Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 17:6 - ಕನ್ನಡ ಸತ್ಯವೇದವು C.L. Bible (BSI)

6 ಅದು ಗುಜ್ಜಾಗಿ ಬೆಳೆದು ದ್ರಾಕ್ಷಾಲತೆಯಾಗಿ ವಿಶಾಲವಾಗಿ ಹರಡಿಕೊಂಡು, ತನ್ನ ರೆಂಬೆಗಳನ್ನು ಆ ಹದ್ದಿನ ಕಡೆಗೆ ಚಾಚಿ, ಅದರ ಕೆಳಗೂ ಬೇರು ಬಿಟ್ಟಿತು; ಅದು ಲತೆಯಾಗಿ ಬೆಳೆದು, ರೆಂಬೆಗಳನ್ನು ಹರಡಿಸಿ, ಚಿಗುರುಗಳನ್ನು ಹೊರಡಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅದು ಮೊಳೆತು ದ್ರಾಕ್ಷಾಲತೆಯಾಗಿ ತುಂಬಾ ಹರಡಿಕೊಂಡು ತನ್ನ ರೆಂಬೆಗಳನ್ನು ಆ ಹದ್ದಿನ ಕಡೆಗೆ ಚಾಚಿ ಅದರ ಕೆಳಗೆ ತನ್ನ ಬೇರುಗಳನ್ನು ಬಿಟ್ಟಿತು; ಅದು ಲತೆಯಾಗಿ ಬೆಳೆದು, ರೆಂಬೆಗಳನ್ನು ಹರಡಿಸಿ, ಚಿಗುರುಗಳನ್ನು ಹೊರಡಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅದು ಗುಜ್ಜಾಗಿ ಬೆಳೆದು ದ್ರಾಕ್ಷಾಲತೆಯಾಗಿ ತುಂಬಾ ಹರಡಿಕೊಂಡು ತನ್ನ ರೆಂಬೆಗಳನ್ನು ಆ ಹದ್ದಿನ ಕಡೆಗೆ ಚಾಚಿ ಅದರ ಕೆಳಗೆ ತನ್ನ ಬೇರುಗಳನ್ನು ಬಿಟ್ಟಿತು; ಅದು ಲತೆಯಾಗಿ ರೆಂಬೆಗಳನ್ನು ಹರಡಿಸಿ ಚಿಗುರುಗಳನ್ನು ಹೊರಡಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆ ಬೀಜವು ಚಿಗುರಿ, ಚಿಕ್ಕ ಜಾತಿಯ ದ್ರಾಕ್ಷಾಲತೆಯಂತೆ ನೆಲದ ಮೇಲೆ ಹಬ್ಬಿಕೊಂಡು, ತನ್ನ ಕೊಂಬೆಗಳನ್ನು ಗರುಡದ ಕಡೆಗೆ ಚಾಚಿಕೊಂಡು ತನ್ನ ಬೇರುಗಳನ್ನು ಬಿಟ್ಟಿತು: ಅಂತೆಯೇ ಅದು ಲತೆಯಾಗಿ ಕೊಂಬೆಗಳನ್ನು ಬೆಳೆಸಿ, ಎಲೆಗಳನ್ನು ಹೊರಡಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅದು ಮೊಳೆತು ತಗ್ಗಾದ ಪ್ರಮಾಣದಲ್ಲಿ ಹಬ್ಬುವ ದ್ರಾಕ್ಷಿಗಿಡವಾಯಿತು. ಅದರ ರೆಂಬೆಗಳು ಅವನ ಕಡೆಗೆ ತಿರುಗಿಕೊಂಡವು. ಅದರ ಬೇರುಗಳು ಅದರ ಕೆಳಗಿದ್ದವು. ಹೀಗೆ ಅದು ದ್ರಾಕ್ಷಿಗಿಡವಾಯಿತು. ಕೊಂಬೆಗಳು ಹುಟ್ಟಿಕೊಂಡು ಬಳ್ಳಿಗಳು ಹಬ್ಬಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 17:6
10 ತಿಳಿವುಗಳ ಹೋಲಿಕೆ  

ಅವನ ರಾಜ್ಯ ಏಳಿಗೆಗೆ ಬಾರದೆ ಗುಜ್ಜಾಗಿದ್ದು ಒಪ್ಪಂದಕ್ಕೆ ಬದ್ಧವಾಗಿರುವುದರಿಂದಲೇ ಅದು ನಿಲ್ಲದೆಂದು ಆ ದೇಶದ ಬಲಿಷ್ಠರನ್ನು ಗಡೀಪಾರುಮಾಡಿದ.


ಗೋದಿ ಬೆಳೆದು ತೆನೆಬಿಟ್ಟಾಗ ಕಳೆ ಬೆಳೆದಿರುವುದೂ ಗೋಚರವಾಯಿತು.


ಈಜಿಪ್ಟಿನಿಂದ ದ್ರಾಕ್ಷಾಲತೆಯೊಂದನು ನೀ ತಂದೆ I ಅನ್ಯಜನತೆಯನು ಹೊರದೂಡಿ ಅದನು ನಾಟಿಮಾಡಿದೆ II


ಗಿಡದಲ್ಲಿ ಮೊಗ್ಗು ಕಚ್ಚಿ, ಹೂ ಅರಳಿ, ಹೀಚು ದೋರೆಗಾಯಿಯಾಗುತ್ತಿರುವಾಗ, ಕೊಯಿಲು ಕಾಲಕ್ಕೆ ಮುಂಚೆಯೇ ಅದರ ಕೊಂಬೆಗಳನ್ನೂ ಕವಲುಗಳನ್ನೂ ಶತ್ರುಗಳು ಕತ್ತರಿಸಿಹಾಕುವರು.


ಆಮೇಲೆ ಅದು ಆ ದೇವದಾರು ಇದ್ದ ದೇಶದ ಒಂದು ಬೀಜವನ್ನು ತೆಗೆದುಕೊಂಡು ಫಲವತ್ತಾದ ನೀರಾವರಿಯ ಭೂಮಿಯಲ್ಲಿ ನೆಟ್ಟು ನೀರವಂಜಿಯ ಹಾಗೆ ಬೆಳೆಸಿತು.


“ಆದರೆ ಅಗಲವಾದ ರೆಕ್ಕೆಗಳುಳ್ಳ ಗರಿತುಂಬಿದ ಮತ್ತೊಂದು ದೊಡ್ಡ ಹದ್ದು ಇತ್ತು; ಇಗೋ, ಆ ದ್ರಾಕ್ಷಾಲತೆ ತಾನು ನಾಟಿಕೊಂಡಿದ್ದ ಪಾತಿಯೊಳಗಿಂದ ಅದರ ಕಡೆಗೆ ತನ್ನ ಬೇರುಗಳನ್ನು ತಿರುಗಿಸಿ, ತನ್ನ ರೆಂಬೆಗಳನ್ನು ಚಾಚಿ ಅದರಿಂದ ನೀರನ್ನು ಹಾಯಿಸುತ್ತಿತ್ತು.


ಆ ರಾಜ್ಯ ಸಮಸ್ತ ರಾಜ್ಯಗಳಲ್ಲಿ ಕನಿಷ್ಟವೆನಿಸಿಕೊಳ್ಳುವುದು; ಮಿಕ್ಕ ಜನಾಂಗಗಳಿಗಿಂತ ತಾನು ದೊಡ್ಡದೆಂದು ಅದು ಇನ್ನು ತಲೆಯೆತ್ತದು; ಆ ಜನಾಂಗಗಳ ಮೇಲೆ ಇನ್ನು ದೊರೆತನ ಮಾಡಲಾರದಂತೆ ನಾನು ಅದನ್ನು ಕ್ಷೀಣಗತಿಗೆ ತರುವೆನು.


ನೆಬೂಕದ್ನೆಚ್ಚರನು ವರ್ಷಾರಂಭದಲ್ಲಿ ಅವನನ್ನೂ ದೇವಾಲಯದ ಮೌಲ್ಯವಸ್ತುಗಳನ್ನು ಬಾಬಿಲೋನಿಗೆ ತರಿಸಿಕೊಂಡು, ಅವನ ಸಹೋದರನಾದ ಚಿದ್ಕೀಯನನ್ನು ಜುದೇಯದ ಮತ್ತು ಜೆರುಸಲೇಮಿನ ಅರಸನನ್ನಾಗಿ ಮಾಡಿದನು.


ನಿನ್ನ ಹೆತ್ತ ತಾಯಿ ದ್ರಾಕ್ಷಾಲತೆಯಂತೆ ನೀರಾವರಿಯಲಿ ನಾಟಿದ್ದಾ ಲತೆಯಂತೆ ಬೆಳೆದಿತ್ತದು ಫಲವತ್ತಾಗಿ, ಹುಲುಸಾಗಿ, ಅತಿ ತಂಪಾಗಿಯೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು