Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 19:11 - ಕನ್ನಡ ಸತ್ಯವೇದವು C.L. Bible (BSI)

11 ಅದರಲ್ಲಿದ್ದವು ರಾಜದಂಡ ಯೋಗ್ಯವಾದ ಗಟ್ಟಿ ಕೊಂಬೆಗಳು ಮಿಕ್ಕ ರೆಂಬೆಗಳಿಗಿಂತ ಅಧಿಕವಾಗಿತ್ತವುಗಳ ಎತ್ತರವು ಹಲವಾರು ರೆಂಬೆಗಳ ಮಧ್ಯೆ ಉದ್ದುದ್ದವಾಗಿ ಕಾಣಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅದರಲ್ಲಿ ಆಳುವವರ ರಾಜದಂಡಗಳಿಗೆ ಯೋಗ್ಯವಾದ ಗಟ್ಟಿಕೊಂಬೆಗಳಿದ್ದವು, ಅವುಗಳ ಎತ್ತರವು ಉಳಿದ ರೆಂಬೆಗಳಿಗಿಂತ ಹೆಚ್ಚಾಗಿತ್ತು, ಬಹಳ ರೆಂಬೆಗಳ ಮಧ್ಯದಲ್ಲಿ ಉದ್ದುದ್ದವಾಗಿ ಕಾಣಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅದರಲ್ಲಿ ರಾಜದಂಡಯೋಗ್ಯವಾದ ಗಟ್ಟಿ ಕೊಂಬೆಗಳಿದ್ದವು, ಅವುಗಳ ಎತ್ತರವು ವಿುಕ್ಕ ರೆಂಬೆಗಳಿಗಿಂತ ಹೆಚ್ಚಾಗಿತ್ತು, ಬಹು ರೆಂಬೆಗಳ ಮಧ್ಯದಲ್ಲಿ ಉದ್ದುದ್ದವಾಗಿ ಕಾಣಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅದು ಬಲವಾದ ಕಾಂಡಗಳನ್ನು ಬೆಳೆಸಿತು. ಅದರ ಕಾಂಡಗಳು ಅಧಿಪತಿಗಳ ರಾಜದಂಡದಂತಿದ್ದವು. ಅವುಗಳಲ್ಲಿ ಒಂದು ಮೋಡಗಳ ಮಧ್ಯದಲ್ಲಿ ಎತ್ತರವಾಗಿ ಬೆಳೆಯಿತು. ಅದು ತನ್ನ ಎತ್ತರದಿಂದ ಮತ್ತು ತನ್ನ ಅನೇಕ ಕೊಂಬೆಗಳಿಂದ ಎದ್ದುಕಾಣುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಳುವವರ ರಾಜದಂಡಗಳಿಗೆ ತಕ್ಕ ಬಲವುಳ್ಳ ಬಳ್ಳಿಗಳು ಅದರಲ್ಲಿವೆ. ಅದರ ಉದ್ದವು ಎಲ್ಲಾ ರೆಂಬೆಗಳಿಗಿಂತ ಹೆಚ್ಚಾಗಿವೆ. ಹಾಗೆಯೇ ಅದು ಬಹು ಕೊಂಬೆಗಳ ಮಧ್ಯದಲ್ಲಿ ಎತ್ತರವಾಗಿ ಕಾಣಬರುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 19:11
19 ತಿಳಿವುಗಳ ಹೋಲಿಕೆ  

ದೊಡ್ಡಸ್ತಿಕೆಯಲ್ಲಿ ನಿನಗೆ ಸರಿಸಮಾನನಾರು? ಲೆಬನೋನಿನಲ್ಲಿ ದೇವದಾರು ವೃಕ್ಷವೊಂದಿತ್ತು; ಅದರ ರೆಂಬೆಗಳು ಅಂದ, ಅದರ ನೆರಳು ದಟ್ಟ ಅದರ ಎತ್ತರ ಬಹಳ, ಅದರ ತುದಿ ಮೇಘಚುಂಬಿತ.


ಆ ಮರ ಬೆಳೆದು ಬಲಗೊಂಡಿತ್ತು. ಅದರ ತುದಿ ಆಕಾಶವನ್ನು ಮುಟ್ಟುತ್ತಿತ್ತು. ಅದು ಭೂಲೋಕದ ಕಟ್ಟಕಡೆಗೂ ಕಾಣಿಸುತ್ತಿತ್ತು.


ಕಾಪಾಡು ನಿನ್ನ ಬಲಗೈ ನೆಟ್ಟು ಸಾಕಿದ ಸಸಿಯನು I ಕಾದಿರಿಸು ನಿನಗೆಂದೇ ನೀ ಬೆಳೆಸಿದಾ ಬಳ್ಳಿಯನು II


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ಸಂಭವಿಸಿದೆ ಪರಿಶೋಧನೆ ಏನು ಗತಿ, ರಾಜದಂಡವೇ ನಾಶವಾದರೆ!


ಆಹಾ ಖಡ್ಗ, ಖಡ್ಗ, ಸಾಣೆ ಹಿಡಿದ ಖಡ್ಗ, ಮಸೆದ ಖಡ್ಗ! ಸಾಣೆ ಹಿಡಿದಿದೆ ಹತಿಸುವಂತೆ, ಮಸೆದಿದೆ ಮಿಂಚುವಂತೆ. ಸಂಭ್ರಮಿಸಲಾದೀತೆ ‘ನಮ್ಮ ಕುಮಾರನ ರಾಜದಂಡ’ ಎಂದು? ಮಿಕ್ಕ ದಂಡಗಳನ್ನೆಲ್ಲ ಧಿಕ್ಕರಿಸುವಂಥ ದಂಡವೆಂದುಕೊಂಡು?


ಅದರ ಕಾಂಡದಿಂದ ಹೊರಟ ಬೆಂಕಿಯು ದಹಿಸಿಬಿಟ್ಟಿದೆ ಅದರ ಫಲಗಳನು ಎಂದೇ ಇನ್ನು ಉಳಿದಿಲ್ಲ ಅದರೊಳು ರಾಜದಂಡಕೆ ಯೋಗ್ಯವಾದ ಗಟ್ಟಿಕೊಂಬೆಯು.” ಇದೊಂದು ಶೋಕ ಗೀತೆ; ರೂಢಿಯಲ್ಲಿ ಇರುವ ಜಾನಪದ ಗೀತೆ.


ಕಿತ್ತು ಬಿಸಾಡಿದರು ಕ್ರೋಧಿಗಳು ಆ ಲತೆಯನು ಬಾಡಿಸಿತು ಅದರ ಫಲವನು ಮೂಡಣಗಾಳಿಯು ಮುದುರಿ ಒಣಗಿಹೋದುವು ಅದರ ಗಟ್ಟಿಕೊಂಬೆಗಳು.


ಜೆಸ್ಸೆಯನ ಬುಡದಿಂದ ಒಡೆಯುವುದೊಂದು ಚಿಗುರು; ಅದರ ಬೇರಿನಿಂದ ಫಲಿಸುವುದೊಂದು ತಳಿರು.


ಸಿಯೋನಿನ ಹೊರಗು ವಿಸ್ತರಿಸುವನು ಪ್ರಭು ನಿನ್ನ ರಾಜ್ಯದಾಳಿಕೆಯನು I ನಿನ್ನ ವೈರಿ ವಿರೋಧಿಗಳ ನಟ್ಟನಡುವೆಯೆ ದೊರೆತನ ಮಾಡುವೆ ನೀನು II


ಕೈ ಹಿಡಿದು ಕಾಪಾಡು ನಿನ್ನ ಬಲಗೈ ಉದ್ಧರಿಸಿದ ಪುರುಷನನು I ನಿನಗೆಂದೇ ನೀ ಸಾಕಿ ಬೆಳೆಸಿದಾ ವರಪುತ್ರನನು II


ಅವರು ನಮಗೆ, ನಾವು ಪರಲೋಕ ಭೂಲೋಕಗಳ ದೇವರ ದಾಸರು. ಅನೇಕಾನೇಕ ವರ್ಷಗಳ ಹಿಂದೆ ಕಟ್ಟಿದ್ದ ಆಲಯವನ್ನು ತಿರುಗಿ ಕಟ್ಟುತ್ತಿದ್ದೇವೆ. ಇಸ್ರಯೇಲರ ಒಬ್ಬ ಮಹಾರಾಜನು ಇದನ್ನು ಕಟ್ಟಿಮುಗಿಸಿದ್ದನು.


ದಂಗೆಯೆಬ್ಬಿಸುತ್ತಾ ಬಂದಿದ್ದಾರೆ; ಇದಲ್ಲದೆ ಜೆರುಸಲೇಮಿನಲ್ಲಿ ಬಲಿಷ್ಠ ರಾಜರು ಆಳುತ್ತಾ, ನದಿಯಾಚೆಯ ಎಲ್ಲ ಪ್ರದೇಶಗಳಲ್ಲಿ ಅಧಿಕಾರ ನಡೆಸುತ್ತಾ, ಕಪ್ಪ, ತೆರಿಗೆ, ಸುಂಕಗಳನ್ನು ತೆಗೆದುಕೊಳ್ಳುತ್ತಿದ್ದರೆಂದು ಕಂಡುಬಂದಿದೆ.


ಒಬ್ಬಾತನನ್ನು ನೋಡುತ್ತಿದ್ದೇನೆ; ಆತ ಈಗಿನವನಲ್ಲ. ಆತ ಕಾಣಿಸುತ್ತಾನೆ, ಆದರೆ ಸಮೀಪದಲ್ಲಿಲ್ಲ. ನಕ್ಷತ್ರಪ್ರಾಯನೊಬ್ಬನು ಉದಯಿಸಿದ್ದಾನೆ ಯಕೋಬವಂಶದಲ್ಲಿ ರಾಜದಂಡ ಹಿಡಿದವನು ಕಂಡು ಬಂದಿದ್ದಾನೆ ಇಸ್ರಯೇಲರಲ್ಲಿ. ಆತ ಸೀಳಿಹಾಕಿದ್ದಾನೆ ಮೋವಾಬ್ಯರ ತಲೆಯನ್ನು; ಕೆಡವಿಬಿಟ್ಟಿದ್ದಾನೆ ಯುದ್ಧವೀರರೆಲ್ಲರನ್ನು.


ರಾಜ್ಯಾಧಿಕಾರ ಪಡೆದವನು ಬರುವ ತನಕ ರಾಷ್ಟ್ರಗಳು ಆತನಿಗೆ ತಲೆಬಾಗುವ ತನಕ ತಪ್ಪದು ರಾಜದಂಡ ಯೆಹೂದನ ಕೈಯಿಂದ ಕದಲದು ಮುದ್ರೆಕೋಲು ಅವನ ವಂಶದಿಂದ.


ಮೊದಲನೆಯ ದಿನ ಮರಗಳಿಂದ ಒಳ್ಳೊಳ್ಳೆಯ ಹಣ್ಣುಗಳನ್ನು, ಖರ್ಜೂರ ಮರದ ಗರಿಗಳನ್ನು, ಎಲೆಗಳು ದಟ್ಟವಾಗಿರುವ ಮರಗಳ ಕೊಂಬೆಗಳನ್ನು ಮತ್ತು ನೀರಿನ ಕಾಲುವೆಗಳ ಬಳಿ ಬೆಳೆಯುವ ನೀರವಂಜಿ ಚಿಗುರುಗಳನ್ನು ತೆಗೆದುಕೊಂಡು ಬಂದು ಸರ್ವೇಶ್ವರನ ಸನ್ನಿಧಿಯಲ್ಲಿ ಏಳು ದಿನಗಳೂ ಸಂಭ್ರಮದಿಂದಿರಬೇಕು.


ದಾವೀದನಿಗೆ ಜೀವಮಾನದಲ್ಲೆಲ್ಲಾ ಆಪ್ತಮಿತ್ರನಾಗಿದ್ದ ಟೈರಿನ ಅರಸನಾದ ಹೀರಾಮನು, ಸೊಲೊಮೋನನು ತಂದೆಗೆ ಬದಲಾಗಿ ಪಟ್ಟಾಭಿಷೇಕ ಪಡೆದಿದ್ದಾನೆಂದು ಕೇಳಿ, ಅವನ ಬಳಿಗೆ ತನ್ನ ಸೇವಕರನ್ನು ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು