Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 2:6 - ಕನ್ನಡ ಸತ್ಯವೇದವು C.L. Bible (BSI)

6 “ನರಪುತ್ರನೇ, ನೀನು ಮುಳ್ಳುಪೊದೆಗಳಲ್ಲಿ ಸಿಕ್ಕಿಕೊಂಡು ಚೇಳುಗಳ ನಡುವೆ ವಾಸಿಸುವಂತೆ ಅವರ ಮಧ್ಯೆ ಇದ್ದರೂ ಅವರಿಗೆ ಭಯಪಡಬೇಡ. ಅವರ ಗದರಿಕೆಗೆ ಹೆದರದಿರು; ಅವರು ದ್ರೋಹಿ ವಂಶದವರು; ಅವರ ಬಿರುನುಡಿಗೆ ದಿಗಿಲು ಪಡಬೇಡ, ಅವರ ಬಿರುನೋಟಕ್ಕೆ ಬೆಚ್ಚದಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 “ನರಪುತ್ರನೇ, ನೀನು ಮುಳ್ಳುಪೊದೆಗಳಲ್ಲಿ ಸಿಕ್ಕಿಕೊಂಡು, ಚೇಳುಗಳ ನಡುವೆ ವಾಸಿಸುವಂತೆ ಅವರ ಮಧ್ಯದಲ್ಲಿದ್ದರೂ ಅವರಿಗೆ ಭಯಪಡಬೇಡ, ಅವರ ಗದರಿಕೆಗೆ ಹೆದರದಿರು; ಅವರು ತಿರುಗಿ ಬೀಳುವ ವಂಶದವರು; ಅವರ ಬಿರುನುಡಿಗೆ ಭಯಪಡಬೇಡ, ಅವರ ಬಿರುನೋಟಕ್ಕೆ ಹೆದರದಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನರಪುತ್ರನೇ, ನೀನು ಮುಳ್ಳುಕೊಂಪೆಗಲಿಗೆ ಸಿಕ್ಕಿಕೊಂಡು ಚೇಳುಗಳ ನಡುವೆ ವಾಸಿಸುವಂತೆ ಅವರ ಮಧ್ಯದಲ್ಲಿದ್ದರೂ ಅವರಿಗೆ ಭಯಪಡಬೇಡ, ಅವರ ಗದರಿಕೆಗೆ ಹೆದರದಿರು; ಅವರು ದ್ರೋಹಿವಂಶದವರು; ಅವರ ಬಿರುನುಡಿಗೆ ದಿಗಿಲುಪಡಬೇಡ, ಅವರ ಬಿರುನೋಟಕ್ಕೆ ಬೆಚ್ಚದಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ನರಪುತ್ರನೇ, ಆ ಜನರು ನಿನ್ನನ್ನು ವಿರೋಧಿಸಿದರೂ ನೀನು ಅವರಿಗೆ ಭಯಪಡಬೇಡ ಮತ್ತು ಅವರು ಹೇಳುವ ಮಾತುಗಳಿಗೆ ನೀನು ಹೆದರಬೇಡ. ಮುಳ್ಳುಗಳೂ ಮುಳ್ಳುಪೊದೆಗಳೂ ನಿನಗೆ ಒತ್ತುವಂತೆಯೂ ನೀನು ಚೇಳುಗಳ ಮೇಲೆ ಕುಳಿತುಕೊಂಡಿರುವಂತೆಯೂ ಅದು ಇರುವದು. ಆದರೆ ಅವರಾಡುವ ಮಾತುಗಳಿಗೆ ಭಯಪಡಬೇಡ. ಅವರು ದಂಗೆಕೋರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಮನುಷ್ಯಪುತ್ರನೇ, ನೀನು ಮುಳ್ಳುಪೊದೆಗಳಲ್ಲಿ ಸಿಕ್ಕಿಕೊಂಡು, ಚೇಳುಗಳ ನಡುವೆ ವಾಸಿಸುವಂತೆ ಅವರ ಮಧ್ಯೆ ಇದ್ದರೂ, ಅವರಿಗೆ ಭಯಪಡಬೇಡ. ಅವರ ಗದರಿಕೆಗೆ ಹೆದರದಿರು. ಅವರು ದ್ರೋಹಿ ವಂಶದವರು. ಅವರ ಬಿರುನುಡಿಗೆ ದಿಗಿಲು ಪಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 2:6
31 ತಿಳಿವುಗಳ ಹೋಲಿಕೆ  

ಅವರಿಗೆ ಅಂಜಬೇಡ; ನಿನ್ನನ್ನು ಕಾಪಾಡಲು ನಾನೇ ನಿನ್ನೊಂದಿಗೆ ಇರುತ್ತೇನೆ; ಇದು ಸರ್ವೇಶ್ವರನಾದ ನನ್ನ ಮಾತು,” ಎಂದು ಹೇಳಿದರು.


“ನಾನೆ, ನಾನೆ ನಿನ್ನನು ಸಂತೈಸುವವನಾಗಿರೆ, ನೀ ಭಯಪಡುವುದೇಕೆ ಮರ್ತ್ಯನಾದ ಮಾನವನಿಗೆ? ನೀ ಹೆದರಿ ನಡುಗುವುದೇಕೆ ಹುಲುಮಾನವನಿಗೆ?


ನ್ಯಾಯನೀತಿಯ ನಿಮಿತ್ತ ಹಿಂಸೆಯನ್ನು ಅನುಭವಿಸಬೇಕಾಗಿ ಬಂದರೂ ನೀವು ಭಾಗ್ಯವಂತರು. ಮಾನವರ ಬೆದರಿಕೆಗೆ ಹೆದರಬೇಡಿ, ಕಳವಳ ಪಡಬೇಡಿ.


ದೇವರು ನಮಗೆ ಪ್ರದಾನಮಾಡಿರುವ ಪವಿತ್ರಾತ್ಮ ನಮ್ಮನ್ನು ಹೇಡಿಗಳನ್ನಾಗಿ ಮಾಡುವುದಿಲ್ಲ; ನಮ್ಮಲ್ಲಿ ದೈವೀಶಕ್ತಿ, ಪ್ರೀತಿ ಹಾಗೂ ಸಂಯಮಗಳು ಪ್ರವರ್ಧಿಸುವಂತೆ ಮಾಡುತ್ತಾರೆ.


ಇಗೋ, ಸರ್ಪಗಳನ್ನು ಹಾಗೂ ಚೇಳುಗಳನ್ನು ತುಳಿಯುವುದಕ್ಕೂ ಶತ್ರುವಿನ ಸಮಸ್ತ ಶಕ್ತಿಯನ್ನು ಜಯಿಸುವುದಕ್ಕೂ ನಿಮಗೆ ಅಧಿಕಾರ ಕೊಟ್ಟಿದ್ದೇನೆ. ಯಾವುದೂ ನಿಮಗೆ ಹಾನಿಮಾಡದು.


ಅವರಲ್ಲಿ ಅತ್ಯುತ್ತಮನಾದವನೂ ಮುಳ್ಳಿನ ಪೊದೆಗೆ ಸಮಾನ. ಸತ್ಯವಂತನೂ ಮುಳ್ಳುಬೇಲಿಗಿಂತ ಕಡೆ. ಜನರ ದಂಡನೆಯ ದಿನ ಸಮೀಪಿಸಿದೆ. ಅವರ ಕಾವಲುಗಾರರಾದ ಪ್ರವಾದಿಗಳು ಮುಂತಿಳಿಸಿದ ಕಾಲ ಬಂದಿದೆ. ಜನರೆಲ್ಲರು ದಿಗ್ಭ್ರಾಂತರಾಗುವರು.


ನೀನು ಎದ್ದು ನಡುಕಟ್ಟಿಕೊ, ನಾನು ಆಜ್ಞಾಪಿಸುವುದನ್ನೆಲ್ಲ ಅವರಿಗೆ ತಿಳಿಸು, ಅವರಿಗೆ ಹೆದರಬೇಡ; ಹೆದರಿದರೆ ನಾನೂ ನಿನ್ನನ್ನು ಅವರ ಮುಂದೆ ಹೆದರಿಸುವೆನು.


ದೇಹವನ್ನು ಕೊಂದು ಹಾಕುವವರಿಗೆ ಭಯಪಡಬೇಡಿ; ಏಕೆಂದರೆ, ಅವರಿಂದ ಆತ್ಮವನ್ನು ಕೊಲ್ಲಲು ಆಗದು. ಆದರೆ ದೇಹಾತ್ಮಗಳೆರಡನ್ನೂ ನರಕದಲ್ಲಿ ನಾಶಮಾಡಬಲ್ಲ ದೇವರಿಗೆ ಭಯಪಡಿ.


ನಾನಾದರೋ ಸರ್ವೇಶ್ವರಸ್ವಾಮಿಯ ಆತ್ಮಪ್ರೇರಣೆಯಿಂದ, ಅವರ ಬಲಪರಾಕ್ರಮದಿಂದ, ನ್ಯಾಯನೀತಿಯಿಂದ ತುಂಬಿದವನು. ಯಕೋಬ ವಂಶಕ್ಕೆ ಅದರ ದ್ರೋಹವನ್ನು, ಇಸ್ರಯೇಲ್ ವಂಶಕ್ಕೆ ಅದರ ಪಾಪವನ್ನು ಪ್ರಕಟಿಸಲು ಸಮರ್ಥನು.


ಆಗ ಜನರು, “ಬನ್ನಿ, ಈ ಯೆರೆಮೀಯನ ವಿರುದ್ಧ ಒಳಸಂಚುಮಾಡೋಣ. ಧರ್ಮೋಪದೇಶಕ್ಕೆ ಯಾಜಕರಿದ್ದಾರೆ. ಮಂತ್ರಾಲೋಚನೆಗೆ ಜ್ಞಾನಿಗಳಿದ್ದಾರೆ. ದೈವೋಕ್ತಿಗೆ ಪ್ರವಾದಿಯ ಕೊರತೆ ಎಂದಿಗೂ ಇಲ್ಲ. ಬನ್ನಿ, ಇವನ ಬಾಯಿ ಬಡಿಯೋಣ. ಇವನ ಯಾವ ಮಾತಿಗೂ ನಾವು ಕಿವಿಗೊಡಬೇಕಾಗಿಲ್ಲ,” ಎಂದುಕೊಂಡರು.


ಪ್ರಭುವೇ, ಇಗೋ, ಇವರು ನಮ್ಮನ್ನು ಬೆದರಿಸುತ್ತಿದ್ದಾರೆ; ನಿಮ್ಮ ಸಂದೇಶವನ್ನು ಧೈರ್ಯವಾಗಿ ಸಾರಲು ಶರಣರಾದ ನಮಗೆ ನೆರವು ನೀಡಿರಿ.


ದುಷ್ಟತನ ಬೆಂಕಿಗೆ ಸಮಾನ. ಅದು ಮುಳ್ಳುಗಿಳ್ಳುಗಳನ್ನು ಸುಟ್ಟುಹಾಕುತ್ತದೆ. ಕಾಡುಪೊದೆಗಳನ್ನು ಭಸ್ಮಮಾಡುತ್ತದೆ. ಹೊಗೆಯಾಡುತ್ತಾ ಮುಗಿಲಂತೆ ಮೇಲೆ ಬೀಳುತ್ತದೆ.


ವಿಶ್ವಾಸವಿದ್ದುದರಿಂದಲೇ ಆತನು ಅರಸನ ಕಡುಕೋಪಕ್ಕೂ ಅಂಜದೆ ಈಜಿಪ್ಟ್ ದೇಶವನ್ನು ಬಿಟ್ಟುಬಂದನು. ಕಣ್ಣಿಗೆ ಕಾಣದ ದೇವರನ್ನು ಕಣ್ಣಾರೆ ಕಾಣುತ್ತಿರುವನೋ ಎನ್ನುವಷ್ಟು ದೃಢಚಿತ್ತನಾಗಿ ಅವನು ಮುನ್ನಡೆದನು.


ಇಸ್ರಯೇಲ್ ವಂಶದವರಿಗೆ ಚುಚ್ಚುವ ಮುಳ್ಳು ಇನ್ನಿರದು; ಹೀನೈಸುವ ನೆರೆಹೊರೆಯವರೆಂಬ ಕಂಟಕದ ಬಾಧೆ ಇನ್ನಾಗದು; ನಾನೇ ಸರ್ವೇಶ್ವರನಾದ ದೇವರು ಎಂದು ಅವರಿಗೆ ವ್ಯಕ್ತವಾಗುವುದು.”


ಆಗ ಸರ್ವೇಶ್ವರನ ದೂತನು ಎಲೀಯನಿಗೆ, “ನೀನು ಇವನ ಸಂಗಡ ಹೋಗು; ಹೆದರಬೇಡ,” ಎಂದು ಹೇಳಿದನು. ಆದ್ದರಿಂದ ಎಲೀಯನು ಎದ್ದು ಇವನ ಜೊತೆಯಲ್ಲೇ ಅರಸನ ಬಳಿಗೆ ಹೋದನು.


ನಿಮ್ಮ ವಿರೋಧಿಗಳಿಗೆ ಯಾವ ವಿಷಯದಲ್ಲೂ ಅಂಜದೆ, ಅಳುಕದೆ ಧೈರ್ಯದಿಂದಿರಿ. ಇದೇ ಅವರಿಗೆ ಅವರ ವಿನಾಶದ ಸ್ಪಷ್ಟ ಮುನ್ಸೂಚನೆ! ನಿಮಗೆ ದೇವರಿಂದ ಬರುವ ಸಂರಕ್ಷಣೆಯ ಮುನ್ಸೂಚನೆ.


ಶುಭಸಂದೇಶದ ಸತ್ಯಾರ್ಥವನ್ನು ನಿರ್ಭೀತನಾಗಿ ಸಾರಲು ಸೂಕ್ಷ್ಮವಾದ ಮಾತುಗಳನ್ನು ದೇವರು ನನಗೆ ದಯಪಾಲಿಸಲೆಂದು ನನಗೋಸ್ಕರ ಪ್ರಾರ್ಥಿಸಿರಿ.


ಆಗ ಪೇತ್ರ ಮತ್ತು ಯೊವಾನ್ನರು, “ನಾವು ದೇವರಿಗೆ ವಿಧೇಯರಾಗಬೇಕೋ? ನಿಮಗೆ ವಿಧೇಯರಾಗಬೇಕೋ? ದೇವರ ದೃಷ್ಟಿಯಲ್ಲಿ ಯಾವುದು ಸರಿ? ನೀವೇ ನಿರ್ಣಯಿಸಿರಿ.


ಅವಿದ್ಯಾವಂತರು ಹಾಗೂ ಜನಸಾಮಾನ್ಯರು ಆಗಿದ್ದರೂ, ಇವರು ಇಷ್ಟು ಧೈರ್ಯಶಾಲಿಗಳಾಗಿರುವುದನ್ನು ಕಂಡು ಸಭೆಯ ಸದಸ್ಯರು ಚಕಿತರಾದರು; ಯೇಸುವಿನ ಸಂಗಡಿಗರೆಂದು ಇವರ ಗುರುತು ಹಚ್ಚಿದರು.


“ಗೆಳೆಯರೇ, ನನ್ನ ಮಾತಿಗೆ ಕಿವಿಗೊಡಿ; ದೇಹವನ್ನು ಕೊಂದುಹಾಕುವವರಿಗೆ ಭಯಪಡಬೇಡಿ. ಕೊಂದುಹಾಕಿದ ಮೇಲೆ ಹೆಚ್ಚೇನು ಮಾಡಲು ಅವರಿಂದಾಗದು.


“ಕಿವಿಗೊಟ್ಟು ಕೇಳಿರಿ ಸದ್ಧರ್ಮದ ಸುಜ್ಞಾನಿಗಳೇ, ನನ್ನ ಬೋಧೆಯಲ್ಲಿ ಶ್ರದ್ಧೆಯಿಡುವವರೇ, ಹೆದರಬೇಡಿ ಮನುಜರಾಡುವ ದೂರಿಗೆ ಅಂಜದಿರಿ ಅವರ ನಿಂದೆದೂಷಣೆಗೆ.


ಅವರೆಲ್ಲರು ಕೇವಲ ದ್ರೋಹಿಗಳು, ಚಾಡಿ ಹೇಳುತ್ತಾ ತಿರುಗಾಡುವವರು. ತಾಮ್ರ, ಕಬ್ಬಿಣಕ್ಕೆ ಸಮಾನರು, ಎಲ್ಲರೂ ಕೇಡಿಗರು.


ಚೇಳುಗಳಿಗಿರುವಂತೆ ಬಾಲಗಳೂ ಕೊಂಡಿಗಳೂ ಅವುಗಳಿಗಿದ್ದವು. ಐದು ತಿಂಗಳವರೆಗೆ ಮಾನವರನ್ನು ಬಾಧಿಸುವ ಶಕ್ತಿ ಆ ಬಾಲಗಳಿಗಿತ್ತು.


ಈ ದ್ರೋಹಿವಂಶಕ್ಕೆ ದೃಷ್ಟಾಂತಕೊಟ್ಟು ಹೀಗೆ ಹೇಳು - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಹಂಡೆಯನ್ನು ಒಲೆಯ ಮೇಲಿಡು, ಮೇಲಿಡು, ಅದರಲ್ಲಿ ನೀರನ್ನು ಹೊಯ್ಯಿಸು;


ಅಥವಾ ಮೊಟ್ಟೆಯನ್ನು ಕೇಳಿದರೆ ಚೇಳನ್ನು ಕೊಡುತ್ತಾನೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು