Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 20:5 - ಕನ್ನಡ ಸತ್ಯವೇದವು C.L. Bible (BSI)

5 ಸರ್ವೇಶ್ವರ ದೇವರು ಇಂತೆನ್ನುತ್ತಾರೆ - ನಾನು ಇಸ್ರಯೇಲರನ್ನು ಆರಿಸಿಕೊಂಡ ದಿನದಂದು ಯಕೋಬ ಸಂತಾನದವರಿಗೆ ಮಾತುಕೊಟ್ಟು, ‘ನಾನೇ ನಿಮ್ಮ ದೇವರಾದ ಸರ್ವೇಶ್ವರ’ ಎಂದು ಈಜಿಪ್ಟ್ ದೇಶದಲ್ಲಿ ಪ್ರಮಾಣಪೂರ್ವಕವಾಗಿ ತಿಳಿಯಪಡಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಯಾವ ದಿನದಲ್ಲಿ ನಾನು ಇಸ್ರಾಯೇಲನ್ನು ಆರಿಸಿಕೊಂಡು, ಯಾಕೋಬ ಸಂತಾನದವರಿಗೆ ಮಾತುಕೊಟ್ಟು, ನಾನು ನಿಮ್ಮ ದೇವರಾದ ಯೆಹೋವನು’ ಎಂದು ಐಗುಪ್ತ ದೇಶದಲ್ಲಿ ಪ್ರಮಾಣ ಪೂರ್ವಕವಾಗಿ ತಿಳಿಯಪಡಿಸಿದೆನೋ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಯಾವ ದಿವಸದಲ್ಲಿ ನಾನು ಇಸ್ರಾಯೇಲನ್ನು ಆರಿಸಿಕೊಂಡು ಯಾಕೋಬ ಸಂತಾನದವರಿಗೆ ಮಾತುಕೊಟ್ಟು ನಾನು ನಿಮ್ಮ ದೇವರಾದ ಯೆಹೋವನು ಎಂದು ಐಗುಪ್ತ ದೇಶದಲ್ಲಿ ಪ್ರಮಾಣಪೂರ್ವಕವಾಗಿ ತಿಳಿಯಪಡಿಸಿದೆನೋ ಆ ದಿವಸದಲ್ಲಿ ನಾನು ಅವರಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನೀನು ಅವರಿಗೆ, ‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನಾನು ಇಸ್ರೇಲನ್ನು ಆರಿಸಿಕೊಂಡ ದಿವಸ ನಾನು ನನ್ನನ್ನು ಈಜಿಪ್ಟ್ ದೇಶದಲ್ಲಿ ಅವರಿಗೆ ಪ್ರಕಟಿಸಿಕೊಂಡೆನು. ನಾನು ನನ್ನ ಕೈಯನ್ನು ಮೇಲೆತ್ತಿ ಯಾಕೋಬನ ಕುಟುಂಬಕ್ಕೆ ವಾಗ್ದಾನ ಮಾಡಿದೆನು. ನಾನು ಅವರಿಗೆ, “ನಿಮ್ಮ ಒಡೆಯನಾದ ಯೆಹೋವನು ನಾನೇ.” ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವರಿಗೆ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಇಸ್ರಾಯೇಲನ್ನು ಆಯ್ದುಕೊಂಡ ದಿವಸದಲ್ಲಿ ಯಾಕೋಬನ ವಂಶದವರಿಗೆ ನನ್ನ ಕೈಯೆತ್ತಿ, “ನಿಮ್ಮ ಸಾರ್ವಭೌಮ ಯೆಹೋವ ದೇವರು ನಾನೇ” ಎಂದು ಈಜಿಪ್ಟ್ ದೇಶದಲ್ಲಿ ಅವರಿಗೆ ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 20:5
36 ತಿಳಿವುಗಳ ಹೋಲಿಕೆ  

ನಾನು ನಿಮ್ಮ ಪಿತೃಗಳಿಗೆ ಪ್ರಮಾಣವಾಗಿ ವಾಗ್ದಾನಮಾಡಿದ ಈ ನಾಡನ್ನು ನೀವೆಲ್ಲರೂ ಸರಿಸಮಾನವಾಗಿ ಅನುಭವಿಸಿರಿ; ಇದು ನಿಮಗೆ ಸೊತ್ತಾಗಿಯೇ ಇರುವುದು.


ಆಮೇಲೆ ಅವರು ನನ್ನ ಆಜ್ಞೆಗಳನ್ನು ಕೈಗೊಳ್ಳದೆ, ನನ್ನ ವಿಧಿಗಳನ್ನು ನಿರಾಕರಿಸಿ, ನಾನು ನೇಮಿಸಿದ ಸಬ್ಬತ್ ದಿನಗಳನ್ನು ಅಪವಿತ್ರಮಾಡಿ ತಮ್ಮ ಪಿತೃಗಳ ವಿಗ್ರಹಗಳಲ್ಲೇ ಆಸಕ್ತರಾದರು.


ಆಮೇಲೆ, ‘ನಾಡುಗಳಲ್ಲೆಲ್ಲಾ ಶ್ರೇಷ್ಠವಾದ ನಾಡಿಗೆ, ಹಾಲೂ ಜೇನೂ ಹರಿಯುವ ಆ ವಾಗ್ದತ್ತನಾಡಿಗೆ ನಿಮ್ಮನ್ನು ಸೇರಿಸೆನು’ ಎಂದು ಮರುಭೂಮಿಯಲ್ಲಿ ಅವರಿಗೆ ಪ್ರಮಾಣಮಾಡಿ ಹೇಳಿದೆ.


ಏಕೆಂದರೆ ನೀವು ನಿಮ್ಮ ದೇವರಾದ ಸರ್ವೇಶ್ವರನಿಗೆ ಮೀಸಲಾದ ಜನರು; ಜಗದಲ್ಲಿರುವ ಸಮಸ್ತ ಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯಜನರಾಗಲು ಅವರು ಆಯ್ದುಕೊಂಡಿದ್ದಾರೆ.


ಸರ್ವೇಶ್ವರ ಸ್ವಾಮಿ ತಮ್ಮನ್ನು ಭೇಟಿಮಾಡಿ ತಮ್ಮ ದುರವಸ್ಥೆಯನ್ನು ಮನಸ್ಸಿಗೆ ತಂದುಕೊಂಡಿದ್ದಾರೆಂದು ತಿಳಿದ ಆ ಇಸ್ರಯೇಲರು ತಲೆಬಾಗಿ ಆರಾಧಿಸಿದರು.


ಆದಕಾರಣ ಅವರನ್ನು ಈಜಿಪ್ಟಿನವರ ಕೈಯಿಂದ ಬಿಡಿಸುವುದಕ್ಕು ಮತ್ತು ಆ ದೇಶದಿಂದ ಹೊರತಂದು ಹಾಲೂ ಜೇನೂ ಹರಿಯುವ ಸವಿಸ್ತಾರವಾದ ಒಳ್ಳೆಯ ನಾಡಿಗೆ, ಅಂದರೆ ಕಾನಾನ್ಯರು, ಹಿತ್ತಿಯರು, ಆಮೋರಿಯರು, ಪೆರಿಜೀಯರು, ಹಿವ್ವಿಯರು ಹಾಗು ಯೆಬೂಸಿಯರು ವಾಸವಾಗಿರುವ ನಾಡಿಗೆ ನಡೆಸಿಕೊಂಡು ಹೋಗುವುದಕ್ಕು ಇಳಿದು ಬಂದಿದ್ದೇನೆ.


ಅದಕ್ಕೆ ಅಬ್ರಾಮನು, “ಭೂಮ್ಯಾಕಾಶಗಳನ್ನು ಉಂಟುಮಾಡಿದ ಪರಾತ್ಪರ ದೇವರ ಕಡೆಗೆ ಕೈಯೆತ್ತಿ ಪ್ರಮಾಣ ಮಾಡುತ್ತೇನೆ:


ಸಮುದ್ರದ ಮೇಲೆಯೂ ಭೂಮಿಯ ಮೇಲೆಯೂ ಕಾಲುಗಳನ್ನಿಟ್ಟು ನಿಂತಿದ್ದ ದೇವದೂತನು ತನ್ನ ಬಲಗೈಯನ್ನು ಸ್ವರ್ಗದ ಕಡೆಗೆ ಎತ್ತಿದನು.


ಸರ್ವೇಶ್ವರ ಆ ದಿನಗಳ ಅವಧಿಯನ್ನು ಕಡಿಮೆಮಾಡದಿದ್ದರೆ ಯಾವ ಮಾನವನೂ ಉಳಿಯುವಂತಿಲ್ಲ. ಆದರೆ ತಾವು ಆರಿಸಿಕೊಂಡವರ ಪ್ರಯುಕ್ತ ಆ ದಿನಗಳ ಅವಧಿಯನ್ನು ಅವರು ಕಡಿಮೆಮಾಡಿದ್ದಾರೆ.


ಆದುದರಿಂದ ನನ್ನ ಜೀವದಾಣೆ, ನೀನು ನನ್ನ ಜನರನ್ನು ದ್ವೇಷಿಸಿ, ಅವರ ಮೇಲಿಟ್ಟ ಕೋಪಕ್ಕೂ ಮಾತ್ಸರ್ಯಕ್ಕೂ ನಾನು ನಿನಗೆ ಪ್ರತೀಕಾರಮಾಡುವೆನು; ನಿನ್ನನ್ನು ದಂಡಿಸುವಾಗ ನಾನು ಅವರಿಗೆ ಗೋಚರವಾಗುವೆನು. ಇದು ಸರ್ವೇಶ್ವರನಾದ ದೇವರ ನುಡಿ.


“ಸರ್ವೇಶ್ವರನಾದ ನಾನು ಆರಿಸಿಕೊಂಡಿದ್ದ ಎರಡು ವಂಶಗಳನ್ನು ನಿರಾಕರಿಸಿಬಿಟ್ಟಿದ್ದೇನೆ ಎಂದು ಜನರು ಆಡಿಕೊಳ್ಳುತ್ತಿದ್ದಾರೆ. ಈ ಮಾತನ್ನು ನೀನು ಗಮನಿಸಿರಬೇಕು. ನನ್ನ ಜನರು ಒಂದು ಜನಾಂಗವೇ ಅಲ್ಲ ಎನ್ನುವಷ್ಟರ ಮಟ್ಟಿಗೆ ಅವರು ಅಸಡ್ಡೆ ಮಾಡುತ್ತಿದ್ದಾರೆ ಅಲ್ಲವೆ?


ಇಂತೆನ್ನುತ್ತಾರೆ ಸರ್ವೇಶ್ವರ : “ನೀವೇ ನನಗೆ ಸಾಕ್ಷಿಗಳು; ನನ್ನಿಂದ ಆಯ್ಕೆಯಾದ ನನ್ನ ದಾಸರು; ಏಕೆನೆ ನಾನೇ ಪರಮಾತ್ಮನೆಂದು ಅರಿತು, ವಿಶ್ವಾಸವಿಟ್ಟು, ಗ್ರಹಿಸಬೇಕಾದವರು; ದೇವರಾರೂ ನನಗಿಂತ ಮುಂದೆ ಇರಲಿಲ್ಲ ನನ್ನಾನಂತರವೂ ಇರುವುದಿಲ್ಲ.


ತೋರಿಸಿದಾತ ತನ್ನ ಮಾರ್ಗವನು ಮೋಶೆಗೆ I ತನ್ನ ಮಹತ್ಕಾರ್ಯಗಳನು ಇಸ್ರಯೇಲರಿಗೆ II


ಪ್ರಭುವನು ದೇವರಾಗಿ ಪಡೆದ ಜನಾಂಗ ಧನ್ಯ I ಸ್ವಜನರಾಗಿ ಆತನಾಯ್ದುಕೊಂಡ ಜನತೆ ಧನ್ಯ II


ಆಕಾಶದತ್ತ ಕೈಯೆತ್ತಿ ಪ್ರಮಾಣಮಾಡುವೆ, ಚಿರಂಜೀವಿಯಾದೆನ್ನ ಮೇಲೆ ಆಣೆಯಿಟ್ಟು ಹೇಳುವೆ:


ಏಕೆಂದರೆ ನೀವು ನಿಮ್ಮ ದೇವರಾದ ಸರ್ವೇಶ್ವರನಿಗೆ ಮೀಸಲು ಜನ. ಅವರು ಜಗದಲ್ಲಿರುವ ಸಮಸ್ತಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯಜನರಾಗುವುದಕ್ಕೆ ಆರಿಸಿಕೊಂಡಿದ್ದಾರೆ.


ನಿಮ್ಮ ಪಿತೃಗಳನ್ನು ಪ್ರೀತಿಸಿ, ತರುವಾಯ ಅವರ ಸಂತತಿಯಾದ ನಿಮ್ಮನ್ನೂ ಆರಿಸಿಕೊಂಡರು.


ಬೇರೆ ಯಾವ ದೇವರು ತಾನೆ ಪರಿಶೋಧನೆ, ಪವಾಡ, ಮಹತ್ಕಾರ್ಯ, ಯುದ್ಧ, ಭುಜಪರಾಕ್ರಮ, ಶಿಕ್ಷಾಹಸ್ತ, ಭಯಂಕರಕಾರ್ಯ ಇವುಗಳನ್ನು ಪ್ರಯೋಗಿಸಿ ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಕೈಯಿಂದ ತಪ್ಪಿಸಲು ಪ್ರಯತ್ನಿಸಿದ್ದಾರೆ? ನಿಮ್ಮ ದೇವರಾದ ಸರ್ವೇಶ್ವರ ಸ್ವಾಮಿಯಾದರೊ ಈಜಿಪ್ಟಿನಲ್ಲಿ ನಿಮ್ಮ ಪರವಾಗಿ, ಇದನ್ನೆಲ್ಲ ನಿಮ್ಮ ಕಣ್ಮುಂದೆಯೇ, ನಡೆಸಿದರಲ್ಲವೆ?


ದೇವರು ಮೋಶೆಯ ಸಂಗಡ ಮಾತಾಡಿ ಇಂತೆಂದರು:


ನೀನು ಹೋಗಿ ಇಸ್ರಯೇಲರ ಹಿರಿಯರನ್ನು ಕೂಡಿಸು. ಅವರಿಗೆ, “ನಿಮ್ಮ ಪೂರ್ವಜರ ದೇವರು, ಅಂದರೆ ಅಬ್ರಹಾಮ, ಇಸಾಕ ಹಾಗು ಯಕೋಬರ ದೇವರು ಆಗಿರುವ ಸರ್ವೇಶ್ವರ ನನಗೆ ದರ್ಶನಕೊಟ್ಟು ನಿಮ್ಮ ವಿಷಯದಲ್ಲಿ ಹೀಗೆಂದಿದ್ದಾರೆ: ನಿಮ್ಮನ್ನೂ ಈಜಿಪ್ಟ್ ದೇಶದಲ್ಲಿ ನಿಮಗೆ ಸಂಭವಿಸಿದ್ದೆಲ್ಲವನ್ನೂ ನಾನು ಕಣ್ಣಾರೆ ಕಂಡು ತಿಳಿದುಕೊಂಡಿದ್ದೇನೆ.


ಅದೂ ಅಲ್ಲದೆ, “ನಾನು ನಿನ್ನ ತಂದೆಯ ದೇವರು, ಅಬ್ರಹಾಮನ ದೇವರು, ಇಸಾಕನ ದೇವರು, ಯಕೋಬನ ದೇವರು,” ಎಂದರು. ಆಗ ಮೋಶೆ ದೇವರನ್ನು ದಿಟ್ಟಿಸಿ ನೋಡಲು ಭಯಪಟ್ಟು ಮುಖವನ್ನು ಮುಚ್ಚಿಕೊಂಡನು.


ಅನಂತರ ಸ್ವರ್ಗ, ಭೂಮಿ, ಸಮುದ್ರ ಇವುಗಳನ್ನೂ ಇವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದ ಹಾಗು ಯುಗಯುಗಾಂತರಕ್ಕೂ ಜೀವಿಸುವ ದೇವರ ಹೆಸರಿನಲ್ಲಿ ಶಪಥಮಾಡಿ ಹೀಗೆ ಹೇಳಿದನು : “ಇನ್ನು ನಿಧಾನಿಸುವಂತಿಲ್ಲ;


“ನಾನು ಸರ್ವೇಶ್ವರ, ಅಬ್ರಹಾಮ, ಇಸಾಕ ಹಾಗು ಯಕೋಬರಿಗೆ ನಾನು ‘ಸರ್ವಶಕ್ತನಾದ ದೇವರು ಎಂಬ ಹೆಸರುಳ್ಳವನಾಗಿ ಕಾಣಿಸಿಕೊಂಡನೇ ಹೊರತು ‘ಸರ್ವೇಶ್ವರ’ ಎಂಬ ನನ್ನ ಹೆಸರಿನಿಂದ ಅವರಿಗೆ ಗೋಚರವಾಗಲಿಲ್ಲ.


ಇದಲ್ಲದೆ ಅಬ್ರಹಾಮ, ಇಸಾಕ ಮತ್ತು ಯಕೋಬರಿಗೆ ಕೊಡುವೆನೆಂದು ಪ್ರಮಾಣ ಪೂರ್ವಕವಾಗಿ ಹೇಳಿದ ನಾಡಿಗೆ ನಿಮ್ಮನ್ನು ಸೇರಿಸುವೆನು. ಅದನ್ನು ನಿಮಗೆ ಸ್ವಂತ ನಾಡಾಗಿ ಕೊಡುವೆನು. ಸರ್ವೇಶ್ವರನು ನಾನೇ’ ಎಂದು ಅವರಿಗೆ ಹೇಳು,” ಎಂದರು.


“ನಾನು ನಿಮ್ಮ ದೇವರಾಗಿರುವ ಸರ್ವೇಶ್ವರ.


“ನಾನು ಪುನಃ ಹಾದುಹೋಗುತ್ತಾ ನಿನ್ನನ್ನು ನೋಡಲು ಇಗೋ, ನೀನು ಮದುವೆಗೆ ಸಿದ್ಧಳಾಗಿದ್ದೆ; ಆಗ ನಾನು ನನ್ನ ಹೊದಿಕೆಯ ಸೆರಗನ್ನು ನಿನಗೆ ಹೊದಿಸಿ, ನಿನ್ನ ಮಾನವನ್ನು ಕಾಪಾಡಿದೆ; ಇದಲ್ಲದೆ ನಾನು ನಿನಗೆ ಮಾತುಕೊಟ್ಟು ಒಡಂಬಡಿಕೆ ಮಾಡಿಕೊಂಡೆ. ಆದ್ದರಿಂದ ನೀನು ನನ್ನವಳಾದೆ; ಇದು ಸರ್ವೇಶ್ವರನಾದ ದೇವರ ನುಡಿ.


ಆ ದೂತ ಎಡಬಲಗೈಗಳನ್ನು ಆಕಾಶದ ಕಡೆಗೆ ಎತ್ತಿಕೊಂಡು, “ಶಾಶ್ವತ ಜೀವಸ್ವರೂಪನಾಣೆ, ಒಂದು ಯುಗ, ಎರಡು ಯುಗ, ಮತ್ತು ಅರ್ಧ ಯುಗ ಕಳೆಯಬೇಕು. ದೇವಜನರಿಗಾಗುವ ಹಿಂಸೆಬಾಧೆಗಳು ಸಂಪೂರ್ಣವಾಗಿ ನಿಂತಮೇಲೆ ಈ ಕಾರ್ಯಗಳೆಲ್ಲ ಮುಕ್ತಾಯವಾಗುವುವು,” ಎಂಬುದಾಗಿ ನನ್ನ ಕಿವಿಗೆ ಬೀಳುವಂತೆ ಹೇಳಿದನು.


“ನೀವು ಸಂಖ್ಯೆಯಲ್ಲಿ ಜನಾಂಗಗಳಿಗೆಲ್ಲಾ ಹೆಚ್ಚುಮಂದಿ ಎಂದು ಪ್ರೀತಿಸಿ, ಆಯ್ದುಕೊಳ್ಳಲಿಲ್ಲ; ನಿಜವಾಗಿಯೂ ನೀವು ಎಲ್ಲಾ ಜನಾಂಗಗಳಿಗಿಂತ ಅಲ್ಪಸಂಖ್ಯಾತರು.


ಜನರೆಲ್ಲರೂ ಅದನ್ನು ಕಂಡು ಬೋರಲಬಿದ್ದರು; “ಸರ್ವೇಶ್ವರನೇ ದೇವರು, ಸರ್ವೇಶ್ವರನೇ ದೇವರು,” ಎಂದು ಕೂಗಿದರು.


ಸರ್ವೇಶ್ವರನಾದ ನಾನು ನನ್ನ ಜನರ ದೇವರಾಗಿರುವೆನು; ನನ್ನ ದಾಸ ದಾವೀದನು ಅವರನ್ನಾಳುವ ಪ್ರಭುವಾಗಿರುವನು; ಸರ್ವೇಶ್ವರನಾದ ನಾನೇ ಇದನ್ನು ನುಡಿದಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು