Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 20:6 - ಕನ್ನಡ ಸತ್ಯವೇದವು C.L. Bible (BSI)

6 ನಾನು ಅವರಿಗೆ ‘ನಾಡುಗಳಲ್ಲೆಲ್ಲ ಶ್ರೀಮಂತವಾದ ನಾಡನ್ನು ನಿಮಗಾಗಿ ನೋಡಿದ್ದೇನೆ; ನಾನು ನಿಮ್ಮನ್ನು ಈಜಿಪ್ಟ್ ದೇಶದಿಂದ ಉದ್ಧರಿಸಿ ಹಾಲೂ ಜೇನೂ ಹರಿಯುವ ಆ ನಾಡಿಗೆ ಸೇರಿಸುವೆನು’ ಎಂದು ಪ್ರಮಾಣಮಾಡಿದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆ ದಿನದಲ್ಲಿ ನಾನು ಅವರಿಗೆ, ‘ಸಕಲ ದೇಶ ಶಿರೋಮಣಿಯಾದ ದೇಶವನ್ನು ನಿಮಗಾಗಿ ನೋಡಿದ್ದೇನೆ; ನಾನು ನಿಮ್ಮನ್ನು ಐಗುಪ್ತ ದೇಶದೊಳಗಿಂದ ಉದ್ಧರಿಸಿ ಹಾಲೂ ಮತ್ತು ಜೇನೂ ಹರಿಯುವ ಆ ದೇಶಕ್ಕೆ ಸೇರಿಸುವೆನು’ ಎಂದು ಪ್ರಮಾಣಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಸಕಲದೇಶ ಶಿರೋಮಣಿಯಾದ ದೇಶವನ್ನು ನಿಮಗಾಗಿ ನೋಡಿದ್ದೇನೆ; ನಾನು ನಿಮ್ಮನ್ನು ಐಗುಪ್ತದೇಶದೊಳಗಿಂದ ಉದ್ಧರಿಸಿ ಹಾಲೂ ಜೇನೂ ಹರಿಯುವ ಆ ದೇಶಕ್ಕೆ ಸೇರಿಸುವೆನು ಎಂದು ಪ್ರಮಾಣಮಾಡಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅವರನ್ನು ಈಜಿಪ್ಟಿನಿಂದ ಹೊರಗೆ ತಂದು, ನಾನು ಅವರಿಗಾಗಿ ಹುಡುಕಿಟ್ಟಿರುವ ದೇಶಕ್ಕೆ ಕರೆದುಕೊಂಡು ಹೋಗುವುದಾಗಿ ವಾಗ್ದಾನ ಮಾಡಿದೆನು. ಅದು ಹಾಲೂ ಜೇನೂ ಹರಿಯುವ ದೇಶವಾಗಿತ್ತು. ಅದು ಎಲ್ಲಾ ದೇಶಗಳಿಗಿಂತಲೂ ಸುಂದರವಾದ ದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಾನು ಅವರಿಗೆ ಪ್ರಮಾಣಮಾಡಿ ಈಜಿಪ್ಟ್ ದೇಶದಿಂದ ಹೊರಗೆ ತಂದು, ಅವರಿಗೋಸ್ಕರ ನಾನೇ ನೋಡಿಕೊಂಡಂಥ ಹಾಲೂ ಜೇನೂ ಹರಿಯುವ ಕೀರ್ತಿಯುಳ್ಳ ದೇಶಕ್ಕೆ ಅವರನ್ನು ಆ ದಿವಸದಲ್ಲಿ ಕರೆತಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 20:6
40 ತಿಳಿವುಗಳ ಹೋಲಿಕೆ  

ಆಮೇಲೆ, ‘ನಾಡುಗಳಲ್ಲೆಲ್ಲಾ ಶ್ರೇಷ್ಠವಾದ ನಾಡಿಗೆ, ಹಾಲೂ ಜೇನೂ ಹರಿಯುವ ಆ ವಾಗ್ದತ್ತನಾಡಿಗೆ ನಿಮ್ಮನ್ನು ಸೇರಿಸೆನು’ ಎಂದು ಮರುಭೂಮಿಯಲ್ಲಿ ಅವರಿಗೆ ಪ್ರಮಾಣಮಾಡಿ ಹೇಳಿದೆ.


ಅವರ ಪೂರ್ವಜರಿಗೆ ವಾಗ್ದಾನ ಮಾಡಿದ ಪ್ರಕಾರ ಹಾಲೂ ಜೇನೂ ಹರಿಯುವ ಈ ನಾಡನ್ನು ಅವರಿಗೆ ಅನುಗ್ರಹಿಸಿದಿರಿ.


ಎತ್ತರದಲಿ ಸುಂದರ, ಉತ್ತರದಲಿ ಸಿಯೋನ್ ಶಿಖರ I ಆನಂದದಾಯಕ ರಾಜಾಧಿರಾಜನ ಆ ನಗರ II


ಆದಕಾರಣ ಅವರನ್ನು ಈಜಿಪ್ಟಿನವರ ಕೈಯಿಂದ ಬಿಡಿಸುವುದಕ್ಕು ಮತ್ತು ಆ ದೇಶದಿಂದ ಹೊರತಂದು ಹಾಲೂ ಜೇನೂ ಹರಿಯುವ ಸವಿಸ್ತಾರವಾದ ಒಳ್ಳೆಯ ನಾಡಿಗೆ, ಅಂದರೆ ಕಾನಾನ್ಯರು, ಹಿತ್ತಿಯರು, ಆಮೋರಿಯರು, ಪೆರಿಜೀಯರು, ಹಿವ್ವಿಯರು ಹಾಗು ಯೆಬೂಸಿಯರು ವಾಸವಾಗಿರುವ ನಾಡಿಗೆ ನಡೆಸಿಕೊಂಡು ಹೋಗುವುದಕ್ಕು ಇಳಿದು ಬಂದಿದ್ದೇನೆ.


ಬಿರುಗಾಳಿಯಂತೆ ಅವರನ್ನು ಅಪರಿಚಿತ ಜನಾಂಗಗಳ ಮಧ್ಯೆ ತೂರಿ ಚದರಿಬಿಟ್ಟೆ; ಹಾಗೆ ಅವರು ಚದರಿಹೋದ ಮೇಲೆ ನಾಡು ಹಾಳಾಯಿತು. ಅಲ್ಲಿ ಯಾರೂ ಉಳಿಯದಂತಾಯಿತು. ಅವರ ನಿಮಿತ್ತ ಚೆಲುವ ನಾಡು ನಿರ್ಜನ ಪ್ರದೇಶವಾಯಿತು.”


ಅವುಗಳೊಳಗೆ ಒಂದರಲ್ಲಿ ಒಂದು ಚಿಕ್ಕ ಕೊಂಬು ಮೊಳೆತು, ಬಹುದೊಡ್ಡದಾಗಿ ಬೆಳೆದು, ದಕ್ಷಿಣದ ಕಡೆಗೂ ಪೂರ್ವದ ಕಡೆಗೂ ಚೆಲುವಿನ ನಾಡಾದ ಪಾಲೆಸ್ತೀನಿನ ಕಡೆಗೂ ಪ್ರಬಲಗೊಂಡಿತು.


ಅದು ಹಾಲೂ ಜೇನೂ ಹರಿಯುವ ಶ್ರೀಮಂತ ನಾಡು. ನಾನು ಸ್ವತಃ ನಿಮ್ಮ ಸಂಗಡ ಬರುವುದಿಲ್ಲ. ಏಕೆಂದರೆ ನೀವು ನನ್ನ ಆಜ್ಞೆಗೆ ತಲೆಬಾಗದ ಹಟಮಾರಿ ಜನ; ದಾರಿಯಲ್ಲೇ ನಾನು ನಿಮ್ಮನ್ನು ಸಂಹರಿಸಬೇಕಾಗಬಹುದು.


ಆ ‘ಚೆಲುವಿನ ನಾಡಿಗೂ’ ನುಗ್ಗುವನು. ಅನೇಕ ಸೀಮೆಗಳು ಅವನಿಂದ ನಾಶವಾಗುವುವು. ಆದರೆ ಎದೋಮ್ಯರು, ಮೋವಾಬ್ಯರು, ಅಮ್ಮೋನಿನ ಹೆಚ್ಚಿನ ಭಾಗದವರು ಅವನ ಕೈಯಿಂದ ತಪ್ಪಿಸಿಕೊಳ್ಳುವರು.


ದಕ್ಷಿಣದರಾಜನಿಗೆ ವಿರುದ್ಧ ಬರುವವನು ಇಚ್ಛಾನುಸಾರ ವರ್ತಿಸುವನು. ಅವನನ್ನು ಎದುರಿಸಬಲ್ಲವನು ಒಬ್ಬನೂ ಇರನು. ಆ ‘ಚೆಲುವಿನ ನಾಡನ್ನೂ’ ಗೆದ್ದು ಅದನ್ನು ಪೂರ್ತಿಯಾಗಿ ತನ್ನ ಕೈಹಿಡಿತದಲ್ಲಿ ಇಟ್ಟುಕೊಳ್ಳುವನು.


ನಾನು ಪ್ರಮಾಣಮಾಡಿ ನಿಮ್ಮ ಪಿತೃಗಳಿಗೆ ಯಾವ ನಾಡನ್ನು ಕೊಟ್ಟೆನೋ ಆ ಇಸ್ರಾಯೇಲ್ ನಾಡಿಗೆ ನಿಮ್ಮನ್ನು ಬರಮಾಡುವಾಗ ನಾನೇ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು.


ಆಮೇಲೆ ಅವರು ನನ್ನ ಆಜ್ಞೆಗಳನ್ನು ಕೈಗೊಳ್ಳದೆ, ನನ್ನ ವಿಧಿಗಳನ್ನು ನಿರಾಕರಿಸಿ, ನಾನು ನೇಮಿಸಿದ ಸಬ್ಬತ್ ದಿನಗಳನ್ನು ಅಪವಿತ್ರಮಾಡಿ ತಮ್ಮ ಪಿತೃಗಳ ವಿಗ್ರಹಗಳಲ್ಲೇ ಆಸಕ್ತರಾದರು.


ಸರ್ವೇಶ್ವರ ದೇವರು ಇಂತೆನ್ನುತ್ತಾರೆ - ನಾನು ಇಸ್ರಯೇಲರನ್ನು ಆರಿಸಿಕೊಂಡ ದಿನದಂದು ಯಕೋಬ ಸಂತಾನದವರಿಗೆ ಮಾತುಕೊಟ್ಟು, ‘ನಾನೇ ನಿಮ್ಮ ದೇವರಾದ ಸರ್ವೇಶ್ವರ’ ಎಂದು ಈಜಿಪ್ಟ್ ದೇಶದಲ್ಲಿ ಪ್ರಮಾಣಪೂರ್ವಕವಾಗಿ ತಿಳಿಯಪಡಿಸಿದೆ.


ಹಾಲೂ ಜೇನೂ ಹರಿಯುವ ನಾಡನ್ನು, ಅಂದರೆ ಇಂದು ನೀವಿರುವ ನಾಡನ್ನು, ಕೊಡುವುದಾಗಿ ನಿಮ್ಮ ಮೂಲಪಿತೃಗಳಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು’ ಎಂದು ಹೇಳಿದ್ದೆ. ಈ ಒಡಂಬಡಿಕೆಯ ವಚನಗಳಿಗೆ ಕಿವಿಗೊಡದವನು ಶಾಪಗ್ರಸ್ತನು. ಇದು ಇಸ್ರಯೇಲಿನ ದೇವರಾದ ಸರ್ವೇಶ್ವರ ಹೇಳುವ ಮಾತು.” ಆಗ ನಾನು, “ತಮ್ಮ ಅಪ್ಪಣೆಯಂತಾಗಲಿ, ಸರ್ವೇಶ್ವರಾ,” ಎಂದು ಉತ್ತರಕೊಟ್ಟೆ.


ಈಜಿಪ್ಟಿನಿಂದ ಬಂದ ಇಸ್ರಯೇಲರು ಸರ್ವೇಶ್ವರನ ಮಾತನ್ನು ಕೇಳದೆಹೋದುದರಿಂದ ಅವರು, ತಮ್ಮ ಯೋಧರೆಲ್ಲರು ಸಂಹಾರವಾಗುವ ತನಕ ನಾಲ್ವತ್ತು ವರ್ಷ ಅರಣ್ಯದಲ್ಲೇ ಅಲೆಯುತ್ತಿರಬೇಕಾಯಿತು. ಸರ್ವೇಶ್ವರ, ತಾವು ಅವರ ಪೂರ್ವಿಕರಿಗೆ ವಾಗ್ದಾನಮಾಡಿದ್ದ ಹಾಲೂ ಜೇನೂ ಹರಿಯುವ ದೇಶದಲ್ಲಿ ಅವರನ್ನು ಸೇರಿಸುವುದಿಲ್ಲವೆಂದು ಆಣೆಯಿಟ್ಟಿದ್ದರು.


ಪರಾತ್ಪರ ದೇವರು ಜನಾಂಗಗಳನು ಬೇರೆಬೇರೆಮಾಡಿದಾಗ, ಅವರವರಿಗೆ ಸ್ವದೇಶಗಳನು ವಿಂಗಡಿಸಿಕೊಟ್ಟಾಗ, ದೇವಕುವರರ ಸಂಖ್ಯಾನುಸಾರ ಪ್ರದೇಶಗಳನು ಗೊತ್ತುಮಾಡಿದಾಗ.


ನಾನು ಪ್ರಮಾಣಮಾಡಿ ಕೊಟ್ಟ ನಾಡಿಗೆ ಇವರು ಸೇರುವುದಕ್ಕಿಂತ ಮುಂಚಿತವಾಗಿಯೇ ಇವರು ಈಗಲೂ ಮಾಡುವ ದುರಾಲೋಚನೆಗಳನ್ನು ನಾನು ಬಲ್ಲೆ. ನಾನು ಇವರ ಪಿತೃಗಳಿಗೆ ಪ್ರಮಾಣಮಾಡಿದಂತೆ ಹಾಲೂ ಜೇನೂ ಹರಿಯುವ ನಾಡಿಗೆ ಇವರನ್ನು ಸೇರಿಸಿದ ಮೇಲೆ ಇವರು ಚೆನ್ನಾಗಿ ಉಂಡು ಕೊಬ್ಬಿದವರಾದಾಗ, ಇತರ ದೇವರುಗಳನ್ನು ಅವಲಂಬಿಸಿ, ಪೂಜಿಸಿ, ನನ್ನನ್ನು ತಾತ್ಸಾರಮಾಡಿ, ನನ್ನ ನಿಬಂಧನೆಯನ್ನು ಮೀರುವರು. ಅನಂತರ ಅನೇಕ ಕಷ್ಟಗಳೂ ವಿಪತ್ತುಗಳೂ ಸಂಭವಿಸಿದಾಗ ಈ ಗೀತೆ ಇವರ ಸಂತತಿಯವರ ಬಾಯಲ್ಲಿದ್ದು ಅವರ ಮುಂದೆ ಸಾಕ್ಷಿಕೊಡುವುದು,” ಎಂದು ಹೇಳಿದರು.


ನೀವು ನಿಮ್ಮ ಪರಿಶುದ್ಧ ವಾಸಸ್ಥಾನವಾಗಿರುವ ಪರಲೋಕದಿಂದ ಕೆಳಗಿರುವ ನಮ್ಮನ್ನು ಕಟಾಕ್ಷಿಸಿ, ನಿಮ್ಮ ಜನರಾದ ಇಸ್ರಯೇಲರನ್ನು ಹಾಗು ಹಾಲೂಜೇನೂ ಹರಿಯುವ ನಾಡೆಂದು ನೀವು ನಮ್ಮ ಪಿತೃಗಳಿಗೆ ವಾಗ್ದಾನಮಾಡಿದ ಮೇರೆಗೆ ನಮಗೆ ಕೊಟ್ಟಿರುವ ಈ ಭೂಮಿಯನ್ನು ಆಶೀರ್ವದಿಸಿ, ದೇವರೇ,’ ಎಂದು ಹೇಳಬೇಕು.


ಈಜಿಪ್ಟ್ ದೇಶದಿಂದ ಕರೆದುತಂದು ಹಾಲೂಜೇನೂ ಹರಿಯುವ ಈ ನಾಡನ್ನು ನಮಗೆ ಕೊಟ್ಟಿದ್ದಾರೆ.


ಸರ್ವೇಶ್ವರ ನಿಮ್ಮ ಪಿತೃಗಳಿಗೂ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣಮಾಡಿದ ಆ ನಾಡಿನಲ್ಲಿ ನೀವು ಬಹುಕಾಲ ಬಾಳುವಿರಿ; ಅದು ಹಾಲೂ ಜೇನೂ ಹರಿಯುವ ನಾಡು.


ಆದುದರಿಂದ ಇಸ್ರಯೇಲರೇ, ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರ ವಾಗ್ದಾನ ಮಾಡಿದ ಪ್ರಕಾರ, ಹಾಲೂಜೇನೂ ಹರಿಯುವ ಆ ನಾಡಿನಲ್ಲಿ ನಿಮಗೆ ಶುಭವುಂಟಾಗುವಂತೆ, ನೀವು ಬಹಳವಾಗಿ ಹೆಚ್ಚಿ, ಅಭಿವೃದ್ಧಿಯಾಗುವಂತೆ, ಈ ಆಜ್ಞೆಗಳನ್ನು ಲಕ್ಷ್ಯವಿಟ್ಟು ಕೇಳಿ ಅನುಸರಿಸಿರಿ.


ಹಾಲೂ ಜೇನೂ ಹರಿಯುವ ನಾಡದು! ಸರ್ವೇಶ್ವರನಿಗೆ ಮೆಚ್ಚುಗೆಯಾದರೆ ಅದರಲ್ಲಿ ನಮ್ಮನ್ನು ಸೇರಿಸುವರು, ಅದನ್ನೇ ನಮ್ಮ ಸ್ವಾಧೀನಕ್ಕೆ ಕೊಡುವರು.


ಮೋಶೆಗೆ, “ನೀವು ನಮ್ಮನ್ನು ಕಳಿಸಿದ ನಾಡಿಗೆ ಹೋಗಿದ್ದೆವು. ಅದು ಹಾಲು-ಜೇನು ಹರಿಯುವಂಥ ನಾಡು. ಅಲ್ಲಿನ ಹಣ್ಣುಹಂಪಲುಗಳು ಇಂಥವು.


ನಿಮಗಾದರೋ - ನೀವು ಅವರ ದೇಶವನ್ನು ಸ್ವಾಧೀನಪಡಿಸಿಕೊಳ್ಳುವಿರಿ; ಹಾಲೂ ಜೇನೂ ಹರಿಯುವಂಥ ಆ ದೇಶವನ್ನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವೆನು ಎಂದು ನಾನು ಮಾತುಕೊಟ್ಟೆನಲ್ಲವೇ? ನಾನು ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ ನಿಮ್ಮ ದೇವರಾದ ಸರ್ವೇಶ್ವರ.


ಸರ್ವೇಶ್ವರ ನಿಮ್ಮ ಪೂರ್ವಜರಿಗೆ ಪ್ರಮಾಣವಾಗಿ ಹೇಳಿದಂತೆ ನಿಮ್ಮನ್ನು ಹಾಲೂ ಜೇನೂ ಹರಿಯುವ ನಾಡಿಗೆ, ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಹಿವ್ವಿಯರು ಹಾಗು ಯೆಬೂಸಿಯರು ವಾಸವಾಗಿರುವ ನಾಡಿಗೆ ಕರೆದು ತಂದು ಅದನ್ನು ನಿಮಗೆ ಕೊಟ್ಟಾಗ, ನೀವು ಈ ಆಚರಣೆಯನ್ನು ಈ ತಿಂಗಳಿನಲ್ಲೇ ನಡೆಸಬೇಕು.


ಈಜಿಪ್ಟಿನಲ್ಲಿ ನಿಮಗುಂಟಾಗಿ ಇರುವ ಸಂಕಷ್ಟಗಳಿಂದ ನಿಮ್ಮನ್ನು ಪಾರುಮಾಡಿ ಹಾಲೂ ಜೇನೂ ಹರಿಯುವ ನಾಡಿಗೆ, ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು ಹಾಗು ಯೆಬೂಸಿಯರು ವಾಸವಾಗಿರುವ ನಾಡಿಗೆ ಬರಮಾಡಬೇಕೆಂದು ತೀರ್ಮಾನಿಸಿದ್ದೇನೆ’ ಎಂದು ತಿಳಿಸು.


ಇದಲ್ಲದೆ ಅಬ್ರಹಾಮ, ಇಸಾಕ ಮತ್ತು ಯಕೋಬರಿಗೆ ಕೊಡುವೆನೆಂದು ಪ್ರಮಾಣ ಪೂರ್ವಕವಾಗಿ ಹೇಳಿದ ನಾಡಿಗೆ ನಿಮ್ಮನ್ನು ಸೇರಿಸುವೆನು. ಅದನ್ನು ನಿಮಗೆ ಸ್ವಂತ ನಾಡಾಗಿ ಕೊಡುವೆನು. ಸರ್ವೇಶ್ವರನು ನಾನೇ’ ಎಂದು ಅವರಿಗೆ ಹೇಳು,” ಎಂದರು.


ಆಕಾಶದತ್ತ ಕೈಯೆತ್ತಿ ಪ್ರಮಾಣಮಾಡುವೆ, ಚಿರಂಜೀವಿಯಾದೆನ್ನ ಮೇಲೆ ಆಣೆಯಿಟ್ಟು ಹೇಳುವೆ:


ಅವರೊ ಬೇಡವೆಂದರು ಆ ಚೆಲುವಿನ ನಾಡನು I ನಂಬದೆ ಹೋದರು ಅವನಿತ್ತಾ ವಾಗ್ದಾನವನು II


ನಾನು ನಿಮ್ಮ ಪಿತೃಗಳಿಗೆ ಪ್ರಮಾಣವಾಗಿ ವಾಗ್ದಾನಮಾಡಿದ ಈ ನಾಡನ್ನು ನೀವೆಲ್ಲರೂ ಸರಿಸಮಾನವಾಗಿ ಅನುಭವಿಸಿರಿ; ಇದು ನಿಮಗೆ ಸೊತ್ತಾಗಿಯೇ ಇರುವುದು.


ಸರ್ವೇಶ್ವರಾ, ನಾನು ಕೂಡ ಈ ನದಿಯನ್ನು ದಾಟಿ, ಆಚೆಯಿರುವ ಒಳ್ಳೆಯ ನಾಡನ್ನು ಅಂದರೆ, ಆ ಅಂದವಾದ ಮಲೆನಾಡನ್ನೂ ಲೆಬನೋನ್ ಪರ್ವತವನ್ನೂ ನೋಡುವುದಕ್ಕೆ ಅಪ್ಪಣೆಯಾಗಲಿ’ ಎಂದು ಭಿನ್ನಯಿಸಿದೆ.


ನೋಡಿದಿರಿ ಈಜಿಪ್ಟಿನಲಿ ನಮ್ಮ ಪಿತೃಗಳು ಪಟ್ಟ ಕಷ್ಟವನು ಆಲಿಸಿದಿರಿ ಕೆಂಪುಸಮುದ್ರದ ಬಳಿ ಅವರಿಟ್ಟ ಮೊರೆಯನು.


ಹಗಲಲಿ ಅವರ ಮುಂದೆ ಸಾಗಿದಿರಿ ಮೇಘಸ್ತಂಭದಂತೆ ಇರುಳಲಿ ದಾರಿತೋರಿದಿರಿ ಬೆಳಕನೀವ ಅಗ್ನಿಸ್ತಂಭದಂತೆ.


ಏರಿದನು ಪ್ರಭು ಜಯಜಯಕಾರದೊಂದಿಗೆ I ಆರೋಹಣವಾದನು ತುತೂರಿನಾದ ಜೊತೆಗೆ II


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ಎಲೈ ಇಸ್ರಯೇಲ್, ನಾನು ಎಷ್ಟೋ ಆದರದಿಂದ ನಿನ್ನನ್ನು ನನ್ನ ಪುತ್ರನೆಂದು ಭಾವಿಸಿ, ನಿನಗೆ ಮನೋಹರವಾದ ನಾಡನ್ನು, ಅಂದರೆ, ಸಮಸ್ತ ರಾಷ್ಟ್ರಗಳಲ್ಲಿ ರಮಣೀಯವಾದ ಸೊತ್ತನ್ನು ಕೊಡಬೇಕು ಎಂದುಕೊಂಡಿದ್ದೆ. ನೀನು ನನ್ನನ್ನು ‘ತಂದೆ’ ಎಂದು ಸನ್ಮಾನಿಸಿ, ನನ್ನನ್ನು ತಪ್ಪದೆ ಹಿಂಬಾಲಿಸಿ ಬರುವೆಯೆಂದಿದ್ದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು