Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 18:16 - ಕನ್ನಡ ಸತ್ಯವೇದವು C.L. Bible (BSI)

16 ಒತ್ತೆಯನ್ನು ಕೇಳದೆ, ಯಾರ ಸೊತ್ತನ್ನೂ ಅಪಹರಿಸದೆ, ಹಸಿದವನಿಗೆ ಅನ್ನವಿಕ್ಕಿ, ಬೆತ್ತಲೆಯಿರುವವನಿಗೆ ಹೊದಿಕೆಯನ್ನು ಹೊದಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯಾರನ್ನೂ ಹಿಂಸಿಸದೆ, ಒತ್ತೆಯನ್ನು ಕೇಳದೆ, ಯಾರ ಸೊತ್ತನ್ನೂ ಅಪಹರಿಸದೆ, ಹಸಿದವನಿಗೆ ಅನ್ನಕೊಟ್ಟು, ಬೆತ್ತಲೆಯಿರುವವನಿಗೆ ಹೊದಿಕೆಯನ್ನು ಹೊದಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಯಾರನ್ನೂ ಹಿಂಸಿಸದೆ ಒತ್ತೆಯನ್ನು ಕೇಳದೆ ಯಾರ ಸೊತ್ತನ್ನೂ ಅಪಹರಿಸದೆ ಹಸಿದವನಿಗೆ ಅನ್ನವಿಕ್ಕಿ ಬೆತ್ತಲೆಯಿರುವವನಿಗೆ ಹೊದಿಕೆಯನ್ನು ಹೊದಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆ ಒಳ್ಳೆಯ ಮಗನು ಯಾರ ಮೇಲೂ ದಬ್ಬಾಳಿಕೆ ನಡೆಸುವುದಿಲ್ಲ. ಅವನು ಒತ್ತೆಯಿಲ್ಲದೆ ಸಾಲಕೊಡುವನು. ಅವನು ಯಾರನ್ನೂ ದರೋಡೆ ಮಾಡುವುದಿಲ್ಲ. ಅವನು ಹಸಿದವರಿಗೆ ಊಟ ಕೊಡುವನು; ಬಟ್ಟೆಯಿಲ್ಲದವರಿಗೆ ಬಟ್ಟೆಯನ್ನು ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಯಾರನ್ನೂ ಹಿಂಸಿಸದೆ, ಒತ್ತೆಯನ್ನು ಕೇಳದೆ, ಹಿಂಸೆಯಿಂದ ಸುಲಿಗೆ ಮಾಡದೆ, ಹಸಿದವನಿಗೆ ತನ್ನ ರೊಟ್ಟಿಯನ್ನು ಕೊಟ್ಟು ಮತ್ತು ಬೆತ್ತಲೆಯಾದವನಿಗೆ ವಸ್ತ್ರವನ್ನು ಹೊದಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 18:16
18 ತಿಳಿವುಗಳ ಹೋಲಿಕೆ  

ಮುಟ್ಟಿನ ಹೆಂಗಸನ್ನು ಕೂಡದೆ, ಯಾರನ್ನೂ ಹಿಂಸಿಸದೆ, ಸಾಲಮಾಡಿದವನ ಒತ್ತೆಯನ್ನು ಬಿಗಿಹಿಡಿಯದೆ, ಯಾರ ಸೊತ್ತನ್ನೂ ಅಪಹರಿಸದೆ, ಹಸಿದವನಿಗೆ ಅನ್ನವಿಕ್ಕಿ, ಬೆತ್ತಲೆ ಇರುವವನಿಗೆ ಹೊದಿಕೆಯನ್ನು ಹೊದಿಸಿ;


ಆದ್ದರಿಂದ ಔತಣವನ್ನು ಏರ್ಪಡಿಸುವಾಗ ದರಿದ್ರರು, ಅಂಗವಿಕಲರು, ಕುಂಟರು, ಕುರುಡರು ಇಂಥವರನ್ನು ಕರೆ;


ನಿಮ್ಮ ತಟ್ಟೆ, ಲೋಟಗಳಲ್ಲಿ ಇರುವುದನ್ನು ಮೊಟ್ಟಮೊದಲು ದಾನಮಾಡಿರಿ. ಆಗ ಸಮಸ್ತವು ನಿಮಗೆ ಶುದ್ಧಿಯಾಗಿರುವುದು.


ಬಡವರಿಗೆ ಕೈಬಿಚ್ಚಿ ಕೊಡುತ್ತಾಳೆ; ದಿಕ್ಕಿಲ್ಲದವರಿಗೆ ಕೈಚಾಚಿ ನೀಡುತ್ತಾಳೆ.


ಹಗೆಯವನು ಹಸಿದಿದ್ದರೆ ಅನ್ನ ನೀಡು, ಬಾಯಾರಿದ್ದರೆ ಕುಡಿಯಲು ಕೊಡು.


ಉದಾರ ದೃಷ್ಟಿಯುಳ್ಳವನು ಆಶೀರ್ವದಿತನು; ಆಹಾರವನ್ನು ಬಡವರೊಂದಿಗೆ ಆತ ಹಂಚಿಕೊಳ್ಳುವನು.


ದಿಕ್ಕಿಲ್ಲದವನನು ಲಕ್ಷಿಸುವವನು ಧನ್ಯನು I ಆಪತ್ಕಾಲದಲಿ ಆದವನನು ಪ್ರಭು ರಕ್ಷಿಸುವನು II


ಬಟ್ಟೆಯಿಲ್ಲದ ಬಡವನನು ನೋಡಿದಾಗಲೆಲ್ಲಾ ಹೊದಿಕೆಯಿಲ್ಲದೆ ನಡುಗುವುದನು ಕಂಡಾಗಲೆಲ್ಲಾ,


ದಣಿದವನಿಗೆ ನೀ ಕೊಡಲಿಲ್ಲ ಪಾನ ಹಸಿದವನಿಗೆ ಬಡಿಸಲಿಲ್ಲ ಅನ್ನ.


ಏಕೆಂದರೆ, ನಾನು ಹಸಿದಿದ್ದೆ, ನನಗೆ ಆಹಾರ ಕೊಟ್ಟಿರಿ; ಬಾಯಾರಿದ್ದೆ, ಕುಡಿಯಲು ಕೊಟ್ಟಿರಿ; ಅಪರಿಚಿತನಾಗಿದ್ದೆ, ನನಗೆ ಆಶ್ರಯ ಕೊಟ್ಟಿರಿ.


ಬಟ್ಟೆಬರೆಯಿಲ್ಲದೆ ಇದ್ದೆ, ನನಗೆ ಉಡಲು ಕೊಟ್ಟಿರಿ. ರೋಗದಿಂದಿದ್ದೆ, ನನ್ನನ್ನು ಆರೈಕೆಮಾಡಿದಿರಿ. ಬಂಧಿಯಾಗಿದ್ದೆ, ನೀವು ನನ್ನನ್ನು ಸಂಧಿಸಿದಿರಿ,’ ಎಂದು ಹೇಳುವನು.


ನೀನು ನಿನ್ನ ಸೋದರನಿಂದ ಬಟ್ಟೆಯನು ಒತ್ತೆಯಾಗಿ ಪಡೆದೆ ಬಟ್ಟೆಕಿತ್ತುಕೊಂಡು ಅವನನ್ನು ಬೆತ್ತಲೆಯಾಗಿಸಿದೆ.


ಬಡವರ ಬಯಕೆಗಳನು ನಾನು ಭಂಗಪಡಿಸಿದೆನೋ? ವಿಧವೆಯ ಕಣ್ಣುಗಳನು ನಾನು ಮಂಕಾಗಿಸಿದೆನೋ?


ಅವರನು ನಾನು ಬೆಚ್ಚಗಾಗಿಸದೆ ಹೋಗಿದ್ದರೆ ನನ್ನ ಕುರಿಉಣ್ಣೆಯಿಂದ, ಅವರು ನನ್ನನು ಹರಸದೇಹೋಗಿದ್ದರೆ ತಮ್ಮ ಅಂತರಾಳದಿಂದ,


ದೀನದಲಿತರನ್ನು ಹಿಂಸಿಸಿ, ಜನರ ಸೊತ್ತನ್ನು ಅಪಹರಿಸಿ, ಸಾಲಗಾರನ ಒತ್ತೆಯನ್ನು ಬಿಗಿಹಿಡಿದು, ವಿಗ್ರಹಗಳ ಕಡೆಗೆ ಕಣ್ಣೆತ್ತಿ,


ಗುಡ್ಡಗಳ ಮೇಲೆ ಯಜ್ಞಶೇಷವನ್ನು ತಿನ್ನದೆ, ಇಸ್ರಯೇಲ್ ವಂಶದವರ ವಿಗ್ರಹಗಳ ಕಡೆಗೆ ಕಣ್ಣೆತ್ತದೆ, ನೆರೆಯವನ ಹೆಂಡತಿಯನ್ನು ಕೆಡಿಸದೆ, ಯಾರನ್ನೂ ಹಿಂಸಿಸದೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು