Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 18:22 - ಕನ್ನಡ ಸತ್ಯವೇದವು C.L. Bible (BSI)

22 ಅವನು ಮಾಡಿದ ಯಾವ ಅಪರಾಧವೂ ಅವನ ಲೆಕ್ಕಕ್ಕೆ ಸೇರದು. ಅವನು ಮಾಡುತ್ತಿರುವ ಸದ್ಧರ್ಮದಿಂದಲೇ ಅವನು ಜೀವಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅವನು ಮಾಡಿದ ಯಾವ ಅಪರಾಧವು ಅವನ ಲೆಕ್ಕಕ್ಕೆ ಸೇರಿಸಲ್ಪಡುವುದಿಲ್ಲ, ಅವನು ಮಾಡುತ್ತಿರುವ ಸದ್ಧರ್ಮದಿಂದಲೇ ಅವನು ಜೀವಿಸುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅವನು ಮಾಡಿದ ಯಾವ ಅಪರಾಧವೂ ಅವನ ಲೆಕ್ಕಕ್ಕೆ ಸೇರಿಸಲ್ಪಡದು, ಅವನು ಮಾಡುತ್ತಿರುವ ಸದ್ಧರ್ಮದಿಂದಲೇ ಅವನು ಬಾಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ದೇವರು ಅವನ ಹಿಂದಿನ ಪಾಪಗಳನ್ನು ನೆನಪಿಗೆ ತರುವದಿಲ್ಲ. ಅವನು ತಾನು ಮಾಡಿದ ಒಳ್ಳೆಯ ಕಾರ್ಯಗಳ ನಿಮಿತ್ತ ಬದುಕುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅವನು ಮಾಡಿದ ಪಾಪಗಳಲ್ಲಿ ಒಂದಾದರೂ ಅವನ ಲೆಕ್ಕಕ್ಕೆ ಸೇರಿಸಲಾಗುವುದಿಲ್ಲ. ಅವನು ಮಾಡಿದ ನೀತಿಯಿಂದಲೇ ಅವನು ಬದುಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 18:22
22 ತಿಳಿವುಗಳ ಹೋಲಿಕೆ  

ಮತ್ತೊಮ್ಮೆ ನಮಗೆ ದಯೆತೋರಿ. ನಮ್ಮ ಅಪರಾಧಗಳನ್ನು ಅಳಿಸಿಬಿಡಿ; ಅವನ್ನು ತುಳಿದು ಸಮುದ್ರದ ತಳಕ್ಕೆ ತಳ್ಳಿಬಿಡಿ.


ಅವನು ಮಾಡಿದ ಯಾವ ಪಾಪವೂ ಅವನ ಲೆಕ್ಕಕ್ಕೆ ಸೇರದು; ನ್ಯಾಯನೀತಿಗಳನ್ನು ನಡೆಸುತ್ತಿರುವುದರಿಂದ ಅವನು ಬಾಳೇ ಬಾಳುವನು.


ಆದರೂ ನಾನೇ ನಾನಾಗಿ ಅಳಿಸಿಬಿಡುವೆ ನಿನ್ನ ದ್ರೋಹಗಳನು, ನನ್ನ ನೆನಪಿನಿಂದ ತೆಗೆದುಹಾಕುವೆ ನಿನ್ನ ಪಾಪಗಳನು.


ಆದರೆ ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು, ಅಧರ್ಮಮಾಡಿ, ದುಷ್ಟನು ನಡೆಸುವ ದುರಾಚಾರಗಳನ್ನೆಲ್ಲಾ ನಡೆಸಿದರೆ, ಅವನು ಜೀವಿಸುವನೇ? ಅವನು ಮಾಡಿದ ಯಾವ ಸುಕೃತ್ಯವೂ ಅವನ ಲೆಕ್ಕಕ್ಕೆ ಸೇರಿಸಲ್ಪಡದು, ಅವನು ಮಾಡುತ್ತಿರುವ ಪಾಪಾಪರಾಧಗಳಿಂದಲೇ ಸಾಯುವನು.


ಅವರ ಪಾಪಗಳನ್ನು ಕ್ಷಮಿಸುವೆನು ಅವರ ತಪ್ಪುನೆಪ್ಪುಗಳನು ನೆನಪಿಗೆ ತಂದುಕೊಳ್ಳೆನು ಎಂದರು ಸರ್ವೇಶ್ವರ.”


ಆದುದರಿಂದ ಈಗ ಕ್ರಿಸ್ತಯೇಸುವಿನಲ್ಲಿ ಇರುವವರಿಗೆ ದಂಡನಾತೀರ್ಪು ಇರುವುದಿಲ್ಲ.


ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಯೇಲಿನ ಅಧರ್ಮವನ್ನು ಎಲ್ಲಿ ಹುಡುಕಿದರೂ ಸಿಗದು. ಜುದೇಯದ ಪಾಪವನ್ನು ತಡಕಿದರೂ ಸಿಗದು. ಏಕೆಂದರೆ ನಾನು ಉಳಿಸಿದ ಜನಶೇಷವನ್ನು ಕ್ಷಮಿಸಿಬಿಡುವೆನು. ಇದು ಸರ್ವೇಶ್ವರನಾದ ನನ್ನ ನುಡಿ.”


ಪಡುವಣದಿಂದ ಮೂಡಣವೆಷ್ಟೋ ದೂರ I ದೂಡಿದನಾತ ನಮ್ಮ ಪಾಪಗಳನು ಅಷ್ಟು ದೂರ II


ಪ್ರಿಯಮಕ್ಕಳೇ, ನಿಮ್ಮನ್ನು ಸನ್ಮಾರ್ಗದಿಂದ ತಪ್ಪಿಸುವುದಕ್ಕೆ ಯಾರಿಗೂ ಅವಕಾಶ ಕೊಡಬೇಡಿ. ಕ್ರಿಸ್ತಯೇಸು ಸತ್ಯಸ್ವರೂಪಿಯಾಗಿರುವಂತೆಯೇ ಸತ್ಯಕ್ಕನುಸಾರ ನಡೆಯುವ ಪ್ರತಿಯೊಬ್ಬನೂ ಸತ್ಯವಂತನೇ.


ಒಬ್ಬನು ತನ್ನ ನೆರೆಹೊರೆಯವರನ್ನು ಕುರಿತು ಅಥವಾ ಅಣ್ಣತಮ್ಮಂದಿರನ್ನು ಕುರಿತು, ‘ಸರ್ವೇಶ್ವರನನ್ನು ಅರಿತುಕೊ’ ಎಂದು ಬೋಧಿಸಬೇಕಾಗಿರುವುದಿಲ್ಲ. ಚಿಕ್ಕವರಿಂದ ಮೊದಲ್ಗೊಂಡು ದೊಡ್ಡವರ ತನಕ ಎಲ್ಲರು ನನ್ನನ್ನು ಅರಿತುಕೊಳ್ಳುವರು. ನಾನು ಅವರ ಅಪರಾಧವನ್ನು ಕ್ಷಮಿಸಿ, ಅವರ ಪಾಪವನ್ನು ಎಂದಿಗೂ ನೆನಪಿಗೆ ತಂದುಕೊಳ್ಳುವುದಿಲ್ಲ. ಇದು ಸರ್ವೇಶ್ವರನಾದ ನನ್ನ ನುಡಿ.”


ಕೃಪಾಳು, ದೇವಾ, ಕರುಣಿಸೆನ್ನನು I ಕರುಣಾನಿಧಿ, ಅಳಿಸೆನ್ನ ದೋಷವನು II


ಯೌವನದೆನ್ನ ಪಾಪಪ್ರವೃತ್ತಿಗಳ ಮನದಲ್ಲಿಟ್ಟುಕೊಳ್ಳಬೇಡ I ನಿನ್ನೊಲುಮೆ ನಲ್ಮೆಗಳ ನಿಮಿತ್ತ ಪ್ರಭು, ನನ್ನ ನೆನೆಯದಿರಬೇಡ II


ಜಾಗೃತಗೊಳ್ಳುವನು ನಿನ್ನ ದಾಸನು ಅವುಗಳಿಂದ I ಸಂಭಾವಿತನಾಗುವನು ಅವುಗಳ ಪಾಲನೆಯಿಂದ II


ನೀವು ಪರಲೋಕದಿಂದ ಅದನ್ನು ಕೇಳಿ ನಿಮ್ಮ ಭಕ್ತರ ವ್ಯಾಜ್ಯವನ್ನು ತೀರಿಸಿರಿ. ದುಷ್ಟನನ್ನು ಖಂಡಿಸಿ ಅವನ ತಪ್ಪನ್ನು ಅವನ ಮೇಲೆಯೇ ಹೊರಿಸಿರಿ; ಅವನು ಅಪರಾಧಿಯೆಂದು ತೋರಿಸಿಕೊಡಿ. ನೀತಿವಂತನಿಗೆ ಅವನ ನೀತಿಯ ಫಲವನ್ನು ಅನುಗ್ರಹಿಸಿ, ಅವನು ನೀತಿವಂತನೆಂದು ತೋರಿಸಿಕೊಡಿ.


ಆಗ ಆಕೆ ಎಲೀಯನಿಗೆ, “ದೈವಪುರುಷನೇ, ನನ್ನ ವಿರುದ್ಧ ನಿನಗೇನಿದೆ? ನೀನು ನನ್ನ ಪಾಪವನ್ನು ನೆನಪಿಗೆ ತಂದು ನನ್ನ ಮಗನನ್ನು ಸಾಯಿಸುವುದಕ್ಕೆ ಬಂದಿಯೋ?” ಎಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು