Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 20:43 - ಕನ್ನಡ ಸತ್ಯವೇದವು C.L. Bible (BSI)

43 ನಿಮ್ಮನ್ನು ಅಪವಿತ್ರಗೊಳಿಸಿರುವ ನಿಮ್ಮ ನಡತೆಯನ್ನೂ ನಿಮ್ಮ ಎಲ್ಲಾ ಕಾರ್ಯಗಳನ್ನೂ ಅಲ್ಲಿ ನೆನಪಿಗೆ ತಂದುಕೊಂಡು, ನೀವು ನಡೆಸಿರುವ ಸಕಲ ದುಷ್ಕೃತ್ಯಗಳ ನಿಮಿತ್ತ, ನಿಮ್ಮನ್ನು ನೋಡಿ ನೀವೇ ಅಸಹ್ಯಪಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ನೀವು ನಿಮ್ಮನ್ನು ಹೊಲಸು ಮಾಡಿಕೊಂಡಿರುವ ನಿಮ್ಮ ನಡತೆಯನ್ನೂ, ನಿಮ್ಮ ಎಲ್ಲಾ ಕಾರ್ಯಗಳನ್ನೂ ಅಲ್ಲಿ ಜ್ಞಾಪಕಕ್ಕೆ ತಂದುಕೊಂಡು, ನೀವು ನಡೆಸಿರುವ ಸಕಲ ದುಷ್ಕೃತ್ಯಗಳ ನಿಮಿತ್ತ ನಿಮ್ಮನ್ನು ನೋಡಿ ನೀವೇ ಅಸಹ್ಯಪಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ನೀವು ನಿಮ್ಮನ್ನು ಹೊಲಸುಮಾಡಿಕೊಂಡಿರುವ ನಿಮ್ಮ ನಡತೆಯನ್ನೂ ನಿಮ್ಮ ಎಲ್ಲಾ ಕಾರ್ಯಗಳನ್ನೂ ಅಲ್ಲಿ ಜ್ಞಾಪಕಕ್ಕೆ ತಂದುಕೊಂಡು ನೀವು ನಡಿಸಿರುವ ಸಕಲ ದುಷ್ಕೃತ್ಯಗಳ ನಿವಿುತ್ತ ನಿಮ್ಮನ್ನು ನೋಡಿ ನೀವೇ ಅಸಹ್ಯಪಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ನಿಮ್ಮನ್ನು ನಿಮ್ಮ ದುಷ್ಟತ್ವದಿಂದ ಹೊಲಸು ಮಾಡಿಕೊಂಡದ್ದನ್ನು ಅಲ್ಲಿ ಜ್ಞಾಪಕಮಾಡಿಕೊಳ್ಳುವಿರಿ. ಆಗ ನೀವು ನಾಚಿಕೆಪಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಅಲ್ಲಿ ನೀವು ನಿಮ್ಮ ಮಾರ್ಗಗಳನ್ನು ಬಿಟ್ಟು, ನೀವು ಯಾವ ಸಂಗತಿಗಳಿಂದ ಅಶುದ್ಧವಾಗಿದ್ದೀರೋ, ಆ ನಿಮ್ಮ ಕ್ರಿಯೆಗಳನ್ನೆಲ್ಲಾ ಜ್ಞಾಪಕ ಮಾಡಿಕೊಳ್ಳುವಿರಿ. ನೀವು ಮಾಡಿದ ನಿಮ್ಮ ಎಲ್ಲಾ ಕೆಟ್ಟತನದ ನಿಮಿತ್ತವಾಗಿ ನಿಮ್ಮ ಸ್ವಂತ ದೃಷ್ಟಿಯಲ್ಲಿಯೇ ನೀವು ಅಸಹ್ಯರಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 20:43
12 ತಿಳಿವುಗಳ ಹೋಲಿಕೆ  

“ನಾನು ನನ್ನ ನಿವಾಸಕ್ಕೆ ಹಿಂದಿರುಗುವೆನು. ನನ್ನ ಜನರು ತಮ್ಮ ದೋಷಫಲವನ್ನು ಅನುಭವಿಸಿ, ನನ್ನ ಸಾನಿಧ್ಯವನ್ನು ಹರಸುವ ತನಕ ಅಲ್ಲೇ ಇರುವೆನು. ಸಂಕಟದಲ್ಲಿ ಸಿಕ್ಕಿಕೊಂಡಾಗ, ಕೂಡಲೆ ಅವರು ನನ್ನನ್ನು ಆಶ್ರಯಿಸುವರು.”


ಹೀಗೆ ಅಳಿದುಳಿದು ಸೆರೆಗೆ ಒಯ್ಯಲ್ಪಟ್ಟು ಜನಾಂಗಗಳ ಮಧ್ಯೆ ವಾಸಿಸುವ ನಿಮ್ಮವರು ನನ್ನನ್ನು ಸ್ಮರಿಸಿಕೊಳ್ಳುವರು. ಅನ್ಯದೇವತೆಗಳಲ್ಲಿನ ಮೋಹದಿಂದ ನನ್ನನ್ನು ತೊರೆದು ತಮ್ಮ ಹೃದಯವನ್ನು ಹಾಗು ತಮ್ಮ ವಿಗ್ರಹಗಳ ಮೇಲಣ ಕಾಮದಿಂದ ದೇವದ್ರೋಹ ಮಾಡಿದ ತಮ್ಮ ಕಣ್ಣುಗಳನ್ನು ಭಂಗಪಡಿಸಿದವನು ನಾನೇ ಎಂಬುದಾಗಿ ನನ್ನನ್ನು ಜ್ಞಾಪಕಮಾಡಿಕೊಳ್ಳುವರು. ತಾವು ಬಹಳ ಅಸಹ್ಯಕಾರ್ಯಗಳನ್ನು ನಡೆಸಿ ಕೆಟ್ಟತನವನ್ನು ಮಾಡಿದ್ದೇವೆಂದು ತಮ್ಮನ್ನು ತಾವೇ ಹೇಸಿಕೊಳ್ಳುವರು.


ಆಗ ನೀವು ನಿಮ್ಮ ದುರ್ಮಾರ್ಗ, ದುರಾಚಾರಗಳನ್ನು ಜ್ಞಾಪಕಕ್ಕೆ ತಂದುಕೊಂಡು, ನಿಮ್ಮ ಅಪರಾಧಗಳ ಮತ್ತು ಅಸಹ್ಯಕಾರ್ಯಗಳ ನಿಮಿತ್ತ, ನಿಮಗೆ ನೀವೇ ಹೇಸಿಕೊಳ್ಳುವಿರಿ.”


ಎಫ್ರಯಿಮಿನ ಈ ಪ್ರಲಾಪ ನನ್ನ ಕಿವಿಗೆ ಬಿದ್ದಿದೆ: ‘ನೀನು ನನಗೆ ಶಿಕ್ಷೆ ವಿಧಿಸಿದೆ ಪಳಗದ ಹೋರಿಯಂತೆ ನಾನು ಆ ಶಿಕ್ಷೆಯನ್ನು ಅನುಭವಿಸಿದೆ. ನೀನು ನನ್ನನ್ನು ತಿರುಗಿಸು, ನೀ ತಿರುಗಿಸಿದ ಹಾಗೆ ನಾನು ತಿರುಗುವೆ. ನೀನೆ ನನ್ನ ದೇವರಾದ ಸರ್ವೇಶ್ವರನಲ್ಲವೆ?


ದೇವರ ಚಿತ್ತಾನುಸಾರವಾದ ನಿಮ್ಮ ದುಃಖದಿಂದ ಎಂಥಾ ಶ್ರದ್ಧೆ ಉಂಟಾಗಿದೆ ಎಂಬುದನ್ನು ಗಮನಿಸಿನೋಡಿರಿ; ನಿಮ್ಮಲ್ಲಿ ಎಂಥ ಉತ್ಸಾಹ, ದೋಷವಿಮುಕ್ತರಾಗಲು ಎಂಥ ಪ್ರಯಾಸ, ಎಷ್ಟು ರೋಷ, ಎಷ್ಟು ಆವೇಶ, ಎಷ್ಟು ಎಚ್ಚರಿಕೆ, ಎಷ್ಟು ಹಂಬಲ, ತಪ್ಪಿತಸ್ಥರನ್ನು ಶಿಕ್ಷಿಸಲು ಎಷ್ಟು ಕಟ್ಟುನಿಟ್ಟು! ನೀವು ನಿರ್ದೋಷಿಗಳೆಂಬುದಕ್ಕೆ ಇವೆಲ್ಲವೂ ಸಾದೃಶ್ಯಗಳಾಗಿವೆ.


ಸುಂಕವಸೂಲಿಯವನಾದರೋ ದೂರದಲ್ಲೇ ನಿಂತು, ತಲೆಯನ್ನೂ ಮೇಲಕ್ಕೆ ಎತ್ತದೆ, ‘ಓ ದೇವರೇ, ನಾನು ಪಾಪಿ; ನನಗೆ ದಯೆತೋರಿ,’ ಎನ್ನುತ್ತಾ ಎದೆಬಡಿದುಕೊಂಡ.


ಆದುದರಿಂದ ನಾನು ಹೇಳಿದ್ದೆಲ್ಲಕ್ಕಾಗಿ ವಿಷಾದಿಸುತ್ತೇನೆ ಬೂದಿಯಲು, ಧೂಳಿನಲು ಕುಳಿತು ಪಶ್ಚಾತ್ತಾಪಪಡುತ್ತೇನೆ.”


ನಾನು ನನ್ನ ಜನರನ್ನು ಅನ್ಯಜನಾಂಗಗಳ ವಶದಿಂದ ತಪ್ಪಿಸಿ ಆ ಶತ್ರುಗಳ ದೇಶಗಳಿಂದ ಒಟ್ಟುಗೂಡಿಸಿ, ಬಹುಜನಾಂಗಗಳ ಕಣ್ಣೆದುರಿಗೆ ಅವರ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು