Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 19:2 - ಕನ್ನಡ ಸತ್ಯವೇದವು C.L. Bible (BSI)

2 ಇಗೋ, ನಿನ್ನ ತಾಯಿ, ಸಿಂಹಗಳ ಮಧ್ಯೆ ಸಿಂಹಿಣಿ, ಸಾಕಿದಳು ತನ್ನ ಮರಿಗಳನು, ಯುವ ಸಿಂಹಗಳ ನಡುವೆ ಪವಡಿಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ‘ಆಹಾ, ನಿನ್ನ ತಾಯಿಯು ಸಿಂಹಗಳ ಮಧ್ಯೆ ಸಿಂಹಿಣಿ, ಸಾಕಿದಳು ತನ್ನ ಮರಿಗಳನ್ನು, ಯುವ ಸಿಂಹಗಳ ನಡುವೆ ವಾಸಿಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆಹಾ, ನಿನ್ನ ತಾಯಿಯು ಸಿಂಹಗಳೊಳಗಿನ ಸಿಂಹಿ, ಪ್ರಾಯದ ಸಿಂಹಗಳ ನಡುವೆ ಮಲಗಿತು, ಮರಿಗಳನ್ನು ಸಾಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “‘ನಿನ್ನ ತಾಯಿಯು ಏನಾಗಿದ್ದಳು? ಆಕೆಯು ಸಿಂಹಗಳ ಮಧ್ಯದಲ್ಲಿ ಸಿಂಹಿಣಿಯಾಗಿದ್ದಳು. ಆಕೆಯು ಪ್ರಾಯದ ಸಿಂಹಗಳೊಡನೆ ಮಲಗಿ ತನ್ನ ಮರಿಗಳನ್ನು ಸಾಕಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಹೀಗೆ ಹೇಳು: “ ‘ಇಗೋ, ನಿನ್ನ ತಾಯಿ, ಸಿಂಹಗಳ ಮಧ್ಯೆ ಸಿಂಹಿಣಿ, ತನ್ನ ಮರಿಗಳನ್ನು ಸಾಕಿ, ಯುವ ಸಿಂಹಗಳ ನಡುವೆ ವಾಸಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 19:2
11 ತಿಳಿವುಗಳ ಹೋಲಿಕೆ  

ಆಹಾ! ಕೇಳಿಬರುತ್ತಿದೆ ಕುರುಬರ ಗೋಳಾಟ ಬರಡಾಗಿದೆ ಅವರ ಹುಲ್ಲುಗಾವಲ ನೋಟ ಕೇಳಿರಿ, ಇಗೋ, ಯುವಸಿಂಹಗಳ ಆಕ್ರಂದನ ಏಕೆನೆ ಪಾಳುಬಿದ್ದಿದೆ ಜೋರ್ಡನಿನ ದಟ್ಟವನ!


ಗರ್ಜಿಸುತಿಹರು ಸೈನಿಕರು ಸಿಂಹದಂತೆ, ಆರ್ಭಟಿಸುತಿಹರವರು ಪ್ರಾಯದ ಸಿಂಹಗಳಂತೆ, ಗುರುಗುಟ್ಟುತಿಹರು ಬೇಟೆ ಹಿಡಿದ ಕೇಸರಿಯಂತೆ. ಅದನ್ನೆತ್ತಿಕೊಂಡು ಓಡುತಿಹರು, ಬಿಡಿಸುವರಾರೂ ಇಲ್ಲದಂತೆ.


ಮುರಿದುಬಿಡು ಹೇ ದೇವಾ, ಆ ದುರುಳರ ಹಲ್ಲುಗಳನು I ಕಿತ್ತುಬಿಡು ಪ್ರಭು, ಆ ಪ್ರಾಯಸಿಂಹಗಳ ಕೋರೆಗಳನು II


ಬೇಟೆಯಿಲ್ಲದೆ ಮೃಗರಾಜ ಸಾಯುವನು ಸಿಂಹದ ಮರಿಗಳು ಚದರಿಹೋಗುವವು.


ದಾನ್ ಕುಲ ಕುರಿತು ಮೋಶೆ ನುಡಿದದ್ದು: “ದಾನನು ಬಾಷಾನ್ ದೇಶದಿಂದ ಧಾವಿಸಿಬಂದ ಯುವಸಿಂಹನು!”


“ಇಸ್ರಯೇಲ್ ಅರಸರನ್ನು ಕುರಿತ ಈ ಶೋಕ ಗೀತೆಯನ್ನು ಹಾಡು:


ಯುವ ಸಿಂಹವಾಯಿತು ಆಕೆ ಬೆಳೆಸಿದಾ ಮರಿಯೊಂದು, ನರಭಕ್ಷಕ ಆಗಲಾರಂಭಿಸಿತದು ಬೇಟೆಯನು ಕಲಿತು.


“ನರಪುತ್ರನೇ, ನೀನು ಈಜಿಪ್ಟಿನ ಅರಸ ಫರೋಹನನ್ನು ಕುರಿತು ಶೋಕಗೀತೆಯೊಂದನ್ನು ನುಡಿ : “ನೀನು ಮೃಗರಾಜನೆನಿಸಿಕೊಂಡಿರುವೆ ಜನಾಂಗಗಳಲ್ಲಿ, ಇಗೋ ದೊಡ್ಡ ಮೊಸಳೆಯಾಗಿಬಿಟ್ಟಿರುವೆ ಮಹಾನದಿಯಲ್ಲಿ. ನೀನಿದ್ದ ನದಿಗಳ ಭೇದಿಸಿಕೊಂಡು ಬಂದು, ಕಾಲಿಂದ ನೀ ಕಲಕಿರುವೆ ಅದರ ನೀರನ್ನು, ತುಳಿದು ಬದಿಮಾಡಿರುವೆ ಜನಾಂಗವೆಂಬ ಹೊಳೆಯನ್ನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು