Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 17:5 - ಕನ್ನಡ ಸತ್ಯವೇದವು C.L. Bible (BSI)

5 ಆಮೇಲೆ ಅದು ಆ ದೇವದಾರು ಇದ್ದ ದೇಶದ ಒಂದು ಬೀಜವನ್ನು ತೆಗೆದುಕೊಂಡು ಫಲವತ್ತಾದ ನೀರಾವರಿಯ ಭೂಮಿಯಲ್ಲಿ ನೆಟ್ಟು ನೀರವಂಜಿಯ ಹಾಗೆ ಬೆಳೆಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 “‘ಆಮೇಲೆ ಅದು ಆ ದೇವದಾರು ಇದ್ದ ದೇಶದ ಒಂದು ಬೀಜವನ್ನು ತೆಗೆದುಕೊಂಡು ಫಲವತ್ತಾದ ನೀರಾವರಿಯ ಭೂಮಿಯಲ್ಲಿ ನೆಟ್ಟು, ನೀರವಂಜಿಯ ಮರದ ಹಾಗೆ ಬೆಳೆಯಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಮೇಲೆ - ಅದು ಆ [ದೇವದಾರು ಇದ್ದ] ದೇಶದ ಒಂದು ಬೀಜವನ್ನು ತೆಗೆದುಕೊಂಡು ಫಲವತ್ತಾದ ನೀರಾವರಿಯ ಭೂವಿುಯಲ್ಲಿ ನೆಟ್ಟು ನೀರವಂಜಿಯ ಹಾಗೆ ಬೆಳೆಯಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಂತರ ಆ ಹದ್ದು ದೇಶದ ಬೀಜಗಳಲ್ಲಿ ಒಂದನ್ನು (ಹಿಜ್ಕೀಯ) ತೆಗೆದುಕೊಂಡು ಅದನ್ನು ಒಳ್ಳೆಯ ಮಣ್ಣಿನಲ್ಲಿ ಬಿತ್ತಿತು; ಸಮೃದ್ಧಿಕರವಾದ ನೀರಿನ ಸಮೀಪದಲ್ಲಿ ಬೆಳೆಯುವ ನೀರವಂಜಿಯಂತೆ ಅದನ್ನು ಬೆಳೆಯಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 “ ‘ಅದು ದೇಶದ ಬೀಜವನ್ನೂ ಸಹ ತೆಗೆದುಕೊಂಡುಹೋಗಿ ಫಲವತ್ತಾದ ಭೂಮಿಯಲ್ಲಿ ಇರಿಸಿತು. ಅದು ಹೆಚ್ಚು ನೀರಿರುವ ಸ್ಥಳದಲ್ಲಿ ಅದನ್ನು ನೆಟ್ಟು ನೀರವಂಜಿಯ ಮರದ ಹಾಗೆ ಬೆಳೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 17:5
12 ತಿಳಿವುಗಳ ಹೋಲಿಕೆ  

ವೃದ್ಧಿಯಾಗುವರವರು ನೀರನಾಲೆ ಬದಿಯ ಪಚ್ಚೆಪಸಿರಂತೆ, ಹರಿವ ಕಾಲುವೆಗಳ ಬಳಿಯ ಜೊಂಡುಹುಲ್ಲಿನಂತೆ.


ಮತ್ತು ರಾಜವಂಶದವನೊಬ್ಬನನ್ನು ಆರಿಸಿ ಅವನೊಂದಿಗೆ ಒಪ್ಪಂದಮಾಡಿ ಅವನಿಂದ ಆಣೆಯಿಡಿಸಿದ.


ಯೋಷೀಯನ ಮಗ ಚಿದ್ಕೀಯನು ಯೆಹೋಯಾಕೀಮನ ಮಗ ಕೊನ್ಯನಿಗೆ ಬದಲಾಗಿ ರಾಜ್ಯವಾಳುತ್ತಿದ್ದನು. ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಅವನನ್ನು ಜುದೇಯದ ನಾಡಿಗೆ ಅರಸನನ್ನಾಗಿಸಿದ್ದನು.


ಎಂತಲೇ ವಿಲ್ಲೊ ಕಣಿವೆಯಾಚೆ ಹೊತ್ತು ಹೋಗುತಿಹರು, ತಾವು ಗಳಿಸಿದ ಆಸ್ತಿಯನ್ನು, ಕೂಡಿಸಿಟ್ಟ ಸ್ವತ್ತನ್ನು.


ಬಾಬಿಲೋನಿನ ಅರಸನು ಯೆಹೋಯಾಖೀನನಿಗೆ ಬದಲಾಗಿ ಅವನ ಚಿಕ್ಕಪ್ಪನಾದ ಮತ್ತನ್ಯ ಎಂಬುವನನ್ನು ಅರಸನನ್ನಾಗಿ ನೇಮಿಸಿ ಅವನಿಗೆ ‘ಚಿದ್ಕೀಯ’ ಎಂಬ ಹೆಸರಿಟ್ಟನು.


ಅವರನ್ನು ನಾಟಿಮಾಡಿದವರು ನೀವು ಬೇರೂರಿ ಬೆಳೆದು ಹಣ್ಣುಬಿಡುತ್ತಿದ್ದಾರೆ ಅವರು. ನೀವು ಅವರ ಅಧರಕ್ಕೆ ಹತ್ತಿರ, ಹೃದಯಕ್ಕೆ ದೂರ.


ತುಟ್ಟತುದಿಯ ಚಿಗುರುಗಳನ್ನು ಕಚ್ಚಿ ವಾಣಿಜ್ಯ ದೇಶಕ್ಕೆ ತೆಗೆದುಕೊಂಡುಹೋಗಿ ಬಹುಮಂದಿ ವರ್ತಕರಿರುವ ಪಟ್ಟಣದಲ್ಲಿ ಇಟ್ಟುಬಿಟ್ಟಿತು.


ಅದು ಗುಜ್ಜಾಗಿ ಬೆಳೆದು ದ್ರಾಕ್ಷಾಲತೆಯಾಗಿ ವಿಶಾಲವಾಗಿ ಹರಡಿಕೊಂಡು, ತನ್ನ ರೆಂಬೆಗಳನ್ನು ಆ ಹದ್ದಿನ ಕಡೆಗೆ ಚಾಚಿ, ಅದರ ಕೆಳಗೂ ಬೇರು ಬಿಟ್ಟಿತು; ಅದು ಲತೆಯಾಗಿ ಬೆಳೆದು, ರೆಂಬೆಗಳನ್ನು ಹರಡಿಸಿ, ಚಿಗುರುಗಳನ್ನು ಹೊರಡಿಸಿತು.


ಅದನ್ನು ಬೆಳೆಸಿದವು ಜಲಪ್ರವಾಹಗಳು ವೃದ್ಧಿಗೊಳಿಸಿತದನು ಮಹಾನದಿಯೊಂದು ಸುತ್ತಿಕೊಂಡಿದ್ದವು ಅಲ್ಲಿನ ಉದ್ಯಾನವನವನ್ನು ನದಿ ಶಾಖೆಗಳು ಮರಗಿಡಗಳಿಗೆ ನದಿ ನೀಡಿತ್ತು ತನ್ನ ಕಾಲುವೆಗಳನು.


ಇಂತಿರಲು ವನವೃಕ್ಷಗಳಲೆಲ್ಲ ಆ ವೃಕ್ಷ ಅತ್ಯುನ್ನತವಾಗಿತ್ತು ಅದರ ರೆಂಬೆಗಳು ನಿಬಿಡವಾಗಿದ್ದವು, ಉದ್ದುದ್ದ ಚಾಚಿಕೊಂಡಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು