Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 2:2 - ಕನ್ನಡ ಸತ್ಯವೇದವು C.L. Bible (BSI)

2 ಅವರು ಈ ಮಾತನ್ನು ಹೇಳಿದ ಕೂಡಲೆ ದೇವರಾತ್ಮ ನನ್ನೊಳಗೆ ಸೇರಿ ನಾನು ಎದ್ದು ನಿಂತುಕೊಳ್ಳುವಂತೆ ಮಾಡಿತು; ಆಗ ನನ್ನೊಡನೆ ಮಾತಾಡಿದಾತನ ನುಡಿಯನ್ನು ಚೆನ್ನಾಗಿ ಕೇಳಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆತನು ಈ ಮಾತನ್ನು ಹೇಳುವಾಗ ದೇವರಾತ್ಮವು ನನ್ನೊಳಗೆ ಪ್ರವೇಶಿಸಿ, ನಾನು ಎದ್ದು ನಿಂತುಕೊಳ್ಳುವಂತೆ ಮಾಡಿತು; ಆಗ ನನ್ನೊಡನೆ ಮಾತನಾಡಿದಾತನ ನುಡಿಯನ್ನು ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆತನು ಈ ಮಾತನ್ನು ಹೇಳಿದ ಕೂಡಲೆ ದೇವರಾತ್ಮವು ನನ್ನೊಳಗೆ ಸೇರಿ ನಾನು ಎದ್ದುನಿಂತುಕೊಳ್ಳುವಂತೆ ಮಾಡಿತು; ಆಗ ನನ್ನೊಡನೆ ಮಾತಾಡಿದಾತನ ನುಡಿಯನ್ನು ಚೆನ್ನಾಗಿ ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆತನು ನನ್ನೊಂದಿಗೆ ಮಾತನಾಡುತ್ತಿರಲು, ಆತ್ಮವು ನನ್ನೊಳಗೆ ಪ್ರವೇಶಿಸಿ, ನಾನು ಕಾಲೂರಿ ನಿಂತುಕೊಳ್ಳುವಂತೆ ಮಾಡಿತು. ಆತನು ನನ್ನೊಂದಿಗೆ ಮಾತಾಡುವುದು ನನಗೆ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಹೀಗೆ ಅವರು ನನ್ನ ಸಂಗಡ ಮಾತನಾಡುವಾಗ, ದೇವರಾತ್ಮರು ನನ್ನೊಳಗೆ ಪ್ರವೇಶಿಸಿ, ನನ್ನನ್ನು ನಿಂತುಕೊಳ್ಳುವಂತೆ ಮಾಡಿದರು. ಆಗ ಅವರು ನನ್ನೊಂದಿಗೆ ಮಾತನಾಡುವುದನ್ನು ಚೆನ್ನಾಗಿ ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 2:2
13 ತಿಳಿವುಗಳ ಹೋಲಿಕೆ  

ದೇವರಾತ್ಮ ನನ್ನೊಳಗೆ ಹೊಕ್ಕು ನಾನು ಎದ್ದು ನಿಂತುಕೊಳ್ಳುವಂತೆ ಮಾಡಿತು. ಆಮೇಲೆ ಅವರು ನನಗೆ ಹೀಗೆ ಹೇಳಿದರು: ನೀನು ಹೋಗಿ ನಿನ್ನ ಮನೆಯೊಳಗೆ ಅಡಗಿಕೋ.


ಆಮೇಲೆ ದೇವರಾತ್ಮ ನನ್ನನ್ನು ಎತ್ತಿಕೊಂಡುಹೋಯಿತು. “ಮಹಿಮಾಭರಿತ ಸರ್ವೇಶ್ವರ ಸ್ವಾಮಿಗೆ ಆತನಾಲಯದಲ್ಲಿ ಸ್ತೋತ್ರ; ಸ್ತೋತ್ರ;” ಎಂಬ ಮಹಾಶಬ್ದ ನನ್ನ ಹಿಂದೆ ಭರಭರನೆ ಕೇಳಿಸಿತು.


ಮೂರುವರೆ ದಿನಗಳಾದ ಮೇಲೆ ದೇವರಿಂದ ಜೀವದಾಯಕ ಉಸಿರು ಬಂದು ಆ ಶವಗಳನ್ನು ಹೊಕ್ಕಾಗ ಅವರು ಎದ್ದುನಿಂತರು. ಇದನ್ನು ಕಂಡವರೆಲ್ಲರೂ ಭಯದಿಂದ ನಡುಗಿದರು.


ಅವನು ನನ್ನೊಡನೆ ಮಾತಾಡುತ್ತಿರುವಾಗ ನಾನು ಮೈಮರೆತು ಅಧೋಮುಖವಾಗಿ ಬಿದ್ದಿದ್ದೆ. ಆಗ ಅವನು ನನ್ನನ್ನು ಮುಟ್ಟಿ, ನಿಲ್ಲಿಸಿ ನನಗೆ:


ನನ್ನ ಆತ್ಮವನ್ನು ನಿಮ್ಮಲ್ಲಿ ನೆಲೆಸಿರುವಂತೆ ಅನುಗ್ರಹಿಸಿ, ನೀವು ನನ್ನ ನಿಯಮಗಳನ್ನು ಅನುಸರಿಸುವ ಹಾಗೆ ಮಾಡುವೆನು. ನೀವು ನನ್ನ ವಿಧಿಗಳನ್ನು ಕೈಗೊಂಡು ಆಚರಿಸುವಿರಿ.


ದೇವರಾತ್ಮ ನನ್ನನ್ನು ಎತ್ತಿಕೊಂಡುಹೋಯಿತು. ಸರ್ವೇಶ್ವರನ ಹಸ್ತಸ್ಪರ್ಶದಿಂದ ನಾನು ಅತಿ ಪರವಶನಾಗಿದ್ದು ವ್ಯಥೆಗೊಳ್ಳುತ್ತಾ ಮನಸ್ತಾಪಪಡುತ್ತಾ ಮುನ್ನಡೆದೆ.


ತಾಳಿಕೊಂಡಿರಿ ಅವರನು ನೀವೆಷ್ಟೋ ವರ್ಷಗಳ ತನಕ ಎಚ್ಚರಿಸಿದಿರಿ ನಿಮ್ಮಾತ್ಮ ಪ್ರೇರಣೆಯಿಂದ, ಪ್ರವಾದಿಗಳ ಮೂಲಕ ಕಿವಿಗೊಡದಾ ಜನರನು ಹೊರದೂಡಿದಿರಿ ಅನ್ಯದೇಶದ ಪರಿಯಂತ.


ಸಮುವೇಲನು ಎಣ್ಣೆಯ ಕೊಂಬನ್ನು ತೆಗೆದುಕೊಂಡು ಅವನನ್ನು ಅವನ ಸಹೋದರರ ಮಧ್ಯದಲ್ಲಿ ಅಭಿಷೇಕಿಸಿದನು. ಕೂಡಲೆ ಸರ್ವೇಶ್ವರನ ಆತ್ಮವು ದಾವೀದನ ಮೇಲೆ ಬಂದು ನೆಲೆಗೊಂಡಿತು. ಅನಂತರ ಸಮುವೇಲನು ರಾಮಾಕ್ಕೆ ಹೊರಟುಹೋದನು.


ಇದಲ್ಲದೆ, ಅವನು ಚೊರ್ಗಕ್ಕೂ ಎಷ್ಟಾವೋಲಿಗೂ ಮಧ್ಯದಲ್ಲಿರುವ ದಾನ್ ಕುಲದ ಪಾಳೆಯದಲ್ಲಿದ್ದಾಗ ಸರ್ವೇಶ್ವರನ ಆತ್ಮ ಅವನನ್ನು ಚೇತನಗೊಳಿಸತೊಡಗಿತು.


ಆಗ ಸರ್ವೇಶ್ವರನ ಆತ್ಮ ನನ್ನಲ್ಲಿ ಆವೇಶ ಉಂಟುಮಾಡಿತು. ಹೀಗೆ ಸಾರಬೇಕೆಂದು ಅಪ್ಪಣೆ ಆಯಿತು: ಸರ್ವೇಶ್ವರ ಇಂತೆನ್ನುತ್ತಾರೆ: “ಇಸ್ರಯೇಲ್ ವಂಶದವರೇ, ನೀವು ಹೀಗೆ ಮಾತಾಡುತ್ತಿದ್ದೀರಿ, ಸರಿ; ನಿಮ್ಮ ಮನಸ್ಸಿನಲ್ಲಿ ಹುಟ್ಟಿರುವ ಆಲೋಚನೆಗಳು ನನಗೆ ಗೊತ್ತೇ ಇವೆ.


ಈ ದ್ರೋಹಿವಂಶಕ್ಕೆ ದೃಷ್ಟಾಂತಕೊಟ್ಟು ಹೀಗೆ ಹೇಳು - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಹಂಡೆಯನ್ನು ಒಲೆಯ ಮೇಲಿಡು, ಮೇಲಿಡು, ಅದರಲ್ಲಿ ನೀರನ್ನು ಹೊಯ್ಯಿಸು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು