Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 20:40 - ಕನ್ನಡ ಸತ್ಯವೇದವು C.L. Bible (BSI)

40 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನಾಡಿನಲ್ಲಿ ಇಸ್ರಯೇಲ್ ವಂಶದವರೆಲ್ಲರೂ ನನ್ನ ಪರಿಶುದ್ಧ ಬೆಟ್ಟದಲ್ಲೇ, ಇಸ್ರಯೇಲಿನ ಪರ್ವತಾಗ್ರದಲ್ಲೇ, ನನ್ನನ್ನು ಪೂಜಿಸುವರು; ಅಲ್ಲೇ ಅವರಿಗೆ ಪ್ರಸನ್ನನಾಗುವೆನು, ಅಲ್ಲೇ ನಿಮ್ಮ ಕಾಣಿಕೆಗಳನ್ನೂ ಉತ್ತಮ ನೈವೇದ್ಯಗಳನ್ನೂ ಮೀಸಲಾದುದೆಲ್ಲವನ್ನೂ ಅಂಗೀಕರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ದೇಶದಲ್ಲಿ ಇಸ್ರಾಯೇಲ್ ವಂಶದವರೆಲ್ಲರೂ ನನ್ನ ಪರಿಶುದ್ಧವಾದ ಬೆಟ್ಟದಲ್ಲಿ, ಇಸ್ರಾಯೇಲಿನ ಪರ್ವತಾಗ್ರದಲ್ಲಿ ನನ್ನನ್ನು ಸೇವಿಸುವರು; ಅಲ್ಲೇ ಅವರಿಗೆ ಪ್ರಸನ್ನನಾಗುವೆನು, ಅಲ್ಲೇ ನಿಮ್ಮ ಕಾಣಿಕೆಗಳನ್ನೂ, ಉತ್ತಮ ನೈವೇದ್ಯಗಳನ್ನೂ, ಮೀಸಲಾದ ಎಲ್ಲವನ್ನೂ ಬರಮಾಡಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ದೇಶದಲ್ಲಿ ಇಸ್ರಾಯೇಲ್ ವಂಶದವರೆಲ್ಲರೂ ನನ್ನ ಪರಿಶುದ್ಧವಾದ ಬೆಟ್ಟದಲ್ಲಿ, ಇಸ್ರಾಯೇಲಿನ ಪರ್ವತಾಗ್ರದಲ್ಲಿ ನನ್ನನ್ನು ಸೇವಿಸುವರು; ಅಲ್ಲೇ ಅವರಿಗೆ ಪ್ರಸನ್ನನಾಗುವೆನು, ಅಲ್ಲೇ ನಿಮ್ಮ ಕಾಣಿಕೆಗಳನ್ನೂ ಉತ್ತಮ ನೈವೇದ್ಯಗಳನ್ನೂ ಮೀಸಲಾದದೆಲ್ಲವನ್ನೂ ಬರಮಾಡಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ಇಸ್ರೇಲಿನ ಎತ್ತರವಾದ ನನ್ನ ಪವಿತ್ರಪರ್ವತಕ್ಕೆ ಜನರು ಬರಲೇಬೇಕು. ಅಲ್ಲಿ ಅವರು ನನ್ನ ಸೇವೆ ಮಾಡಲೇಬೇಕು. ಇಡೀ ಇಸ್ರೇಲ್ ಜನಾಂಗವು ತಮ್ಮ ದೇಶದಲ್ಲಿರುವುದು. ಅಲ್ಲಿ ನಾನು ಅವರನ್ನು ಸ್ವೀಕರಿಸಿಕೊಳ್ಳುವೆನು. ಅಲ್ಲಿ ನೀವು ನಿಮ್ಮ ಕಾಣಿಕೆಗಳನ್ನು ಪ್ರಥಮ ಫಲಗಳನ್ನು ಮತ್ತು ಎಲ್ಲಾ ಪವಿತ್ರ ಕಾಣಿಕೆಗಳನ್ನು ನನಗೆ ತರಬೇಕೆಂದು ಅಪೇಕ್ಷಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ನನ್ನ ಪರಿಶುದ್ಧ ಪರ್ವತದಲ್ಲಿಯೇ, ಇಸ್ರಾಯೇಲಿನ ಉನ್ನತ ಪರ್ವತದಲ್ಲಿಯೇ ಇಸ್ರಾಯೇಲಿನ ಮನೆತನದವರೆಲ್ಲರೂ, ದೇಶದಲ್ಲಿರುವವರೆಲ್ಲರೂ ನನ್ನನ್ನು ಸೇವಿಸುವರು. ನಾನು ಅಲ್ಲಿ ಅವರಿಗೆ ಮೆಚ್ಚಿ, ನಿಮ್ಮ ಉತ್ತಮ ಅರ್ಪಣೆಗಳನ್ನೂ, ನಿಮ್ಮ ಕಾಣಿಕೆಗಳ ಪ್ರಥಮ ಫಲವನ್ನೂ, ನಿಮ್ಮ ಎಲ್ಲಾ ಪರಿಶುದ್ಧ ಸಂಗತಿಗಳನ್ನೂ ಅಂಗೀಕರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 20:40
29 ತಿಳಿವುಗಳ ಹೋಲಿಕೆ  

ಅವರೆಲ್ಲರನ್ನು ನನ್ನ ಪವಿತ್ರಪರ್ವತಕ್ಕೆ ಬರಮಾಡುವೆನು; ನನ್ನ ಪ್ರಾರ್ಥನಾಲಯದಲ್ಲಿ ಅವರನ್ನು ಆನಂದಗೊಳಿಸುವೆನು; ನನ್ನ ಬಲಿಪೀಠದ ಮೇಲೆ ಅವರು ನೀಡುವ ದಹನಬಲಿಗಳನ್ನೂ ಅರ್ಪಣೆಗಳನ್ನೂ ಸಂತೋಷದಿಂದ ಸ್ವೀಕರಿಸುವೆನು. ನನ್ನ ಆಲಯ ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯ ಎನಿಸಿಕೊಳ್ಳುವುದು.”


ಪೂರ್ವದಿನಗಳಲ್ಲಿ, ಪುರಾತನ ಕಾಲದಲ್ಲಿ ಇದ್ದಂತೆ ಜೂದಾ ಮತ್ತು ಜೆರುಸಲೇಮಿನ ಜನರ ಕಾಣಿಕೆಗಳು ಆ ಸ್ವಾಮಿಗೆ ಮೆಚ್ಚುಗೆಯಾಗಿರುವುವು.”


ನಿನ್ನಲ್ಲಿ ಕೂಡುವುವು ಕೇದಾರಿನ ಸಕಲ ಮಂದೆಗಳು ಬಲಿಯರ್ಪಣೆಗೊದಗುವುವು ನೆಬಾಯೋತಿನ ಟಗರುಗಳು. ಏರುವುವು ನನಗೆ ಸಮರ್ಪಕವಾದ ಹೋಮವಾಗಿ ಬಲಿಪೀಠವನು. ಚಂದಗೊಳಿಸುವೆನು ನನ್ನ ಸುಂದರವಾದ ಆಲಯವನು.


ನೀವೂ ಸಹ ಸಜೀವ ಶಿಲೆಗಳಾಗಿದ್ದೀರಿ; ಆಧ್ಯಾತ್ಮಿಕ ದೇವಾಲಯವನ್ನು ನಿರ್ಮಿಸಲು ನಿಮ್ಮನ್ನೇ ಅರ್ಪಿಸಿಕೊಳ್ಳಿ. ಆ ದೇವಾಲಯದಲ್ಲೇ ಯೇಸುಕ್ರಿಸ್ತರ ಮುಖಾಂತರ ದೇವರಿಗೆ ಮೆಚ್ಚುಗೆಯಾಗಿರುವ ಆಧ್ಯಾತ್ಮಿಕ ಬಲಿಗಳನ್ನು ಸಮರ್ಪಿಸುವ ಪವಿತ್ರ ಯಾಜಕವರ್ಗದವರು ನೀವಾಗಿರುವಿರಿ.


ಆದ್ದರಿಂದ, ಪ್ರಭುವಾದ ಯೇಸುಕ್ರಿಸ್ತರನ್ನು ಮುಕ್ತಕಂಠದಿಂದ ಗುಣಗಾನಮಾಡುತ್ತಾ ಅವರ ಮುಖಾಂತರ ಸ್ತುತಿಯೆಂಬ ಬಲಿಯನ್ನು ದೇವರಿಗೆ ಸತತವಾಗಿ ಸಮರ್ಪಿಸೋಣ.


ಏಳು ದಿನಗಳ ಕಾರ್ಯವನ್ನು ಮುಗಿಸಿದ ಬಳಿಕ, ಎಂಟನೆಯ ದಿನದಲ್ಲಿಯೂ ಮುಂದೆಯೂ ಯಾಜಕರು ಬಲಿಪೀಠದ ಮೇಲೆ ನಿ‍ಮ್ಮ ಪರವಾಗಿ ದಹನಬಲಿಗಳನ್ನೂ ಶಾಂತಿಸಮಾಧಾನ ಬಲಿಗಳನ್ನೂ ಅರ್ಪಿಸಬೇಕು; ಆಗ ನಾನು ನಿಮಗೆ ಪ್ರಸನ್ನನಾಗುವೆನು; ಇದು ಸರ್ವೇಶ್ವರನಾದ ದೇವರ ನುಡಿ.”


ಹೌದು, ನೆಡುವೆನು ಇಸ್ರಯೇಲಿನಾ ಪರ್ವತಾಗ್ರದಲ್ಲಿ. ಆಗುವುದದು ಸೊಂಪಾದ ದೇವದಾರು ಮರ, ರೆಂಬೆಗಳನದು ಹರಡಿಕೊಂಡು ಕೊಡುವುದು ಫಲ. ಸಕಲವಿಧ ಪಕ್ಷಿಗಳು ವಾಸಿಸುವುವು ಅದರಲ್ಲಿ.


ಅಮವಾಸ್ಯೆಯಿಂದ ಅಮವಾಸ್ಯೆಯವರೆಗೆ ಸಬ್ಬತ್‍ದಿನದಿಂದ ಸಬ್ಬತ್‍ದಿನದವರೆಗೆ ಮನುಜರೆಲ್ಲರು ಬರುವರು ನನ್ನನ್ನು ಆರಾಧಿಸಲಿಕ್ಕೆ.” ಇದು ಸರ್ವೇಶ್ವರ ಸ್ವಾಮಿಯ ನುಡಿ.


ಆಗ ನಾನು ಪವಿತ್ರಾತ್ಮವಶನಾದೆ. ಆ ದೇವದೂತನು ನನ್ನನ್ನು ಎತ್ತರವಾದ ಬೆಟ್ಟದ ಮೇಲೆ ಕೊಂಡೊಯ್ದನು. ಅಲ್ಲಿ ನನಗೆ ಪವಿತ್ರನಗರವಾದ ಜೆರುಸಲೇಮನ್ನು ತೋರಿಸಿದನು. ಅದು ಸ್ವರ್ಗದಲ್ಲಿರುವ ದೇವರ ಬಳಿಯಿಂದ ಕೆಳಗಿಳಿದು ಬರುತ್ತಿತ್ತು;


ಆಕಾಶದಲ್ಲಿ ಚಿಹ್ನೆಯೊಂದು ಕಾಣಿಸಿಕೊಂಡಿತು. ಮಹಿಳೆಯೊಬ್ಬಳು ಸೂರ್ಯಭೂಷಿತಳಾಗಿದ್ದಳು. ಆಕೆಯ ಪಾದದಡಿ ಚಂದ್ರನಿದ್ದನು. ತಲೆಯ ಮೇಲೆ ಹನ್ನೆರಡು ನಕ್ಷತ್ರ ಖಚಿತವಾದ ಕಿರೀಟವಿತ್ತು.


“ಸೂರ್ಯೋದಯದಿಂದ ಸೂರ್ಯಾಸ್ತಮದವರೆಗೆ ಸರ್ವರಾಷ್ಟ್ರಗಳಲ್ಲಿ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು. ಎಲ್ಲೆಲ್ಲಿಯೂ ನನಗೆ ಧೂಪಾರತಿಯನ್ನೂ ಕಾಣಿಕೆಗಳನ್ನೂ ಜನರು ಅರ್ಪಿಸುವರು. ಹೌದು, ಸರ್ವರಾಷ್ಟ್ರಗಳಲ್ಲಿಯೂ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


ಜನರೇ, ಪವಿತ್ರಪರ್ವತದ ಮೇಲೆ ನನ್ನ ದಂಡನೆಯ ಕಹಿಪಾನಮಾಡಿದಿರಿ. ಅಂತೆಯೇ ಸಕಲ ರಾಷ್ಟ್ರಗಳೂ ಕಹಿಪಾನ ಮಾಡುವುವು. ಹೌದು, ಪದೇಪದೇ ಪಾನಮಾಡಿ ತೂರಾಡುವುವು. ಅಂತ್ಯದಲ್ಲಿ ಇಲ್ಲದಂತಾಗುವುವು.


ಅವರು ಬಂದು ಹಾಡುವರು ಸಿಯೋನ್ ಶಿಖರದಲ್ಲಿ ಬರುವರು ಪ್ರವಾಹ ಪ್ರವಾಹವಾಗಿ ಧಾನ್ಯ, ದ್ರಾಕ್ಷಾರಸ, ಎಣ್ಣೆ, ಕುರಿ, ಕುರಿಮರಿ, ಸರ್ವೇಶ್ವರನ ಈ ವರದಾನಗಳನ್ನು ಅನುಭವಿಸಲಿಕ್ಕಾಗಿ. ಹದವಾಗಿ ನೀರುಹಾಯಿಸಿದ ಉದ್ಯಾನವನದಂತೆ ಅವರ ಜೀವನ ಇನ್ನು ಅವರಿಗಿರದು ವ್ಯಸನ.


ನನಗೆ ಕಾಣಿಕೆಯಾಗಿ ಎಲ್ಲ ಜನಾಂಗಗಳಿಂದ ನಿಮ್ಮ ಸಹೋದರರನ್ನು ಕರೆದುತರುವರು. ಇಸ್ರಯೇಲರು ನನ್ನ ಆಲಯಕ್ಕೆ ಶುದ್ಧ ಪಾತ್ರೆಯಲ್ಲಿ ನೈವೇದ್ಯವನ್ನು ತೆಗೆದುಕೊಂಡು ಬರುವಂತೆ, ಅವರನ್ನು ಕುದುರೆ, ತೇರು, ಪಲ್ಲಕ್ಕಿ, ಹೇಸರಗತ್ತೆ, ಒಂಟೆ, ಇವುಗಳ ಮೇಲೆ ಏರಿಸಿಕೊಂಡು ಜೆರುಸಲೇಮೆಂಬ ನನ್ನ ಪವಿತ್ರ ಪರ್ವತಕ್ಕೆ ಕರೆದುತರುವರು.


ಸೃಷ್ಟಿಮಾತ್ರವಲ್ಲ, ದೇವರ ವರದಾನಗಳಲ್ಲಿ ಪ್ರಥಮಫಲವಾಗಿ ಪವಿತ್ರಾತ್ಮ ಅವರನ್ನೇ ಪಡೆದಿರುವ ನಾವು ಸಹ ನಮ್ಮೊಳಗೇ ನರಳುತ್ತಿದ್ದೇವೆ. ದೇವರ ಮಕ್ಕಳಿಗೆ ದೊರೆಯುವ ಸೌಭಾಗ್ಯವನ್ನೂ ನಮ್ಮ ಸಂಪೂರ್ಣ ವಿಮೋಚನೆಯನ್ನೂ ನಿರೀಕ್ಷಿಸುತ್ತಿದ್ದೇವೆ.


ಇವುಗಳಲ್ಲಿ ಅರಸರ ಸೇವಕನಾದ ನಾನು ಅರಸರಿಗೆ ಅರ್ಪಿಸುತ್ತೇನೆ. ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಪ್ರಸನ್ನರಾಗಲಿ!” ಎಂದು ಹೇಳಿದನು.


ಸರ್ವೇಶ್ವರನಾದ ದೇವರ ವಾಣಿಯಿದು; ನಾನೇ ನೆಡುವೆನು ರೆಂಬೆಯೊಂದನು ಎತ್ತರದ ದೇವದಾರು ಮರದ ಮೇಲಿಂದ ತಂದು ತುಟ್ಟತುದಿಯ ಚಿಗುರುಗಳಲ್ಲೊಂದನ್ನು ತಂದು ಅತಿ ಕೋಮಲವಾದುದನ್ನು ಚಿವುಟಿ ತಂದು, ನೆಡುವೆನದನು ಉನ್ನತೋನ್ನತವಾದ ಪರ್ವತದಲ್ಲಿ.


ರೆಕ್ಕೆ ತೆರೆದು ನೆರಳು ನೀಡುವ ಕೆರೂಬಿ ನೀನಾಗಿದ್ದೆ ದೇವರ ಪರಿಶುದ್ಧ ಮರೆಯಲ್ಲಿ ನಿನ್ನ ನಾ ನೆಲೆಗೊಳಿಸಿದ್ದೆ. ಕೆಂಡದ ಮಡುಮಧ್ಯೆ ನೀ ವಿಹಾರಮಾಡುತ್ತಿದ್ದೆ.


ನನ್ನನ್ನು ಇಸ್ರಯೇಲ್ ನಾಡಿಗೆ ತಂದು, ಅತ್ಯುನ್ನತ ಪರ್ವತದ ಮೇಲೆ ಇಳಿಸಿದರೆಂದು ದೇವರ ದರ್ಶನದಲ್ಲಿ ನನಗೆ ಕಂಡುಬಂದಿತು. ದಕ್ಷಿಣ ಕಡೆಯಲ್ಲಿ ಆ ಪರ್ವತದ ಮೇಲೆ ಪಟ್ಟಣದಂತಿರುವ ಒಂದು ಕಟ್ಟಡ ಕಾಣಿಸಿತು.


ಇದೇ ದೇವಸ್ಥಾನದ ನಿಯಮ. ಪರ್ವತಾಗ್ರದಲ್ಲಿನ ಅದರ ಪ್ರದೇಶವೆಲ್ಲ ಸುತ್ತುಮುತ್ತಲು ಅತಿಪರಿಶುದ್ಧವಾಗಿರಬೇಕು. ಇಗೋ, ದೇವಸ್ಥಾನದ ನಿಯಮ ಇದೇ.”


ನೀನು ನನಗೆ ಎದುರಾಗಿ ದಂಗೆಯೆದ್ದು ಮಾಡಿದ ನಾನಾ ದುಷ್ಕೃತ್ಯಗಳಿಗಾಗಿ ಆ ದಿನದಂದು ನೀನು ನಾಚಿಕೆಪಡುವ ಅವಶ್ಯಕತೆ ಇರುವುದಿಲ್ಲ. ಏಕೆಂದರೆ ಅತಿ ಗರ್ವದಿಂದ ಮೆರೆಯುವವರನ್ನು ನಿನ್ನ ಮಧ್ಯೆಯಿಂದ ತೊಲಗಿಸಿಬಿಡುವೆನು. ಅಂದಿನಿಂದ ನನ್ನ ಪವಿತ್ರ ಪರ್ವತದ ಮೇಲೆ ನೀನು ಗರ್ವಪಡದೆ ಬಾಳುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು