Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 19:9 - ಕನ್ನಡ ಸತ್ಯವೇದವು C.L. Bible (BSI)

9 ಒಯ್ದವು ಅದನ್ನು ಬಾಬಿಲೋನಿನ ಅರಸನ ಬಳಿಗೆ ಬಿಗಿದು ಸರಪಣಿ, ಹಾಕಿ ಪಂಜರದೊಳಗೆ. ಅದರ ಗರ್ಜನೆ ಇಸ್ರಯೇಲಿನ ಗಿರಿಗಳಿಗೆ ಕೇಳಿಸದಂತೆ, ಸೇರಿಸಿಬಿಟ್ಟವು ಅದನ್ನು ಸುಭದ್ರ ಕೋಟೆಯೊಳಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅದನ್ನು ಸರಪಣಿಗಳಿಂದ ಬಿಗಿದು, ಪಂಜರದಲ್ಲಿ ಹಾಕಿ, ಬಾಬೆಲಿನ ಅರಸನ ಬಳಿಗೆ ತಂದವು. ಅದರ ಧ್ವನಿಯು ಇಸ್ರಾಯೇಲಿನ ಪರ್ವತಗಳಲ್ಲಿ ಇನ್ನು ಕೇಳಿಸದಂತೆ ಅದನ್ನು ಕೋಟೆಯೊಳಗೆ ಸೇರಿಸಿ ಬಿಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅವು ಅದನ್ನು ಸರಪಣಿಗಳಿಂದ ಬಿಗಿದು ಪಂಜರದಲ್ಲಿ ಹಾಕಿ ಬಾಬೆಲಿನ ಅರಸನ ಬಳಿಗೆ ತಂದವು. ಅದರ ಧ್ವನಿಯು ಇಸ್ರಾಯೇಲಿನ ಪರ್ವತಗಳಲ್ಲಿ ಇನ್ನು ಕೇಳಿಸದಂತೆ ಅದನ್ನು ಕೋಟೆಯೊಳಗೆ ಸೇರಿಸಿಬಿಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅವರು ಅದನ್ನು ಮರದ ಪಂಜರದಲ್ಲಿಟ್ಟು ಕೊಂಡಿಗಳನ್ನು ಹಾಕಿ, ಬಾಬಿಲೋನಿನ ರಾಜನ ಬಳಿಗೆ ಕೊಂಡೊಯ್ದರು. ಅದರ ಗರ್ಜನೆಯು ಇಸ್ರೇಲಿನ ಪರ್ವತಗಳ ಮೇಲೆ ಇನ್ನೆಂದಿಗೂ ಕೇಳದಿರಲಿ ಎಂದು ಅದನ್ನು ಅಲ್ಲಿ ಸೆರೆಮನೆಗೆ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅದಕ್ಕೆ ಸಂಕೋಲೆಗಳನ್ನು ತೊಡಿಸಿ, ಪಂಜರದಲ್ಲಿ ಹಾಕಿ, ಬಾಬಿಲೋನಿನ ಅರಸನ ಬಳಿಗೆ ತೆಗೆದುಕೊಂಡು ಹೋದರು. ಅದರ ಶಬ್ದವು ಇನ್ನು ಮೇಲೆ ಇಸ್ರಾಯೇಲಿನ ಪರ್ವತಗಳ ಮೇಲೆ ಕೇಳಿಸದಂತೆ ಅದನ್ನು ಕೋಟೆಯೊಳಗೆ ಸೇರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 19:9
11 ತಿಳಿವುಗಳ ಹೋಲಿಕೆ  

ಬಾಬಿಲೋನಿನ ರಾಜ ನೆಬೂಕದ್ನೆಚ್ಚರನು ಅವನ ಮೇಲೆ ಯುದ್ಧಕ್ಕೆ ಬಂದು ಬಾಬಿಲೋನಿಗೆ ಕೊಂಡೊಯ್ಯುವುದಕ್ಕಾಗಿ ಅವನಿಗೆ ಬೇಡಿಹಾಕಿದನು.


“ನರಪುತ್ರನೇ, ಇಸ್ರಯೇಲಿನ ಬೆಟ್ಟಗಳಿಗೆ ಅಭಿಮುಖನಾಗಿ ನಿಂತು ಅವುಗಳನ್ನು ಕುರಿತು ಈ ದೈವೋಕ್ತಿಯನ್ನು ನುಡಿ,


“ನರಪುತ್ರನೇ, ನೀನು ಇಸ್ರಯೇಲಿನ ಪರ್ವತಗಳಿಗೆ ಈ ದೈವೋಕ್ತಿಯನ್ನು ನುಡಿ: ಇಸ್ರಯೇಲಿನ ಪರ್ವತಗಳೇ, ಸರ್ವೇಶ್ವರನ ಈ ವಾಕ್ಯವನ್ನು ಕೇಳಿರಿ:


ನೆಲಸಮ ಮಾಡಿತು ಪಟ್ಟಣಗಳನೆ ನಾಶಮಾಡಿತು ಕೋಟೆಕೊತ್ತಲುಗಳನೆ ನಾಡಿಗೆ ನಾಡೇ ನಡುಗಿತು ಅದರ ಗರ್ಜನೆಗೆ.


ಅವನು ಯೆಹೋಯಾಖೀನನ್ನೂ ಅವನ ತಾಯಿ, ಹೆಂಡತಿಯರು, ಕಂಚುಕಿಗಳನ್ನೂ ನಾಡಿನ ಪ್ರಧಾನ ಪುರುಷರು ಇವರನ್ನೂ,


ನನ್ನ ವಿರುದ್ಧ ನಿನಗಿರುವ ಕ್ರೋಧ, ಗರ್ವ ತಿಳಿದಿದೆ ನನಗೆ ಎಂದೇ ಹಾಕುವೆ ದಾರ ಕಡಿವಾಣ ಮೂಗಿಗೆ, ಬಾಯಿಗೆ; ನೀ ಬಂದ ದಾರಿಯಿಂದಲೇ ಅಟ್ಟುವೆ ನಿನ್ನನ್ನು ಹಿಂದಕ್ಕೆ.”


ಫರೋಹ ನೆಕೋವನು ಇವನನ್ನು ಜೆರುಸಲೇಮಿನಲ್ಲಿ ಬಹುದಿನಗಳವರೆಗೆ ಆಳಗೊಡಲಿಲ್ಲ. ಅವನು ಹಮಾತ್ ದೇಶದ ದಿಬ್ಲಾ ಎಂಬ ಊರಲ್ಲಿ ಇವನನ್ನು ಸೆರೆಯಲ್ಲಿಟ್ಟನು. ಯೆಹೂದ್ಯರು ಅವನಿಗೆ ಮೂರು ಸಾವಿರದ ನಾಲ್ಕುನೂರು ಕಿಲೋಗ್ರಾಂ ಬೆಳ್ಳಿಯನ್ನೂ ಮೂವತ್ತನಾಲ್ಕು ಕಿಲೋಗ್ರಾಂ ಬಂಗಾರವನ್ನೂ ದಂಡ ತೆರಬೇಕಾಯಿತು.


ಆದರೆ ನಿನ್ನ ದೃಷ್ಟಿ, ನಿನ್ನ ಮನಸ್ಸು ನೆಲೆಗೊಂಡಿವೆ ದುರ್ಲಾಭದಲ್ಲಿ, ನಿರ್ದೋಷಿಯ ರಕ್ತ ಸುರಿಸುವುದರಲ್ಲಿ ದಬ್ಬಾಳಿಕೆಯಲ್ಲಿ, ಹಿಂಸಾಚಾರಗಳಲ್ಲಿ.”


ಹೌದು, ದುರ್ಬಲವಾದವುಗಳನ್ನು ನೀವು ಬಲಗೊಳಿಸಲಿಲ್ಲ, ರೋಗದವುಗಳನ್ನು ಸ್ವಸ್ಥಮಾಡಲಿಲ್ಲ, ಮುರಿದ ಅಂಗಗಳನ್ನು ಕಟ್ಟಲಿಲ್ಲ, ದಾರಿತಪ್ಪಿದವುಗಳನ್ನು ಮಂದೆಗೆ ಸೇರಿಸಲಿಲ್ಲ, ತಪ್ಪಿಸಿಕೊಂಡವುಗಳನ್ನು ಹುಡುಕಲಿಲ್ಲ; ಅವುಗಳನ್ನು ಹಿಂಸೆ, ಬಲಾತ್ಕಾರಗಳಿಂದ ಆಳುತ್ತಾ ಬಂದಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು