ಯೆಹೆಜ್ಕೇಲನು 20:12 - ಕನ್ನಡ ಸತ್ಯವೇದವು C.L. Bible (BSI)12 ಇದಲ್ಲದೆ, ತಮ್ಮನ್ನು ದೇವಜನರನ್ನಾಗಿ ಮಾಡಿರುವ ಸರ್ವೇಶ್ವರ ನಾನೇ ಎಂದು ಅವರು ತಿಳಿದುಕೊಳ್ಳುವಂತೆ ನನಗೂ ಅವರಿಗೂ ಸಂಕೇತವಾದ ಸಬ್ಬತ್ ದಿನಗಳನ್ನು ಅವರಿಗೆ ನೇಮಿಸಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಇದಲ್ಲದೆ ತಮ್ಮನ್ನು ಪರಿಶುದ್ಧ ಜನರನ್ನಾಗಿ ಮಾಡಿರುವ ಯೆಹೋವನು ನಾನೇ ಎಂದು ಅವರು ತಿಳಿದುಕೊಳ್ಳುವಂತೆ ನನಗೂ, ಅವರಿಗೂ ಗುರುತಾದ ಸಬ್ಬತ್ ದಿನಗಳನ್ನು ಅವರಿಗೆ ಗುರುತಾಗಿ ನೇಮಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಇದಲ್ಲದೆ ತಮ್ಮನ್ನು ದೇವಜನರನ್ನಾಗಿ ಮಾಡಿರುವ ಯೆಹೋವನು ನಾನೇ ಎಂದು ಅವರು ತಿಳುಕೊಳ್ಳುವಂತೆ ನನಗೂ ಅವರಿಗೂ ಗುರುತಾದ ಸಬ್ಬತ್ ದಿನಗಳನ್ನು ಅವರಿಗೆ ನೇವಿುಸಿದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಅವರ ವಿಶ್ರಾಂತಿ ದಿವಸಗಳ ಬಗ್ಗೆ ತಿಳಿಸಿದೆನು. ಆ ವಿಶೇಷ ದಿವಸಗಳು ನನಗೂ ಅವರಿಗೂ ಇರುವ ಸಂಬಂಧಕ್ಕೆ ಒಂದು ಗುರುತಾಗಿತ್ತು. ನಾನೇ ಯೆಹೋವನೆಂದೂ ನಾನು ಅವರನ್ನು ನನಗೆ ವಿಶೇಷವಾದವರನ್ನಾಗಿ ಮಾಡಿಕೊಳ್ಳುತ್ತಿರುವೆನೆಂದೂ ಅವು ತೋರಿಸುತ್ತಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಇದಲ್ಲದೆ ಅವರನ್ನು ಪರಿಶುದ್ಧ ಮಾಡುವ ಯೆಹೋವ ದೇವರು ನಾನೇ ಎಂದು ಅವರು ತಿಳಿಯುವ ಹಾಗೆ ನನಗೂ, ಅವರಿಗೂ ಗುರುತಾಗಿರುವುದಕ್ಕೆ ನನ್ನ ಸಬ್ಬತ್ ದಿನಗಳನ್ನು ನಾನು ಅವರಿಗೆ ಕೊಟ್ಟೆನು. ಅಧ್ಯಾಯವನ್ನು ನೋಡಿ |