ಯೆಹೆಜ್ಕೇಲನು 2:8 - ಕನ್ನಡ ಸತ್ಯವೇದವು C.L. Bible (BSI)8 “ನರಪುತ್ರನೇ, ನಾನು ನಿನಗೆ ನುಡಿಯುವ ಮಾತನ್ನು ಕೇಳು: ಅವಿಧೇಯರಾದ ಆ ವಂಶದವರಂತೆ ನೀನು ಅವಿಧೇಯನಾಗಬೇಡ; ನಾನು ಕೊಡುವುದನ್ನು ಬಾಯಿತೆರೆದು ತಿಂದುಬಿಡು,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಇದಲ್ಲದೆ ಆತನು, “ನರಪುತ್ರನೇ, ನಾನು ನಿನಗೆ ಹೇಳುವ ಮಾತನ್ನು ಕೇಳು; ಅವಿಧೇಯರಾದ ಆ ವಂಶದವರಂತೆ ನೀನು ಅವಿಧೇಯನಾಗಬೇಡ; ನಾನು ಕೊಡುವುದನ್ನು ಬಾಯಿದೆರೆದು ತಿಂದುಬಿಡು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಇದಲ್ಲದೆ ಆತನು - ನರಪುತ್ರನೇ, ನಾನು ನಿನಗೆ ನುಡಿಯುವ ಮಾತನ್ನು ಕೇಳು; ಅವಿಧೇಯರಾದ ಆ ವಂಶದವರಂತೆ ನೀನು ಅವಿಧೇಯನಾಗಿರಬೇಡ; ನಾನು ಕೊಡುವದನ್ನು ಬಾಯಿತೆರೆದು ತಿಂದುಬಿಡು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 “ನರಪುತ್ರನೇ, ನಾನು ಹೇಳುವದನ್ನು ನೀನು ಸರಿಯಾಗಿ ಕೇಳಬೇಕು. ದಂಗೆಕೋರರಾದ ಆ ಜನರಂತೆ ನೀನೂ ನನಗೆ ವಿರುದ್ಧವಾಗಿರಬೇಡ. ನಾನು ನಿನಗೆ ಕೊಡಲಿರುವುದನ್ನು ನಿನ್ನ ಬಾಯಿತೆರೆದು ತಿನ್ನು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆದರೆ ಮನುಷ್ಯಪುತ್ರನೇ, ನೀನಾದರೋ ನಾನು ಹೇಳುವುದನ್ನು ಕೇಳು: ಆ ತಿರುಗಿಬೀಳುವ ಜನರ ಹಾಗೆ ನೀನೂ ತಿರುಗಿಬೀಳಬೇಡ. ನಿನ್ನ ಬಾಯನ್ನು ತೆರೆದು ನಾನು ನಿನಗೆ ಕೊಡುವುದನ್ನು ತಿನ್ನು,” ಎಂದರು. ಅಧ್ಯಾಯವನ್ನು ನೋಡಿ |
ಆದರೆ ಯೋನನು ಆ ಸ್ವಾಮಿಯ ಸನ್ನಿಧಿಯಿಂದ ತಪ್ಪಿಸಿಕೊಳ್ಳುವ ಸಲುವಾಗಿ ನಿನೆವೆಗೆ ಹೋಗುವುದರ ಬದಲು ತಾರ್ಷಿಷಿಗೆ ಅಭಿಮುಖವಾಗಿ ಓಡಿಹೋಗಲು ಹೊರಟನು. ಜೊಪ್ಪ ಎಂಬ ಊರನ್ನು ತಲುಪಿದಾಗ ತಾರ್ಷಿಷಿಗೆ ಹೊರಡಲಿದ್ದ ಹಡಗೊಂದನ್ನು ಕಂಡನು. ಪ್ರಯಾಣದ ದರವನ್ನು ತೆತ್ತು ಸಹನಾವಿಕರೊಂದಿಗೆ ಹಡಗನ್ನು ಹತ್ತಿದನು. ಹೀಗೆ ಯೋನನು ಸರ್ವೇಶ್ವರಸ್ವಾಮಿಯ ಸನ್ನಿಧಿಯಿಂದ ದೂರಹೋಗಬಹುದೆಂದು ಭಾವಿಸಿದನು.