Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 17:3 - ಕನ್ನಡ ಸತ್ಯವೇದವು C.L. Bible (BSI)

3 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಅಗಲ ಹಾಗು ಉದ್ದವಾದ ರೆಕ್ಕೆಗಳುಳ್ಳ ವಿವಿಧ ವರ್ಣದ ಗರಿಗಳಿಂದ ಕೂಡಿದ ದೊಡ್ಡ ಹದ್ದೊಂದು ಲೆಬನೋನಿಗೆ ಬಂದು ದೇವದಾರು ಮರದ ಮೇಲ್ತುದಿಯ ರೆಂಬೆಯನ್ನು ಕಿತ್ತಿತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಅಗಲವಾದ ಮತ್ತು ಉದ್ದವಾದ ರೆಕ್ಕೆಗಳಿಂದ ತುಂಬಿದ, ನಾನಾ ಬಣ್ಣದ ದೊಡ್ಡ ಹದ್ದು ಲೆಬನೋನಿಗೆ ಬಂದು, ದೇವದಾರು ಮರದ ಮೇಲ್ಗಡೆಯ ರೆಂಬೆಯನ್ನು ಕಿತ್ತು ಹಾಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಅಗಲವಾದ ಮತ್ತು ಉದ್ದವಾದ ರೆಕ್ಕೆಗಳುಳ್ಳ ತುಪ್ಪಳ ತುಂಬಿದ ನಾನಾ ಬಣ್ಣದ ದೊಡ್ಡ ಹದ್ದು ಲೆಬನೋನಿಗೆ ಬಂದು ದೇವದಾರು ಮರದ ಮೇಲ್ಗಡೆಯ ರೆಂಬೆಯನ್ನು ಕಿತ್ತಿತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅವರಿಗೆ ಹೀಗೆ ಹೇಳು, ದೇವರಾದ ಯೆಹೋವನು ಹೀಗೆನ್ನುತ್ತಾನೆ: “‘ಅಗಲವಾದ ರೆಕ್ಕೆಗಳುಳ್ಳ ದೊಡ್ಡ ಹದ್ದು (ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು) ಲೆಬನೋನಿಗೆ ಬಂದಿತು. ಅದರ ರೆಕ್ಕೆಗಳು ಅನೇಕ ಚುಕ್ಕೆಗಳನ್ನು ಹೊಂದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವರಿಗೆ ಹೇಳತಕ್ಕದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಶಕ್ತಿಶಾಲಿ ರೆಕ್ಕೆಗಳೂ ಉದ್ದವಾದ ರೆಕ್ಕೆಗಳೂ ಉಳ್ಳಂಥ ಮತ್ತು ವಿಧವಿಧವಾದ ಬಣ್ಣಬಣ್ಣದ ಪುಕ್ಕಗಳಿಂದ ತುಂಬಿದಂಥ ಒಂದು ದೊಡ್ಡ ಹದ್ದು ಲೆಬನೋನಿಗೆ ಬಂದು, ದೇವದಾರಿನ ಮರದ ಕೊಂಬೆಯನ್ನು ಹಿಡಿದು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 17:3
20 ತಿಳಿವುಗಳ ಹೋಲಿಕೆ  

“ತುತೂರಿಯನ್ನು ಎತ್ತಿಕೊಂಡು ಊದು. ಶತ್ರುಗಳು ಹದ್ದಿನಂತೆ ದೇವರ ಆಲಯದ ಮೇಲೆ ಎರಗಿಬರುತ್ತಿದ್ದಾರೆ. ಕಾರಣ - ಜನರು ನನ್ನ ಒಡಂಬಡಿಕೆಯನ್ನು ಮೀರಿದ್ದಾರೆ, ನನ್ನ ವಿಧಿನಿಯಮಗಳನ್ನು ಉಲ್ಲಂಘಿಸಿದ್ದಾರೆ.


“ಶತ್ರುವು ಮೋವಾಬಿನ ಮೇಲೆ ಎರಗಲು ರಣಹದ್ದಿನಂತೆ ರೆಕ್ಕೆಗಳನ್ನು ಹರಡಿ ಹಾರುವನು.


“ರಾಜರೇ, ನೀವು ಬೆಳೆದು ಬಲಗೊಂಡಿದ್ದೀರಿ. ನಿಮ್ಮ ಕೀರ್ತಿ ವೃದ್ಧಿಯಾಗಿ ಗಗನಕ್ಕೇರಿದೆ. ನಿಮ್ಮ ಆಳ್ವಿಕೆ ಲೋಕದ ಕಟ್ಟಕಡೆಗೂ ವ್ಯಾಪಿಸಿದೆ.


“ಆದರೆ ಅಗಲವಾದ ರೆಕ್ಕೆಗಳುಳ್ಳ ಗರಿತುಂಬಿದ ಮತ್ತೊಂದು ದೊಡ್ಡ ಹದ್ದು ಇತ್ತು; ಇಗೋ, ಆ ದ್ರಾಕ್ಷಾಲತೆ ತಾನು ನಾಟಿಕೊಂಡಿದ್ದ ಪಾತಿಯೊಳಗಿಂದ ಅದರ ಕಡೆಗೆ ತನ್ನ ಬೇರುಗಳನ್ನು ತಿರುಗಿಸಿ, ತನ್ನ ರೆಂಬೆಗಳನ್ನು ಚಾಚಿ ಅದರಿಂದ ನೀರನ್ನು ಹಾಯಿಸುತ್ತಿತ್ತು.


ಹೆಣವಿದ್ದೆಡೆ ರಣಹದ್ದುಗಳು ಬಂದು ಸೇರುತ್ತವೆ.


ಮೊದಲು ಕಾಣಿಸಿದ ಮೃಗ ಸಿಂಹದ ಹಾಗಿತ್ತು. ಆದರೆ ಅದಕ್ಕೆ ಹದ್ದಿನಂಥ ರೆಕ್ಕೆಗಳಿದ್ದವು. ನಾನು ನೋಡುತ್ತಿರುವಾಗಲೆ ಆ ರೆಕ್ಕೆಗಳು ಕೀಳಲ್ಪಟ್ಟವು. ಆ ಮೃಗವನ್ನು ನೆಲದಿಂದ ಮೇಲಕ್ಕೆತ್ತಿ ಮನುಷ್ಯನ ಹಾಗೆ ಎರಡು ಕಾಲುಗಳ ಮೇಲೆ ನಿಲ್ಲಿಸಲಾಯಿತು. ಅದಕ್ಕೆ ಮನುಷ್ಯನ ಹೃದಯ ಕೊಡಲಾಯಿತು.


ನರಮಾನವರು ವಾಸಿಸುವ ಸಕಲ ಪ್ರಾಂತ್ಯಗಳಲ್ಲಿ ಆಕಾಶಪಕ್ಷಿಗಳನ್ನೂ ಭೂಜಂತುಗಳನ್ನೂ ನಿಮ್ಮ ಕೈಗೆ ಒಪ್ಪಿಸಿದ್ದಾರೆ.


ಹದ್ದುಗಳ ವೇಗದಿಂದ ಹಿಂದಟ್ಟಿಬಂದರು ನಮ್ಮನ್ನು ಬೆನ್ನಟ್ಟಿ ಬೆಟ್ಟಗಳನ್ನೇರಿದರು ಅರಣ್ಯಗಳಲ್ಲಿ ನಮಗಾಗಿ ಹೊಂಚುಹಾಕಿದರು.


ಪರ್ವತಾಗ್ರಗಳಲ್ಲಿ ನೆಲೆಗೊಂಡ ಜನತೆಯೇ, ಬಂಡೆಯ ಬಿರುಕುಗಳಲ್ಲಿ ವಾಸಿಸುವ ಜನತೆಯೇ, ನಿನ್ನ ಭೀಕರತ್ವವೆಲ್ಲಿ? ನಿನ್ನೆದೆಯ ಗರ್ವ ನಿನ್ನನ್ನು ಮೋಸಗೊಳಿಸಿದೆ. ಹದ್ದಿನಂತೆ ನೀನು ಉನ್ನತಸ್ಥಾನದಲ್ಲಿ ಗೂಡನ್ನು ಕಟ್ಟಿಕೊಂಡರೂ ನಿನ್ನನ್ನು ಅಲ್ಲಿಂದ ಇಳಿಸಿಬಿಡುವೆನು. ಇದು ನನ್ನ ನುಡಿ,” ಎನ್ನುತ್ತಾರೆ ಸರ್ವೇಶ್ವರ.


ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಯೆಹೋಯಾಕೀಮನ ಮಗ ಹಾಗೂ ಜುದೇಯದ ಅರಸ ಆದ ಯೆಕೊನ್ಯನನ್ನು, ಜುದೇಯದ ಪ್ರಧಾನಿಗಳನ್ನು, ಶಿಲ್ಪಿಗಳನ್ನು ಮತ್ತು ಕಮ್ಮಾರರನ್ನು ಜೆರುಸಲೇಮಿನಿಂದ ಬಾಬಿಲೋನಿಗೆ ಸೆರೆ ಒಯ್ದನು. ಇದಾದ ಬಳಿಕ ಸರ್ವೇಶ್ವರ ಸ್ವಾಮಿ ತಮ್ಮ ಆಲಯದ ಮುಂದೆ ಇಟ್ಟಿದ್ದ, ಅಂಜೂರದ ಹಣ್ಣು ತುಂಬಿದ್ದ, ಎರಡು ಬುಟ್ಟಿಗಳನ್ನು ನನಗೆ ಕಾಣುವಂತೆ ಮಾಡಿದರು.


ಮೇಘಗಳೋಪಾದಿಯಲ್ಲಿ ಶತ್ರು ಬರುತ್ತಿರುವುದನ್ನು ನೋಡು. ಅವನ ರಥಗಳು ಬಿರುಗಾಳಿಯಂತೆ ! ಅವನ ಕುದುರೆಗಳು ರಣಹದ್ದುಗಳಂತೆ ! ಅಯ್ಯೋ ನಮಗೆ ಕೇಡು, ಇನ್ನು ನಮ್ಮ ಗತಿ ಮುಗಿಯಿತು !


ನಿಮಗೆ ತಿಳಿಯದ ಭಾಷೆಯನ್ನಾಡುವ ಒಂದು ಜನಾಂಗ, ರಣಹದ್ದು ಹೇಗೆ ದೂರದಿಂದ ಹಾರಿಬರುವುದೊ ಹಾಗೆಯೇ ದೂರದಿಂದ ನಿಮ್ಮ ಮೇಲೆ ಬರುವಂತೆ ಮಾಡುವರು.


ಅವರ ಕೀರ್ತಿ ಸಿರಿಯಾ ದೇಶದಲ್ಲೆಲ್ಲಾ ಹಬ್ಬಿತು. ದೆವ್ವಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯು ಪೀಡಿತರನ್ನೂ ನಾನಾ ತರಹದ ವ್ಯಾಧಿ ಹಾಗೂ ವೇದನೆಯಿಂದ ನರಳುತ್ತಿದ್ದ ಎಲ್ಲ ರೋಗಿಗಳನ್ನೂ ಅವರ ಬಳಿಗೆ ಕರೆತಂದರು. ಯೇಸು ಅವರೆಲ್ಲರನ್ನು ಸ್ವಸ್ಥಪಡಿಸಿದರು.


ತುಟ್ಟತುದಿಯ ಚಿಗುರುಗಳನ್ನು ಕಚ್ಚಿ ವಾಣಿಜ್ಯ ದೇಶಕ್ಕೆ ತೆಗೆದುಕೊಂಡುಹೋಗಿ ಬಹುಮಂದಿ ವರ್ತಕರಿರುವ ಪಟ್ಟಣದಲ್ಲಿ ಇಟ್ಟುಬಿಟ್ಟಿತು.


ದೊಡ್ಡಸ್ತಿಕೆಯಲ್ಲಿ ನಿನಗೆ ಸರಿಸಮಾನನಾರು? ಲೆಬನೋನಿನಲ್ಲಿ ದೇವದಾರು ವೃಕ್ಷವೊಂದಿತ್ತು; ಅದರ ರೆಂಬೆಗಳು ಅಂದ, ಅದರ ನೆರಳು ದಟ್ಟ ಅದರ ಎತ್ತರ ಬಹಳ, ಅದರ ತುದಿ ಮೇಘಚುಂಬಿತ.


“ಅವರ ಕುದುರೆಗಳು ಚಿರತೆಗಳಿಗಿಂತ ಬಿರುಸು; ಹಸಿದ ತೋಳಗಳಿಗಿಂತ ಚುರುಕು. ಅವರ ರಾಹುತರು ರಭಸದಿಂದ ಹಾರಿಬರುವರು. ಬೇಟೆಯನ್ನು ಕಬಳಿಸಲು ಕಾತರದಿಂದ ಹಾರುವ ರಣಹದ್ದಿನಂತೆ ದೂರದಿಂದ ಧಾವಿಸಿಬರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು