Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 20:44 - ಕನ್ನಡ ಸತ್ಯವೇದವು C.L. Bible (BSI)

44 ಇಸ್ರಯೇಲ್ ವಂಶದವರೇ, ನಿಮ್ಮ ದುರ್ನಡತೆಗೂ ದುಷ್ಕೃತ್ಯಗಳಿಗೂ ತಕ್ಕ ಹಾಗೆ ನಾನು ನಿಮ್ಮನ್ನು ಸಹಿಸಿಕೊಂಡಿರುವಾಗ, ನಾನೇ ಸರ್ವೇಶ್ವರ ಎಂದು ನಿಮಗೆ ತಿಳಿಯುವುದು; ಇದು ಸರ್ವೇಶ್ವರನಾದ ದೇವರ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ಇಸ್ರಾಯೇಲ್ ವಂಶದವರೇ, ನಿಮ್ಮ ದುರ್ನಡತೆಗೂ, ದುಷ್ಕೃತ್ಯಗಳಿಗೂ ತಕ್ಕ ಹಾಗೆ ನಾನು ನಿಮ್ಮನ್ನು ದಂಡಿಸದೆ, ನನ್ನ ಹೆಸರಿನ ನಿಮಿತ್ತವೇ ನಾನು ನಿಮ್ಮನ್ನು ಸಹಿಸಿಕೊಂಡಿರುವಾಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು” ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

44 ಇಸ್ರಾಯೇಲ್ ವಂಶದವರೇ, ನಿಮ್ಮ ದುರ್ನಡತೆಗೂ ದುಷ್ಕೃತ್ಯಗಳಿಗೂ ತಕ್ಕ ಹಾಗೆ ನಾನು ನಿಮ್ಮನ್ನು ದಂಡಿಸದೆ ನನ್ನ ಹೆಸರಿನ ನಿವಿುತ್ತವೇ ನಾನು ನಿಮ್ಮನ್ನು ಸಹಿಸಿಕೊಂಡಿರುವಾಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು; ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 ಇಸ್ರೇಲ್ ಜನಾಂಗಗಳೇ, ನೀವು ಅನೇಕ ಕೆಟ್ಟ ವಿಷಯಗಳನ್ನು ಮಾಡಿರುತ್ತೀರಿ. ಆ ದುಷ್ಕೃತ್ಯಗಳಿಗಾಗಿ ನೀವು ನಾಶವಾಗಿ ಹೋಗಬೇಕಾಗಿತ್ತು. ಆದರೆ ನನ್ನ ಒಳ್ಳೆಯ ಹೆಸರಿನ ಸಲುವಾಗಿ ನೀವು ಹೊಂದಬೇಕಾದ ಶಿಕ್ಷೆಯನ್ನು ನಾನು ನಿಮಗೆ ವಿಧಿಸುವುದಿಲ್ಲ. ಆಗ ನಾನೇ ಒಡೆಯನಾದ ಯೆಹೋವನೆಂದು ತಿಳಿದುಕೊಳ್ಳುವಿರಿ.” ಇದು ನನ್ನ ಒಡೆಯನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 ಇಸ್ರಾಯೇಲಿನ ಮನೆತನದವರೇ, ನಿಮ್ಮ ದುರ್ಮಾರ್ಗಗಳ ಪ್ರಕಾರವಲ್ಲ, ನಿಮ್ಮ ದುಷ್ಕೃತ್ಯಗಳ ಪ್ರಕಾರವಲ್ಲ, ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಸಹಿಸಿಕೊಂಡಿರುವಾಗ, ನಾನೇ ಯೆಹೋವ ದೇವರೆಂದು ತಿಳಿದುಕೊಳ್ಳುವಿರಿ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 20:44
12 ತಿಳಿವುಗಳ ಹೋಲಿಕೆ  

ಈ ವಿಷಯದಲ್ಲಿ ಯೆಜೆಕಿಯೇಲನು ನಿಮಗೆ ಮುಂಗುರುತಾಗಿರುವನು. ಅವನು ಮಾಡಿದಂತೆಯೇ ಎಲ್ಲವನ್ನು ಮಾಡುವಿರಿ; ಇದು ಸಂಭವಿಸುವಾಗ ನಾನೇ ಸರ್ವೇಶ್ವರನಾದ ದೇವರು ಎಂದು ನಿಮಗೆ ಗೊತ್ತಾಗುವುದು.


ಆದರೂ ನಾನು ಯಾವ ಜನಾಂಗಗಳ ಮುಂದೆ ಅವರನ್ನು ಬಿಡುಗಡೆ ಮಾಡಿದೆನೋ, ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗಬಾರದೆಂದು ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡು, ಕೈಯನ್ನು ಹಿಂದಕ್ಕೆ ತೆಗೆದುಕೊಂಡೆ.


ಆದರೂ ಯಾವ ಜನಾಂಗಗಳ ಮುಂದೆ ಅವರನ್ನು ಪಾರುಮಾಡಿದೆನೋ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಬರಬಾರದೆಂದು ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡೆ.


ಆದರೂ, ‘ನಿಮ್ಮನ್ನು ಈಜಿಪ್ಟಿನಿಂದ ಪಾರುಮಾಡುವೆನು,’ ಎಂಬುದಾಗಿ ಜನಾಂಗಗಳ ಮುಂದೆಯೇ ನನ್ನನ್ನು ಇವರಿಗೆ ಪ್ರಕಟಿಸಿಕೊಂಡೆನಲ್ಲಾ ಎಂದು ಯೋಚಿಸಿ ಅವರ ಸುತ್ತಮುತ್ತಲಿನ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗದಂತೆ ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡೆ.


ನಮಗಲ್ಲ ಹೇ ಪ್ರಭು, ನಮಗಲ್ಲ ಮಹಿಮೆ I ನಿನ್ನ ನಾಮಕೇ ಸಲ್ಲಲಿ ಆ ಮಹಿಮೆ I ನಿನ್ನ ನೀತಿ ಸತ್ಯತೆಗಳ ನಿಮಿತ್ತವೆ II


ಇದರಿಂದಾಗಿ, ಮುಂದೆ ವಿಶ್ವಾಸಿಗಳಾಗಿ ನಿತ್ಯಜೀವ ಪಡೆಯುವವರಿಗೆ ಆದರ್ಶ ದೊರಕುವಂತೆ ಕ್ರಿಸ್ತಯೇಸು ನನಗೆ ಪೂರ್ಣ ಸಹನೆ ತೋರಿದರು. ಇದು ದೇವರ ಕರುಣೆಯೇ ಸರಿ.


ತಮ್ಮ ಪ್ರೀತಿಯ ಪುತ್ರನಲ್ಲೇ ಅವರು ನಮಗೆ ಉಚಿತವಾಗಿ ಅನುಗ್ರಹಿಸಿರುವ ಅತಿಶಯ ವರಪ್ರಸಾದಕ್ಕಾಗಿ ಅವರಿಗೆ ಸ್ತುತಿಸಲ್ಲಿಸೋಣ.


ನನಗೆ ವಿಮುಖರಾದ ದ್ರೋಹಿಗಳನ್ನು ನಿಮ್ಮಿಂದ ದೂರಕ್ಕೆ ಗುಡಿಸಿಬಿಡುವೆನು; ಅವರು ಪ್ರವಾಸಿಗಳಾಗಿದ್ದ ದೇಶದಿಂದ ನಾನು ಅವರನ್ನು ಬಿಡುಗಡೆ ಮಾಡಿದರೂ ಅವರು ಇಸ್ರಯೇಲ್ ನಾಡಿಗೆ ಸೇರುವುದೇ ಇಲ್ಲ; ಆಗ ನಾನೇ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು.


ದೇವಾ, ಮುಕ್ತಿದಾತ, ನೆರವಾಗು ನಿನ್ನ ನಾಮಮಹಿಮೆಯ ನಿಮಿತ್ತ I ಪಾಪಗಳನು ಅಳಿಸಿ ನಮ್ಮನುದ್ಧರಿಸು ನಿನ್ನ ನಾಮದ ಪ್ರಯುಕ್ತ II


ನಾನು ಈ ಒಡಂಬಡಿಕೆಯನ್ನು ನಿನ್ನೊಂದಿಗೆ ಮಾಡಿಕೊಳ್ಳುವಾಗ ನಾನೇ ಸರ್ವೇಶ್ವರ ಎಂದು ನಿನಗೆ ಗೊತ್ತಾಗುವುದು.


ಆಮೇಲೆ ಸರ್ವೇಶ್ವರ ಈ ವಾಣಿಯನ್ನು ನನಗೆ ದಯಪಾಲಿಸಿದರು -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು