Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 20:24 - ಕನ್ನಡ ಸತ್ಯವೇದವು C.L. Bible (BSI)

24 ಆದ್ದರಿಂದ ನಾನು ‘ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ ದೇಶದೇಶಗಳಿಗೆ ತೂರಿಬಿಡುವೆನು’ ಎಂದು ಮರುಭೂಮಿಯಲ್ಲಿ ಪ್ರಮಾಣಮಾಡಿ ಹೇಳಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಏಕೆಂದರೆ ನನ್ನ ಜನರು ನನ್ನ ಆಜ್ಞೆಗಳನ್ನು ಕೈಕೊಳ್ಳದೆ, ನನ್ನ ವಿಧಿಗಳನ್ನು ನಿರಾಕರಿಸಿ ನಾನು ನೇಮಿಸಿದ ಸಬ್ಬತ್ ದಿನಗಳನ್ನು ಹೊಲೆಮಾಡಿ, ತಮ್ಮ ಪೂರ್ವಿಕರ ವಿಗ್ರಹಗಳ ಮೇಲೆ ಕಣ್ಣುಹಾಕಿದ್ದರಿಂದ, ನಾನು ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ, ದೇಶ ದೇಶಗಳಿಗೆ ಚೆಲ್ಲಾಪಿಲ್ಲಿಯಾಗಿಸುವೆನು.” ಎಂದು ಅರಣ್ಯದಲ್ಲಿ ಅವರಿಗೆ ಪ್ರಮಾಣಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನಾನು ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ ದೇಶದೇಶಗಳಿಗೆ ತೂರಿಬಿಡುವೆನು ಎಂದು ಅರಣ್ಯದಲ್ಲಿ ಅವರಿಗೆ ಪ್ರಮಾಣಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 “‘ಇಸ್ರೇಲ್ ಜನರು ನನ್ನ ಆಜ್ಞೆಗಳಿಗೆ ವಿಧೇಯರಾಗಲಿಲ್ಲ. ನನ್ನ ಕಟ್ಟಳೆಗಳಿಗೆ ವಿಧೇಯರಾಗಲು ನಿರಾಕರಿಸಿದರು. ನಾನು ನೇಮಿಸಿದ ಸಬ್ಬತ್ ದಿವಸಗಳನ್ನು ಅಲಕ್ಷ್ಯಮಾಡಿದರು. ಮತ್ತು ಅವರ ಪೂರ್ವಿಕರ ಹೊಲಸು ವಿಗ್ರಹಗಳನ್ನು ಪೂಜಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಏಕೆಂದರೆ ಅವರು ನನ್ನ ನ್ಯಾಯಗಳಲ್ಲಿ ನಡೆಯದೆ, ನನ್ನ ನಿಯಮಗಳನ್ನು ಅಲಕ್ಷಿಸಿ, ನನ್ನ ಸಬ್ಬತ್ ದಿನಗಳನ್ನು ಅಪವಿತ್ರಪಡಿಸಿದರು. ತಮ್ಮ ಪಿತೃಗಳ ವಿಗ್ರಹಗಳ ಕಡೆಗೆ ಕಣ್ಣಿಟ್ಟಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 20:24
11 ತಿಳಿವುಗಳ ಹೋಲಿಕೆ  

ಏಕೆಂದರೆ, ಅವರ ಹೃದಯ ವಿಗ್ರಹಗಳಲ್ಲಿ ಆಸಕ್ತವಾಗಿ, ನನ್ನ ಆಜ್ಞಾವಿಧಿಗಳನ್ನು ಅವರು ಅನುಸರಿಸದೆ ಧಿಕ್ಕರಿಸಿ, ನಾನು ನೇಮಿಸಿದ ಸಬ್ಬತ್ ದಿನಗಳನ್ನು ಅಪವಿತ್ರಗೊಳಿಸಿದರು.


ಹೀಗೆ ಅಳಿದುಳಿದು ಸೆರೆಗೆ ಒಯ್ಯಲ್ಪಟ್ಟು ಜನಾಂಗಗಳ ಮಧ್ಯೆ ವಾಸಿಸುವ ನಿಮ್ಮವರು ನನ್ನನ್ನು ಸ್ಮರಿಸಿಕೊಳ್ಳುವರು. ಅನ್ಯದೇವತೆಗಳಲ್ಲಿನ ಮೋಹದಿಂದ ನನ್ನನ್ನು ತೊರೆದು ತಮ್ಮ ಹೃದಯವನ್ನು ಹಾಗು ತಮ್ಮ ವಿಗ್ರಹಗಳ ಮೇಲಣ ಕಾಮದಿಂದ ದೇವದ್ರೋಹ ಮಾಡಿದ ತಮ್ಮ ಕಣ್ಣುಗಳನ್ನು ಭಂಗಪಡಿಸಿದವನು ನಾನೇ ಎಂಬುದಾಗಿ ನನ್ನನ್ನು ಜ್ಞಾಪಕಮಾಡಿಕೊಳ್ಳುವರು. ತಾವು ಬಹಳ ಅಸಹ್ಯಕಾರ್ಯಗಳನ್ನು ನಡೆಸಿ ಕೆಟ್ಟತನವನ್ನು ಮಾಡಿದ್ದೇವೆಂದು ತಮ್ಮನ್ನು ತಾವೇ ಹೇಸಿಕೊಳ್ಳುವರು.


ಸರ್ವೇಶ್ವರ ಇಂತೆನ್ನುತ್ತಾರೆ: “ಜುದೇಯದ ಜನರು ಪದೇಪದೇ ಮಾಡಿದ ಪಾಪಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಏಕೆಂದರೆ ಅವರು ನನ್ನ ಧರ್ಮಶಾಸ್ತ್ರವನ್ನು ತೃಣೀಕರಿಸಿದ್ದಾರೆ. ನನ್ನ ವಿಧಿನಿಯಮಗಳನ್ನು ಮೀರಿದ್ದಾರೆ. ಅವರ ಪೂರ್ವಜರು ಆರಾಧಿಸಿದ ಸುಳ್ಳುದೇವತೆಗಳನ್ನು ಪೂಜಿಸುತ್ತಾ ದಾರಿತಪ್ಪಿದ್ದಾರೆ.


ಆದರೆ ಇಸ್ರಯೇಲ್ ವಂಶದವರು ಮರುಭೂಮಿಯಲ್ಲಿ ನನ್ನ ವಿರುದ್ಧ ದಂಗೆಯೆದ್ದರು. ಕೈಗೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅನುಸರಿಸದೆ ಧಿಕ್ಕರಿಸಿದರು. ಮುಖ್ಯವಾಗಿ ನಾನು ನೇಮಿಸಿದ ಸಬ್ಬತ್ ದಿನಗಳನ್ನು ಅಪವಿತ್ರಮಾಡಿದರು. ಆಗ ನಾನು ‘ಮರುಭೂಮಿಯಲ್ಲಿರುವ ಇವರ ಮೇಲೆ ನನ್ನ ರೋಷಾಗ್ನಿಯನ್ನು ಹರಿಸಿ ಇವರನ್ನು ಧ್ವಂಸಮಾಡುವೆನು’ ಎಂದುಕೊಂಡೆ.


ಗುಡ್ಡಗಳ ಮೇಲೆ ಯಜ್ಞಶೇಷವನ್ನು ತಿನ್ನದೆ, ಇಸ್ರಯೇಲ್ ವಂಶದವರ ವಿಗ್ರಹಗಳ ಕಡೆಗೆ ಕಣ್ಣೆತ್ತದೆ, ನೆರೆಯವನ ಹೆಂಡತಿಯನ್ನು ಕೆಡಿಸದೆ, ಯಾರನ್ನೂ ಹಿಂಸಿಸದೆ,


ದೀನದಲಿತರನ್ನು ಹಿಂಸಿಸಿ, ಜನರ ಸೊತ್ತನ್ನು ಅಪಹರಿಸಿ, ಸಾಲಗಾರನ ಒತ್ತೆಯನ್ನು ಬಿಗಿಹಿಡಿದು, ವಿಗ್ರಹಗಳ ಕಡೆಗೆ ಕಣ್ಣೆತ್ತಿ,


ಗುಡ್ಡಗಳ ಮೇಲೆ ಯಜ್ಞಶೇಷವನ್ನು ತಿನ್ನದೆ, ಇಸ್ರಾಯೇಲ್ ವಂಶದವರ ವಿಗ್ರಹಗಳ ಕಡೆಗೆ ಕಣ್ಣೆತ್ತದೆ, ನೆರೆಯವನ ಹೆಂಡತಿಯನ್ನು ಕೆಡಿಸದೆ,


ನೀವು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವಾಗ ಭ್ರಮೆಗೊಂಡು, ಸೂರ್ಯ, ಚಂದ್ರ, ನಕ್ಷತ್ರಗಳೆನಿಸಿಕೊಳ್ಳುವ ಆಕಾಶದ ಪರಿವಾರಗಳನ್ನು ಆರಾಧಿಸಬಾರದು, ಪೂಜಿಸಬಾರದು. ಏಕೆಂದರೆ ನಿಮ್ಮ ದೇವರಾದ ಸರ್ವೇಶ್ವರ ಅವುಗಳನ್ನು ಜಗದ ಬೇರೆ ಎಲ್ಲ ಜನಾಂಗಗಳಿಗಾಗಿ ಕೊಟ್ಟಿದ್ದಾರೆ.


ಇದಲ್ಲದೆ, ನನಗೆ ಈ ಅಪರಾಧವನ್ನು ನಡೆಸಿದ್ದಾರೆ: ಆಹುತಿಕೊಟ್ಟ ದಿನದಲ್ಲೇ ನನ್ನ ಪವಿತ್ರಾಲಯವನ್ನು ಅಪವಿತ್ರಪಡಿಸಿ, ನಾನು ನೇಮಿಸಿದ ಸಬ್ಬತ್ ದಿನವನ್ನು ಅಶುದ್ಧ ಮಾಡಿದರು.


ನಾನು ನಿಮ್ಮನ್ನು ಫಲವತ್ತಾದ ನಾಡಿಗೆ ಕರೆತಂದೆ. ಅದರ ಫಲವನ್ನೂ ಸಾರವನ್ನೂ ಅನುಭವಿಸುವ ಹಾಗೆ ಮಾಡಿದೆ. ಆದರೆ ನೀವು ಒಳನುಗ್ಗಿ ಬಂದು ಆ ನನ್ನ ನಾಡನ್ನು ಹೊಲೆಮಾಡಿದಿರಿ; ಆ ನನ್ನ ಸೊತ್ತನ್ನು ಅಸಹ್ಯಪಡಿಸಿದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು