Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 18:27 - ಕನ್ನಡ ಸತ್ಯವೇದವು C.L. Bible (BSI)

27 ದುಷ್ಟನು ತಾನು ಮಾಡುತ್ತಿದ್ದ ದುಷ್ಟತನವನ್ನು ಬಿಟ್ಟು, ನ್ಯಾಯನೀತಿಗಳನ್ನು ನಡೆಸಿದರೆ, ತನ್ನ ಪ್ರಾಣವನ್ನು ಉಳಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ದುಷ್ಟನು ತಾನು ಮಾಡುತ್ತಿದ್ದ ದುಷ್ಟತನವನ್ನು ಬಿಟ್ಟು, ನೀತಿನ್ಯಾಯಗಳನ್ನು ನಡೆಸಿದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ದುಷ್ಟನು ತಾನು ಮಾಡುತ್ತಿದ್ದ ದುಷ್ಟತನವನ್ನು ಬಿಟ್ಟು ನೀತಿನ್ಯಾಯಗಳನ್ನು ನಡಿಸಿದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆದರೆ ಒಬ್ಬ ಪಾಪಿ ಬದಲಾವಣೆ ಹೊಂದಿ ನೀತಿವಂತನಾಗಿ ಬಾಳಿದರೆ ಅವನು ತನ್ನ ಪ್ರಾಣವನ್ನು ಉಳಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಒಬ್ಬ ದುಷ್ಟನು ತನ್ನ ದುಷ್ಟತನವನ್ನು ಬಿಟ್ಟು, ನೀತಿನ್ಯಾಯವನ್ನು ಅನುಸರಿಸಿದರೆ, ಅವನು ತನ್ನ ಪ್ರಾಣವನ್ನು ಉಳಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 18:27
15 ತಿಳಿವುಗಳ ಹೋಲಿಕೆ  

“ಆದರೆ ದುಷ್ಟನು ತಾನು ಮಾಡುತ್ತಿದ್ದ ಪಾಪಗಳನ್ನೆಲ್ಲಾ ಬಿಟ್ಟುಬಿಟ್ಟು, ನನ್ನ ಸಕಲವಿಧಿಗಳನ್ನು ಕೈಗೊಂಡು, ನ್ಯಾಯನೀತಿಗಳನ್ನು ನಡೆಸಿದರೆ ಸಾಯನು; ಖಂಡಿತ ಜೀವಿಸುವನು.


ಸರ್ವೇಶ್ವರಸ್ವಾಮಿ ಇಂತೆನ್ನುತ್ತಾರೆ: “ಬನ್ನಿರಿ, ಈಗ ವಾದಿಸೋಣ. ನಿಮ್ಮ ಪಾಪಗಳು ಕಡುಗೆಂಪಾಗಿದ್ದರೂ ಹಿಮದಂತೆ ಬಿಳುಪಾಗುವುವು. ರಕ್ತಗೆಂಪಾಗಿದ್ದರೂ ಉಣ್ಣೆಯಂತೆ ಬೆಳ್ಳಗಾಗುವುವು.


ಬಿಟ್ಟುಬಿಡಲಿ ದುಷ್ಟನು ತನ್ನ ದುರ್ಮಾರ್ಗವನು ತೊರೆದುಬಿಡಲಿ ದುರುಳನು ದುರಾಲೋಚನೆಗಳನು. ಹಿಂದಿರುಗಿ ಬರಲಿ ಸರ್ವೇಶ್ವರನ ಬಳಿಗೆ ಕರುಣೆ ತೋರುವನು ಆತನು ಅವನಿಗೆ. ಆಶ್ರಯಪಡೆಯಲಿ ಅವನು ನಮ್ಮ ದೇವರಿಂದ ಕ್ಷಮಿಸುವನಾತನು ಮಹಾಕೃಪೆಯಿಂದ.


ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಿರಿ. ಅವರು ನಿಮ್ಮ ಪಾಪಗಳನ್ನು ಪರಿಹರಿಸುವರು.


ಇವುಗಳಲ್ಲೇ ಮಗ್ನನಾಗಿರು. ಇದರಿಂದ ನಿನ್ನ ಮತ್ತು ನಿನ್ನ ಉಪದೇಶವನ್ನು ಕೇಳುವವರ ಜೀವೋದ್ಧಾರವನ್ನು ಸಾಧಿಸುವೆ.


ದಮಸ್ಕಸ್ ಮೊದಲ್ಗೊಂಡು ಜೆರುಸಲೇಮಿಗೂ ಮತ್ತು ಎಲ್ಲ ಜುದೇಯ ನಾಡಿಗೂ ಹಾಗೂ ಅನ್ಯಧರ್ಮೀಯರಲ್ಲಿಗೂ ಹೋಗಿ, ಜನರು ತಮ್ಮತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೈವಾಭಿಮುಖಿಗಳಾಗಬೇಕೆಂದು ಬೋಧಿಸಿದೆ; ಪಶ್ಚಾತ್ತಾಪ ಸೂಚಕಕಾರ್ಯಗಳನ್ನು ಕೈಗೊಳ್ಳುವಂತೆ ಘೋಷಿಸಿದೆ.


ಪಾಪಕ್ಕೆ ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಬೇಕು, ನಮ್ಮ ಪ್ರಭು ಯೇಸುವಿನಲ್ಲಿ ವಿಶ್ವಾಸವಿಡಬೇಕು, ಎಂದು ಯೆಹೂದ್ಯರಿಗೂ ಗ್ರೀಕರಿಗೂ ಸ್ಪಷ್ಟವಾದ ಎಚ್ಚರಿಕೆಯನ್ನು ಕೊಟ್ಟಿದ್ದೇನೆ.


ಪೇತ್ರನು ಅವರಿಗೆ ಹಲವಾರು ವಿಧದಲ್ಲಿ ಮನವಿಮಾಡಿದನು. ‘ಈ ದುಷ್ಟ ಪೀಳಿಗೆಯಿಂದ ನಿಮ್ಮನ್ನು ಸಂರಕ್ಷಿಸಿಕೊಳ್ಳಿ,’ ಎಂದು ಎಚ್ಚರಿಸಿದನು.


ನೀವು ಹೋಗಿ, ನನಗೆ ಬೇಕಾದುದು ದಯೆ, ಯಜ್ಞಬಲಿಯಲ್ಲ’ ಎಂದು ಪವಿತ್ರಗ್ರಂಥದಲ್ಲಿ ಬರೆದಿರುವ ವಾಕ್ಯದ ಅರ್ಥವನ್ನು ಕಲಿತುಕೊಳ್ಳಿ. ನಾನು ಕರೆಯಲು ಬಂದಿರುವುದು ಧರ್ಮಿಷ್ಠರನ್ನಲ್ಲ, ಪಾಪಿಷ್ಠರನ್ನು,” ಎಂದರು.


ಏಕೆಂದರೆ ಅವನು ಕೊಂಬಿನ ಕೂಗನ್ನು ಕೇಳಿಯೂ ಎಚ್ಚರಗೊಳ್ಳಲಿಲ್ಲ. ತನ್ನ ಮರಣಕ್ಕೆ ತಾನೇ ಕಾರಣನು; ಎಚ್ಚರಗೊಂಡಿದ್ದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳುತ್ತಿದ್ದ.


“ನಾನು ಎದೆಗುಂದಿಸದ ಶಿಷ್ಯನ ಮನಸ್ಸನ್ನು ನೀವು ಸುಳ್ಳಾಡಿ ಕುಂದಿಸಿದ್ದೀರಿ; ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವನನ್ನು ಪ್ರೋತ್ಸಾಹಿಸಿದ್ದೀರಿ.


ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು ಅಧರ್ಮದಿಂದಲೇ ಸಾಯಬೇಕಾಯಿತು.


ಅವನು ಯೋಚಿಸಿ, ತಾನು ಮಾಡುತ್ತಿದ್ದ ಅಪರಾಧಗಳನ್ನೆಲ್ಲಾ ಬಿಟ್ಟದ್ದರಿಂದ ಸಾಯನು, ಖಂಡಿತ ಜೀವಿಸುವನು.


ನಾನು ದುಷ್ಟನಿಗೆ, ‘ನೀನು ಸತ್ತೇ ಸಾಯುವೆ’ ಎಂದು ಹೇಳಲು ಅವನು ತನ್ನ ಪಾಪವನ್ನು ಬಿಟ್ಟು ನ್ಯಾಯನೀತಿಗಳನ್ನು ನಡೆಸಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು