Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 17:4 - ಕನ್ನಡ ಸತ್ಯವೇದವು C.L. Bible (BSI)

4 ತುಟ್ಟತುದಿಯ ಚಿಗುರುಗಳನ್ನು ಕಚ್ಚಿ ವಾಣಿಜ್ಯ ದೇಶಕ್ಕೆ ತೆಗೆದುಕೊಂಡುಹೋಗಿ ಬಹುಮಂದಿ ವರ್ತಕರಿರುವ ಪಟ್ಟಣದಲ್ಲಿ ಇಟ್ಟುಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ತುಟ್ಟತುದಿಯ ಚಿಗುರುಗಳನ್ನು ಕಚ್ಚಿ, ವ್ಯಾಪಾರದ ದೇಶಕ್ಕೆ ತೆಗೆದುಕೊಂಡು ಹೋಗಿ ಬಹಳ ವರ್ತಕರಿರುವ ಪಟ್ಟಣದಲ್ಲಿ ಇಟ್ಟುಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ತುಟ್ಟತುದಿಯ ಚಿಗುರುಗಳನ್ನು ಕಚ್ಚಿ ವ್ಯಾಪಾರದ ದೇಶಕ್ಕೆ ತೆಗೆದುಕೊಂಡು ಹೋಗಿ ಬಹು ವರ್ತಕರಿರುವ ಪಟ್ಟಣದಲ್ಲಿ ಇಟ್ಟುಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆ ಹದ್ದು ದೇವದಾರು ಮರದ (ಯೆಹೂದದ ರಾಜನಾದ ಯೆಹೋಯಾಖೀನ್) ಮೇಲ್ಭಾಗವನ್ನು ಮುರಿದುಬಿಟ್ಟಿತು. ಅದನ್ನು ವ್ಯಾಪಾರಿಗಳ ದೇಶಕ್ಕೆ ತಂದುಹಾಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅದರ ಚಿಗುರುಗಳ ಕೊನೆಯನ್ನು ಕಿತ್ತು, ವ್ಯಾಪಾರದ ದೇಶಕ್ಕೆ ತೆಗೆದುಕೊಂಡುಹೋಗಿ ವರ್ತಕರಿರುವ ನಗರದಲ್ಲಿ ಇಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 17:4
10 ತಿಳಿವುಗಳ ಹೋಲಿಕೆ  

ಕುಡಿಸಿದಳು ನಾಡುನಾಡುಗಳಿಗೆ ತನ್ನ ಹಾದರವೆಂಬ ಮದ್ಯವನು. ವ್ಯಭಿಚಾರಗೈದರು ಅವಳೊಡನೆ ಭೂರಾಜರು ಅವಳ ಭೋಗವಿಲಾಸದಿಂದ ಧನಿಕರಾದರು ಇಳೆಯ ವರ್ತಕರು.”


“ಬಹುಜಲಾಶ್ರಯಗಳ ನಡುವೆ ನಿಂತಿರುವ ನಗರಿಯೇ, ಧನಭರಿತ ಪುರಿಯೇ, ನಿನ್ನ ಅಂತ್ಯಕಾಲವು ಬಂದಿದೆ. ನೀನು ಕೊಳ್ಳೆಹೊಡೆದದ್ದು ಸಾಕಾಗಿದೆ.”


ಇಂತಾಗುವುದು ನೀ ಗೈದ ಪ್ರಯತ್ನಗಳೆಲ್ಲ. ಬಾಲ್ಯದಿಂದ ನಿನ್ನೊಡನೆ ವ್ಯವಹರಿಸಿದವರು ಸರಿವರು ದೂರಕೆ ಹಿಂದಿರುಗುವರೆಲ್ಲರು ತಂತಮ್ಮ ನಾಡಿಗೆ ಅಂತ್ಯದಲಿ ಯಾರೂ ಆಗರು ರಕ್ಷಣೆ ನಿನಗೆ.”


“ಬಾಬಿಲೋನಿಯಗೆ ಕಳುಹಿಸುವೆ ಒಬ್ಬಾತನನು ನಿಮಗಾಗಿ ಮುರಿವನಾತ ಆ ಕಾರಾಗೃಹದ ಕಂಬಿಗಳನು ತುಂಡುತುಂಡಾಗಿ ಬಾಬಿಲೋನಿಯರ ಕೂಗಾಟವನು ಮಾರ್ಪಡಿಸುವೆನು ಗೋಳಾಟವನ್ನಾಗಿ.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಅಗಲ ಹಾಗು ಉದ್ದವಾದ ರೆಕ್ಕೆಗಳುಳ್ಳ ವಿವಿಧ ವರ್ಣದ ಗರಿಗಳಿಂದ ಕೂಡಿದ ದೊಡ್ಡ ಹದ್ದೊಂದು ಲೆಬನೋನಿಗೆ ಬಂದು ದೇವದಾರು ಮರದ ಮೇಲ್ತುದಿಯ ರೆಂಬೆಯನ್ನು ಕಿತ್ತಿತು;


ಆಮೇಲೆ ಅದು ಆ ದೇವದಾರು ಇದ್ದ ದೇಶದ ಒಂದು ಬೀಜವನ್ನು ತೆಗೆದುಕೊಂಡು ಫಲವತ್ತಾದ ನೀರಾವರಿಯ ಭೂಮಿಯಲ್ಲಿ ನೆಟ್ಟು ನೀರವಂಜಿಯ ಹಾಗೆ ಬೆಳೆಸಿತು.


ದೊಡ್ಡಸ್ತಿಕೆಯಲ್ಲಿ ನಿನಗೆ ಸರಿಸಮಾನನಾರು? ಲೆಬನೋನಿನಲ್ಲಿ ದೇವದಾರು ವೃಕ್ಷವೊಂದಿತ್ತು; ಅದರ ರೆಂಬೆಗಳು ಅಂದ, ಅದರ ನೆರಳು ದಟ್ಟ ಅದರ ಎತ್ತರ ಬಹಳ, ಅದರ ತುದಿ ಮೇಘಚುಂಬಿತ.


ಆಗ ಜುದೇಯದ ಅರಸ ಯೆಹೋಯಾಖೀನನು, ತನ್ನ ತಾಯಿ, ಪರಿವಾರದವರು, ಸೇನಾಪತಿಗಳು, ಕಂಚುಕಿಗಳು ಇವರೊಡನೆ ಅವನ ಬಳಿಗೆ ಹೋದನು. ಅವನು ಇವನನ್ನು ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ ಸೆರೆಹಿಡಿದನು.


ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಯೆಹೋಯಾಕೀಮನ ಮಗ ಹಾಗೂ ಜುದೇಯದ ಅರಸ ಆದ ಯೆಕೊನ್ಯನನ್ನು, ಜುದೇಯದ ಪ್ರಧಾನಿಗಳನ್ನು, ಶಿಲ್ಪಿಗಳನ್ನು ಮತ್ತು ಕಮ್ಮಾರರನ್ನು ಜೆರುಸಲೇಮಿನಿಂದ ಬಾಬಿಲೋನಿಗೆ ಸೆರೆ ಒಯ್ದನು. ಇದಾದ ಬಳಿಕ ಸರ್ವೇಶ್ವರ ಸ್ವಾಮಿ ತಮ್ಮ ಆಲಯದ ಮುಂದೆ ಇಟ್ಟಿದ್ದ, ಅಂಜೂರದ ಹಣ್ಣು ತುಂಬಿದ್ದ, ಎರಡು ಬುಟ್ಟಿಗಳನ್ನು ನನಗೆ ಕಾಣುವಂತೆ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು