Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 18:12 - ಕನ್ನಡ ಸತ್ಯವೇದವು C.L. Bible (BSI)

12 ದೀನದಲಿತರನ್ನು ಹಿಂಸಿಸಿ, ಜನರ ಸೊತ್ತನ್ನು ಅಪಹರಿಸಿ, ಸಾಲಗಾರನ ಒತ್ತೆಯನ್ನು ಬಿಗಿಹಿಡಿದು, ವಿಗ್ರಹಗಳ ಕಡೆಗೆ ಕಣ್ಣೆತ್ತಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ದೀನದರಿದ್ರರನ್ನು ಹಿಂಸಿಸಿ, ಜನರ ಸೊತ್ತನ್ನು ಅಪಹರಿಸಿ, ಸಾಲಗಾರನ ಒತ್ತೆಯನ್ನು ಬಿಗಿಹಿಡಿದು, ವಿಗ್ರಹಗಳ ಕಡೆಗೆ ಕಣ್ಣೆತ್ತಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ದೀನದರಿದ್ರರನ್ನು ಹಿಂಸಿಸಿ ಜನರ ಸೊತ್ತನ್ನು ಅಪಹರಿಸಿ ಸಾಲಗಾರನ ಒತ್ತೆಯನ್ನು ಬಿಗಿಹಿಡಿದು ವಿಗ್ರಹಗಳ ಕಡೆಗೆ ಕಣ್ಣೆತ್ತಿ ಅಸಹ್ಯಕಾರ್ಯವನ್ನು ಮಾಡಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಬಡ, ನಿಸ್ಸಹಾಯಕರಾದ ಜನರಿಗೆ ಕಿರುಕುಳ ಕೊಟ್ಟಿರಬಹುದು. ಜನರ ನಿಸ್ಸಹಾಯಕತೆಯ ಪ್ರಯೋಜನ ಪಡೆಯುತ್ತಿರಬಹುದು. ಒತ್ತೆಗೆ ತೆಗೆದುಕೊಂಡ ವಸ್ತುವನ್ನು ಹಿಂದಕ್ಕೆ ಕೊಡದೆ ಇದ್ದಿರಬಹುದು. ಆ ಮಗನು ವಿಗ್ರಹಗಳಿಗೆ ಪ್ರಾರ್ಥಿಸಿ ಇನ್ನೂ ಅನೇಕ ಭಯಂಕರ ಕೃತ್ಯಗಳನ್ನೂ ಮಾಡಿದ್ದಿರಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಬಡವರನ್ನೂ, ದರಿದ್ರರನ್ನೂ ಉಪದ್ರವಗೊಳಿಸಿ, ಹಿಂಸಿಸಿ, ಸುಲಿಗೆ ಮಾಡಿ, ಒತ್ತೆಗಳನ್ನು ಹಿಂದೆ ಕೊಡದೆ, ವಿಗ್ರಹಗಳ ಕಡೆಗೆ ತನ್ನ ಕಣ್ಣುಗಳನ್ನು ಎತ್ತಿ ಅಸಹ್ಯವಾದವುಗಳನ್ನು ಮಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 18:12
19 ತಿಳಿವುಗಳ ಹೋಲಿಕೆ  

ಆಗ ದೇವರು ನನಗೆ, “ನರಪುತ್ರನೇ, ನೋಡಿದೆಯಾ? ಯೆಹೂದವಂಶದವರು ತಾವು ಇಲ್ಲಿ ನಡೆಸುವ ಅಸಹ್ಯಕಾರ್ಯಗಳು ಅಲ್ಪವೆಂದು ಭಾವಿಸಿದ್ದಾರೋ? ನಾಡನ್ನು ಹಿಂಸಾಕೃತ್ಯಗಳಿಂದ ತುಂಬಿಸಿದ್ದಲ್ಲದೆ ನನ್ನನ್ನು ಕೆಣಕಬೇಕೆಂದೇ ಮತ್ತೆ ಯತ್ನಿಸುತ್ತಿದ್ದಾರೆ; ನೋಡು, ಪತ್ರೆಯನ್ನು ಮೂಗಿಗೆ ಒತ್ತಿಕೊಳ್ಳುತ್ತಾರೆ.


ಆಗ ಅವರು ನನಗೆ, “ನರಪುತ್ರನೇ, ಇವರು ಮಾಡುವುದನ್ನು ನೋಡಿದೆಯಾ? ಇಸ್ರಯೇಲ್ ವಂಶದವರು ಇಲ್ಲಿ ನಡೆಸುವ ಅಧಿಕ ದುರಾಚಾರಗಳನ್ನೆಲ್ಲ ಕಂಡೆಯಾ? ಇದರಿಂದ ನಾನು ನನ್ನ ಪವಿತ್ರಾಲಯವನ್ನು ಬಿಟ್ಟು ದೂರಹೋಗಬೇಕಾಯಿತು. ಬಾ, ಇವುಗಳಿಗಿಂತ ಇನ್ನು ಹೆಚ್ಚಾದ ದುರಾಚಾರಗಳನ್ನು ನೋಡುವೆ,” ಎಂದು ಹೇಳಿದರು.


ಸಮಾರ್ಯದ ಗುಡ್ಡಗಳ ಮೇಲೆ ಮೇದು, ಬಾಷಾನಿನ ಕೊಬ್ಬಿನ ಕಾಮಧೇನುಗಳಂತಿರುವ ಮಹಿಳೆಯರೇ, ಕೇಳಿ: ಬಡವರನ್ನು ಹಿಂಸಿಸಿ, ದಿಕ್ಕಿಲ್ಲದವರನ್ನು ಶೋಷಿಸಿ, ನಿಮ್ಮ ಪತಿರಾಯರಿಗೆ, “ಮದ್ಯ ತರಿಸಿರಿ, ಕುಡಿಯೋಣ” ಎಂದು ಹೇಳುವವರೇ, ಇದನ್ನು ಕೇಳಿ:


“ಯೆಹೂದ್ಯರ ಅರಸನಾದ ಮನಸ್ಸೆಯು, ಹಿಂದೆ ಇದ್ದ ಅಮೋರಿಯರ ಕೃತ್ಯಗಳಿಗಿಂತ ಅಸಹ್ಯವಾದ ಕೃತ್ಯಗಳನ್ನು ನಡೆಸಿದ್ದಾನೆ. ವಿಗ್ರಹಗಳಿಂದ ಯೆಹೂದ್ಯರನ್ನು ಪಾಪಕ್ಕೆ ಪ್ರೇರಿಸಿದ್ದಾನೆ;


ಒಬ್ಬರಿಗೊಬ್ಬರು ಪ್ರೀತಿ ಕರುಣೆಯನ್ನು ತೋರಿಸಿರಿ. ವಿಧವೆಯರು, ಅನಾಥರು, ವಿದೇಶಿಯರು, ಬಡವರು, ಇವರಾರನ್ನೂ ಶೋಷಣೆಮಾಡಬೇಡಿ. ನಿಮ್ಮಲ್ಲಿ ಯಾವನೂ ತನ್ನ ಸಹೋದರನಿಗೆ ಕೇಡನ್ನು ಬಗೆಯದಿರಲಿ.


ಒತ್ತೆಯನ್ನು ಕೇಳದೆ, ಯಾರ ಸೊತ್ತನ್ನೂ ಅಪಹರಿಸದೆ, ಹಸಿದವನಿಗೆ ಅನ್ನವಿಕ್ಕಿ, ಬೆತ್ತಲೆಯಿರುವವನಿಗೆ ಹೊದಿಕೆಯನ್ನು ಹೊದಿಸಿ,


ಹೀಗಿದ್ದರೂ ನೀವು ಬಡವನನ್ನು ಅವಮಾನಕ್ಕೆ ಈಡುಮಾಡಿದಿರಿ. ನಿಮ್ಮನ್ನು ತುಳಿದು ಹಿಂಸಿಸುವವರು ಮತ್ತು ನಿಮ್ಮನ್ನು ನ್ಯಾಯಾಲಯಕ್ಕೆ ಎಳೆಯುವವರು ಸಿರಿವಂತರೇ ಅಲ್ಲವೇ?


ಸರ್ವೇಶ್ವರ ಇಂತೆನ್ನುತ್ತಾರೆ: “ಇಸ್ರಯೇಲ್ ಮೋಸದ ತಕ್ಕಡಿ ಹಿಡಿದು ವ್ಯಾಪಾರಮಾಡುವ ಕಾನಾನ್ಯರಂತೆ ಇದೆ. ಇತರರಿಂದ ಕಸಿದುಕೊಳ್ಳಬೇಕೆಂಬುದೇ ಅದರ ದುರಾಸೆ.”


ಆದರೆ ನಿನ್ನ ದೃಷ್ಟಿ, ನಿನ್ನ ಮನಸ್ಸು ನೆಲೆಗೊಂಡಿವೆ ದುರ್ಲಾಭದಲ್ಲಿ, ನಿರ್ದೋಷಿಯ ರಕ್ತ ಸುರಿಸುವುದರಲ್ಲಿ ದಬ್ಬಾಳಿಕೆಯಲ್ಲಿ, ಹಿಂಸಾಚಾರಗಳಲ್ಲಿ.”


ಇಸ್ರಯೇಲರ ಅರಸ ಸೊಲೊಮೋನನು ಸಿದೋನ್ಯರ ಅಷ್ಟೋರೆತ್, ಮೋವಾಬ್ಯರ ಕೆಮೋಷ್, ಅಮ್ಮೋನಿಯರ ಮಿಲ್ಕೋಮ್ ಎಂಬ ಅಸಹ್ಯ ವಿಗ್ರಹಗಳಿಗಾಗಿ ಜೆರುಸಲೇಮಿನ ಎದುರಿನಲ್ಲೂ ಎಘ್ನಪರ್ವತದ ದಕ್ಷಿಣದಿಕ್ಕಿನಲ್ಲೂ ಸ್ಥಾಪಿಸಿದ ಪೂಜಾಸ್ಥಳಗಳನ್ನು ಇವನು ಹೊಲೆಮಾಡಿದನು.


ಸ್ತ್ರೀಯನ್ನು ಸಂಗಮಿಸುವಂತೆ ಪುರುಷನನ್ನು ಸಂಗಮಿಸಬಾರದು; ಅದು ಹೇಸಿಗೆಯಾದುದು.


ಸ್ವಾಮಿ ಜನರ ನಾಯಕರನ್ನೂ ಅಧಿಪತಿಗಳನ್ನೂ ನ್ಯಾಯವಿಚಾರಣೆಗೆ ಗುರಿಪಡಿಸುವರು. “ನೀವು ದ್ರಾಕ್ಷಾತೋಟವನ್ನು ಕಬಳಿಸಿದ್ದೀರಿ. ಬಡವರಿಂದ ಕೊಳ್ಳೆಹೊಡೆದದ್ದನ್ನು ಮನೆಗಳಲ್ಲಿ ತುಂಬಿಸಿಕೊಂಡಿದ್ದೀರಿ.


ಸರ್ವೇಶ್ವರನ ಸಂದೇಶ ಇದು: ನ್ಯಾಯನೀತಿಯನ್ನು ಆಚರಿಸಿರಿ. ವಂಚಿತನಾದವನನ್ನು ದೋಚಿಕೊಳ್ಳುವವನ ಕೈಯಿಂದ ಬಿಡಿಸಿರಿ. ಪರದೇಶೀಯರಿಗೆ, ಅನಾಥರಿಗೆ, ವಿಧವೆಯರಿಗೆ ಅನ್ಯಾಯಮಾಡಬೇಡಿ, ಅವರನ್ನು ಹಿಂಸಿಸಬೇಡಿ. ನಿರಪರಾಧಿಗಳ ರಕ್ತವನ್ನು ಈ ಸ್ಥಳದಲ್ಲಿ ಸುರಿಸಬೇಡಿ.


“ಒಂದು ಸರಪಣಿಯನ್ನು ಮಾಡು; ಏಕೆಂದರೆ ನಾಡು ನರಹತ್ಯಪೂರಿತವಾಗಿದೆ. ಪಟ್ಟಣವು ಹಿಂಸಾಕೃತ್ಯಗಳಿಂದ ತುಂಬಿಹೋಗಿದೆ.


ಸೊದೋಮೆಂಬ ನಿನ್ನ ತಂಗಿಯ ದೋಷವನ್ನು ನೋಡು; ಗರ್ವಪಡುವುದು, ಹೊಟ್ಟೆ ತುಂಬಿಸಿಕೊಳ್ಳುವುದು, ಸ್ವಸುಖದಲ್ಲಿ ಮುಳುಗಿರುವುದು, ಇವು ಆಕೆಯಲ್ಲಿಯೂ ಆಕೆಯ ಕುವರಿಯರಲ್ಲೂ ಇದ್ದವು. ಅಲ್ಲದೆ ಅವರು ದೀನದಲಿತರಿಗೆ ಬೆಂಬಲವಾಗಿರಲಿಲ್ಲ.


“ಆದುದರಿಂದ ನೀನು ಅವರಿಗೆ ಹೀಗೆ ನುಡಿ: ‘ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ರಕ್ತದಿಂದ ಕೂಡಿದ ಮಾಂಸವನ್ನು ತಿನ್ನುತ್ತೀರಿ. ವಿಗ್ರಹಗಳ ಕಡೆಗೆ ಕಣ್ಣೆತ್ತುತ್ತೀರಿ; ರಕ್ತವನ್ನು ಸುರಿಸುತ್ತೀರಿ; ನಿಮ್ಮಂಥವರು ದೇಶವನ್ನು ಅನುಭವಿಸಬಹುದೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು