Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 20:46 - ಕನ್ನಡ ಸತ್ಯವೇದವು C.L. Bible (BSI)

46 “ನರಪುತ್ರನೇ, ನೀನು ದಕ್ಷಿಣಾಭಿಮುಖನಾಗಿ, ಆ ಕಡೆಗೆ ಮಾತಾಡುತ್ತಾ ದಕ್ಷಿಣ ಸೀಮೆಯ ವನವನ್ನು ಉದ್ದೇಶಿಸಿ ಪ್ರಸ್ತಾಪವನ್ನೆತ್ತಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 “ನರಪುತ್ರನೇ, ನೀನು ದಕ್ಷಿಣಾಭಿಮುಖನಾಗಿ ಆ ಕಡೆಗೆ ಮಾತನಾಡುತ್ತಾ ದಕ್ಷಿಣ ಸೀಮೆಯ ವನದ ಪ್ರಸ್ತಾಪವನ್ನೆತ್ತಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

46 ನರಪುತ್ರನೇ, ನೀನು ದಕ್ಷಿಣಾಭಿಮುಖನಾಗಿ ಆ ಕಡೆಗೆ ಮಾತಾಡುತ್ತಾ ದಕ್ಷಿಣಸೀಮೆಯ ವನದ ಪ್ರಸ್ತಾಪವನ್ನೆತ್ತಿ ಆ ವನಕ್ಕೆ ಹೀಗೆ ಸಾರಿ ಹೇಳು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

46 “ನರಪುತ್ರನೇ, ಯೆಹೂದದ ದಕ್ಷಿಣದಲ್ಲಿರುವ ನೆಗೆವ್ ಕಡೆಗೆ ನೋಡು. ನೆಗೆವ್ ಅಡವಿಗೆ ವಿರುದ್ಧವಾಗಿ ಮಾತನಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

46 “ಮನುಷ್ಯಪುತ್ರನೇ, ದಕ್ಷಿಣದ ಕಡೆಗೆ ಮುಖಮಾಡಿ, ದಕ್ಷಿಣದ ಕಡೆಗೆ ಮಾತನಾಡು. ದಕ್ಷಿಣ ಬಯಲು ಮರುಭೂಮಿಗೆ ವಿರೋಧವಾಗಿ ಪ್ರವಾದಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 20:46
14 ತಿಳಿವುಗಳ ಹೋಲಿಕೆ  

“ಆದ್ದರಿಂದ ಆ ಸರ್ವೇಶ್ವರಸ್ವಾಮಿಯ ವಾಕ್ಯವನ್ನು ಗಮನಿಸು: ‘ಇಸ್ರಯೇಲಿಗೆ ವಿರುದ್ಧ ಪ್ರವಾದನೆ ಮಾಡಬೇಡ; ಇಸಾಕನ ಮನೆತನದ ವಿರುದ್ಧ ಮಾತೆತ್ತಬೇಡ; ಎಂದು ನೀನು ಹೇಳುತ್ತೀಯಲ್ಲವೆ?


“ನರಪುತ್ರನೇ, ನೀನು ಜೆರುಸಲೇಮಿಗೆ ಅಭಿಮುಖನಾಗಿ, ಅಲ್ಲಿನ ಪವಿತ್ರಸ್ಥಳಗಳ ಕಡೆಗೆ ಮಾತಾಡುತ್ತಾ , ಇಸ್ರಯೇಲ್ ನಾಡಿನ ಪ್ರಸ್ತಾಪವನ್ನೆತ್ತಿ ಆ ನಾಡಿಗೆ ಹೀಗೆ ಪ್ರವಾದಿಸು:


ದಕ್ಷಿಣ ನಾಡಿನ ನಗರಗಳು ಮುತ್ತಿಗೆಗೆ ತುತ್ತಾಗಿವೆ. ಅವುಗಳನ್ನು ಬಿಡಿಸಲು ಯಾರೂ ಇಲ್ಲ. ಜುದೇಯವೆಲ್ಲ ಸೆರೆಹೋಗಿದೆ; ಸಂಪೂರ್ಣವಾಗಿ ಸೆರೆಯಾಗಿದೆ’.”


ಆಗ ಆ ಕೆಡುಕರು, “ಪ್ರವಾದನೆ ಮಾಡಬೇಡ. ಇಂಥ ವಿಷಯಗಳಲ್ಲಿ ಪ್ರವಾದನೆಯ ಮಾತೆತ್ತಕೂಡದು. ಆ ವಿನಾಶ ನಮಗೆ ತಟ್ಟುವುದಿಲ್ಲ.


“ನರಪುತ್ರನೇ, ಇಸ್ರಯೇಲಿನ ಬೆಟ್ಟಗಳಿಗೆ ಅಭಿಮುಖನಾಗಿ ನಿಂತು ಅವುಗಳನ್ನು ಕುರಿತು ಈ ದೈವೋಕ್ತಿಯನ್ನು ನುಡಿ,


“ನಿನ್ನ ತೋಳಿಗೆ ಹೊದಿಕೆಯಿಲ್ಲದೆ, ಮುತ್ತಿಗೆಯಾದ ಜೆರುಸಲೇಮಿನ ಕಡೆಗೆ ಮೋರೆ ತಿರುಗಿಸಿ, ಅದರ ವಿರುದ್ಧ ಅಶುಭವನ್ನು ಪ್ರವಾದಿಸು.


ಆಯುಧ ಸನ್ನದ್ಧರಾದ ಸಂಹಾರಕರನ್ನು ನಿನಗೆ ವಿರುದ್ಧ ಏರ್ಪಡಿಸುವೆನು. ಅವರು ನಿನ್ನ ಶ್ರೇಷ್ಠ ದೇವದಾರುಗಳನ್ನು ಬೆಂಕಿಗೆ ಕಡಿದು ಹಾಕುವರು.


ನೆಗೇಬಿನ ಮೃಗಗಳನ್ನು ಕುರಿತ ದೈವವಾಣಿ : ಸಿಂಹಸಿಂಹಿಣಿಗಳಿಂದಲೂ ವಿಷಸರ್ಪ - ಘಟಸರ್ಪಗಳಿಂದಲೂ ಕೂಡಿದ ಭಯಂಕರ ಹಾಗೂ ಸಂಕಟಕರವಾದ ಆ ನಾಡಿನ ಮಾರ್ಗವಾಗಿ ತಮ್ಮ ಧನಕನಕಗಳನ್ನು ಕತ್ತೆಗಳ ಮೇಲೂ ಆಸ್ತಿಪಾಸ್ತಿಗಳನ್ನು ಒಂಟೆಗಳ ಮೇಲೂ ಹೊರಿಸಿಕೊಂಡು ನಿಷ್ಪ್ರಯೋಜಕವಾದ ಆ ರಾಷ್ಟ್ರಕ್ಕೆ ಹೋಗುತ್ತಾರೆ.


ನಾನು ಮಾತಾಡಿದ ಮೇಲೆ ಅವರು ಮಾತೆತ್ತುತ್ತಿರಲಿಲ್ಲ ನನ್ನ ಮಾತು ಹನಿಹನಿಯಾಗಿ ಅವರ ಕಿವಿಗೆ ಬೀಳುತ್ತಿತ್ತು.


ನನ್ನ ಉಪದೇಶ ಹಸಿಹುಲ್ಲಿನ ಮೇಲೆ ಮೆಲ್ಲನೆ ಸುರಿವ ತುಂತುರುಗಳಂತೆ ನನ್ನ ಬೋಧೆ ಕಾಯಿಪಲ್ಯಗಳ ಮೇಲೆ ಮಂಜಿನಂತೆ ಬೀಳುವ ಹದಮಳೆಯಂತೆ.


ಆಮೇಲೆ ಸರ್ವೇಶ್ವರ ಈ ವಾಣಿಯನ್ನು ನನಗೆ ದಯಪಾಲಿಸಿದರು -


ನಾನು ನಿನ್ನಲ್ಲಿನ ಸಜ್ಜನರನ್ನೂ ದುರ್ಜನರನ್ನೂ ಸಂಹರಿಸಬೇಕೆಂದಿರುವುದರಿಂದ ನನ್ನ ಖಡ್ಗ ಒರೆಯಿಂದ ಹೊರಟು ದಕ್ಷಿಣದಿಂದ ಉತ್ತರವರೆಗೆ ಸಕಲ ನರಪ್ರಾಣಿಗಳ ಮೇಲೆ ಬೀಳುವುದು;


ಆದಕಾರಣ, ನರಪುತ್ರನೇ, ನೀನು ಇವರ ವಿಷಯವಾಗಿ ಶಾಪಹಾಕು, ತಪ್ಪದೆ ಹಾಕು,” ಎಂದು ಆಜ್ಞಾಪಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು