“ನಮ್ಮ ಪೂರ್ವಜರು ಈ ಗ್ರಂಥದಲ್ಲಿ ಬರೆದಿರುವ ಸರ್ವೇಶ್ವರನ ಆಜ್ಞೆಗಳನ್ನೆಲ್ಲಾ ಕೈಗೊಳ್ಳದೆ ಹೋದುದರಿಂದಲೇ ಸರ್ವೇಶ್ವರ ತಮ್ಮ ಮಹಾರೌದ್ರವನ್ನು ನಮ್ಮ ಮೇಲೆ ಸುರಿದಿದ್ದಾರೆ. ಆದುದರಿಂದ ನೀವು ನನ್ನ ಪರವಾಗಿ, ಹಾಗು ಇಸ್ರಯೇಲರಲ್ಲಿ ಮತ್ತು ಯೆಹೂದ್ಯರಲ್ಲಿ ಉಳಿದಿರುವವರ ಪರವಾಗಿ ಸರ್ವೇಶ್ವರನ ಬಳಿಗೆ ಹೋಗಿ ನಮಗೆ ಸಿಕ್ಕಿರುವ ಈ ಗ್ರಂಥದ ವಾಕ್ಯಗಳ ಬಗ್ಗೆ ವಿಚಾರಿಸಿರಿ,” ಎಂದು ಆಜ್ಞಾಪಿಸಿದನು.
ನಿಮ್ಮ ಪೂರ್ವಜರಿಂದ ಪರಂಪರೆಯಾಗಿ ಬಂದಿರುವ ನಿರರ್ಥಕ ನಡವಳಿಕೆಯಿಂದ ನಿಮ್ಮನ್ನು ಬಿಡುಗಡೆಮಾಡಲು ಕೊಡಲಾದ ಬೆಲೆಯು ಎಂಥದ್ದೆಂದು ನಿಮಗೆ ತಿಳಿದಿದೆ. ಅದು ನಶಿಸಿಹೋಗುವ ಬೆಳ್ಳಿಬಂಗಾರವಲ್ಲ.
ಆದರೆ ಅವರ ದುಷ್ಕೃತ್ಯಗಳೆಲ್ಲ ಸರ್ವೇಶ್ವರಸ್ವಾಮಿಯ ಜ್ಞಾಪಕದಲ್ಲಿ ಇರುತ್ತವೆ ಎಂಬುದನ್ನು ಅವರು ಮನದಟ್ಟುಮಾಡಿಕೊಂಡಿಲ್ಲ. ಅವರ ನೀಚಕೃತ್ಯಗಳು ಅವರನ್ನು ಆವರಿಸಿಕೊಂಡಿವೆ; ನನ್ನ ಕಣ್ಮುಂದೆಯೇ ಇವೆ.
ನಾವು, ನಮ್ಮ ಪೂರ್ವಜರು, ನಮ್ಮ ಅರಸರು, ಅಧಿಕಾರಿಗಳು ಜುದೇಯದ ಊರುಗಳಲ್ಲಿ ಮತ್ತು ಜೆರುಸಲೇಮಿನ ಬೀದಿಗಳಲ್ಲಿ ಮಾಡಿದಂತೆ ಗಗನದೊಡತಿಯಾದ ದೇವತೆಗೆ ಧೂಪಾರತಿ ಎತ್ತುತ್ತೇವೆ. ಪಾನನೈವೇದ್ಯವನ್ನು ಸುರಿಯುತ್ತೇವೆ. ನಾವು ಬಾಯಿಬಿಟ್ಟು ಹೇಳಿದ ಈ ಮಾತುಗಳನ್ನೆಲ್ಲಾ ಖಂಡಿತವಾಗಿ ನೆರವೇರಿಸುತ್ತೇವೆ. ಏಕೆಂದರೆ ಹಾಗೆ ಮಾಡುತ್ತಿದ್ದಾಗ ನಾವು ಯಾವ ಕೇಡನ್ನೂ ಕಾಣದೆ ಹೊಟ್ಟೆತುಂಬ ಉಂಡು ಸುಖಪಡುತ್ತಿದ್ದೆವು.
ನಾನು ಕಿವಿಗೊಟ್ಟು ಕೇಳಿದೆ. ಅವರು ಸತ್ಯವಾದುದನ್ನು ನುಡಿಯುತ್ತಿರಲಿಲ್ಲ. ಯಾವನೂ ತನ್ನ ಅಕ್ರಮಕ್ಕಾಗಿ ಪಶ್ಚಾತ್ತಾಪಪಟ್ಟು, ‘ಅಯ್ಯೋ ನಾನು ಎಂಥ ಕೆಲಸ ಮಾಡಿಬಿಟ್ಟೆ !’ ಎಂದುಕೊಳ್ಳುತ್ತಿರಲಿಲ್ಲ. ಯುದ್ಧದಲ್ಲಿ ರಭಸವಾಗಿ ಓಡುವ ಕುದುರೆಗಳಂತೆ ಪ್ರತಿಯೊಬ್ಬನೂ ತನ್ನ ತನ್ನ ಮಾರ್ಗದಲ್ಲೆ ದೌಡಾಯಿಸುತ್ತಿದ್ದಾನೆ.
“ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದ್ದೇನೆ. ಹೌದು, ಅದರ ಕೆಂಡದಲ್ಲಿ ರೊಟ್ಟಿಮಾಡಿ, ಮಾಂಸ ಸುಟ್ಟು ತಿಂದಿದ್ದೇನೆ; ಮಿಕ್ಕಿದ್ದರಿಂದ ವಿಗ್ರಹಮಾಡುವುದು ಸರಿಯೇ? ಆ ಮರದ ತುಂಡಿಗೆ ಅಡ್ಡಬೀಳುವುದು ಅಸಹ್ಯವಲ್ಲವೆ?” ಎಂದುಕೊಳ್ಳುವಷ್ಟು ವಿವೇಕ ಯಾರಿಗೂ ಇಲ್ಲ; ಯಾರೂ ಇದನ್ನು ಮನಸ್ಸಿನಲ್ಲಿ ಅರ್ಥೈಸಿಕೊಳ್ಳುವುದಿಲ್ಲ.