ಯೆಹೆಜ್ಕೇಲನು 20:39 - ಕನ್ನಡ ಸತ್ಯವೇದವು C.L. Bible (BSI)39 “ಇಸ್ರಯೇಲ್ ವಂಶದವರೇ, ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಹೋಗಿರಿ, ನಿಮ್ಮ ವಿಗ್ರಹಗಳನ್ನು ಪೂಜಿಸಿರಿ; ಮುಂದಕ್ಕಾದರು ನನ್ನ ಮಾತನ್ನು ಕೇಳಿಯೇ ಕೇಳುವಿರಿ; ಇನ್ನು ಮೇಲಾದರು ನನ್ನ ಪರಿಶುದ್ಧನಾಮವನ್ನು ನಿಮ್ಮ ಬಲಿಗಳಿಂದ ಹಾಗೂ ವಿಗ್ರಹಗಳಿಂದ ನೀವು ಅಪಕೀರ್ತಿಗೆ ಒಳಪಡಿಸಲಾರಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಇಸ್ರಾಯೇಲ್ ವಂಶದವರೇ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಹೋಗಿರಿ, ನಿಮ್ಮ ವಿಗ್ರಹಗಳನ್ನು ಸೇವಿಸಿಕೊಳ್ಳಿರಿ; ಇನ್ನು ಮುಂದೆ ನನ್ನ ಮಾತನ್ನು ಕೇಳಿಯೇ ಕೇಳುವಿರಿ, ಇನ್ನು ಮೇಲಾದರೂ ನನ್ನ ಪರಿಶುದ್ಧ ನಾಮವನ್ನು ನಿಮ್ಮ ಬಲಿಗಳಿಂದಲೂ, ವಿಗ್ರಹಗಳಿಂದಲೂ ನೀವು ಅಪಕೀರ್ತಿಗೆ ಗುರಿಮಾಡುವುದೇ ಇಲ್ಲ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ಇಸ್ರಾಯೇಲ್ ವಂಶದವರೇ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಹೋಗಿರಿ, ನಿಮ್ಮ ಬೊಂಬೆಗಳನ್ನು ಸೇವಿಸಿಕೊಳ್ಳಿರಿ; ಮುಂದಂತು ನನ್ನ ಮಾತನ್ನು ಕೇಳೇ ಕೇಳುವಿರಿ, ಇನ್ನು ಮೇಲೆ ನನ್ನ ಪರಿಶುದ್ಧನಾಮವನ್ನು ನಿಮ್ಮ ಬಲಿಗಳಿಂದಲೂ ಬೊಂಬೆಗಳಿಂದಲೂ ನೀವು ಅಪಕೀರ್ತಿಗೆ ಗುರಿಮಾಡುವದೇ ಇಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್39 ಇಸ್ರೇಲ್ ಜನರೇ, ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಆ ಹೊಲಸು ವಿಗ್ರಹಗಳನ್ನು ಆರಾಧಿಸಬೇಕೆನ್ನುವವನು ಹೋಗಿ ಆರಾಧಿಸಲಿ. ಮುಂದಿನ ಕಾಲದಲ್ಲಂತೂ ನೀವು ನನ್ನ ಬುದ್ಧಿಮಾತನ್ನು ಕೇಳೇ ಕೇಳುವಿರಿ. ನನ್ನ ಪರಿಶುದ್ಧ ಹೆಸರನ್ನು ನೀವು ನಿಮ್ಮ ಬಲಿಗಳಿಂದಲೂ ಬೊಂಬೆಗಳಿಂದಲೂ ಅಪಕೀರ್ತಿಗೆ ಗುರಿಮಾಡುವುದೇ ಇಲ್ಲ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 “ ‘ನಿಮ್ಮ ವಿಷಯವಾಗಿ, ಓ ಇಸ್ರಾಯೇಲಿನ ಮನೆತನದವರೇ, ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಹೋಗಿರಿ, ನಿಮ್ಮ ನಿಮ್ಮ ವಿಗ್ರಹಗಳನ್ನು ಸೇವಿಸಿರಿ. ಆದರೆ ನಂತರ ನೀವು ಖಂಡಿತವಾಗಿಯೂ ನನ್ನ ಮಾತನ್ನು ಕೇಳುತ್ತೀರಿ ಮತ್ತು ನಿಮ್ಮ ದಾನಗಳಿಂದಲೂ, ನಿಮ್ಮ ವಿಗ್ರಹಗಳಿಂದಲೂ ಇನ್ನು ಮೇಲೆ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಪಡಿಸಬೇಡಿರಿ. ಅಧ್ಯಾಯವನ್ನು ನೋಡಿ |