Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 20:33 - ಕನ್ನಡ ಸತ್ಯವೇದವು C.L. Bible (BSI)

33 “ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನನ್ನ ಜೀವದಾಣೆ, ನಾನು ಶಿಕ್ಷಾಹಸ್ತವನ್ನೆತ್ತಿ, ಭುಜಪರಾಕ್ರಮವನ್ನು ತೋರಿಸಿ, ರೋಷಾಗ್ನಿಯನ್ನು ಸುರಿಸುತ್ತಾ, ನಿಮ್ಮ ಮೇಲೆ ದೊರೆತನಮಾಡುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ನಾನು ಶಿಕ್ಷಾಹಸ್ತವನ್ನೆತ್ತಿ, ಭುಜಪರಾಕ್ರಮವನ್ನು ತೋರಿಸಿ, ರೋಷಾಗ್ನಿಯನ್ನು ಸುರಿಸುತ್ತಾ ನಿಮ್ಮ ಮೇಲೆ ದೊರೆತನ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನ ಜೀವದಾಣೆ, ನಾನು ಶಿಕ್ಷಾಹಸ್ತವನ್ನೆತ್ತಿ ಭುಜಪರಾಕ್ರಮವನ್ನು ತೋರಿಸಿ ರೋಷಾಗ್ನಿಯನ್ನು ಸುರಿಸುತ್ತಾ ನಿಮ್ಮ ಮೇಲೆ ದೊರೆತನ ಮಾಡುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ನನ್ನ ಜೀವದಾಣೆ, ನಾನು ರಾಜನಾಗಿ ನಿಮ್ಮ ಮೇಲೆ ದೊರೆತನ ಮಾಡುವೆನೆಂದು ಪ್ರಮಾಣ ಮಾಡುತ್ತೇನೆ. ನಾನು ನನ್ನ ಬಲವಾದ ಕೈಯನ್ನು ಮತ್ತು ಶಕ್ತಿಯುತವಾದ ತೋಳನ್ನು ಮೇಲೆತ್ತಿ ನಿಮ್ಮನ್ನು ದಂಡಿಸುವೆನು. ನಿಮ್ಮ ವಿರುದ್ಧವಾಗಿ ನನ್ನ ಕೋಪವನ್ನು ತೋರ್ಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ, ನನ್ನ ಜೀವದಾಣೆ, ನಿಶ್ಚಯವಾಗಿ ಬಲವಾದ ಕೈಯಿಂದಲೂ, ಚಾಚಿದ ತೋಳಿನಿಂದಲೂ, ಸುರಿಸಿದ ರೋಷದಿಂದಲೂ ನಾನು ನಿಮ್ಮ ಮೇಲೆ ಅಧಿಕಾರ ನಡೆಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 20:33
13 ತಿಳಿವುಗಳ ಹೋಲಿಕೆ  

ನಾನೇ ನಿಮಗೆ ವಿರುದ್ಧವಾಗಿ ಕಡುಕೋಪದಿಂದ, ರೋಷಾವೇಶದಿಂದ, ಕ್ರೋಧಭರಿತನಾಗಿ, ಚಾಚಿದ ಕೈಯಿಂದಲೂ ಭುಜಪರಾಕ್ರಮದಿಂದಲೂ ಯುದ್ಧಮಾಡುವೆನು.


ಆದಕಾರಣ ನಾನೂ ಕೋಪೋದ್ರೇಕದಿಂದ ವರ್ತಿಸುವೆನು. ಅವರನ್ನು ಕಟಾಕ್ಷಿಸೆನು, ಉಳಿಸೆನು; ಅವರು ನನ್ನ ಕಿವಿಯಲ್ಲಿ ಎಷ್ಟು ಗಟ್ಟಿಯಾಗಿ ಕೂಗಿಕೊಂಡರೂ ನಾನು ಆಲಿಸೆನು.”


ಆದಕಾರಣ, ನನ್ನ ರೌದ್ರಕೋಪಾಗ್ನಿ ಸುರಿದು ಜುದೇಯದ ಊರುಗಳಲ್ಲೂ ಜೆರುಸಲೇಮಿನ ಬೀದಿಗಳಲ್ಲೂ ಧಗಧಗಿಸಿತು. ಅವು ಈಗಲೂ ಹಾಳುಪಾಳಾಗಿವೆ.’


“ಇಸ್ರಯೇಲಿನ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಇಂತೆನ್ನುತ್ತಾರೆ: ‘ನನ್ನ ರೌದ್ರ ಕೋಪಾಗ್ನಿಯು ಜೆರುಸಲೇಮಿನ ಮೇಲೆ ಹೇಗೆ ಸುರಿಯಿತೋ ಹಾಗೆಯೆ ನೀವು ಈಜಿಪ್ಟಿನಲ್ಲಿ ಕಾಲಿಟ್ಟ ಕೂಡಲೆ ನನ್ನ ಕೋಪಾಗ್ನಿ ನಿಮ್ಮ ಮೇಲೆಯೂ ಸುರಿಯುವುದು. ನೀವು ಅಪವಾದ, ಅಪಹಾಸ್ಯಕ್ಕೂ, ಶಾಪ, ನಿಂದೆ, ದೂಷಣೆಗಳಿಗೂ ಗುರಿಯಾಗುವಿರಿ. ಈ ನಾಡನ್ನು ನೀವು ಮತ್ತೆ ನೋಡಲಾರಿರಿ.’


ಬಿಲ್ಲುಹಿಡಿದು ಬಂದ ಆತ ವೈರಿಯಂತೆ ಬಲಗೈಯೆತ್ತಿ ನಿಂತ ವಿರೋಧಿಯಂತೆ, ಸಂಹರಿಸಿಬಿಟ್ಟ ಸುಂದರ ಪ್ರಜೆಯೆಲ್ಲರನ್ನು ರೋಷಾಗ್ನಿ ಸುರಿಸಿ ಭಸ್ಮಮಾಡಿದ ಸಿಯೋನ್ ಗುಡಾರವನ್ನು.


ಈಜಿಪ್ಟಿನವರು ಕೇವಲ ಮನುಷ್ಯರೇ ಹೊರತು ದೇವರಲ್ಲ. ಅವರ ಅಶ್ವಗಳು ಮೂಳೆಮಾಂಸವೇ ಹೊರತು ಆಧ್ಯಾತ್ಮಿಕ ದಿವ್ಯಶಕ್ತಿಯಲ್ಲ. ಸರ್ವೇಶ್ವರ ಕೈಯೆತ್ತುವಾಗ ಅದಕ್ಕೆ ವಿರುದ್ಧ ಸಹಾಯ ಮಾಡಿದ ಅವನು ಮುಗ್ಗರಿಸುವನು. ಆ ಸಹಾಯ ಪಡೆದ ಅವನು ಬಿದ್ದುಹೋಗುವನು. ಎಲ್ಲರೂ ಒಟ್ಟಿಗೆ ಅಳಿದುಹೋಗುವರು.


ಬಾಬಿಲೋನಿನ ರಾಜ್ಯಪಾಲರು, ಮಂತ್ರಿಗಳು, ಅಧಿಪತಿಗಳು, ಅಧಿಕಾರಿಗಳು, ಯೋಧರು, ಇವರೆಲ್ಲರಿಗೆ ತಲೆಗೇರುವ ತನಕ ಕುಡಿಸುವೆನು. ಅವರು ಎಂದೆಂದಿಗೂ ಎಚ್ಚರಗೊಳ್ಳದೆ ಚಿರನಿದ್ರೆ ಮಾಡುವರು ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರನೆಂಬ ರಾಜಾಧಿರಾಜರು.”


ನಾನು ಅವರ ವಿರುದ್ಧ ಕೈಯೆತ್ತಿ ಅವರು ವಾಸವಾಗಿರುವ ದೇಶವನ್ನೆಲ್ಲಾ ಮರುಭೂಮಿಯಿಂದ ದಿಬ್ಬದವರೆಗೂ ಹಾಳುಪಾಳು ಮಾಡುವೆನು; ನಾನೇ ಸರ್ವೇಶ್ವರ ಎಂದು ಅವರಿಗೆ ಗೊತ್ತಾಗುವುದು.”


ಬೆಳ್ಳಿ ಕುಲುಮೆಯೊಳಗೆ ಕರಗುವಂತೆ ನೀವು ನನ್ನ ರೋಷಾಗ್ನಿಯಲ್ಲಿ ಕರಗಿಬಿಡುವಿರಿ; ನಿಮ್ಮ ಮೇಲೆ ರೋಷಾಗ್ನಿಯನ್ನು ಸುರಿಸಿದ ನಾನು ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು.”


ಆದುದರಿಂದ ಇಗೋ, ನಾನು ಅವಳನ್ನು ಪುನಃ ಬೆಂಗಾಡಿಗೆ ಕರೆದೊಯ್ಯುವೆನು. ಹೃದಯಂಗಮವಾಗಿ ಅವಳನ್ನು ಒಲಿಸಿಕೊಂಡು ಮಾತಾಡುವೆನು.


ಆದುದರಿಂದ ನೀನು ಇಸ್ರಯೇಲರಿಗೆ ನನ್ನ ಪರವಾಗಿ ಹೀಗೆಂದು ಹೇಳು: ‘ನಾನೇ ಸರ್ವೇಶ್ವರ. ಈಜಿಪ್ಟಿನವರು ನಿಮ್ಮ ಮೇಲೆ ಹೊರಿಸಿರುವ ದುಡಿಮೆಯನ್ನು ನೀಗಿಸುವೆನು, ದಾಸತ್ವವನ್ನು ತೊಲಗಿಸುವೆನು. ಅವರಿಗೆ ಕಠಿಣಶಿಕ್ಷೆಗಳನ್ನು ವಿಧಿಸುವೆನು, ನಿಮ್ಮನ್ನು ಸಂರಕ್ಷಿಸುವೆನು.


ನಿಮ್ಮ ಪ್ರಜೆಗಳಾದ ಇಸ್ರಯೇಲರಿಗೆ ಸೇರದವನಾದ ಒಬ್ಬ ಪರದೇಶೀಯನು ನಿಮ್ಮ ನಾಮಸ್ತುತಿಗಾಗಿ ದೂರದೇಶದಿಂದ ಬಂದು ಈ ಆಲಯದ ಮುಂದೆ ನಿಂತು, ನಿಮ್ಮನ್ನು ಪ್ರಾರ್ಥಿಸಿದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು