Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 20:30 - ಕನ್ನಡ ಸತ್ಯವೇದವು C.L. Bible (BSI)

30 “ಇಸ್ರಯೇಲ್ ವಂಶದವರಿಗೆ ಹೀಗೆ ಹೇಳು: - ಸರ್ವೇಶ್ವರ ದೇವರು ಇಂತೆನ್ನುತ್ತಾರೆ - ನಿಮ್ಮ ಪಿತೃಗಳಂತೆ ನಿಮ್ಮನ್ನು ನೀವೇ ಅಪವಿತ್ರಮಾಡಿಕೊಳ್ಳುತ್ತೀರೋ? ಅವರು ಪೂಜಿಸುತ್ತಿದ್ದ ಅಸಹ್ಯವಸ್ತುಗಳನ್ನು ನೀವೂ ಪೂಜಿಸಿ ದೇವದ್ರೋಹಮಾಡುತ್ತೀರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಇಸ್ರಾಯೇಲ್ ವಂಶದವರಿಗೆ ಹೀಗೆ ಹೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಿಮ್ಮ ಪೂರ್ವಿಕರಂತೆ ನಿಮ್ಮನ್ನು ನೀವೇ ಹೊಲಸು ಮಾಡಿಕೊಳ್ಳುತ್ತೀರೋ? ಅವರು ಪೂಜಿಸುತ್ತಿದ್ದ ಅಸಹ್ಯ ವಸ್ತುಗಳನ್ನು ನೀವೂ ಪೂಜಿಸಿ ದೇವದ್ರೋಹ ಮಾಡುತ್ತೀರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಇಸ್ರಾಯೇಲ್ ವಂಶದವರಿಗೆ ಹೀಗೆ ಹೇಳು - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಿಮ್ಮ ಪಿತೃಗಳಂತೆ ನಿಮ್ಮನ್ನು ನೀವೇ ಹೊಲಸುಮಾಡಿಕೊಳ್ಳುತ್ತೀರೋ? ಅವರು ಪೂಜಿಸುತ್ತಿದ್ದ ಅಸಹ್ಯವಸ್ತುಗಳನ್ನು ನೀವೂ ಪೂಜಿಸಿ ದೇವದ್ರೋಹಮಾಡುತ್ತೀರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ದೇವರು ಹೇಳಿದ್ದೇನೆಂದರೆ, “ಇಸ್ರೇಲ್ ಜನರು ದುಷ್ಕೃತ್ಯಗಳನ್ನು ಮಾಡಿದ್ದಾರೆ. ಆದ್ದರಿಂದ ನೀನು ಹೋಗಿ ಅವರಿಗೆ ಹೇಳು: ‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನಿಮ್ಮ ಪೂರ್ವಿಕರು ಮಾಡಿದಂತೆಯೇ ನೀವು ನಿಮ್ಮನ್ನು ಅಪವಿತ್ರರನ್ನಾಗಿ ಮಾಡಿಕೊಳ್ಳುತ್ತಿದ್ದೀರಿ. ನೀವು ಸೂಳೆಯರ ಹಾಗೆ ವರ್ತಿಸಿರುತ್ತೀರಿ. ನಿಮ್ಮ ಪೂರ್ವಿಕರು ಪೂಜಿಸಿದ ಆ ಭಯಂಕರವಾದ ವಿಗ್ರಹಗಳೊಂದಿಗೆ ಇರುವದಕ್ಕಾಗಿ ನನ್ನನ್ನು ನೀವು ತೊರೆದುಬಿಟ್ಟಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 “ಆದ್ದರಿಂದ ನೀನು ಇಸ್ರಾಯೇಲಿನ ಮನೆತನದವರಿಗೆ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಿಮ್ಮ ಪಿತೃಗಳ ಹಾಗೆ ನಿಮ್ಮನ್ನು ಅಪವಿತ್ರಪಡಿಸಿಕೊಳ್ಳುತ್ತೀರೋ? ಅವರ ಅಸಹ್ಯವಾದ ವಿಗ್ರಹಗಳ ಹಿಂದೆ ಹೋಗುತ್ತೀರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 20:30
13 ತಿಳಿವುಗಳ ಹೋಲಿಕೆ  

ನೀವಾದರೊ ನಿಮ್ಮ ಪೂರ್ವಜರಿಗಿಂತ ಹೆಚ್ಚು ಕೇಡನ್ನು ಮಾಡಿದ್ದೀರಿ. ನೀವೆಲ್ಲರು ನನ್ನ ಮಾತನ್ನು ಕೇಳದೆ ದುಷ್ಟ ಹೃದಯವುಳ್ಳ ಹಟಮಾರಿಗಳಂತೆ ನಡೆಯುತ್ತಾ ಬಂದಿದ್ದೀರಿ.


ನಿಮ್ಮವರಾದರೋ ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲಿಲ್ಲ. ನನ್ನ ಆಜ್ಞೆಗೆ ಮಣಿಯಲಿಲ್ಲ. ತಮ್ಮ ಪೂರ್ವಜರಿಗಿಂತಲೂ ಕೆಟ್ಟವರಾಗಿ ನಡೆದುಕೊಂಡರು.”


ಅಂಥ ನ್ಯಾಯಾಧಿಪತಿಗಳು ತೀರಿಹೋದ ನಂತರ ಇಸ್ರಯೇಲರು ಮತ್ತೆ ತಮ್ಮ ಹಿಂದಿನವರಿಗಿಂತಲೂ ಭ್ರಷ್ಟರಾಗಿ ಅನ್ಯದೇವತೆಗಳನ್ನು ಅವಲಂಬಿಸಿ, ಅವುಗಳಿಗೆ ಸೇವೆಮಾಡಿ ಅಡ್ಡಬಿದ್ದರು. ಅವರು ತಮ್ಮ ದುರ್ಮಾರ್ಗಗಳನ್ನೂ ಹಠಮಾರಿತನವನ್ನೂ ಬಿಡಲೇ ಇಲ್ಲ.


ಸ್ತೇಫನನು ಮುಂದುವರೆದು, “ಎಷ್ಟು ಹಟಮಾರಿಗಳು ನೀವು; ಎಂಥಾ ಕಠಿಣ ಹೃದಯಿಗಳು ನೀವು’ ದೇವರ ಸಂದೇಶಕ್ಕೆ ಎಷ್ಟು ಕಿವುಡರು ನೀವು! ನಿಮ್ಮ ಪೂರ್ವಜರಂತೆ ನೀವು ಸಹ ಪವಿತ್ರಾತ್ಮ ಅವರನ್ನು ಯಾವಾಗಲೂ ಪ್ರತಿಭಟಿಸುತ್ತೀರಿ.


ಒಳ್ಳೆಯದು, ನಿಮ್ಮ ಪೂರ್ವಜರು ಪ್ರಾರಂಭಿಸಿದ್ದನ್ನು ನೀವು ಹೋಗಿ ಪೂರ್ಣಗೊಳಿಸಿರಿ.


ನನ್ನ ಮಾತನ್ನು ಕೇಳದೆ, ಧರ್ಮಮಾರ್ಗದಲ್ಲಿ ನಡೆಯದೆ, ಹಟಮಾರಿಗಳಂತೆ ಸ್ವೇಚ್ಛಾನುಸಾರ ನಡೆದುಕೊಂಡರು. ತಮ್ಮ ಪೂರ್ವಜರು ಕಲಿಸಿಕೊಟ್ಟ ಹಾಗೆ ಬಾಳ್‍ದೇವತೆಗಳನ್ನು ಹಿಂಬಾಲಿಸಿದರು.


ಈಗ ಈ ದುಷ್ಟ ಪೀಳಿಗೆಗೆ ಸೇರಿದವರಾದ ನೀವು ನಿಮ್ಮ ಪೂರ್ವಜರಿಗೆ ಬದಲಾಗಿ ಬಂದು ಇಸ್ರಯೇಲರ ಮೇಲಿದ್ದ ಸರ್ವೇಶ್ವರನ ಕೋಪಾಗ್ನಿಯನ್ನು ಮತ್ತಷ್ಟು ಹೆಚ್ಚಿಸುತ್ತಿದ್ದೀರಿ.


ಅವರು ನನಗೆ ಹೀಗೆ ಹೇಳಿದರು, “ನರಪುತ್ರನೇ, ನನಗೆ ವಿಮುಖರಾಗಿ ದ್ರೋಹಮಾಡಿದ ಜನಾಂಗದವರಾದ ಇಸ್ರಯೇಲರ ಬಳಿಗೆ ನಿನ್ನನ್ನು ಕಳುಹಿಸುವೆನು; ಈ ದಿನದವರೆಗೆ ಅವರೂ ಅವರ ಪಿತೃಗಳೂ ನನ್ನನ್ನು ಪ್ರತಿಭಟಿಸುತ್ತಲೇ ಬಂದಿದ್ದಾರೆ.


ಅವರು ತಮ್ಮ ಚೊಚ್ಚಲುಮಕ್ಕಳನ್ನು ಆಹುತಿಕೊಟ್ಟು ಅರ್ಪಿಸುತ್ತಿದ್ದ ಬಲಿಗಳಿಂದಲೇ ಅವರನ್ನು ಹೊಲೆಗೆಡಿಸಿ, ಕೇವಲ ದುರವಸ್ಥೆಗೆ ತಂದೆನು.


ನೀವು ಹೋಗುವ ‘ಬಾ - ಮಾ’ ಎಂಬ ಪೂಜಾಸ್ಥಳ ಎಂಥ ಸ್ಥಳ? (ಇಂದಿನವರೆಗೂ ಇಂಥಾ ಪೂಜಾಸ್ಥಳಗಳಿಗೆ ಬಾಮಾ ಎಂದೇ ಹೆಸರು).


ನಿಮ್ಮ ಹೆತ್ತವರೂ ಸಹೋದರರೂ ನಡೆದಂತೆ ನೀವೂ ನಡೆಯಬೇಡಿ. ಅವರು ತಮ್ಮ ಪಿತೃಗಳ ದೇವರಾದ ಸರ್ವೇಶ್ವರನಿಗೆ ದ್ರೋಹಿಗಳಾದರು; ಈ ಕಾರಣ ನಾಶನಕ್ಕೆ ಗುರಿಯಾದರು. ಅದಕ್ಕೆ ನೀವೇ ಸಾಕ್ಷಿಗಳು.


ಅಶುದ್ಧರಾದರವರು ತಮ್ಮ ದುಷ್ಕೃತ್ಯಗಳಿಂದ I ದೇವದ್ರೋಹಿಗಳಾದರು ದುರಾಚಾರಗಳಿಂದ II


ಕಳವು, ಕೊಲೆ, ವ್ಯಭಿಚಾರಗಳನ್ನು ಮಾಡುತ್ತೀರಿ. ಸುಳ್ಳುಸಾಕ್ಷಿ ಹೇಳುತ್ತೀರಿ. ಬಾಳನಿಗೆ ಧೂಪಾರತಿ ಎತ್ತುತ್ತೀರಿ. ಕಂಡು ಕೇಳದ ಅನ್ಯದೇವತೆಗಳನ್ನು ಆರಾಧಿಸುತ್ತೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು