Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 18:28 - ಕನ್ನಡ ಸತ್ಯವೇದವು C.L. Bible (BSI)

28 ಅವನು ಯೋಚಿಸಿ, ತಾನು ಮಾಡುತ್ತಿದ್ದ ಅಪರಾಧಗಳನ್ನೆಲ್ಲಾ ಬಿಟ್ಟದ್ದರಿಂದ ಸಾಯನು, ಖಂಡಿತ ಜೀವಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅವನು ಯೋಚಿಸಿ, ತಾನು ಮಾಡುತ್ತಿದ್ದ ಅಪರಾಧಗಳನ್ನೆಲ್ಲಾ ಬಿಟ್ಟದ್ದರಿಂದ ಸಾಯುವುದಿಲ್ಲ, ಖಂಡಿತವಾಗಿ ಜೀವಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಅವನು ಯೋಚಿಸಿ ತಾನು ಮಾಡುತ್ತಿದ್ದ ಅಪರಾಧಗಳನ್ನೆಲ್ಲಾ ಬಿಟ್ಟದರಿಂದ ಸಾಯನು, ಬಾಳೇ ಬಾಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ತಾನು ಎಷ್ಟು ಕೆಟ್ಟವನಾಗಿ ಜೀವಿಸಿದನೆಂದು ತಿಳಿದು ನನ್ನ ಕಡೆಗೆ ತಿರುಗಿ ದುಷ್ಟತನ ಮಾಡುವದನ್ನು ನಿಲ್ಲಿಸಿದರೆ. ಅಂಥವನು ಸಾಯದೆ, ಬಾಳುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಏಕೆಂದರೆ ಅವನು ತಾನು ಮಾಡಿದ ದುಷ್ಕೃತ್ಯಗಳನ್ನು ಯೋಚಿಸಿ, ಅವುಗಳನ್ನು ಬಿಟ್ಟು ತಿರುಗಿಕೊಳ್ಳುವುದರಿಂದ ಸಾಯದೆ ನಿಶ್ಚಯವಾಗಿ ಬದುಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 18:28
17 ತಿಳಿವುಗಳ ಹೋಲಿಕೆ  

ಜ್ಞಾನವಿದ್ದಿದ್ದರೆ ಗ್ರಹಿಸುತ್ತಿದ್ದರು ಈ ಸಂಗತಿಗಳನು ತಿಳಿಯುತ್ತಿದ್ದರು, ಅಂತ್ಯದೊಳು ತಮಗಾಗುವ ದುರವಸ್ಥೆಯನು.


ಯೇಸುಕ್ರಿಸ್ತರು ನಮ್ಮನ್ನು ಸಕಲ ಅಪರಾಧಗಳಿಂದ ವಿಮೋಚಿಸಿ, ಪರಿಶುದ್ಧರನ್ನಾಗಿಸಿ, ಸತ್ಕಾರ್ಯಗಳಲ್ಲಿ ಆಸಕ್ತರಾದ ಒಂದು ಜನಾಂಗವನ್ನಾಗಿ ಮಾಡಿದರು. ನಮ್ಮನ್ನು ತಮ್ಮ ಸ್ವಂತದವರನ್ನಾಗಿಸಿಕೊಳ್ಳಲೆಂದು ತಮ್ಮನ್ನೇ ನಮಗಾಗಿ ಸಮರ್ಪಿಸಿಕೊಟ್ಟನು.


“ನರಪುತ್ರನೇ, ನಿನ್ನ ಜನರಿಗೆ ಹೀಗೆ ಹೇಳು: ಶಿಷ್ಟನು ದ್ರೋಹಮಾಡಿದ್ದಲ್ಲಿ ಅವನ ಪುಣ್ಯ ಅವನನ್ನು ಉದ್ಧರಿಸದು; ದುಷ್ಟನು ತನ್ನ ದುಷ್ಟತನವನ್ನು ಬಿಟ್ಟಲ್ಲಿ ಅವನ ಪಾಪ ಅವನನ್ನು ಬೀಳಿಸದು; ಶಿಷ್ಟನು ಪಾಪಮಾಡಿದಲ್ಲಿ ಅವನ ಪುಣ್ಯ ಅವನನ್ನು ಉಳಿಸಲಾರದು.


ನೀವು ಮಾಡುತ್ತಾ ಬಂದಿರುವ ಅಪರಾಧಗಳನ್ನೆಲ್ಲಾ ನಿಮ್ಮಿಂದ ತೊಲಗಿಸಿಬಿಟ್ಟು, ನಿಮ್ಮ ಹೃದಯವನ್ನೂ ಸ್ವಭಾವವನ್ನೂ ನೂತನ ಮಾಡಿಕೊಳ್ಳಿ; ಇಸ್ರಯೇಲ್ ವಂಶದವರೇ, ನೀವು ಏಕೆ ಸಾಯಬೇಕು?


“ಆದರೆ ದುಷ್ಟನು ತಾನು ಮಾಡುತ್ತಿದ್ದ ಪಾಪಗಳನ್ನೆಲ್ಲಾ ಬಿಟ್ಟುಬಿಟ್ಟು, ನನ್ನ ಸಕಲವಿಧಿಗಳನ್ನು ಕೈಗೊಂಡು, ನ್ಯಾಯನೀತಿಗಳನ್ನು ನಡೆಸಿದರೆ ಸಾಯನು; ಖಂಡಿತ ಜೀವಿಸುವನು.


“ಇಗೋ, ಇವನು ಪಡೆದ ಮಗನು ತನ್ನ ತಂದೆ ಮಾಡಿದ ಪಾಪಗಳನ್ನೆಲ್ಲಾ ಕಂಡು ಭಯಪಟ್ಟು, ಇಂಥಾ ಕಾರ್ಯಗಳನ್ನು ನಡೆಸದೆ


“ನರಪುತ್ರನೇ, ವಲಸೆಹೋಗುವುದಕ್ಕೆ ಬೇಕಾದ ಸಾಮಗ್ರಿಗಳನ್ನು ನೀನು ಕೂಡಿಸಿಕೊಂಡು ಹಗಲಿನಲ್ಲಿ ಅವರ ಕಣ್ಣೆದುರಿಗೇ ಹೊರಡು. ಅಂದರೆ, ನಿನ್ನ ವಾಸಸ್ಥಳವನ್ನು ಬಿಟ್ಟು ಅವರು ನೋಡುವ ಹಾಗೆ ಬೇರೊಂದು ಸ್ಥಳಕ್ಕೆ ಹೋಗು: ಅವರು ದ್ರೋಹಿವಂಶದವರಾಗಿದ್ದರೂ ಒಂದು ವೇಳೆ ತಮ್ಮ ದ್ರೋಹವನ್ನು ಮನಸ್ಸಿಗೆ ತಂದುಕೊಳ್ಳಬಹುದು.


ನನ್ನಯ ನಡತೆಯನು ಪರಿಶೋಧಿಸುತ್ತ I ತಿರುಗಿಕೊಂಡೆನು ನಿನ್ನ ಕಟ್ಟಳೆಯತ್ತ II


ಲಕ್ಷ್ಯ ಕೊಟ್ಟೆನಾದರೆ ನಿನ್ನೆಲ್ಲ ಆಜ್ಞೆಗಳಿಗೆ I ಆಸ್ಪದವಿರದು ಎನಗೆ ಪ್ರಭು, ಆಶಾಭಂಗಕೆ II


ಪ್ರಭುವಿನ ಶಾಸ್ತ್ರಾನುಸಾರ ನಡೆದವರು ಧನ್ಯರು I ದೋಷರಹಿತ ಮಾರ್ಗದಲಿ ನಡೆವವರು ಧನ್ಯರು II


ದುಷ್ಟನು ತಾನು ಮಾಡುತ್ತಿದ್ದ ದುಷ್ಟತನವನ್ನು ಬಿಟ್ಟು, ನ್ಯಾಯನೀತಿಗಳನ್ನು ನಡೆಸಿದರೆ, ತನ್ನ ಪ್ರಾಣವನ್ನು ಉಳಿಸಿಕೊಳ್ಳುವನು.


ಆದರೆ ಇಸ್ರಯೇಲ್ ವಂಶದವರು ಸರ್ವೇಶ್ವರನ ಕ್ರಮ ಸರಿಯಲ್ಲ ಎಂದು ಹೇಳುತ್ತಿದ್ದಾರೆ; ಇಸ್ರಯೇಲ್ ವಂಶದವರೇ, ನನ್ನ ಕ್ರಮ, ಸರಿಯಿಲ್ಲವೇ? ನಿಮ್ಮ ಕ್ರಮವೇ ಸರಿಯಿಲ್ಲವಷ್ಟೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು