Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 18:32 - ಕನ್ನಡ ಸತ್ಯವೇದವು C.L. Bible (BSI)

32 ಯಾರ ಸಾವಿನಲ್ಲೂ ನನಗೆ ಸಂತೋಷವಿಲ್ಲ; ಪಾಪಕ್ಕೆ ವಿಮುಖರಾಗಿ ಜೀವಿಸಿರಿ; ಇದು ಸರ್ವೇಶ್ವರನಾದ ದೇವರ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಯಾರ ಸಾವಿನಲ್ಲೂ ನನಗೆ ಸಂತೋಷವಿಲ್ಲ; ಪಾಪದಿಂದ ತಿರುಗಿಕೊಂಡು ಜೀವಿಸಿರಿ” ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಸಾಯುವವರ ಸಾವಿನಲ್ಲಿ ನನಗೆ ಸಂತೋಷವಿಲ್ಲ; ತಿರುಗಿಕೊಂಡು ಬಾಳಿರಿ; ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ನಿಮ್ಮನ್ನು ಸಾಯಿಸಲು ನನಗೆ ಇಷ್ಟವಿಲ್ಲ. ನೀವು ನನ್ನ ಕಡೆಗೆ ಹಿಂದಿರುಗಿ ಜೀವಿಸಿರಿ.” ಇದು ನನ್ನ ಒಡೆಯನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಏಕೆಂದರೆ ಯಾವುದೇ ವ್ಯಕ್ತಿಯ ಸಾವಿನಲ್ಲಿ ನನಗೆ ಸಂತೋಷವಿಲ್ಲ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ಆದಕಾರಣ ಮಾನಸಾಂತರಪಟ್ಟು ಬಾಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 18:32
9 ತಿಳಿವುಗಳ ಹೋಲಿಕೆ  

ಕೆಲವರು ಭಾವಿಸುವಂತೆ ಪ್ರಭು ತಮ್ಮ ವಾಗ್ದಾನಗಳನ್ನು ನೆರವೇರಿಸುವುದರಲ್ಲಿ ವಿಳಂಬ ಮಾಡುವವರಲ್ಲ; ಆದರೆ ಅವರು ನಿಮ್ಮ ವಿಷಯದಲ್ಲಿ ದೀರ್ಘಶಾಂತಿ, ಸಹನೆಯುಳ್ಳವರು. ಯಾರೊಬ್ಬನೂ ನಾಶವಾಗಬೇಕೆಂಬುದು ಅವರ ಇಚ್ಛೆಯಲ್ಲ; ಎಲ್ಲರೂ ಪಶ್ಚಾತ್ತಾಪಪಟ್ಟು ತಮಗೆ ಅಭಿಮುಖರಾಗಬೇಕೆಂಬುದೇ ಅವರ ಅಪೇಕ್ಷೆ.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ದುಷ್ಟನ ಸಾವಿನಲ್ಲಿ ನನಗೆ ಲವಲೇಶವಾದರೂ ಸಂತೋಷವಿಲ್ಲ. ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ಬಾಳುವುದೇ ನನಗೆ ಸಂತೋಷ.


ನನ್ನ ಜೀವದಾಣೆ, ದುಷ್ಟನ ಸಾವಿನಲ್ಲಿ ನನಗೆ ಲವಲೇಶವೂ ಸಂತೋಷವಿಲ್ಲ; ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ಬಾಳುವುದೇ ನನಗೆ ಸಂತೋಷ. ಇಸ್ರಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳನ್ನು ಬಿಟ್ಟು ಬಾಳುವುದೇ ನನಗೆ ಸಂತೋಷ. ಇಸ್ರಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳನ್ನು ಬಿಡಿ, ಬಿಟ್ಟುಬಿಡಿ; ನೀವು ಏಕೆ ಸಾಯಬೇಕು?” ಇದು ಸರ್ವೇಶ್ವರನಾದ ದೇವರ ನುಡಿ.


ನರಮಾನವರನ್ನು ಹಿಂಸಿಸಿ ದುಃಖಪಡಿಸುವುದು ಆತನಿಗೆ ಎಷ್ಟುಮಾತ್ರಕ್ಕೂ ಇಷ್ಟವಿಲ್ಲ.


ಎಲ್ಲಾ ಮಾನವರೂ ಸತ್ಯವನ್ನರಿತು ಜೀವೋದ್ಧಾರ ಪಡೆಯಬೇಕೆಂಬುದೇ ದೈವೇಚ್ಛೆ.


ಕಂಡುಹಿಡಿಯಲಾಗದು ಇಂಥ ಸರ್ವಶಕ್ತನನು ನಮ್ಮಿಂದ ಶಕ್ತಿಯಲೂ ಸತ್ಯದಲೂ ಪರಮ ಪರಾಕ್ರಮಿ ಆತ ನ್ಯಾಯಪೂರ್ಣನಾದ ಆತ ದಬ್ಬಾಳಿಕೆ ನಡೆಸುವವನಲ್ಲ ನ್ಯಾಯಕ್ಕಾಗಲೀ ಧರ್ಮಕ್ಕಾಗಲೀ ಆತ ಧಕ್ಕೆ ತರುವವನಲ್ಲ.


ಸರ್ವೇಶ್ವರ ಇಂತೆಂದರು : “ಇಸ್ರಯೇಲಿನ ಜನರೇ, ನೀವು ನನಗೆ ದೊಡ್ಡ ದ್ರೋಹಮಾಡಿದಿರಿ. ಈಗಲಾದರೂ ನನ್ನ ಕಡೆಗೆ ತಿರುಗಿಕೊಳ್ಳಿರಿ.


ಬಿಟ್ಟುಬಿಡಲಿ ದುಷ್ಟನು ತನ್ನ ದುರ್ಮಾರ್ಗವನು ತೊರೆದುಬಿಡಲಿ ದುರುಳನು ದುರಾಲೋಚನೆಗಳನು. ಹಿಂದಿರುಗಿ ಬರಲಿ ಸರ್ವೇಶ್ವರನ ಬಳಿಗೆ ಕರುಣೆ ತೋರುವನು ಆತನು ಅವನಿಗೆ. ಆಶ್ರಯಪಡೆಯಲಿ ಅವನು ನಮ್ಮ ದೇವರಿಂದ ಕ್ಷಮಿಸುವನಾತನು ಮಹಾಕೃಪೆಯಿಂದ.


ಎಂದೇ ನೀನು ನನ್ನ ಜನರಿಗೆ ಹೀಗೆಂದು ಹೇಳು: “ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: ಮರಳಿ ನನಗೆ ಅಭಿಮುಖರಾಗಿರಿ. ಆಗ ನಾನು ನಿಮಗೆ ಮರಳಿ ಅಭಿಮುಖನಾಗುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು