ಯೆಹೆಜ್ಕೇಲನು 20:32 - ಕನ್ನಡ ಸತ್ಯವೇದವು C.L. Bible (BSI)32 ‘ನಾವು ಜನಾಂಗಗಳಂತೆ, ಅನ್ಯದೇಶಗಳವರಂತೆ ಮರ, ಕಲ್ಲುಗಳ ವಿಗ್ರಹಗಳನ್ನು ಪೂಜಿಸುವೆವು’ ಎಂದು ನಿಮ್ಮ ಮನಸ್ಸಿನಲ್ಲಿ ಹುಟ್ಟುವ ಯೋಚನೆ ಎಷ್ಟು ಮಾತ್ರವೂ ನೆರವೇರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 “ನಾವು ಜನಾಂಗಗಳಂತೆ, ಅನ್ಯದೇಶಗಳವರಂತೆ ಮರಕಲ್ಲುಗಳ ಬೊಂಬೆಗಳನ್ನು ಭಜಿಸುವೆವು ಎಂದು ನಿಮ್ಮ ಮನಸ್ಸಿನಲ್ಲಿ ಹುಟ್ಟುವ ಯೋಚನೆಯು ಖಂಡಿತ ನೆರವೇರುವುದಿಲ್ಲ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ನಾವು ಜನಾಂಗಗಳಂತೆ, ಅನ್ಯದೇಶಗಳವರಂತೆ ಮರಕಲ್ಲುಗಳ ಬೊಂಬೆಗಳನ್ನು ಭಜಿಸುವೆವು ಎಂದು ನಿಮ್ಮ ಮನಸ್ಸಿನಲ್ಲಿ ಹುಟ್ಟುವ ಯೋಚನೆಯು ಎಷ್ಟುಮಾತ್ರವೂ ಸಾಗದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ನಾವು ಮರದ ಮತ್ತು ಕಲ್ಲಿನ ವಸ್ತುಗಳನ್ನು ಪೂಜಿಸುತ್ತಾ ಇತರ ಜನಾಂಗಗಳಂತೆ ಇರೋಣ ಎಂದು ನೀವು ಯೋಚಿಸುತ್ತಲೇ ಇರುತ್ತೀರಿ. ನಿಮ್ಮ ಮನಸ್ಸುಗಳಲ್ಲಿರುವ ಈ ಆಲೋಚನೆಯು ಎಂದಿಗೂ ನೆರವೇರುವುದಿಲ್ಲ.’” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 “ ‘ “ನಾವು ಇತರ ಜನಾಂಗಗಳ ಹಾಗೆ ಮತ್ತು ಇತರ ದೇಶಗಳವರ ಹಾಗೆ ಇದ್ದು ಮರಕ್ಕೂ ಕಲ್ಲಿಗೂ ಸೇವೆ ಮಾಡುತ್ತೇವೆಂದು ನಿಮ್ಮ ಮನಸ್ಸಿನಲ್ಲಿ ಹುಟ್ಟುವ ಯೋಚನೆಯು ಎಷ್ಟು ಮಾತ್ರಕ್ಕೂ ನೆರವೇರದು.” ಅಧ್ಯಾಯವನ್ನು ನೋಡಿ |
ನಾವು, ನಮ್ಮ ಪೂರ್ವಜರು, ನಮ್ಮ ಅರಸರು, ಅಧಿಕಾರಿಗಳು ಜುದೇಯದ ಊರುಗಳಲ್ಲಿ ಮತ್ತು ಜೆರುಸಲೇಮಿನ ಬೀದಿಗಳಲ್ಲಿ ಮಾಡಿದಂತೆ ಗಗನದೊಡತಿಯಾದ ದೇವತೆಗೆ ಧೂಪಾರತಿ ಎತ್ತುತ್ತೇವೆ. ಪಾನನೈವೇದ್ಯವನ್ನು ಸುರಿಯುತ್ತೇವೆ. ನಾವು ಬಾಯಿಬಿಟ್ಟು ಹೇಳಿದ ಈ ಮಾತುಗಳನ್ನೆಲ್ಲಾ ಖಂಡಿತವಾಗಿ ನೆರವೇರಿಸುತ್ತೇವೆ. ಏಕೆಂದರೆ ಹಾಗೆ ಮಾಡುತ್ತಿದ್ದಾಗ ನಾವು ಯಾವ ಕೇಡನ್ನೂ ಕಾಣದೆ ಹೊಟ್ಟೆತುಂಬ ಉಂಡು ಸುಖಪಡುತ್ತಿದ್ದೆವು.