Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 20:15 - ಕನ್ನಡ ಸತ್ಯವೇದವು C.L. Bible (BSI)

15 ಆಮೇಲೆ, ‘ನಾಡುಗಳಲ್ಲೆಲ್ಲಾ ಶ್ರೇಷ್ಠವಾದ ನಾಡಿಗೆ, ಹಾಲೂ ಜೇನೂ ಹರಿಯುವ ಆ ವಾಗ್ದತ್ತನಾಡಿಗೆ ನಿಮ್ಮನ್ನು ಸೇರಿಸೆನು’ ಎಂದು ಮರುಭೂಮಿಯಲ್ಲಿ ಅವರಿಗೆ ಪ್ರಮಾಣಮಾಡಿ ಹೇಳಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆ ಮೇಲೆ ಸಕಲ ದೇಶ ಶಿರೋಮಣಿಯಾದ ಯಾವ ದೇಶವನ್ನು ವಾಗ್ದಾನಮಾಡಿದೆನೋ, ಹಾಲೂ ಮತ್ತು ಜೇನು ಹರಿಯುವ ಆ ದೇಶಕ್ಕೆ ನಿಮ್ಮನ್ನು ಸೇರಿಸುವುದಿಲ್ಲ ಎಂದು ಅರಣ್ಯದಲ್ಲಿ ಅವರಿಗೆ ಪ್ರಮಾಣ ಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆಮೇಲೆ ಸಕಲದೇಶಶಿರೋಮಣಿಯಾದ ಯಾವ ದೇಶವನ್ನು ಅವರಿಗೆ ವಾಗ್ದಾನ ಮಾಡಿದೆನೋ ಹಾಲೂ ಜೇನೂ ಹರಿಯುವ ಆ ದೇಶಕ್ಕೆ ನಿಮ್ಮನ್ನು ಸೇರಿಸೆನೆಂದು ಅರಣ್ಯದಲ್ಲಿ ಅವರಿಗೆ ಪ್ರಮಾಣ ಮಾಡಿದೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಅವರು ಅಡವಿಯಲ್ಲಿದ್ದಾಗ ನಾನು ಮತ್ತೊಂದು ಪ್ರಮಾಣವನ್ನು ಮಾಡಿದೆನು. ನಾನು ಅವರಿಗೆ ಕೊಟ್ಟಿದ್ದ ದೇಶಕ್ಕೆ ಅವರನ್ನು ಹೋಗಗೊಡಿಸುವದಿಲ್ಲ ಎಂದು ಪ್ರಮಾಣ ಮಾಡಿದೆನು. ಆ ದೇಶವು ಅತ್ಯುತ್ತಮವಾಗಿತ್ತು. ಎಲ್ಲಾ ದೇಶಗಳಿಗಿಂತ ಬಹು ಸುಂದರವಾದ ದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆದರೂ ಹಾಲೂ ಜೇನೂ ಹರಿಯುವಂಥ ದೇಶಗಳಿಗೆ ಕೀರ್ತಿಯಾಗಿರುವಂಥ ಆ ದೇಶದಲ್ಲಿ ಅವರನ್ನು ಸೇರಿಸುವುದಿಲ್ಲವೆಂದು ಮರುಭೂಮಿಯಲ್ಲಿ ಅವರಿಗೆ ನನ್ನ ಕೈಯೆತ್ತಿ ಪ್ರಮಾಣಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 20:15
14 ತಿಳಿವುಗಳ ಹೋಲಿಕೆ  

ಎಂತಲೆ ಸೇರರಿವರು ನನ್ನ ವಿಶ್ರಾಂತಿ ನೆಲೆ I ಎಂದು ಸಿಟ್ಟಿನಿಂದ ಕೆರಳಿ ನಾ ಶಪಥಮಾಡಿದೆ II


ಈ ಕಾರಣ ಆಣೆಯಿಟ್ಟನು ಕೈಯೆತ್ತಿ : I “ಬೀಳಮಾಡುವೆನು ನಿಮ್ಮನು ಅಡವಿಯಲಿ, II


ಲೋಕಾದಿಯಲ್ಲೇ, ದೇವರು ತಮ್ಮ ಸೃಷ್ಟಿಕಾರ್ಯವನ್ನು ಮುಗಿಸಿದ್ದರೂ ಅವರು, “ಸೇರರು ಎನ್ನ ವಿಶ್ರಾಂತಿಯ ನೆಲೆಯನು ಇವರೆಂದಿಗೂ ಎಂದು ಸಿಟ್ಟುಗೊಂಡು ಶಪಥ ಮಾಡಿದೆನು,” ಎಂದು ಹೇಳಿದ್ದಾರೆ. ವಿಶ್ವಾಸಿಸುವ ನಾವಾದರೋ ಆ ವಿಶ್ರಾಂತಿಯ ನೆಲೆಯನ್ನು ಸೇರುತ್ತೇವೆ.


“ಸೇರರು ಎನ್ನ ವಿಶ್ರಾಂತಿಯ ನೆಲೆಯನು ಇವರೆಂದಿಗೂ” ಎಂದು ಯಾರನ್ನು ಕುರಿತು ಶಪಥ ಮಾಡಿದರು? ತಮಗೆ ಅವಿಧೇಯರಾದ ಜನರನ್ನು ಕುರಿತಲ್ಲವೇ?


ಸೇರರು ಎನ್ನ ವಿಶ್ರಾಂತಿಯ ನೆಲೆಯನು ಇವರೆಂದಿಗೂ ಎಂದು ಸಿಟ್ಟುಗೊಂಡು ಶಪಥ ಮಾಡಿದೆನು.”


ಆಮೇಲೆ ಅವರು ನನ್ನ ಆಜ್ಞೆಗಳನ್ನು ಕೈಗೊಳ್ಳದೆ, ನನ್ನ ವಿಧಿಗಳನ್ನು ನಿರಾಕರಿಸಿ, ನಾನು ನೇಮಿಸಿದ ಸಬ್ಬತ್ ದಿನಗಳನ್ನು ಅಪವಿತ್ರಮಾಡಿ ತಮ್ಮ ಪಿತೃಗಳ ವಿಗ್ರಹಗಳಲ್ಲೇ ಆಸಕ್ತರಾದರು.


ಆದರೂ ಯಾವ ಜನಾಂಗಗಳ ಮುಂದೆ ಅವರನ್ನು ಪಾರುಮಾಡಿದೆನೋ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಬರಬಾರದೆಂದು ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡೆ.


ನನಗೆ ವಿಮುಖರಾದ ದ್ರೋಹಿಗಳನ್ನು ನಿಮ್ಮಿಂದ ದೂರಕ್ಕೆ ಗುಡಿಸಿಬಿಡುವೆನು; ಅವರು ಪ್ರವಾಸಿಗಳಾಗಿದ್ದ ದೇಶದಿಂದ ನಾನು ಅವರನ್ನು ಬಿಡುಗಡೆ ಮಾಡಿದರೂ ಅವರು ಇಸ್ರಯೇಲ್ ನಾಡಿಗೆ ಸೇರುವುದೇ ಇಲ್ಲ; ಆಗ ನಾನೇ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು.


ನಾನು ಪ್ರಮಾಣಮಾಡಿ ನಿಮ್ಮ ಪಿತೃಗಳಿಗೆ ಯಾವ ನಾಡನ್ನು ಕೊಟ್ಟೆನೋ ಆ ಇಸ್ರಾಯೇಲ್ ನಾಡಿಗೆ ನಿಮ್ಮನ್ನು ಬರಮಾಡುವಾಗ ನಾನೇ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು.


ಅವರು ತಮ್ಮ ವಿಗ್ರಹಗಳ ಮುಂದೆ ಜನರಿಗಾಗಿ ಸೇವೆಮಾಡಿ, ಇಸ್ರಯೇಲ್ ವಂಶದವರಿಗೆ ಪಾಪಕಾರಿವಿಘ್ನವಾದುದರಿಂದ, ನಾನು ಅವರ ಮೇಲೆ ಕೈಯೆತ್ತಿದ್ದೇನೆ. ಅವರು ತಮ್ಮ ದೋಷಫಲವನ್ನು ಅನುಭವಿಸಿಯೇ ತೀರಬೇಕು; ಇದು ಸರ್ವೇಶ್ವರನಾದ ದೇವರ ನುಡಿ.


ನಾನು ಅವರಿಗೆ ‘ನಾಡುಗಳಲ್ಲೆಲ್ಲ ಶ್ರೀಮಂತವಾದ ನಾಡನ್ನು ನಿಮಗಾಗಿ ನೋಡಿದ್ದೇನೆ; ನಾನು ನಿಮ್ಮನ್ನು ಈಜಿಪ್ಟ್ ದೇಶದಿಂದ ಉದ್ಧರಿಸಿ ಹಾಲೂ ಜೇನೂ ಹರಿಯುವ ಆ ನಾಡಿಗೆ ಸೇರಿಸುವೆನು’ ಎಂದು ಪ್ರಮಾಣಮಾಡಿದೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು