Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 18:31 - ಕನ್ನಡ ಸತ್ಯವೇದವು C.L. Bible (BSI)

31 ನೀವು ಮಾಡುತ್ತಾ ಬಂದಿರುವ ಅಪರಾಧಗಳನ್ನೆಲ್ಲಾ ನಿಮ್ಮಿಂದ ತೊಲಗಿಸಿಬಿಟ್ಟು, ನಿಮ್ಮ ಹೃದಯವನ್ನೂ ಸ್ವಭಾವವನ್ನೂ ನೂತನ ಮಾಡಿಕೊಳ್ಳಿ; ಇಸ್ರಯೇಲ್ ವಂಶದವರೇ, ನೀವು ಏಕೆ ಸಾಯಬೇಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 “ನೀವು ಮಾಡುತ್ತಾ ಬಂದಿರುವ ಅಪರಾಧಗಳನ್ನೆಲ್ಲಾ ನಿಮ್ಮಿಂದ ತೊಲಗಿಸಿಬಿಟ್ಟು ನಿಮ್ಮ ಹೃದಯವನ್ನೂ ಮತ್ತು ಸ್ವಭಾವವನ್ನೂ ನೂತನಪಡಿಸಿಕೊಳ್ಳಿರಿ; ಇಸ್ರಾಯೇಲ್ ವಂಶದವರೇ, ನೀವು ಸಾಯಬೇಕೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ನೀವು ಮಾಡುತ್ತಾ ಬಂದಿರುವ ಅಪರಾಧಗಳನ್ನೆಲ್ಲಾ ನಿಮ್ಮಿಂದ ತೊಲಗಿಸಿಬಿಟ್ಟು ನಿಮ್ಮ ಹೃದಯವನ್ನೂ ಸ್ವಭಾವವನ್ನೂ ನೂತನಮಾಡಿಕೊಳ್ಳಿರಿ; ಇಸ್ರಾಯೇಲ್ ವಂಶದವರೇ, ನೀವು ಸಾಯಲೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ನಿಮ್ಮ ದಂಗೆಕೋರತನದ ಮಾರ್ಗಗಳನ್ನೆಲ್ಲ ತೊರೆದುಬಿಟ್ಟು ನಿಮ್ಮ ಹೃದಯವನ್ನೂ ಸ್ವಭಾವವನ್ನೂ ನೂತನ ಮಾಡಿಕೊಳ್ಳಿರಿ. ಇಸ್ರೇಲ್ ಜನರೇ, ನೀವು ಮರಣವನ್ನು ಬರಮಾಡಿಕೊಳ್ಳುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ನೀವು ಮಾಡುವ ದುಷ್ಕೃತ್ಯಗಳನ್ನೆಲ್ಲಾ ನಿಮ್ಮಿಂದ ಎಸೆದುಬಿಡಿರಿ. ಹೊಸ ಹೃದಯವನ್ನೂ, ಹೊಸ ಆತ್ಮವನ್ನೂ ನೀವು ಪಡೆದುಕೊಳ್ಳಿರಿ. ಇಸ್ರಾಯೇಲಿನ ಮನೆತನದವರೇ, ನೀವು ಸಾಯುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 18:31
37 ತಿಳಿವುಗಳ ಹೋಲಿಕೆ  

ನಾನು ನಿಮಗೆ ಹೊಸ ಮನಸ್ಸನ್ನು ಕೊಟ್ಟು, ನಿಮ್ಮಲ್ಲಿ ನನ್ನ ಸ್ವಭಾವವನ್ನು ಹುಟ್ಟಿಸುವೆನು. ಕಲ್ಲಾದ ಹೃದಯವನ್ನು ನಿಮ್ಮೊಳಗಿಂದ ತೆಗೆದು, ಮೃದುವಾದ ಹೃದಯವನ್ನು ನಿಮಗೆ ದಯಪಾಲಿಸುವೆನು.


ಶುದ್ಧ ಹೃದಯವನು ದೇವಾ, ನಿರ್ಮಿಸು I ಅಂತರಂಗವನು ಚೇತನಗೊಳಿಸು II


ನೀವು ಶರೀರ ಸ್ವಭಾವಕ್ಕೆ ಅನುಸಾರವಾಗಿ ಬಾಳಿದರೆ ಖಂಡಿತವಾಗಿ ಸಾಯುವಿರಿ. ಪವಿತ್ರಾತ್ಮ ಅವರ ನೆರವಿನಿಂದ ದೈಹಿಕ ದುರಭ್ಯಾಸಗಳನ್ನು ದಮನಮಾಡಿದರೆ ಜೀವಿಸುವಿರಿ.


ಅವರು ನನ್ನ ನಿಯಮಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು ನೆರವೇರಿಸುವಂತೆ ನಾನು ಅವರಿಗೆ ಒಂದೇ ಮನಸ್ಸನ್ನು ದಯಪಾಲಿಸಿ, ನೂತನ ಸ್ವಭಾವವನ್ನು ಅವರಲ್ಲಿ ಹುಟ್ಟಿಸುವೆನು;


ಇಹಲೋಕದ ಆಚಾರವಿಚಾರಗಳಿಗೆ ಮಾರುಹೋಗಬೇಡಿ. ಬದಲಿಗೆ, ಮಾನಸಾಂತರಗೊಂಡು ನೂತನ ಜೀವಿಗಳಾಗಿ ಬಾಳಿರಿ. ಆಗ ನೀವು ದೇವರ ಚಿತ್ತಾನುಸಾರ ಯಾವುದು ಉತ್ತಮವಾದುದು, ಯಾವುದು ಉನ್ನತವಾದುದು, ಯಾವುದು ಉತ್ಕೃಷ್ಟವಾದುದು ಎಂಬುದನ್ನು ಅರಿತುಕೊಳ್ಳುವಿರಿ.


ನನ್ನ ಜೀವದಾಣೆ, ದುಷ್ಟನ ಸಾವಿನಲ್ಲಿ ನನಗೆ ಲವಲೇಶವೂ ಸಂತೋಷವಿಲ್ಲ; ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ಬಾಳುವುದೇ ನನಗೆ ಸಂತೋಷ. ಇಸ್ರಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳನ್ನು ಬಿಟ್ಟು ಬಾಳುವುದೇ ನನಗೆ ಸಂತೋಷ. ಇಸ್ರಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳನ್ನು ಬಿಡಿ, ಬಿಟ್ಟುಬಿಡಿ; ನೀವು ಏಕೆ ಸಾಯಬೇಕು?” ಇದು ಸರ್ವೇಶ್ವರನಾದ ದೇವರ ನುಡಿ.


ಎಲ್ಲಾ ಕೆಟ್ಟತನವನ್ನು ಬಿಟ್ಟುಬಿಡಿ. ಸುಳ್ಳಾಡುವುದಾಗಲಿ, ವಂಚಿಸುವುದಾಗಲಿ, ಅಸೂಯೆಪಡುವುದಾಗಲಿ, ಪರದೂಷಣೆಮಾಡುವುದಾಗಲಿ ನಿಮ್ಮಲ್ಲಿ ಇರಬಾರದು.


ನಾನು ಸಾವುಜೀವಗಳನ್ನೂ ಶಾಪಾಶೀರ್ವಾದಗಳನ್ನೂ ಈಗ ನಿಮ್ಮ ಮುಂದೆ ಇಟ್ಟಿದ್ದೇನೆ; ಇದಕ್ಕೆ ಭೂಮಿ ಆಕಾಶಗಳೇ ಸಾಕ್ಷಿಗಳಾಗಿರಲಿ; ಆದುದರಿಂದ ನೀವೂ ನಿಮ್ಮ ಸಂತತಿಯವರೂ ಬದುಕಿಬಾಳುವಂತೆ ಜೀವವನ್ನೇ ಆರಿಸಿಕೊಳ್ಳಿ;


‘ನೀವೆಲ್ಲರೂ ನಿಮ್ಮ ಕಣ್ಣಿಗೆ ಇಷ್ಟವಾದ ಅಸಹ್ಯವಸ್ತುಗಳನ್ನು ಬಿಸಾಡಿಬಿಡಿ; ಈಜಿಪ್ಟಿನ ವಿಗ್ರಹಗಳಿಂದ ನಿಮ್ಮನ್ನು ಹೊಲಸು ಮಾಡಿಕೊಳ್ಳಬೇಡಿ; ನಾನು ನಿಮ್ಮ ದೇವರಾದ ಸರ್ವೇಶ್ವರ’ ಎಂದು ಅವರನ್ನು ಎಚ್ಚರಿಸಿದೆ.


ಬಿಟ್ಟುಬಿಡಲಿ ದುಷ್ಟನು ತನ್ನ ದುರ್ಮಾರ್ಗವನು ತೊರೆದುಬಿಡಲಿ ದುರುಳನು ದುರಾಲೋಚನೆಗಳನು. ಹಿಂದಿರುಗಿ ಬರಲಿ ಸರ್ವೇಶ್ವರನ ಬಳಿಗೆ ಕರುಣೆ ತೋರುವನು ಆತನು ಅವನಿಗೆ. ಆಶ್ರಯಪಡೆಯಲಿ ಅವನು ನಮ್ಮ ದೇವರಿಂದ ಕ್ಷಮಿಸುವನಾತನು ಮಹಾಕೃಪೆಯಿಂದ.


“ಇಗೋ ನೋಡಿ: ನಾನು ಶುಭವನ್ನೂ ಅಶುಭವನ್ನೂ ಜೀವವನ್ನೂ ಸಾವನ್ನೂ ಈಗ ನಿಮ್ಮ ಮುಂದೆ ಇಟ್ಟಿದ್ದೇನೆ.


ಸತ್ಯಕ್ಕೆ ಶರಣಾಗಿ ಆತ್ಮಶುದ್ಧಿಹೊಂದಿರುವ ನೀವು ಸಹೋದರರನ್ನು ನಿಷ್ಕಪಟದಿಂದ ಪ್ರೀತಿಸಬಲ್ಲಿರಿ. ಎಂದೇ, ಒಬ್ಬರನ್ನೊಬ್ಬರು ಹೃತ್ಪೂರ್ವಕವಾಗಿಯೂ ಯಥಾರ್ಥವಾಗಿಯೂ ಪ್ರೀತಿಸಿರಿ.


ವಿಧೇಯರಾದ ಮಕ್ಕಳಂತೆ ನಡೆದುಕೊಳ್ಳಿ. ನೀವು ಅಜ್ಞಾನಿಗಳಾಗಿದ್ದಾಗ ದುರಿಚ್ಛೆಗಳಿಗೆ ಈಡಾಗಿದ್ದಿರಿ; ಈಗ ಅವುಗಳಿಗೆ ಎಡೆಕೊಡಬೇಡಿ.


ಪೌಲ ಮತ್ತು ಬಾರ್ನಬ ಮತ್ತಷ್ಟು ಧೈರ್ಯದಿಂದ ಮಾತನಾಡಿದರು: “ದೇವರ ವಾಕ್ಯವನ್ನು ಮೊಟ್ಟಮೊದಲು ನಿಮಗೆ ಬೋಧಿಸುವುದು ಅಗತ್ಯವಾಗಿತ್ತು. ಆದರೆ ನೀವು ಅದನ್ನು ನಿರಾಕರಿಸಿ ಅಮರಜೀವಕ್ಕೆ ಅಪಾತ್ರರೆಂದು ನಿಮ್ಮನ್ನು ನೀವೇ ತೀರ್ಮಾನಿಸಿಕೊಂಡಿರಿ. ಆದುದರಿಂದ ನಾವು ನಿಮ್ಮನ್ನು ಬಿಟ್ಟು ಅನ್ಯಧರ್ಮದವರ ಕಡೆ ಹೋಗುತ್ತೇವೆ.


ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಿರಿ. ಅವರು ನಿಮ್ಮ ಪಾಪಗಳನ್ನು ಪರಿಹರಿಸುವರು.


ಕುರುಡ ಫರಿಸಾಯನೇ, ಮೊತ್ತಮೊದಲು ತಟ್ಟೆಲೋಟಗಳ ಒಳಭಾಗವನ್ನು ತೊಳೆ, ಆಗ ಅವುಗಳ ಹೊರಭಾಗವೂ ಶುಚಿಯಾಗುವುದು.


“ಒಳ್ಳೆಯ ಹಣ್ಣು ಬೇಕಾದರೆ ಮರ ಒಳ್ಳೆಯದಿರಬೇಕು. ಹುಳುಕು ಮರವಾದರೆ ಸಿಗುವುದು ಹುಳುಕು ಹಣ್ಣೇ. ಹಣ್ಣಿನ ರುಚಿಯಿಂದ ಮರವನ್ನು ಗುರುತಿಸಬಹುದು.


ಅವರಿಗೆ ಒಂದೇ ಮನಸ್ಸನ್ನೂ ಒಂದೇ ಮಾರ್ಗವನ್ನೂ ಅನುಗ್ರಹಿಸುವೆನು. ಇದರಿಂದ ಅವರು ತಮ್ಮ ಹಿತಕ್ಕಾಗಿಯೂ ತಮ್ಮ ಅನಂತರ ತಮ್ಮ ಸಂತಾನದ ಹಿತಕ್ಕಾಗಿಯೂ ನನ್ನಲ್ಲಿ ಸದಾ ಭಯಭಕ್ತಿ ಉಳ್ಳವರಾಗಿರುವರು.


ಅವರನ್ನು ನಾನು ಕಳಿಸಲಿಲ್ಲ; ನನ್ನ ಹೆಸರೆತ್ತಿ ಸುಳ್ಳನ್ನು ಸಾರುತ್ತ ಇದ್ದಾರೆ. ಅವರ ದುರ್ಬೋಧನೆಯ ನಿಮಿತ್ತ ನಾನು ನಿಮ್ಮನ್ನು ಹೊರದೂಡಬೇಕಾಗುವುದು, ನೀವು ನಾಶವಾಗುವಿರಿ, ಎಂದು ಸರ್ವೇಶ್ವರನೇ ನುಡಿದಿದ್ದಾರೆ.”


“ಇದೂ ಅಲ್ಲದೆ ಸರ್ವೇಶ್ವರ ಈ ಜನರಿಗೆ ಹೀಗೆಂದು ತಿಳಿಸಲು ನನಗೆ ಆಜ್ಞಾಪಿಸಿದ್ದಾರೆ: ‘ಇಗೋ ಜೀವದ ಮಾರ್ಗವನ್ನು ಮತ್ತು ಸಾವಿನ ಮಾರ್ಗವನ್ನು ನಿಮ್ಮ ಮುಂದೆ ತೆರೆದಿಟ್ಟಿದ್ದೇನೆ.


ಆಗ ಬೆಳ್ಳಿಯ ಕವಚಗಳಿಂದ ಕೂಡಿದ ನಿಮ್ಮ ವಿಗ್ರಹಗಳನ್ನೂ ಚಿನ್ನದಿಂದ ಲೇಪಿತವಾದ ನಿಮ್ಮ ಬೊಂಬೆಗಳನ್ನೂ ಬಿಸಾಡುವಿರಿ. ಅವುಗಳನ್ನು ಹೊಲೆಮಾಡಿ ‘ತೊಲಗಿ’ ಎಂದು ಹೇಳುತ್ತಾ ಎಸೆದುಬಿಡುವಿರಿ.


ನನಗೆ ತಪ್ಪುಮಾಡುವವನು ತನ್ನಾತ್ಮಕ್ಕೇ ಕೇಡುಮಾಡುತ್ತಾನೆ ನನ್ನನ್ನು ಹಗೆಮಾಡುವವರೆಲ್ಲರು ಮೃತ್ಯುವನ್ನು ಪ್ರೀತಿಸುತ್ತಾರೆ.


ಬಿಡು ಕೆಟ್ಟದನು, ಮಾಡು ಒಳ್ಳಿತನು I ಹುಡುಕು ಶಾಂತಿಯನು, ಬೆನ್ನಟ್ಟು ಅದನು II


ದೇವರ ಸಮೀಪಕ್ಕೆ ಬನ್ನಿ, ಆಗ ಅವರು ನಿಮ್ಮ ಸಮೀಪಕ್ಕೆ ಬರುವರು. ಪಾಪಾತ್ಮರೇ, ನಿಮ್ಮ ಕೈ ಶುದ್ಧವಾಗಿರಲಿ. ಎರಡು ಮನಸ್ಸಿನವರೇ, ನಿಮ್ಮ ಹೃದಯ ನಿರ್ಮಲವಾಗಿರಲಿ.


ದರ್ಶಿನಿಗಳೆನಿಸಿಕೊಂಡ ತಮ್ಮ ಪ್ರವಾದಿಗಳ ಮುಖಾಂತರ ಇಸ್ರಯೇಲ ಯೆಹೂದ್ಯರಿಗೆ, “ನೀವು ನಿಮ್ಮ ದುರಾಚಾರವನ್ನು ಬಿಟ್ಟು ನಾನು ನಿಮ್ಮ ಪೂರ್ವಜರಿಗೂ ನನ್ನ ದಾಸರಾದ ಪ್ರವಾದಿಗಳ ಮುಖಾಂತರ ನಿಮಗೂ ಕೊಟ್ಟಂಥ ನನ್ನ ಎಲ್ಲಾ ಆಜ್ಞಾವಿಧಿನಿಯಮಗಳನ್ನು ಕೈಕೊಂಡು ನಡೆಯಿರಿ,” ಎಂದು ಖಂಡಿತವಾಗಿ ಹೇಳಿದರು.


ಸರ್ವೇಶ್ವರ ಇಂತೆಂದರು : “ಇಸ್ರಯೇಲಿನ ಜನರೇ, ನೀವು ನನಗೆ ದೊಡ್ಡ ದ್ರೋಹಮಾಡಿದಿರಿ. ಈಗಲಾದರೂ ನನ್ನ ಕಡೆಗೆ ತಿರುಗಿಕೊಳ್ಳಿರಿ.


ಸರ್ವೇಶ್ವರ ಸ್ವಾಮಿ ಜನರಿಗೆ ಹೀಗೆನ್ನುತ್ತಾರೆ : “ಸಿಯೋನಿಗೆ ಹಾಗೂ ಪಾಪವನ್ನು ತೊರೆದುಬಿಟ್ಟ ಯಕೋಬ್ಯರ ಬಳಿಗೆ ನಾನು ಉದ್ಧಾರಕನಾಗಿ ಬರುವೆನು.


ಬಾಬಿಲೋನಿಯದ ಅರಸನ ಅಡಿಯಾಳಾಗಲು ನಿರಾಕರಿಸಿದ ರಾಷ್ಟ್ರವು ಖಡ್ಗಕ್ಷಾಮವ್ಯಾಧಿಗಳಿಂದ ಸಾಯಬೇಕಾಗುವುದೆಂದು ಸರ್ವೇಶ್ವರನೇ ನುಡಿದಿದ್ದಾರೆ. ಅಂಥ ಗತಿ ನಿಮಗೂ ನಿಮ್ಮ ಪ್ರಜೆಗೂ ಏಕೆ ಬರಬೇಕು?


ಈಗಲಾದರೂ ತಮ್ಮ ದೇವದ್ರೋಹವನ್ನು ಮತ್ತು ಅರಸರ ಶವಗಳನ್ನು ನನಗೆ ದೂರಮಾಡಲಿ; ಆಗ ನಾನು ಅವರ ಮಧ್ಯೆ ಸದಾ ವಾಸಿಸುವೆನು.


ಜುದೇಯದವರೇ, ಜೆರುಸಲೇಮಿನ ನಿವಾಸಿಗಳೇ, ಸರ್ವೇಶ್ವರನಾದ ನನಗಾಗಿ ಸುನ್ನತಿಯಾಗಿರಿ. ನಿಮ್ಮ ಹೃದಯದ ಮುಂದೊಗಲನ್ನು ತೆಗೆದುಹಾಕಿರಿ. ಇಲ್ಲವಾದರೆ ನಿಮ್ಮ ಪಾಪಾಕ್ರಮಗಳ ನಿಮಿತ್ತ ನನ್ನ ಕೋಪಾಗ್ನಿಯು ಭುಗಿಲೆದ್ದು ಆರಿಸಲಾಗದಷ್ಟು ಧಗಧಗಿಸುವುದು.”


ನಾನು ನನ್ನ ದಾಸರಾದ ಪ್ರವಾದಿಗಳನ್ನೆಲ್ಲಾ ಅವರ ಬಳಿಗೆ ತಡಮಾಡದೆ ಕಳುಹಿಸುತ್ತಾಬಂದೆ. ‘ಎಚ್ಚರಿಕೆ, ನಾನು ಹೇಸುವ ಈ ಅಸಹ್ಯಕಾರ್ಯಗಳನ್ನು ಮಾಡಬೇಡಿ’ ಎಂದು ಪ್ರಕಟಿಸುತ್ತಾ ಬಂದೆ.


ಎಂದೇ ನೀನು ನನ್ನ ಜನರಿಗೆ ಹೀಗೆಂದು ಹೇಳು: “ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: ಮರಳಿ ನನಗೆ ಅಭಿಮುಖರಾಗಿರಿ. ಆಗ ನಾನು ನಿಮಗೆ ಮರಳಿ ಅಭಿಮುಖನಾಗುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು