Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 19:14 - ಕನ್ನಡ ಸತ್ಯವೇದವು C.L. Bible (BSI)

14 ಅದರ ಕಾಂಡದಿಂದ ಹೊರಟ ಬೆಂಕಿಯು ದಹಿಸಿಬಿಟ್ಟಿದೆ ಅದರ ಫಲಗಳನು ಎಂದೇ ಇನ್ನು ಉಳಿದಿಲ್ಲ ಅದರೊಳು ರಾಜದಂಡಕೆ ಯೋಗ್ಯವಾದ ಗಟ್ಟಿಕೊಂಬೆಯು.” ಇದೊಂದು ಶೋಕ ಗೀತೆ; ರೂಢಿಯಲ್ಲಿ ಇರುವ ಜಾನಪದ ಗೀತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಬೆಂಕಿಯು ಅದರ ಕೊಂಬೆಗಳಿಂದ ಹೊರಟು ಅದರ ಫಲವನ್ನು ನುಂಗಿ ಬಿಟ್ಟಿದೆ. ಆದುದರಿಂದ ರಾಜದಂಡಕ್ಕೆ ಯೋಗ್ಯವಾದ ಯಾವ ಗಟ್ಟಿ ಕೊಂಬೆಯೂ ಅದರಲ್ಲಿ ಉಳಿದಿಲ್ಲ.’ ಇದು ಶೋಕ ಗೀತೆ, ಶೋಕ ಗೀತೆಯಾಗಿ ವಾಡಿಕೆಯಲ್ಲಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಬೆಂಕಿಯು ದಂಡರೂಪವಾದ ಅದರ ಶಾಖೆಗಳಿಂದ ಹೊರಟು ಅದರ ಫಲವನ್ನು ನುಂಗಿಬಿಟ್ಟದ್ದರಿಂದ ರಾಜದಂಡಕ್ಕೆ ಯೋಗ್ಯವಾದ ಯಾವ ಗಟ್ಟಿಕೊಂಬೆಯೂ ಅದರಲ್ಲಿ ಉಳಿದಿಲ್ಲ. ಇದು ಶೋಕಗೀತ, ಶೋಕಗೀತವಾಗಿ ವಾಡಿಕೆಯಲ್ಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅದರ ಸ್ವಂತ ಕಾಂಡದಿಂದಲೇ ಬೆಂಕಿಯು ಹೊರಟುಬಂದು ಅದರ ಚಿಕ್ಕ ಕೊಂಬೆಗಳನ್ನು ಮತ್ತು ಫಲಗಳನ್ನು ನಾಶಮಾಡಿತು. ಈಗ ಬಲವಾದ ಕಾಂಡ ಅದರಲ್ಲಿಲ್ಲ. ಆಳುವದಕ್ಕೆ ರಾಜದಂಡವೂ ಅದರಲ್ಲಿಲ್ಲ.’ ಇದು ಮರಣದ ಶೋಕಗೀತೆ. ಇದನ್ನು ಶೋಕಗೀತೆಯನ್ನಾಗಿಯೇ ಬಳಸಲಾಗುತ್ತಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅದರ ಕೊಂಬೆಗಳ ಬಳ್ಳಿಗಳೊಳಗಿಂದ ಬೆಂಕಿಯು ಹೊರಟು, ಅದರಲ್ಲಿ ಫಲವನ್ನು ತಿಂದುಬಿಟ್ಟಿದೆ. ಅದರಲ್ಲಿ ಆಳುವುದಕ್ಕೆ ರಾಜದಂಡಕ್ಕಾಗಿ ತಕ್ಕ ಬಲವುಳ್ಳ ಬಳ್ಳಿಯು ಈಗ ಇಲ್ಲ.’ ಇದು ಪ್ರಲಾಪವಾಗಿದೆ. ಪ್ರಲಾಪಕ್ಕಾಗಿಯೇ ಇದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 19:14
27 ತಿಳಿವುಗಳ ಹೋಲಿಕೆ  

ಅದರಲ್ಲಿದ್ದವು ರಾಜದಂಡ ಯೋಗ್ಯವಾದ ಗಟ್ಟಿ ಕೊಂಬೆಗಳು ಮಿಕ್ಕ ರೆಂಬೆಗಳಿಗಿಂತ ಅಧಿಕವಾಗಿತ್ತವುಗಳ ಎತ್ತರವು ಹಲವಾರು ರೆಂಬೆಗಳ ಮಧ್ಯೆ ಉದ್ದುದ್ದವಾಗಿ ಕಾಣಿಸಿದವು.


“ಇಸ್ರಯೇಲ್ ಅರಸರನ್ನು ಕುರಿತ ಈ ಶೋಕ ಗೀತೆಯನ್ನು ಹಾಡು:


ಸರ್ವೇಶ್ವರಸ್ವಾಮಿ ಬಹಳ ಕೋಪಗೊಂಡು ಜೆರುಸಲೇಮಿನವರ ಮೇಲೂ ಬೇರೆ ಎಲ್ಲ ಯೆಹೂದ್ಯರ ಮೇಲೂ ಇದನ್ನೆಲ್ಲ ಬರಮಾಡಿ, ಕಡೆಗೆ ಅವರನ್ನು ತಮ್ಮ ಸನ್ನಿಧಿಯಿಂದ ತಳ್ಳಿಬಿಟ್ಟರು.


ಅವರಾದರೋ, “ಕೊಲ್ಲಿರಿ, ಕೊಲ್ಲಿರಿ; ಶಿಲುಬೆಗೇರಿಸಿರಿ,” ಎಂದು ಕಿರುಚಿದರು. ಪಿಲಾತನು, “ನಿಮ್ಮ ಅರಸನನ್ನು ಶಿಲುಬೆಗೇರಿಸಲೇ?” ಎಂದನು. ಅದಕ್ಕೆ ಮುಖ್ಯಯಾಜಕರು, “ರೋಮ್ ಚಕ್ರವರ್ತಿಯ ಹೊರತು ನಮಗೆ ಬೇರೆ ಅರಸನಿಲ್ಲ,” ಎಂದು ಉತ್ತರಕೊಟ್ಟರು.


ಯೇಸುಸ್ವಾಮಿ ಜೆರುಸಲೇಮ್ ಪಟ್ಟಣಕ್ಕೆ ಇನ್ನೂ ಹತ್ತಿರವಾಗಿ ಬಂದು ಅದನ್ನು ನೋಡಿ,


ಸರ್ವೇಶ್ವರ ಇಂತೆನ್ನುತ್ತಾರೆ: “ದಿನ ಬರಲಿದೆ. ಅಂದು ಬಿದ್ದುಹೋಗಿರುವ ದಾವೀದನ ಗುಡಾರವನ್ನು ಮರಳಿ ಎಬ್ಬಿಸುವೆನು. ಅದರ ಬಿರುಕುಗಳನ್ನು ಮುಚ್ಚುವೆನು. ಹಾಳಾದದ್ದನ್ನು ಎತ್ತಿ ನಿಲ್ಲಿಸುವೆನು. ಮೊದಲು ಇದ್ದಂತೆಯೇ ಪುನಃ ನಿರ್ಮಿಸುವೆನು.


“ನಮಗೆ ರಾಜನೇ ಇಲ್ಲ. ನಾವು ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಲ್ಲ. ನಮಗೆ ರಾಜನಿದ್ದರೂ ಅವನು ನಮಗೆ ಏನು ತಾನೇ ಮಾಡಿಯಾನು?” ಎಂದು ಆ ಜನರು ಆಡಿಕೊಳ್ಳುತ್ತಾರೆ.


ಹೀಗಿರಲು, ಅನೇಕ ದಿನಗಳವರೆಗೆ ಇಸ್ರಯೇಲಿನಲ್ಲಿ ರಾಜಯುವರಾಜರುಗಳು ಆಳ್ವಿಕೆ ನಡೆಸುವುದಿಲ್ಲ. ಬಲಿಯರ್ಪಣೆಗಳು ಇರುವುದಿಲ್ಲ. ವಿಗ್ರಹವೇದಿಕೆಗಳು ಅವರ ಮಧ್ಯೆ ಕಂಡುಬರುವುದಿಲ್ಲ, ಮಾಟಮಂತ್ರ ನಡೆಯುವುದಿಲ್ಲ.


ಆ ವನಕ್ಕೆ ಹೀಗೆ ಪ್ರವಾದಿಸು: ‘ಸರ್ವೇಶ್ವರನ ಮಾತನ್ನು ಕೇಳು: ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಆಹಾ, ನಾನು ನಿನ್ನೊಳಗೆ ಬೆಂಕಿಯನ್ನು ಹೊತ್ತಿಸುವೆನು. ಅದು ನಿನ್ನಲ್ಲಿನ ಎಲ್ಲಾ ಹಸಿರುಮರಗಳನ್ನೂ ಒಣಮರಗಳನ್ನೂ ಕಬಳಿಸಿಬಿಡುವುದು; ಧಗಧಗಿಸುವ ಜ್ವಾಲೆ ಆರದೆ, ತೆಂಕಲಿಂದ ಬಡಗಲವರೆಗೆ ಎಲ್ಲರ ಮುಖಗಳನ್ನು ಕುಂದಿಸುವುದು.


ಇಲ್ಲ, ಬೆಂಕಿಗೆ ಹಾಕುತ್ತಾರೆ. ಸೌದೆಯಾಗಿ, ಅದನ್ನು ಬೆಂಕಿ ಸುಟ್ಟುಬಿಡುತ್ತದೆ. ಅದರ ಎರಡು ಕೊನೆಗಳೂ ಇದ್ದಲಾಗುತ್ತವೆ. ಅದರ ಮಧ್ಯಭಾಗವು ಬಾರದು ಯಾವ ತರದ ಬಳಕೆಗು.


ಯಾವನನ್ನು ಕುರಿತು ನಾವು: “ನಮ್ಮ ಬಾಳಿನ ಉಸಿರು, ದೇವರಿಂದ ಅಭಿಷಿಕ್ತನು, ಇವನ ಆಶ್ರಯದಿಂದಲೆ ರಾಷ್ಟ್ರಗಳ ನಡುವೆ ನಮಗೆ ಉಳಿವು” ಎಂದುಕೊಂಡೆವೋ ಅಂಥವನೇ ಸಿಕ್ಕಿಬಿದ್ದಿದ್ದಾನೆ ಹಗೆಗಳು ತೋಡಿದ ಗುಳಿಯೊಳಗೆ!


ಸರ್ವೇಶ್ವರ ಸ್ವಾಮಿ ಬಹಳ ಕೋಪಗೊಂಡು ಜೆರುಸಲೇಮಿನವರ ಮೇಲೂ ಬೇರೆ ಎಲ್ಲ ಯೆಹೂದ್ಯರ ಮೇಲೂ ಇದನ್ನೆಲ್ಲ ಬರಮಾಡಿ, ಕಡೆಗೆ ಅವರನ್ನು ತಮ್ಮ ಸನ್ನಿಧಿಯಿಂದ ತಳ್ಳಿಬಿಟ್ಟರು. ಚಿದ್ಕೀಯನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ವಿರುದ್ಧ ತಿರುಗಿಬಿದ್ದ.


ತಮ್ಮ ಎಲ್ಲ ಮಡದಿಯರನ್ನೂ ಮಕ್ಕಳನ್ನೂ ಬಾಬಿಲೋನಿಯರ ಬಳಿಗೆ ತರಲಾಗುವುದು. ತಾವು ತಪ್ಪಿಸಿಕೊಳ್ಳಲಾಗದೆ ಬಾಬಿಲೋನಿಯದ ಅರಸನ ಕೈಗೆ ಸಿಕ್ಕಿಕೊಳ್ಳುವಿರಿ. ಈ ನಗರವು ತಮ್ಮ ನಿಮಿತ್ತ ಬೆಂಕಿಯಿಂದ ಸುಟ್ಟುಹೋಗುವುದು,” ಎಂದು ಹೇಳಿದನು.


ನುಂಗಿಬಿಟ್ಟರಾ ಜನರು ಯಕೋಬ ವಂಶದವರನು I ಹಾಳುಮಾಡಿ ಬಿಟ್ಟರವರ ನಿವಾಸ ಸ್ಥಳಗಳನು II


ನಮ್ಮ ಪಾಪದ ನಿಮಿತ್ತ ಅಧೀನರಾಗಿಸಿದಿರಿ ಅನ್ಯರಾಜರಿಗೆ ಈ ನಾಡಿನ ಸಿರಿಸಂಪತ್ತು ಹರಿದುಹೋಗುತ್ತಿದೆ ಆ ಅರಸರಿಗೆ ನಮ್ಮೊಡಲು, ದನಕರುಗಳು, ಈಡಾಗಿವೆ ಅವರ ದಬ್ಬಾಳಿಕೆಗೆ ಅಕಟಕಟ, ನಾವು ಸಿಕ್ಕಿಕೊಂಡಿದ್ದೇವೆ, ಮಹಾಸಂಕಟಕೆ!”


ಇದಲ್ಲದೆ, ನೆಬೂಕದ್ನೆಚ್ಚರನಿಗೆ ಒಳಗಾಗುತ್ತೇನೆಂದು, ದೇವರ ಮೇಲೆ ಆಣೆಯಿಟ್ಟು ಪ್ರಮಾಣಮಾಡಿದ್ದರೂ, ಅವನಿಗೆ ವಿರುದ್ಧ ದಂಗೆ ಎದ್ದನು. ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ ಅಭಿಮುಖನಾಗಲೊಲ್ಲದೆ, ಹಟಹಿಡಿದು ಮನಸ್ಸನ್ನು ಕಠಿಣಮಾಡಿಕೊಂಡನು.


ಅದಕ್ಕೆ ಆ ಪೊದೆ, ‘ನೀವು ನಿಜವಾದ ಮನಸ್ಸಿನಿಂದ ನನಗೆ ರಾಜ್ಯಾಭಿಷೇಕ ಮಾಡಬೇಕೆಂದಿರುವುದಾದರೆ, ಬನ್ನಿ, ಬಂದು ನನ್ನಿಂದ ಬೆಂಕಿಹೊರಟು ಲೆಬನೋನಿನ ದೇವದಾರುವೃಕ್ಷಗಳನ್ನು ಸುಟ್ಟುಬಿಡುವುದು,’ ಎಂದುಬಿಟ್ಟಿತು.


ರಾಜ್ಯಾಧಿಕಾರ ಪಡೆದವನು ಬರುವ ತನಕ ರಾಷ್ಟ್ರಗಳು ಆತನಿಗೆ ತಲೆಬಾಗುವ ತನಕ ತಪ್ಪದು ರಾಜದಂಡ ಯೆಹೂದನ ಕೈಯಿಂದ ಕದಲದು ಮುದ್ರೆಕೋಲು ಅವನ ವಂಶದಿಂದ.


ಸಿಯೋನಿನ ಹೊರಗು ವಿಸ್ತರಿಸುವನು ಪ್ರಭು ನಿನ್ನ ರಾಜ್ಯದಾಳಿಕೆಯನು I ನಿನ್ನ ವೈರಿ ವಿರೋಧಿಗಳ ನಟ್ಟನಡುವೆಯೆ ದೊರೆತನ ಮಾಡುವೆ ನೀನು II


ನಾಟಿಕೊಂಡಿದ್ದ ಆ ಲತೆ ಸಮೃದ್ಧವಾಗಿಯೇ ಇರುವುದೇ? ಮೂಡಣಗಾಳಿ ಬಡಿಯುವಾಗ ಅದು ಖಂಡಿತವಾಗಿ ಬಾಡುವುದಲ್ಲವೆ? ಬೆಳೆದ ಪಾತಿಯಲ್ಲಿಯೇ ಅದು ಒಣಗಿಹೋಗುವುದಲ್ಲವೆ?”


ಅದನ್ನು ಹೊತ್ತಿಸಿದವನು ಸರ್ವೇಶ್ವರನಾದ ನಾನೇ ಎಂದು ಸಕಲ ನರಪ್ರಾಣಿಗಳಿಗೆ ಆಗ ಗೋಚರವಾಗುವುದು; ಅದು ಆರಿಹೋಗದು’.


“ಇವರು ನಿನ್ನ ಕುರಿತು, ‘ನಾವಿಕರ ನಿವಾಸವೇ, ಹೆಸರುವಾಸಿಯ ನಗರಿಯೇ, ಸಮುದ್ರದಿಂದ ಬಲಗೊಂಡ ಪಟ್ಟಣವೇ, ನೀನು ತೀರಾ ಹಾಳಾಗಿರುವೆ. ಸಮುದ್ರಸಂಚಾರಿಗಳಿಗೆಲ್ಲಾ ಭಯಾಸ್ಪದರಾಗಿದ್ದ ನಿನ್ನ ನಿವಾಸಿಗಳು ತೀರಾ ಹಾಳಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು