Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 2:1 - ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರ ನನಗೆ, “ನರಪುತ್ರನೇ, ಎದ್ದು ನಿಲ್ಲು; ನಿನ್ನ ಸಂಗಡ ಮಾತಾಡಬೇಕು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ನನಗೆ, “ನರಪುತ್ರನೇ, ಎದ್ದು ನಿಂತುಕೋ, ನಿನ್ನ ಸಂಗಡ ಮಾತನಾಡುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆತನು ನನಗೆ - ನರಪುತ್ರನೇ, ಎದ್ದು ನಿಂತುಕೋ, ನಿನ್ನ ಸಂಗಡ ಮಾತಾಡುವೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆ ಸ್ವರವು, “ನರಪುತ್ರನೇ, ಎದ್ದೇಳು ನಾನು ನಿನ್ನೊಂದಿಗೆ ಮಾತನಾಡುತ್ತೇನೆ” ಎಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರು ನನಗೆ, “ಮನುಷ್ಯಪುತ್ರನೇ, ಎದ್ದು ನಿಲ್ಲು, ನಿನ್ನ ಸಂಗಡ ಮಾತನಾಡಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 2:1
32 ತಿಳಿವುಗಳ ಹೋಲಿಕೆ  

ಆಗ ಅವನು ನನಗೆ, “ಅತಿಪ್ರಿಯ ದಾನಿಯೇಲನೇ, ನಾನು ನುಡಿಯುವ ಮಾತುಗಳನ್ನು ಗ್ರಹಿಸು. ಎದ್ದು ನಿಂತುಕೋ. ನಾನು ನಿನ್ನ ಬಳಿಗೆ ಕಳುಹಿಸಲ್ಪಟ್ಟವನು,” ಎಂದನು.


“ನರಪುತ್ರನೇ, ನೀನು ಒಂದು ಚದರ ಇಟ್ಟಿಗೆಯನ್ನು ತೆಗೆದುಕೊಂಡು ನಿನ್ನ ಮುಂದೆ ಇಟ್ಟು ಅದರಲ್ಲಿ ಪಟ್ಟಣದ ನಕ್ಷೆಯನ್ನು ಅಂದರೆ, ಜೆರುಸಲೇಮಿನ ನಕ್ಷೆಯನ್ನು ಬರೆ.


“ನರಪುತ್ರನೇ, ನಾನು ನಿನ್ನನ್ನು ಇಸ್ರಯೇಲ್ ವಂಶದವರ ಮೇಲೆ ಕಾವಲುಗಾರನನ್ನಾಗಿ ನೇಮಿಸಿದ್ದೇನೆ. ಹೀಗಿರಲು ನನ್ನ ಬಾಯಿಂದ ಹೊರಡುವ ಮಾತನ್ನು ಕೇಳಿ ನನ್ನ ಪರವಾಗಿ ಅವರನ್ನು ಎಚ್ಚರಿಸು.


“ನರಪುತ್ರನೇ, ಹರಿತವಾದ ಖಡ್ಗವನ್ನು ತೆಗೆದುಕೊಂಡು, ಕ್ಷೌರಿಕನ ಕತ್ತಿಯನ್ನಾಗಿ ಉಪಯೋಗಿಸಿ ನಿನ್ನ ತಲೆಯನ್ನೂ ಗಡ್ಡವನ್ನೂ ಬೋಳಿಸಿಬಿಡು; ತಕ್ಕಡಿಯನ್ನು ತಂದು ತೂಗಿ ಆ ಕೂದಲನ್ನು ಸರಿಯಾಗಿ ಮೂರು ಭಾಗಮಾಡು.


ಆಮೇಲೆ ಸರ್ವೇಶ್ವರ ನನಗೆ ಹೀಗೆಂದರು: “ನರಪುತ್ರನೇ, ನೀನು ಇಸ್ರಯೇಲ್ ವಂಶದವರ ಬಳಿಗೆ ಹೋಗಿ ನಾನು ತಿಳಿಸುವ ಮಾತುಗಳನ್ನು ಅವರಿಗೆ ಹೇಳು.


ಬಳಿಕ ಸರ್ವೇಶ್ವರ ನನಗೆ, “ನರಪುತ್ರನೇ, ನಿನಗೆ ಕೊಟ್ಟ ಈ ಸುರುಳಿಯನ್ನು ತಿನ್ನು; ಅನಂತರ ಇಸ್ರಯೇಲ್ ವಂಶದವರಿಗೆ ಸಾರು, ಹೋಗು,” ಎಂದು ಆಜ್ಞಾಪಿಸಿದರು.


ನೀನೆದ್ದು ಪಟ್ಟಣಕ್ಕೆ ಹೋಗು, ಏನು ಮಾಡಬೇಕೆಂದು ನಿನಗೆ ಅಲ್ಲಿ ತಿಳಿಸಲಾಗುವುದು,” ಎಂದು ಆ ವಾಣಿ ಹೇಳಿತು.


ಎದ್ದು ನಿಂತುಕೋ; ನಿನ್ನನ್ನು ನನ್ನ ದಾಸನನ್ನಾಗಿಯೂ ಸಾಕ್ಷಿಯನ್ನಾಗಿಯೂ ನೇಮಿಸಿಕೊಳ್ಳುವುದಕ್ಕಾಗಿ ನಿನಗೆ ದರ್ಶನವಿತ್ತಿದ್ದೇನೆ. ಈ ದರ್ಶನದಲ್ಲಿ ನನ್ನ ವಿಷಯವಾಗಿ ಕಂಡದ್ದನ್ನು ಮತ್ತು ಮುಂದಿನ ದರ್ಶನಗಳಲ್ಲಿ ನಾನು ನಿನಗೆ ತೋರಿಸಲಿರುವ ವಿಷಯಗಳನ್ನು ಕುರಿತು ಬೇರೆಯವರಿಗೆ ನೀನು ತಿಳಿಸಬೇಕು.


ದೇವರು ಲೋಕವನ್ನು ಎಷ್ಟಾಗಿ ಪ್ರೀತಿಸಿದರೆಂದರೆ ತಮ್ಮ ಏಕೈಕ ಪುತ್ರನನ್ನೇ ಧಾರೆಯೆರೆದರು; ಆತನಲ್ಲಿ ವಿಶ್ವಾಸವಿಟ್ಟ ಯಾರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂಬುದೇ ದೇವರ ಉದ್ದೇಶ.


ಸ್ವರ್ಗಲೋಕದಿಂದಲೇ ಇಳಿದುಬಂದ ನರಪುತ್ರನೇ ಹೊರತು ಬೇರೆ ಯಾರೂ ಸ್ವರ್ಗಕ್ಕೆ ಏರಿಹೋದವರಿಲ್ಲ.


ಆಗ ಯೇಸು ಅವರ ಹತ್ತಿರಕ್ಕೆ ಬಂದು ಅವರನ್ನು ಮುಟ್ಟಿ, “ಏಳಿ, ಭಯಪಡಬೇಡಿ,” ಎಂದರು.


ಬಳಿಕ ಆ ವ್ಯಕ್ತಿ ನನಗೆ, “ಅತಿಪ್ರಿಯನೇ, ಭಯಪಡಬೇಡ. ನಿನಗೆ ಶಾಂತಿಸಮಾಧಾನವಿರಲಿ! ಧೈರ್ಯತಂದುಕೊ! ಧೈರ್ಯತಂದುಕೊ!” ಎಂದು ಹೇಳಿದ. ಅವನ ಈ ಮಾತನ್ನು ಕೇಳಿದ ಕೂಡಲೆ ನಾನು ಧೈರ್ಯದಿಂದ, “ಎನ್ನೊಡೆಯಾ, ಮಾತಾಡು. ನನಗೆ ಧೈರ್ಯತುಂಬಿರುವೆ,” ಎಂದು ಅರಿಕೆಮಾಡಿದೆ.


ಅದರಂತೆ ಅವನು ನನ್ನ ಹತ್ತಿರಕ್ಕೆ ಬಂದನು. ನಾನು ಭಯಭ್ರಾಂತನಾಗಿ ಅಡ್ಡಬಿದ್ದೆ. ನನಗೆ ಅವನು, “ನರಪುತ್ರನೇ, ಇದು ಅಂತ್ಯಕಾಲದಲ್ಲಿ ನೆರವೇರುವ ಕನಸು ಎಂಬುದು ನಿನಗೆ ಮನದಟ್ಟಾಗಿರಲಿ;” ಎಂದು ಹೇಳಿದನು.


ಸರ್ವೇಶ್ವರ ನನ್ನನ್ನು - “ನರಪುತ್ರನೇ, ಈ ಎಲುಬುಗಳಿಗೆ ಜೀವ ಬರಬಹುದೇ?” ಎಂದು ಕೇಳಿದರು. ನಾನು “ಸರ್ವೇಶ್ವರರಾದ ದೇವರೇ, ನೀವೇ ಬಲ್ಲಿರಿ,” ಎಂದು ಉತ್ತರಕೊಟ್ಟೆ.


“ನರಪುತ್ರನೇ, ಇಸ್ರಯೇಲಿನ ಹಿರಿಯರನ್ನು ಸಂಬೋಧಿಸಿ ಹೀಗೆ ಹೇಳು - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನನ್ನನ್ನು ಪ್ರಶ್ನೆಕೇಳುವುದಕ್ಕೆ ಬಂದಿರೋ? ನನ್ನ ಜೀವದಾಣೆ ನಾನು ನಿಮಗೆ ಉತ್ತರ ಕೊಡುವುದೇ ಇಲ್ಲ; ಇದು ಸರ್ವೇಶ್ವರನಾದ ದೇವರ ನುಡಿ.


“ನರಪುತ್ರನೇ, ನೀನು ಇಸ್ರಯೇಲ್ ವಂಶದವರಿಗೆ ಈ ಸಾಮತಿಯನ್ನು ಒಗಟಾಗಿ ಹೇಳು -


“ನರಪುತ್ರನೇ, ನೀನು ಜೆರುಸಲೇಮಿಗೆ ಅದರ ಅಸಹ್ಯಕಾರ್ಯಗಳನ್ನು ತಿಳಿಯಪಡಿಸಿ ಹೀಗೆ ನುಡಿ -


“ನರಪುತ್ರನೇ, ವನವೃಕ್ಷಗಳಲ್ಲಿ ದ್ರಾಕ್ಷಾವೃಕ್ಷದ ವಿಶಿಷ್ಟತೆಯೇನು? ಕಾಡುಗಿಡಗಳ ಕಟ್ಟಿಗೆಗಿಂತ ದ್ರಾಕ್ಷಿಯ ಕಟ್ಟಿಗೆಯಲಿ ಹೆಚ್ಚಾದುದೇನು?


“ನರಪುತ್ರನೇ, ಒಂದು ನಾಡು ಅಪರಾಧವನ್ನು ನಡೆಸಿ ನನಗೆ ವಿರುದ್ಧ ಪಾಪಮಾಡಿದ ಮೇಲೆ ನಾನು ಕೈಯೆತ್ತಿ, ಅದರ ಜೀವನಾಧಾರವನ್ನು ನಿಲ್ಲಿಸಿಬಿಟ್ಟು, ಕ್ಷಾಮವನ್ನು ಬರಮಾಡಿ, ಜನ ಹಾಗೂ ಜಾನುವಾರುಗಳನ್ನು ಅದರಿಂದ ನಿರ್ಮೂಲಮಾಡುತ್ತೇನೆ.


“ನರಪುತ್ರನೇ, ಈ ಜನರು ವಿಗ್ರಹಗಳನ್ನು, ತಮ್ಮ ಹೃದಯದಲ್ಲಿ ನೆಲೆಗೊಳಿಸಿಕೊಂಡಿದ್ದಾರೆ. ಪಾಪಕಾರಿಯಾದ ಈ ವಿಘ್ನವನ್ನು ತಮ್ಮ ಮುಂದೆಯೇ ಇಟ್ಟುಕೊಂಡಿದ್ದಾರೆ; ಇಂಥವರಿಗೆ ನಾನು ದೈವೋತ್ತರವನ್ನು ದಯಪಾಲಿಸುವುದು ಸರಿಯೆ? ಎಂದಿಗೂ ಅಲ್ಲ.


“ನರಪುತ್ರನೇ, ಪ್ರವಾದನೆ ಮಾಡಿ ಸ್ವಕಲ್ಪಿತವಾದುದನ್ನೇ ಸಾರುತ್ತಲಿರುವ ಇಸ್ರಯೇಲಿನ ಪ್ರವಾದಿಗಳಿಗೆ ಖಂಡನೆಯಾಗಿ ನೀನು ಪ್ರವಾದಿಸುತ್ತ ಹೀಗೆ ಹೇಳು: “ಸರ್ವೇಶ್ವರನ ವಾಕ್ಯವನ್ನು ಕೇಳಿರಿ, ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ:


“ನರಪುತ್ರನೇ, ವಲಸೆಹೋಗುವುದಕ್ಕೆ ಬೇಕಾದ ಸಾಮಗ್ರಿಗಳನ್ನು ನೀನು ಕೂಡಿಸಿಕೊಂಡು ಹಗಲಿನಲ್ಲಿ ಅವರ ಕಣ್ಣೆದುರಿಗೇ ಹೊರಡು. ಅಂದರೆ, ನಿನ್ನ ವಾಸಸ್ಥಳವನ್ನು ಬಿಟ್ಟು ಅವರು ನೋಡುವ ಹಾಗೆ ಬೇರೊಂದು ಸ್ಥಳಕ್ಕೆ ಹೋಗು: ಅವರು ದ್ರೋಹಿವಂಶದವರಾಗಿದ್ದರೂ ಒಂದು ವೇಳೆ ತಮ್ಮ ದ್ರೋಹವನ್ನು ಮನಸ್ಸಿಗೆ ತಂದುಕೊಳ್ಳಬಹುದು.


“ನರಪುತ್ರನೇ, ಸರ್ವೇಶ್ವರನಾದ ದೇವರು ಇಸ್ರಯೇಲ್ ನಾಡಿಗೆ ಹೀಗೆ ನುಡಿಯುತ್ತಾರೆ: ‘ಪ್ರಳಯ, ಪೂರ್ಣಪ್ರಳಯ ನಾಡಿನ ಚತುರ್ದಿಕ್ಕಿನಲ್ಲೂ ಸಂಭವಿಸಿದೆ.’


ಇದಲ್ಲದೆ ಸರ್ವೇಶ್ವರ ನನಗೆ ಹೀಗೆ ಹೇಳಿದರು: “ನರಪುತ್ರನೇ, ನಾನು ನಿನಗೆ ನುಡಿಯುವ, ಮಾತುಗಳನ್ನೆಲ್ಲಾ ಕಿವಿಯಿಂದ ಕೇಳಿ ಮನಸ್ಸಿನಲ್ಲಿಟ್ಟುಕೋ.


“ನರಪುತ್ರನೇ, ನಾನು ನಿನಗೆ ನುಡಿಯುವ ಮಾತನ್ನು ಕೇಳು: ಅವಿಧೇಯರಾದ ಆ ವಂಶದವರಂತೆ ನೀನು ಅವಿಧೇಯನಾಗಬೇಡ; ನಾನು ಕೊಡುವುದನ್ನು ಬಾಯಿತೆರೆದು ತಿಂದುಬಿಡು,” ಎಂದರು.


“ನರಪುತ್ರನೇ, ನೀನು ಮುಳ್ಳುಪೊದೆಗಳಲ್ಲಿ ಸಿಕ್ಕಿಕೊಂಡು ಚೇಳುಗಳ ನಡುವೆ ವಾಸಿಸುವಂತೆ ಅವರ ಮಧ್ಯೆ ಇದ್ದರೂ ಅವರಿಗೆ ಭಯಪಡಬೇಡ. ಅವರ ಗದರಿಕೆಗೆ ಹೆದರದಿರು; ಅವರು ದ್ರೋಹಿ ವಂಶದವರು; ಅವರ ಬಿರುನುಡಿಗೆ ದಿಗಿಲು ಪಡಬೇಡ, ಅವರ ಬಿರುನೋಟಕ್ಕೆ ಬೆಚ್ಚದಿರು.


ಇಂತಿರಲು, ಮನುಜನು ಎಷ್ಟರವನು ನೀನವನನು ಲಕ್ಷಿಸಲು? I ಏತರದವನು ನರಮಾನವನು ನೀನವನನು ಪರಾಮರಿಸಲು? II


ಅವರು ನನಗೆ ಹೀಗೆ ಹೇಳಿದರು, “ನರಪುತ್ರನೇ, ನನಗೆ ವಿಮುಖರಾಗಿ ದ್ರೋಹಮಾಡಿದ ಜನಾಂಗದವರಾದ ಇಸ್ರಯೇಲರ ಬಳಿಗೆ ನಿನ್ನನ್ನು ಕಳುಹಿಸುವೆನು; ಈ ದಿನದವರೆಗೆ ಅವರೂ ಅವರ ಪಿತೃಗಳೂ ನನ್ನನ್ನು ಪ್ರತಿಭಟಿಸುತ್ತಲೇ ಬಂದಿದ್ದಾರೆ.


ಮಳೆಗಾಲದಲ್ಲಿ ಮೇಘಮಂಡಲದೊಳಗೆ ಕಾಮನ ಬಿಲ್ಲು ಹೊಳೆಯುವಂತೆ ಆತನ ಸುತ್ತಲು ಪ್ರಕಾಶ ಹೊಳೆಯುತ್ತಿತ್ತು. ಹೀಗೆ ಸರ್ವೇಶ್ವರನ ಮಹಿಮಾದ್ಭುತ ದರ್ಶನವು ಆಯಿತು. ಇದನ್ನು ಕಂಡು ನಾನು ಅಡ್ಡಬಿದ್ದೆ; ಮಾತಾಡುವಾತನ ವಾಣಿಯನ್ನು ಕೇಳಿದೆ.


ಆ ಪುರುಷ ನನಗೆ, “ನರಪುತ್ರನೇ, ನೀನು ಕಣ್ಣಿಟ್ಟು ನೋಡು, ಕಿವಿಗೊಟ್ಟು ಕೇಳು; ನಾನು ನಿನಗೆ ತೋರಿಸುವುದನ್ನೆಲ್ಲಾ ಮನಸ್ಸಿಟ್ಟು ತಿಳಿದುಕೋ; ನಾನು ನಿನಗೆ ತೋರಿಸುವುದನ್ನು ನೀನು ನೋಡಬೇಕೆಂದೇ ನಿನ್ನನ್ನು ಇಲ್ಲಿಗೆ ತರಲಾಗಿದೆ; ನೀನು ನೋಡುವುದನ್ನೆಲ್ಲ ಇಸ್ರಯೇಲ್ ವಂಶದವರಿಗೆ ಪ್ರಕಟಿಸು,” ಎಂದು ಹೇಳಿದನು.


ಆಗ ಆ ಪುರುಷ ನನಗೆ ಹೀಗೆ ಹೇಳಿದನು: “ನರಪುತ್ರನೇ, ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ದಹನಬಲಿಗೂ, ರಕ್ತವೆರಚುವ ಸಂಸ್ಕಾರಕ್ಕೂ ಬಲಿಪೀಠವನ್ನು ನಿರ್ಮಿಸುವಾಗ ಈ ವಿಧಿಗಳನ್ನು ಕೈಗೊಳ್ಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು