾಯಿತು.


ನನ್ನನ್ನು ಇಸ್ರಯೇಲ್ ನಾಡಿಗೆ ತಂದು, ಅತ್ಯುನ್ನತ ಪರ್ವತದ ಮೇಲೆ ಇಳಿಸಿದರೆಂದು ದೇವರ ದರ್ಶನದಲ್ಲಿ ನನಗೆ ಕಂಡುಬಂದಿತು. ದಕ್ಷಿಣ ಕಡೆಯಲ್ಲಿ ಆ ಪರ್ವತದ ಮೇಲೆ ಪಟ್ಟಣದಂತಿರುವ ಒಂದು ಕಟ್ಟಡ ಕಾಣಿಸಿತು.


ನುಡಿವುದು ಎಫ್ರಯಿಮ್, “ನನಗಿನ್ನು ಬೇಡ ವಿಗ್ರಹಗಳ ಗೊಡವೆ". ಅದಕ್ಕೆ ಒಲಿದು ಕಟಾಕ್ಷಿಸುವವನು ನಾನೇ ಅದಕ್ಕೆ ಹಚ್ಚಹಸಿರಾದ ತುರಾಯಿಮರದಂತಿರುವೆ ಅದಕ್ಕೆ ಫಲವನ್ನು ನೀಡುವವನು ನಾನೇ.”


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನಾಡಿನಲ್ಲಿ ಇಸ್ರಯೇಲ್ ವಂಶದವರೆಲ್ಲರೂ ನನ್ನ ಪರಿಶುದ್ಧ ಬೆಟ್ಟದಲ್ಲೇ, ಇಸ್ರಯೇಲಿನ ಪರ್ವತಾಗ್ರದಲ್ಲೇ, ನನ್ನನ್ನು ಪೂಜಿಸುವರು; ಅಲ್ಲೇ ಅವರಿಗೆ ಪ್ರಸನ್ನನಾಗುವೆನು, ಅಲ್ಲೇ ನಿಮ್ಮ ಕಾಣಿಕೆಗಳನ್ನೂ ಉತ್ತಮ ನೈವೇದ್ಯಗಳನ್ನೂ ಮೀಸಲಾದುದೆಲ್ಲವನ್ನೂ ಅಂಗೀಕರಿಸುವೆನು.


ನನ್ನ ದೇವರ ಹೆಸರು ಸೇರಿರುವ ‘ಬೇಲ್ತೆಶಚ್ಚರ’ ಎಂಬ ಅಡ್ಡಹೆಸರನ್ನು ಹೊಂದಿದ ದಾನಿಯೇಲನು ಕೊನೆಗೆ ನನ್ನ ಬಳಿಗೆ ಬಂದ. ಪರಿಶುದ್ಧ ದೇವರ ಆತ್ಮ ಅವನಲ್ಲಿತ್ತು. ಅವನಿಗೆ ನನ್ನ ಕನಸನ್ನು ಹೀಗೆ ತಿಳಿಸಿದೆ.


‘ಬೇಲ್ತೆಶಚ್ಚರನೇ, ಜೋಯಿಸರಲ್ಲಿ ಪ್ರಾಮುಖ್ಯನೇ, ಪರಿಶುದ್ಧ ದೇವರ ಆತ್ಮ ನಿನ್ನಲ್ಲಿ ನೆಲೆಯಾಗಿದೆಯೆಂದು ತಿಳಿದಿದ್ದೇನೆ. ಯಾವ ರಹಸ್ಯವೂ ನಿನಗೆ ಅಶೋಧ್ಯವಲ್ಲವೆಂದು ನನಗೆ ಗೊತ್ತು. ಆದುದರಿಂದ ನಾನು ಕಂಡ ಕನಸನ್ನೂ ಅದರ ಅರ್ಥವನ್ನೂ ನನಗೆ ತಿಳಿಸು.’


ಕಾಲಾಂತ್ಯದೊಳು ಸರ್ವೇಶ್ವರನ ದೇವಾಲಯವಿರುವ ಪರ್ವತ ಬೆಳೆದು ನೆಲೆಗೊಳ್ಳುವುದು ಸರ್ವ ಪರ್ವತಗಳಿಗಿಂತ ಉನ್ನತೋನ್ನತ ಹರಿದು ಬರುವುವಾಗ ಜನಾಂಗಗಳು ಪ್ರವಾಹದಂತೆ ಅದರತ್ತ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು