Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 17:7 - ಕನ್ನಡ ಸತ್ಯವೇದವು C.L. Bible (BSI)

7 “ಆದರೆ ಅಗಲವಾದ ರೆಕ್ಕೆಗಳುಳ್ಳ ಗರಿತುಂಬಿದ ಮತ್ತೊಂದು ದೊಡ್ಡ ಹದ್ದು ಇತ್ತು; ಇಗೋ, ಆ ದ್ರಾಕ್ಷಾಲತೆ ತಾನು ನಾಟಿಕೊಂಡಿದ್ದ ಪಾತಿಯೊಳಗಿಂದ ಅದರ ಕಡೆಗೆ ತನ್ನ ಬೇರುಗಳನ್ನು ತಿರುಗಿಸಿ, ತನ್ನ ರೆಂಬೆಗಳನ್ನು ಚಾಚಿ ಅದರಿಂದ ನೀರನ್ನು ಹಾಯಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 “‘ಅಗಲವಾದ ರೆಕ್ಕೆಗಳುಳ್ಳ ಗರಿ ತುಂಬಿದ ಮತ್ತೊಂದು ದೊಡ್ಡ ಹದ್ದು ಇತ್ತು; ಇಗೋ, ಆ ದ್ರಾಕ್ಷಾಲತೆಯು ತಾನು ನಾಟಿಕೊಂಡಿದ್ದ ಪಾತಿಯೊಳಗಿಂದ ಅದರ ಕಡೆಗೆ ತನ್ನ ಬೇರುಗಳನ್ನು ತಿರುಗಿಸಿ, ತನ್ನ ರೆಂಬೆಗಳನ್ನು ಚಾಚಿ ಅದರಿಂದ ನೀರನ್ನು ಹಾಯಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅಗಲವಾದ ರೆಕ್ಕೆಗಳುಳ್ಳ ತುಪ್ಪಳತುಂಬಿದ ಮತ್ತೊಂದು ದೊಡ್ಡ ಹದ್ದು ಇತ್ತು; ಇಗೋ, ಆ ದ್ರಾಕ್ಷಾಲತೆಯು ತಾನು ನಾಟಿಕೊಂಡಿದ್ದ ಪಾತಿಯೊಳಗಿಂದ ಅದರ ಕಡೆಗೆ ತನ್ನ ಬೇರುಗಳನ್ನು ತಿರುಗಿಸಿ ತನ್ನ ರೆಂಬೆಗಳನ್ನು ಚಾಚಿ ಅದರಿಂದ ನೀರನ್ನು ಹಾರೈಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆಗ ಅಗಲ ರೆಕ್ಕೆಗಳಿದ್ದ ಇನ್ನೊಂದು ಹದ್ದು ದ್ರಾಕ್ಷಾಲತೆಯನ್ನು ನೋಡಿತು. ಈ ಹದ್ದಿಗೆ ತುಂಬಾ ಪುಕ್ಕಗಳಿದ್ದವು. ದ್ರಾಕ್ಷಾಲತೆಯು ತನ್ನ ಬೇರುಗಳನ್ನು ಹದ್ದಿನ ಕಡೆಗೆ ತಿರುಗಿಸಿತ್ತು. ಹದ್ದಿಗೆ ನೀರು ಹಾಯಿಸಲು ಸಾಧ್ಯವಾಗುವಂತೆ ಅದು ತನ್ನ ರೆಂಬೆಗಳನ್ನು ಹದ್ದಿನ ಕಡೆಗೆ ಚಾಚಿಕೊಂಡಿತ್ತು. ಅದು ತಾನು ನೆಡಲ್ಪಟ್ಟಿದ್ದ ಸ್ಥಳದಿಂದ ಬೇರೆ ಕಡೆಗೆ ತಿರುಗಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ ‘ಶಕ್ತಿಶಾಲಿ ರೆಕ್ಕೆಗಳೂ, ಬಹಳ ಗರಿಗಳೂ ಇದ್ದ ಇನ್ನೊಂದು ದೊಡ್ಡ ಹದ್ದು ಇತ್ತು. ಆಗ ಆ ದ್ರಾಕ್ಷಿ ಗಿಡವು ತಾನು ನಾಟಿಕೊಂಡಿದ್ದ ಪಾತಿಯೊಳಗಿಂದ ಅವನ ಕಡೆಗೆ ತನ್ನ ಬೇರುಗಳನ್ನು ತಿರುಗಿಸಿ, ತನ್ನ ರೆಂಬೆಗಳನ್ನು ಚಾಚಿ ಅವನ ಮೂಲಕ ನೀರನ್ನು ಪಡೆಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 17:7
7 ತಿಳಿವುಗಳ ಹೋಲಿಕೆ  

ಅದನ್ನು ಬೆಳೆಸಿದವು ಜಲಪ್ರವಾಹಗಳು ವೃದ್ಧಿಗೊಳಿಸಿತದನು ಮಹಾನದಿಯೊಂದು ಸುತ್ತಿಕೊಂಡಿದ್ದವು ಅಲ್ಲಿನ ಉದ್ಯಾನವನವನ್ನು ನದಿ ಶಾಖೆಗಳು ಮರಗಿಡಗಳಿಗೆ ನದಿ ನೀಡಿತ್ತು ತನ್ನ ಕಾಲುವೆಗಳನು.


ಆದರೆ ಅವನು ಬಾಬಿಲೋನಿನ ಅರಸನ ವಿರುದ್ಧ ದಂಗೆಯೆದ್ದು ಕುದುರೆಗಳನ್ನೂ ಬಹುಮಂದಿ ಸೈನಿಕರನ್ನೂ ನಮಗೆ ಒದಗಿಸೆಂದು ಈಜಿಪ್ಟಿಗೆ ರಾಯಭಾರಿಗಳನ್ನು ಕಳುಹಿಸಿದ. ಆದರೂ ಇವನು ಗೆಲ್ಲುವನೇ? ಇಂಥಾ ಕೃತ್ಯಗಳನ್ನು ನಡೆಸಿದವನು ಪಾರಾಗುವನೇ? ಒಪ್ಪಂದವನ್ನು ಮೀರಿದವನು ತಪ್ಪಿಸಿಕೊಂಡಾನೇ?


ಇವರ ಕೈಕೆಳಗಿದ್ದ ಯೋಧರ ಸಂಖ್ಯೆ, ಮೂರು ಲಕ್ಷದ ಏಳು ಸಾವಿರದ ಐನೂರು; ಇವರು ಅರಸನ ಸೇವೆಯಲ್ಲಿದ್ದು, ಅವನ ವೈರಿಗಳಿಗೆ ವಿರುದ್ಧ, ಪರಾಕ್ರಮದಿಂದ ಯುದ್ಧ ಮಾಡುತ್ತಿದ್ದರು.


ಸರ್ವೇಶ್ವರಸ್ವಾಮಿ ಬಹಳ ಕೋಪಗೊಂಡು ಜೆರುಸಲೇಮಿನವರ ಮೇಲೂ ಬೇರೆ ಎಲ್ಲ ಯೆಹೂದ್ಯರ ಮೇಲೂ ಇದನ್ನೆಲ್ಲ ಬರಮಾಡಿ, ಕಡೆಗೆ ಅವರನ್ನು ತಮ್ಮ ಸನ್ನಿಧಿಯಿಂದ ತಳ್ಳಿಬಿಟ್ಟರು.


ಅದು ಗುಜ್ಜಾಗಿ ಬೆಳೆದು ದ್ರಾಕ್ಷಾಲತೆಯಾಗಿ ವಿಶಾಲವಾಗಿ ಹರಡಿಕೊಂಡು, ತನ್ನ ರೆಂಬೆಗಳನ್ನು ಆ ಹದ್ದಿನ ಕಡೆಗೆ ಚಾಚಿ, ಅದರ ಕೆಳಗೂ ಬೇರು ಬಿಟ್ಟಿತು; ಅದು ಲತೆಯಾಗಿ ಬೆಳೆದು, ರೆಂಬೆಗಳನ್ನು ಹರಡಿಸಿ, ಚಿಗುರುಗಳನ್ನು ಹೊರಡಿಸಿತು.


ಅದು ಸೊಂಪಾದ ಲತೆಯಾಗಿ ರೆಂಬೆಗಳನ್ನು ಹರಡಿಸಿ, ಫಲಕೊಡುವುದಕ್ಕೆ ಅನುಕೂಲವಾದ ಒಳ್ಳೆಯ ನೀರಾವರಿಯ ನೆಲದಲ್ಲಿ ನಾಟಿಕೊಂಡಿತ್ತು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು