Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 18:20 - ಕನ್ನಡ ಸತ್ಯವೇದವು C.L. Bible (BSI)

20 ಪಾಪಮಾಡುವವನೇ ಸಾಯುವನು. ಮಗನು ತಂದೆಯ ದೋಷಫಲವನ್ನು ಅನುಭವಿಸನು; ತಂದೆಯು ಮಗನ ದೋಷಫಲವನ್ನು ಅನುಭವಿಸನು; ಶಿಷ್ಟನ ಶಿಷ್ಟತನದ ಫಲವು ಶಿಷ್ಟನದೇ, ದುಷ್ಟನ ದುಷ್ಟತನದ ಫಲವು ದುಷ್ಟನದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಪಾಪ ಮಾಡುವವನೇ ಸಾಯುವನು; ಮಗನು ತಂದೆಯ ದೋಷಫಲವನ್ನು ಅನುಭವಿಸನು; ಶಿಷ್ಟನ ಶಿಷ್ಟತನದ ಫಲವು ಶಿಷ್ಟನದೇ, ದುಷ್ಟನ ದುಷ್ಟತನದ ಫಲವು ದುಷ್ಟನದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಪಾಪಮಾಡುವವನೇ ಸಾಯುವನು; ಮಗನು ತಂದೆಯ ದೋಷಫಲವನ್ನು ಅನುಭವಿಸನು, ತಂದೆಯು ಮಗನ ದೋಷಫಲವನ್ನು ಅನುಭವಿಸನು; ಶಿಷ್ಟನ ಶಿಷ್ಟತನದ ಫಲವು ಶಿಷ್ಟನದೇ, ದುಷ್ಟನ ದುಷ್ಟತನದ ಫಲವು ದುಷ್ಟನದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಯಾರು ಪಾಪ ಮಾಡುತ್ತಾರೋ ಅವರೇ ಮರಣಶಿಕ್ಷೆ ಹೊಂದುವರು. ತಂದೆಯ ಪಾಪಗಳ ಪ್ರತಿಫಲಗಳಲ್ಲಿ ಯಾವುದನ್ನೂ ಮಗನು ಹೊತ್ತುಕೊಳ್ಳುವುದಿಲ್ಲ. ಮತ್ತು ಮಗನ ಪಾಪಗಳ ಪ್ರತಿಫಲಗಳಲ್ಲಿ ಯಾವುದನ್ನೂ ತಂದೆಯು ಹೊತ್ತುಕೊಳ್ಳುವದಿಲ್ಲ. ಒಬ್ಬ ಒಳ್ಳೆ ಮನುಷ್ಯನ ನೀತಿಯು ಅವನಿಗೇ ಸೇರಿದ್ದು. ಕೆಟ್ಟ ಮನುಷ್ಯನ ದುಷ್ಟತ್ವವೂ ಆ ಕೆಟ್ಟ ಮನುಷ್ಯನಿಗೆ ಸೇರಿದ್ದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಪಾಪ ಮಾಡುವವನೇ ಸಾಯುವನು. ಮಗನು ತಂದೆಯ ಅಕ್ರಮವನ್ನು ಹೊರುವುದಿಲ್ಲ; ನೀತಿವಂತನ ನೀತಿಯು ಅವನ ಮೇಲೆಯೇ ಇರುವುದು; ದುಷ್ಟನ ದುಷ್ಟತನವು ಅವನ ಮೇಲೆಯೇ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 18:20
34 ತಿಳಿವುಗಳ ಹೋಲಿಕೆ  

ಆದರೆ, “ಮಕ್ಕಳು ಮಾಡಿದ ಪಾಪಕ್ಕೆ ತಂದೆಗಾಗಲಿ, ತಂದೆ ಮಾಡಿದ ಪಾಪದ ನಿಮಿತ್ತ ಮಕ್ಕಳಿಗಾಗಲಿ ಮರಣಶಿಕ್ಷೆಯಾಗಬಾರದು; ಪ್ರತಿಯೊಬ್ಬನೂ ತನ್ನ ಪಾಪಫಲವನ್ನು ತಾನೇ ಅನುಭವಿಸಬೇಕು,” ಎಂಬುದಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿರುವ ಸರ್ವೇಶ್ವರನ ಆಜ್ಞೆಯನ್ನು ನೆನಪುಮಾಡಿಕೊಂಡು ಅವರ ಮಕ್ಕಳನ್ನು ಕೊಲ್ಲಿಸಲಿಲ್ಲ.


“ಮಕ್ಕಳ ಪಾಪಕ್ಕಾಗಿ ತಂದೆಗೂ, ತಂದೆಯ ಪಾಪಕ್ಕಾಗಿ ಮಕ್ಕಳಿಗೂ ಮರಣಶಿಕ್ಷೆಯಾಗಬಾರದು. ಪ್ರತಿಯೊಬ್ಬನೂ ತನ್ನ ಪಾಪಫಲವನ್ನು ತಾನೇ ಅನುಭವಿಸಬೇಕು.


ಇಗೋ, ಸಕಲ ನರಪ್ರಾಣಿಗಳು ನನ್ನವೇ; ತಂದೆಯೇನು, ಮಗನೇನು, ನರಪ್ರಾಣಿಗಳೆಲ್ಲವೂ ನನ್ನಧೀನದಲ್ಲಿವೆ; ಪಾಪಮಾಡುವ ಪ್ರಾಣಿಯೇ ಸಾಯುವನು.


ಆದರೆ ‘ಮಕ್ಕಳು ಮಾಡಿದ ಪಾಪಕ್ಕೆ ತಂದೆಗಾಗಲಿ, ತಂದೆ ಮಾಡಿದ ಪಾಪಕ್ಕೆ ಮಕ್ಕಳಿಗಾಗಲಿ ಮರಣ ಶಿಕ್ಷೆಯಾಗಬಾರದು; ಪ್ರತಿಯೊಬ್ಬನೂ ತನ್ನ ಪಾಪದ ಫಲವನ್ನು ತಾನೇ ಅನುಭವಿಸಬೇಕು’ ಎಂಬುದಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿರುವ ಸರ್ವೇಶ್ವರನ ಅಪ್ಪಣೆಯನ್ನು ನೆನಪುಮಾಡಿಕೊಂಡು, ಅವರ ಮಕ್ಕಳನ್ನು ಕೊಲ್ಲಿಸಲಿಲ್ಲ.


ನರಪುತ್ರನು ತನ್ನ ಪಿತನ ಪ್ರಭಾವದೊಡನೆ ತನ್ನ ದೂತರ ಸಮೇತ ಬರಲಿದ್ದಾನೆ. ಆಗ ಪ್ರತಿಯೊಬ್ಬ ಮಾನವನಿಗೆ ಅವನವನ ಕೃತ್ಯಕ್ಕೆ ತಕ್ಕ ಪ್ರತಿಫಲ ಕೊಡುವನು.


ಪರಲೋಕದಲ್ಲಿರುವ ನೀವು ಅದನ್ನು ಕೇಳಿ ನಿಮ್ಮ ದಾಸರಾದ ಭಕ್ತರ ವ್ಯಾಜ್ಯವನ್ನು ತೀರಿಸಿರಿ; ದುಷ್ಟನನ್ನು ಖಂಡಿಸಿ ಅವನ ತಪ್ಪನ್ನು ಅವನ ತಲೆಯ ಮೇಲೆಯೇ ಹೊರಿಸಿರಿ; ಅವನು ಅಪರಾಧಿಯೆಂದು ತೋರಿಸಿಕೊಡಿ; ನೀತಿವಂತನಿಗೆ ಅವನ ನೀತಿಯ ಫಲವನ್ನು ಅನುಗ್ರಹಿಸಿ ಅವನು ನೀತಿವಂತನೆಂದು ತೋರಿಸಿಕೊಡಿ..


ಇದಲ್ಲದೆ, ಮೃತರಾಗಿದ್ದ ಹಿರಿಯಕಿರಿಯರೆಲ್ಲರೂ ಸಿಂಹಾಸನದ ಸಾನ್ನಿಧ್ಯದಲ್ಲಿ ನಿಂತಿರುವುದನ್ನು ಕಂಡೆ. ಆಗ ಪುಸ್ತಕಗಳನ್ನು ತೆರೆಯಲಾಯಿತು. ಅನಂತರ ಮತ್ತೊಂದು ಪುಸ್ತಕವನ್ನು ತೆರೆಯಲಾಯಿತು. ಅದು ಜೀವಬಾಧ್ಯರ ಪಟ್ಟಿಯುಳ್ಳ ಪುಸ್ತಕ. ಆ ಪುಸ್ತಕದಲ್ಲಿ ಬರೆದಿದ್ದ ಪ್ರಕಾರ ಅವರವರ ಕೃತ್ಯಗಳಿಗೆ ತಕ್ಕಂತೆ ಮೃತರಿಗೆ ನ್ಯಾಯತೀರ್ಪು ಕೊಡಲಾಯಿತು.


ನೀವು ಪರಲೋಕದಿಂದ ಅದನ್ನು ಕೇಳಿ ನಿಮ್ಮ ಭಕ್ತರ ವ್ಯಾಜ್ಯವನ್ನು ತೀರಿಸಿರಿ. ದುಷ್ಟನನ್ನು ಖಂಡಿಸಿ ಅವನ ತಪ್ಪನ್ನು ಅವನ ಮೇಲೆಯೇ ಹೊರಿಸಿರಿ; ಅವನು ಅಪರಾಧಿಯೆಂದು ತೋರಿಸಿಕೊಡಿ. ನೀತಿವಂತನಿಗೆ ಅವನ ನೀತಿಯ ಫಲವನ್ನು ಅನುಗ್ರಹಿಸಿ, ಅವನು ನೀತಿವಂತನೆಂದು ತೋರಿಸಿಕೊಡಿ.


ಸರ್ವೇಶ್ವರ ಸ್ವಾಮಿ ಆರೋನನಿಗೆ ಹೀಗೆಂದರು: “ದೇವದರ್ಶನದ ಗುಡಾರದ ವಿಷಯದಲ್ಲಿ ಏನಾದರು ಅಕ್ರಮ ನಡೆದರೆ ನೀನು, ನಿನ್ನ ಸಂತತಿಯವರು ಮತ್ತು ನಿನ್ನ ಕುಲದವರೆಲ್ಲರೂ ಆ ದೋಷದ ಫಲವನ್ನು ಅನುಭವಿಸಬೇಕು. ಯಾಜಕ ಸೇವೆಯ ವಿಷಯದಲ್ಲಿ ಅಕ್ರಮವೇನಾದರೂ ನಡೆದರೆ ನೀನು ಮತ್ತು ನಿನ್ನ ಸಂತತಿಯವರು ಮಾತ್ರ ಆ ದೋಷದ ಫಲವನ್ನು ಅನುಭವಿಸಬೇಕು.


ಅವಳ ಮಕ್ಕಳನ್ನು ಸಂಹರಿಸದೆ ಬಿಡೆನು. ಹೃನ್ಮನಗಳನ್ನು ಪರಿಶೋಧಿಸುವಾತನು ನಾನೇ ಎಂದು ಎಲ್ಲ ಸಭೆಗಳಿಗೂ ಆಗ ಮನದಟ್ಟು ಆಗುವುದು; ನಿಮ್ಮಲ್ಲಿರುವ ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕಂತೆ ಪ್ರತಿಫಲವನ್ನು ನೀಡುತ್ತೇನೆ.


“ನಿಮ್ಮಲ್ಲಿ ಯಾರಾದರು ಸರ್ವೇಶ್ವರನು ವಿಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರು ಮಾಡಿ ದೋಷಕ್ಕೆ ಒಳಗಾದರೆ, ಅದು ಅವರಿಗೆ ತಿಳಿಯದೆ ಹೋದರೂ, ಅವರು ಅದರಿಂದ ಅಪರಾಧಿಯಾಗಿ ತಮ್ಮ ಪಾಪಫಲವನ್ನು ಅನುಭವಿಸಬೇಕು.


“ನರಪುತ್ರನೇ, ಇಸ್ರಯೇಲ್ ವಂಶದವರಿಗೆ ಹೀಗೆ ನುಡಿ - ಅಯ್ಯೋ, ನಮ್ಮ ದ್ರೋಹಗಳ ಮತ್ತು ಪಾಪಗಳ ಭಾರ ನಮ್ಮ ಮೇಲೆ ಬಿದ್ದಿವೆ; ಅವುಗಳಿಂದ ಕ್ಷೀಣವಾಗಿಹೋಗುತ್ತಿದ್ದೇವೆ; ನಾವು ಹೇಗೆ ಉಳಿದೇವು ಅಂದುಕೊಳ್ಳುತ್ತೀರಲ್ಲವೇ?


ತೃಪ್ತನಾಗುವನಾತ ಕಂಡು ತನ್ನ ಪ್ರಾಣಯಾತನೆಯ ಫಲವನು. ಸಜ್ಜನನಾದ ಆ ನನ್ನ ದಾಸ ತರುವನು ಸನ್ಮಾರ್ಗಕೆ ಬಹುಜನರನು. ತಾನೇ ಹೊತ್ತುಕೊಳ್ಳುವನು ಅವರ ಅಪರಾಧಗಳ ಹೊರೆಯನು.


“ಈ ಕೆಳಕಂಡ ಸಂದರ್ಭಗಳಲ್ಲಿ ಪಾಪಪರಿಹಾರಕ ಬಲಿಗಳನ್ನು ಒಪ್ಪಿಸಬೇಕಾಗುತ್ತದೆ: ಒಬ್ಬನು ತಾನು ಕಂಡು ಕೇಳಿದ್ದಕ್ಕೆ ನ್ಯಾಯಸ್ಥಾನದಲ್ಲಿ ಸಾಕ್ಷಿಹೇಳಬೇಕೆಂದು ಅಧಿಕೃತವಾದ ಕರೆಯಿದ್ದರೂ ಸಾಕ್ಷಿ ಹೇಳದೆಹೋದರೆ ಅವನು ಪಾಪಕ್ಕೆ ಗುರಿಯಾಗುವನು.


ನಾವು ಪಾಪದ ಪಾಲಿಗೆ ಸತ್ತು, ಸತ್ಯಕ್ಕೋಸ್ಕರ ಜೀವಿಸುವಂತೆ ಕ್ರಿಸ್ತಯೇಸು ತಮ್ಮ ದೇಹದಲ್ಲಿ ನಮ್ಮ ಪಾಪಗಳನ್ನು ಹೊತ್ತು ಶಿಲುಬೆಯ ಮರವನ್ನೇರಿದರು. ಅವರ ಗಾಯಗಳಿಂದ ನೀವು ಗುಣಹೊಂದಿದಿರಿ.


ಹಾಗೆಯೇ, ಎಲ್ಲಾ ಮಾನವರ ಪಾಪಗಳನ್ನು ಹೊತ್ತು ಹೋಗಲಾಡಿಸಲು ಕ್ರಿಸ್ತಯೇಸು ಒಮ್ಮೆಗೇ ಎಲ್ಲಾ ಕಾಲಕ್ಕೂ ತಮ್ಮನ್ನೇ ಬಲಿಯಾಗಿ ಸಮರ್ಪಿಸಿಕೊಂಡರು. ಅವರು ಮತ್ತೆ ಪ್ರತ್ಯಕ್ಷರಾಗುವರು; ಪಾಪನಿವಾರಣೆ ಮಾಡಲೆಂದು ಅಲ್ಲ, ತಮ್ಮನ್ನು ನಂಬಿ ನಿರೀಕ್ಷಿಸಿಕೊಂಡಿರುವವರನ್ನು ಜೀವೋದ್ಧಾರ ಮಾಡಲೆಂದು.


ಅಸಹ್ಯಕಾರ್ಯವನ್ನು ಮಾಡಿ, ಸಾಲಕ್ಕೆ ಬಡ್ಡಿ ತೆಗೆದು, ಲಾಭಕ್ಕೆ ಹಣಕೊಟ್ಟು, ಹಿಂಸಾಚಾರಿಯೂ, ರಕ್ತಸುರಿಸುವವನೂ ಆಗಿದ್ದರೆ, ಜೀವಿಸುವನೇ? ಖಂಡಿತ ಜೀವಿಸನು; ಈ ದುರಾಚಾರಗಳನ್ನೆಲ್ಲಾ ನಡೆಸಿದನಲ್ಲವೇ? ಅವನು ಸಾಯುವುದು ನಿಶ್ಚಯ; ತನ್ನ ಮರಣಕ್ಕೆ ತಾನೇ ಕಾರಣ.


ಅದರಲ್ಲಿ ಏನನ್ನಾದರೂ ತಿಂದವನು ಸರ್ವೇಶ್ವರನ ದ್ರವ್ಯವಾದ ಪರಿಶುದ್ಧತೆಯನ್ನು ಹೊಲೆಮಾಡುತ್ತಾನೆ. ಆದುದರಿಂದ ತನ್ನ ಪಾಪದ ಫಲವನ್ನು ಅನುಭವಿಸಲೇಬೇಕು. ಅವನು ಕುಲದಿಂದ ಬಹಿಷ್ಕೃತನಾಗಬೇಕು.


ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ಇಸ್ರಯೇಲ್ ವಂಶದವರೇ, ನಿಮ್ಮ ನಿಮ್ಮ ನಡತೆಗೆ ತಕ್ಕ ಹಾಗೆ ನಾನು ನಿಮಗೆ ತೀರ್ಪು ನೀಡುವೆನು; ಅಧರ್ಮವು ನಿಮ್ಮನ್ನು ನಾಶಮಾಡದಂತೆ ಪಾಪಕ್ಕೆ ವಿಮುಖರಾಗಿರಿ; ನಿಮ್ಮ ಅಪರಾಧಗಳನ್ನೆಲ್ಲಾ ತೊರೆದುಬಿಡಿ.


ಮನುಷ್ಯರ ಹೃದಯಗಳನ್ನು ಬಲ್ಲಂಥ ನೀವು ನಿಮ್ಮ ನಿವಾಸವಾಗಿರುವ ಪರಲೋಕದಿಂದ ಆಲಿಸಿರಿ; ಅವರಿಗೆ ಪಾಪಪರಿಹಾರವನ್ನು ಅನುಗ್ರಹಿಸಿರಿ. ಮನುಷ್ಯರ ಅಂತರಂಗಗಳನ್ನು ಬಲ್ಲವರು ನೀವೊಬ್ಬರೇ. ಪ್ರತಿಯೊಬ್ಬನಿಗೂ ಅವನವನು ಹಿಡಿಯುವ ಮಾರ್ಗಕ್ಕೆ ತಕ್ಕಹಾಗೆ ಫಲವನ್ನು ಕೊಡಿ.


ಇಸ್ರಯೇಲರೆಲ್ಲರೂ ಅವನಿಗಾಗಿ ಗೋಳಾಡಿ ಅವನ ಶವವನ್ನು ಸಮಾಧಿಮಾಡುವರು. ಯಾರೊಬ್ಬಾಮನ ಮನೆಯವರೊಳಗೆ ಇಸ್ರಯೇಲ್ ದೇವರಾದ ಸರ್ವೇಶ್ವರನ ದೃಷ್ಟಿಯಲ್ಲಿ ಒಳ್ಳೆಯವನಾಗಿರುವುದರಿಂದ ಇವನೊಬ್ಬನೇ ಸಮಾಧಿಹೊಂದುವನು.


ಆ ಹೋತ ಅವರ ಎಲ್ಲಾ ಪಾಪಗಳನ್ನೂ ತನ್ನ ಮೇಲೆ ಹೊತ್ತುಕೊಂಡು ದುರ್ಗಮವಾದ ಪ್ರದೇಶಕ್ಕೆ ಒಯ್ಯುವಂತೆ ಆ ಮನುಷ್ಯನು ಅದನ್ನು ಮರುಭೂಮಿಗೆ ತೆಗೆದುಕೊಂಡುಹೋಗಿ ಅಲ್ಲೇ ಬಿಟ್ಟುಬಿಡಬೇಕು.


“ಆ ದೋಷಪರಿಹಾರಕ ಬಲಿ ಮಹಾಪರಿಶುದ್ಧವಾದುದಲ್ಲವೆ? ನೀವು ಜನಸಮೂಹದ ಪಾಪಗಳನ್ನು ಪರಿಹಾರಮಾಡುವಂತೆ, ಅವರ ಪರವಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ದೋಷನಿವಾರಿಸುವಂತೆ, ಅದು ನಿಮ್ಮ ಭಾಗವಾಗಿ ನೇಮಕವಾಗಿದೆಯಲ್ಲವೆ? ಅದನ್ನೇಕೆ ನೀವು ಪರಿಶುದ್ಧ ಸ್ಥಳದಲ್ಲಿ ತಿನ್ನಲಿಲ್ಲ?


“ಇದಲ್ಲದೆ ನೀನು ನಿನ್ನ ಎಡಮಗ್ಗುಲಲ್ಲಿ ಮಲಗು. ಇಸ್ರಯೇಲ್ ವಂಶದವರ ಅಧರ್ಮದ ಭಾರ ನಿನ್ನ ಮೇಲೆ ಬಿದ್ದಿದೆ ಎಂದು ಗೊತ್ತಾಗಲಿ; ನೀನು ಎಷ್ಟು ದಿವಸ ಹೀಗೆ ಮಲಗಿಕೊಂಡಿರುವಿಯೋ ಅಷ್ಟು ದಿವಸ ಅವರ ಅಧರ್ಮವನ್ನು ಹೊತ್ತುಕೊಂಡಿರುವೆ.


ಸರ್ವೇಶ್ವರನ ಮಾತನ್ನು ತಾತ್ಸಾರ ಮಾಡಿ, ಅವರ ಆಜ್ಞೆಯನ್ನು ಉಲ್ಲಂಘಿಸಿದ್ದರಿಂದ ಅಂಥವನಿಗೆ ಬಹಿಷ್ಕಾರ ಹಾಕಲೇಬೇಕು. ಅವನು ತನ್ನ ಪಾಪದ ದುಷ್ಪಲವನ್ನು ಅನುಭವಿಸುವಂತಾಗಬೇಕು.


ನೋಹ, ದಾನಿಯೇಲ, ಯೋಬ, ಎಂಬೀ ಮೂವರು ವ್ಯಕ್ತಿಗಳು ಆ ನಾಡಿನಲ್ಲಿದ್ದರೂ ತಮ್ಮ ಸದಾಚಾರದಿಂದ ಸ್ವಂತಪ್ರಾಣಗಳನ್ನು ಮಾತ್ರ ಉಳಿಸಿಕೊಳ್ಳುತ್ತಿದ್ದರು; ಇದು ಸರ್ವೇಶ್ವರನಾದ ದೇವರ ನುಡಿ.


ಈ ಮೂವರು ವ್ಯಕ್ತಿಗಳು ಅದರಲ್ಲಿದ್ದರೂ, ನನ್ನ ಜೀವದಾಣೆ, ತಾವು ಉಳಿದುಕೊಳ್ಳುತ್ತಿದ್ದರೇ ಹೊರತು ತಮ್ಮ ಗಂಡು ಮಕ್ಕಳನ್ನಾಗಲಿ ಹೆಣ್ಣು ಮಕ್ಕಳನ್ನಾಗಲಿ ಉಳಿಸಿಕೊಳ್ಳುತ್ತಿರಲಿಲ್ಲ; ನಾಡು ಹಾಳಾಗಿ ಹೋಗುವುದು; ಇದು ಸರ್ವೇಶ್ವರನಾದ ದೇವರ ನುಡಿ.


ಆದರೆ ಕಾವಲುಗಾರನೇ ಬೀಳುವ ಖಡ್ಗವನ್ನು ನೋಡಿಯೂ ಕೊಂಬನ್ನೂದದೆ, ಸಜ್ಜನರನ್ನು ಎಚ್ಚರಿಸದೆ ಹೋದರೆ ಖಡ್ಗ ಬಿದ್ದು ಆ ಜನರೊಳಗೆ ಯಾವನನ್ನೇ ಆಗಲಿ ನಾಶಮಾಡಿದರೆ, ತನ್ನ ಅಧರ್ಮದಲ್ಲೇ ನಾಶಗೊಂಡ ಆ ಮನುಷ್ಯನ ಮರಣಕ್ಕೆ, ಕಾವಲುಗಾರನೇ ಹೊಣೆ. ಅವನಿಗೆ ನಾನು ಮುಯ್ಯಿ ತೀರಿಸುವೆನು.


ಅದಕ್ಕೆ ಸರ್ವೇಶ್ವರ, “ಯಾರ್ಯಾರು ನನ್ನ ಮಾತನ್ನು ಮೀರಿ ಪಾಪಮಾಡಿದ್ದಾರೋ ಅವರ ಹೆಸರುಗಳನ್ನೇ ನನ್ನಲ್ಲಿರುವ ಪಟ್ಟಿಯಿಂದ ಅಳಿಸಿಬಿಡುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು