ಯೆಹೆಜ್ಕೇಲನು 20:13 - ಕನ್ನಡ ಸತ್ಯವೇದವು C.L. Bible (BSI)13 ಆದರೆ ಇಸ್ರಯೇಲ್ ವಂಶದವರು ಮರುಭೂಮಿಯಲ್ಲಿ ನನ್ನ ವಿರುದ್ಧ ದಂಗೆಯೆದ್ದರು. ಕೈಗೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅನುಸರಿಸದೆ ಧಿಕ್ಕರಿಸಿದರು. ಮುಖ್ಯವಾಗಿ ನಾನು ನೇಮಿಸಿದ ಸಬ್ಬತ್ ದಿನಗಳನ್ನು ಅಪವಿತ್ರಮಾಡಿದರು. ಆಗ ನಾನು ‘ಮರುಭೂಮಿಯಲ್ಲಿರುವ ಇವರ ಮೇಲೆ ನನ್ನ ರೋಷಾಗ್ನಿಯನ್ನು ಹರಿಸಿ ಇವರನ್ನು ಧ್ವಂಸಮಾಡುವೆನು’ ಎಂದುಕೊಂಡೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 “‘ಆದರೆ ಇಸ್ರಾಯೇಲ್ ವಂಶದವರು ಅರಣ್ಯದಲ್ಲಿ ನನ್ನ ಮೇಲೆ ತಿರುಗಿ ಬಿದ್ದರು. ಕೈಗೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅನುಸರಿಸದೆ ನಿರಾಕರಿಸಿದರು, ನಾನು ನೇಮಿಸಿದ ಸಬ್ಬತ್ ದಿನಗಳನ್ನು ವಿಶೇಷವಾಗಿ ಹೊಲೆಮಾಡಿದರು; ಆಗ ನಾನು ಇವರ ಮೇಲೆ ಅರಣ್ಯದೊಳಗೆ ನನ್ನ ರೋಷಾಗ್ನಿಯನ್ನು ಸುರಿಸಿ ಇವರನ್ನು ಧ್ವಂಸಮಾಡುವೆನು’ ಅಂದುಕೊಂಡೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆದರೆ ಇಸ್ರಾಯೇಲ್ ವಂಶದವರು ಅರಣ್ಯದಲ್ಲಿ ನನ್ನ ಮೇಲೆ ತಿರುಗಿಬಿದ್ದರು. ಕೈಕೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅನುಸರಿಸದೆ ನಿರಾಕರಿಸಿದರು, ನಾನು ನೇವಿುಸಿದ ಸಬ್ಬತ್ ದಿನಗಳನ್ನು ವಿಶೇಷವಾಗಿ ಹೊಲೆಮಾಡಿದರು; ಆಗ ನಾನು ಅವರ ಮೇಲೆ ಅರಣ್ಯದೊಳಗೆ ನನ್ನ ರೋಷಾಗ್ನಿಯನ್ನು ಸುರಿಸಿ ಇವರನ್ನು ಧ್ವಂಸಮಾಡುವೆನು ಅಂದುಕೊಂಡೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 “‘ಆದರೆ ಇಸ್ರೇಲ್ ಜನರು ಅಡವಿಯಲ್ಲಿರುವಾಗ ನನಗೆ ವಿರುದ್ಧವಾಗಿ ತಿರುಗಿಬಿದ್ದರು. ನನ್ನ ಆಜ್ಞೆಗಳನ್ನು ಅವರು ಅನುಸರಿಸಲಿಲ್ಲ. ನನ್ನ ನಿಯಮಗಳಿಗೆ ವಿಧೇಯರಾಗಲು ನಿರಾಕರಿಸಿದರು. ಆ ಆಜ್ಞೆಗಳೆಲ್ಲಾ ನ್ಯಾಯವಾದವುಗಳೇ. ಒಬ್ಬನು ಆ ಆಜ್ಞೆಗಳಿಗೆ ವಿಧೇಯನಾದರೆ ಅವನು ಬಾಳುವನು. ನಾನು ನೇಮಿಸಿದ ಸಬ್ಬತ್ ದಿವಸಗಳನ್ನು ವಿಶೇಷವಾಗಿ ಅಲಕ್ಷ್ಯ ಮಾಡಿದರು. ಆ ದಿವಸಗಳಲ್ಲಿ ಅವರು ಎಷ್ಟೋ ಸಾರಿ ಕೆಲಸ ಮಾಡಿದರು. ನನ್ನ ರೌದ್ರದ ತೀವ್ರತೆಯನ್ನು ಅವರು ಅರಿತುಕೊಳ್ಳಲೆಂದು ನಾನು ಅವರನ್ನು ಅಡವಿಯಲ್ಲಿ ದಂಡಿಸಿ ನಾಶಮಾಡಲು ಆಲೋಚಿಸಿಕೊಂಡೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 “ ‘ಆದರೆ ಇಸ್ರಾಯೇಲ್ ಜನರು ಮರುಭೂಮಿಯಲ್ಲಿಯೂ ನನಗೆ ವಿರುದ್ಧವಾಗಿ ತಿರುಗಿಬಿದ್ದರು. ಅವರು ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ, ನನ್ನ ಅಪ್ಪಣೆಗಳನ್ನು ತಿರಸ್ಕರಿಸಿದರು. ಅವುಗಳಿಗೆ ವಿಧೇಯನಾಗುವವನು ಅವುಗಳಿಂದ ಜೀವಿಸುವನು. ನನ್ನ ಸಬ್ಬತ್ ದಿನಗಳನ್ನು ಅಪವಿತ್ರಗೊಳಿಸಿದರು. ಆಗ ನಾನು ಅವರ ಮೇಲೆ ನನ್ನ ರೋಷವನ್ನು ಸುರಿದು, ಅವರನ್ನು ಮರುಭೂಮಿಯಲ್ಲಿ ನಾಶಮಾಡುವೆನೆಂದು ಹೇಳಿದೆನು. ಅಧ್ಯಾಯವನ್ನು ನೋಡಿ |