Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 20:8 - ಕನ್ನಡ ಸತ್ಯವೇದವು C.L. Bible (BSI)

8 ಅವರಾದರೋ ನನ್ನ ಮಾತನ್ನು ಲೆಕ್ಕಿಸದೆ ನನ್ನ ವಿರುದ್ಧ ದಂಗೆಯೆದ್ದರು; ತಮ್ಮ ಕಣ್ಣಿಗೆ ಇಷ್ಟವಾದ ಅಸಹ್ಯವಸ್ತುಗಳನ್ನು ಯಾರೂ ಬಿಸಾಡಿಬಿಡಲಿಲ್ಲ. ಈಜಿಪ್ಟಿನ ವಿಗ್ರಹಗಳನ್ನು ತ್ಯಜಿಸಲಿಲ್ಲ. ಆಗ ನಾನು ಈಜಿಪ್ಟ್ ದೇಶದಲ್ಲಿ ಇವರ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ, ನನ್ನ ಕೋಪವನ್ನು ತೀರಿಸಿಕೊಳ್ಳುವೆನು ಎಂದುಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 “‘ಅವರಾದರೋ ನನ್ನ ಮಾತನ್ನು ನಿರಾಕರಿಸಿ, ನನ್ನ ಮೇಲೆ ತಿರುಗಿ ಬಿದ್ದರು; ತಮ್ಮ ಕಣ್ಣಿಗೆ ಕಾಣುವ ಇಷ್ಟವಾದ ಅಸಹ್ಯ ವಸ್ತುಗಳನ್ನು ಯಾರೂ ಬಿಸಾಡಿಬಿಡಲಿಲ್ಲ, ಐಗುಪ್ತದ ವಿಗ್ರಹಗಳನ್ನು ತ್ಯಜಿಸಲಿಲ್ಲ; ಆಗ ನಾನು ಇವರ ಮೇಲೆ ಐಗುಪ್ತ ದೇಶದೊಳಗೆ ನನ್ನ ರೋಷಾಗ್ನಿಯನ್ನು ಸುರಿಸಿ ನನ್ನ ಕೋಪವನ್ನು ತೀರಿಸಿಕೊಳ್ಳುವೆನು’ ಅಂದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವರಾದರೋ ನನ್ನ ಮಾತನ್ನು ಕೇಳಲೊಲ್ಲದೆ ನನ್ನ ಮೇಲೆ ತಿರುಗಿಬಿದ್ದರು; ತಮ್ಮ ಕಣ್ಣಿಗೆ ಇಷ್ಟವಾದ ಅಸಹ್ಯವಸ್ತುಗಳನ್ನು ಯಾರೂ ಬಿಸಾಟುಬಿಡಲಿಲ್ಲ. ಐಗುಪ್ತದ ವಿಗ್ರಹಗಳನ್ನು ತ್ಯಜಿಸಲಿಲ್ಲ; ಆಗ ನಾನು ಇವರ ಮೇಲೆ ಐಗುಪ್ತದೇಶದೊಳಗೆ ನನ್ನ ರೋಷಾಗ್ನಿಯನ್ನು ಸುರಿಸಿ ನನ್ನ ಕೋಪವನ್ನು ತೀರಿಸಿಕೊಳ್ಳುವೆನು ಅಂದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದರೆ ಅವರು ನನ್ನ ವಿರುದ್ಧವಾಗಿ ಎದ್ದು ನನ್ನ ಮಾತುಗಳನ್ನು ಕೇಳದೆ ಹೋದರು. ತಮ್ಮ ವಿಗ್ರಹಗಳನ್ನು ಬಿಸಾಡಿಬಿಡಲಿಲ್ಲ. ಈಜಿಪ್ಟಿನ ವಿಗ್ರಹಗಳನ್ನು ತೊರೆದುಬಿಡಲಿಲ್ಲ. ಆದ್ದರಿಂದ ನಾನು ಅವರನ್ನು (ಇಸ್ರೇಲರನ್ನು) ಈಜಿಪ್ಟಿನಲ್ಲಿಯೇ ನಾಶಮಾಡಿ ನನ್ನ ರೋಷಾಗ್ನಿಯನ್ನು ತೀರಿಸಿಕೊಳ್ಳಲು ಆಲೋಚಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ ‘ಆದರೆ ಅವರು ನನಗೆ ವಿರುದ್ಧವಾಗಿ ತಿರುಗಿಬಿದ್ದರು. ನನಗೆ ಕಿವಿಗೊಡಲಿಲ್ಲ. ಅವರು ತಮ್ಮ ಕಣ್ಣಿಗೆ ಅಸಹ್ಯವಾದವುಗಳನ್ನು ಬಿಸಾಡಲಿಲ್ಲ. ಅವರು ಈಜಿಪ್ಟಿನ ವಿಗ್ರಹಗಳನ್ನು ಬಿಡಲಿಲ್ಲ. ಆಗ ನಾನು ಅವರ ಮೇಲೆ ನನ್ನ ರೋಷವನ್ನು ಸುರಿಸಿ, ಈಜಿಪ್ಟ್ ದೇಶದಲ್ಲಿ ಅವರ ಮೇಲೆ ನನ್ನ ಕೋಪವನ್ನು ತೀರಿಸುವೆನೆಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 20:8
24 ತಿಳಿವುಗಳ ಹೋಲಿಕೆ  

“ಆದರೆ ಆ ಸಂತಾನದವರು ನನ್ನನ್ನು ಪ್ರತಿಭಟಿಸಿದರು; ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ; ಕೈಗೊಂಡವರಿಗೆ ಜೀವಾಧಾರವಾದ ನನ್ನ ವಿಧಿಗಳನ್ನು ಅನುಸರಿಸಿ ನಡೆಯಲಿಲ್ಲ; ನಾನು ನೇಮಿಸಿದ ಸಬ್ಬತ್ ದಿನಗಳನ್ನು ಅಪವಿತ್ರಮಾಡಿದರು. ಆದುದರಿಂದ ನಾನು ‘ಮರುಭೂಮಿಯಲ್ಲೇ ಇವರ ಮೇಲೆ ನನ್ನ ರೋಷಾಗ್ನಿಯನ್ನು ಹರಿಸಿ, ನನ್ನ ಕೋಪವನ್ನು ತೀರಿಸಿಕೊಳ್ಳುವೆನು’ ಎಂದುಕೊಂಡೆ.


‘ನೀವೆಲ್ಲರೂ ನಿಮ್ಮ ಕಣ್ಣಿಗೆ ಇಷ್ಟವಾದ ಅಸಹ್ಯವಸ್ತುಗಳನ್ನು ಬಿಸಾಡಿಬಿಡಿ; ಈಜಿಪ್ಟಿನ ವಿಗ್ರಹಗಳಿಂದ ನಿಮ್ಮನ್ನು ಹೊಲಸು ಮಾಡಿಕೊಳ್ಳಬೇಡಿ; ನಾನು ನಿಮ್ಮ ದೇವರಾದ ಸರ್ವೇಶ್ವರ’ ಎಂದು ಅವರನ್ನು ಎಚ್ಚರಿಸಿದೆ.


“ಇನ್ನು ಸ್ವಲ್ಪಕಾಲದೊಳಗೆ ನಾನು ನಿನ್ನ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸುವೆನು, ನನ್ನ ಕೋಪವನ್ನು ತೀರಿಸಿಕೊಳ್ಳುವೆನು; ನಿನ್ನ ನಡತೆಗೆ ತಕ್ಕ ದಂಡನೆಯನ್ನು ವಿಧಿಸಿ, ನಿನ್ನ ಅಸಹ್ಯಕಾರ್ಯಗಳ ಫಲವನ್ನೆಲ್ಲಾ ನಿನಗೆ ತಿನ್ನಿಸುವೆನು.


“ಹೀಗೆ ನನ್ನ ಸಿಟ್ಟನ್ನು ತೀರಿಸಿಕೊಳ್ಳುವೆನು, ನನ್ನ ರೋಷವನ್ನು ಅವರ ಮೇಲೆ ಕಾರಿ ಶಾಂತನಾಗುವೆನು; ಆಗ್ರಹದಿಂದ ಮಾತಾಡಿದವನು ಸರ್ವೇಶ್ವರನಾದ ನಾನೇ ಎಂಬುದು ನನ್ನ ಕೋಪವನ್ನು ಅವರ ಮೇಲೆ ಹೊಯ್ದುಬಿಟ್ಟ ಬಳಿಕ ಅವರಿಗೆ ಗೊತ್ತಾಗುವುದು.


ಅವರಾದರೋ ಬಂಡಾಯವೆದ್ದರು; ಸ್ವಾಮಿಯ ಪವಿತ್ರಾತ್ಮನನ್ನು ದುಃಖಪಡಿಸಿದರು. ಎಂತಲೇ ಸರ್ವೇಶ್ವರ ಅವರಿಗೆ ಶತ್ರುವಾಗಿ ಮಾರ್ಪಟ್ಟರು, ತಾವೇ ಅವರಿಗೆ ವಿರುದ್ಧವಾಗಿ ಹೋರಾಡಿದರು.


ಆದರೆ ಇಸ್ರಯೇಲ್ ವಂಶದವರು ಮರುಭೂಮಿಯಲ್ಲಿ ನನ್ನ ವಿರುದ್ಧ ದಂಗೆಯೆದ್ದರು. ಕೈಗೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅನುಸರಿಸದೆ ಧಿಕ್ಕರಿಸಿದರು. ಮುಖ್ಯವಾಗಿ ನಾನು ನೇಮಿಸಿದ ಸಬ್ಬತ್ ದಿನಗಳನ್ನು ಅಪವಿತ್ರಮಾಡಿದರು. ಆಗ ನಾನು ‘ಮರುಭೂಮಿಯಲ್ಲಿರುವ ಇವರ ಮೇಲೆ ನನ್ನ ರೋಷಾಗ್ನಿಯನ್ನು ಹರಿಸಿ ಇವರನ್ನು ಧ್ವಂಸಮಾಡುವೆನು’ ಎಂದುಕೊಂಡೆ.


“ನೀವು ಮರುಭೂಮಿಯಲ್ಲಿ ನಿಮ್ಮ ದೇವರಾದ ಸರ್ವೇಶ್ವರನಿಗೆ ಕೋಪ ಹುಟ್ಟಿಸಿದ್ದನ್ನು ನೆನಪುಮಾಡಿಕೊಳ್ಳಿ. ಅದನ್ನು ಮರೆಯಬೇಡಿ. ನೀವು ಈಜಿಪ್ಟ್ ದೇಶವನ್ನು ಬಿಟ್ಟಂದಿನಿಂದ ಈ ಸ್ಥಳಕ್ಕೆ ಬಂದ ದಿನದವರೆಗೂ ಸರ್ವೇಶ್ವರನ ಆಜ್ಞೆಗಳನ್ನು ಧಿಕ್ಕರಿಸುತ್ತಾ ಬಂದಿದ್ದೀರಿ.


ಬಳಿಕ ಅವಿಧೇಯರಾದರು, ನಿಮಗೆ ವಿರುದ್ಧ ದಂಗೆ ಎದ್ದರು; ನಿಮ್ಮ ಉಪದೇಶವನು ಉಲ್ಲಂಘಿಸಿದರು, ನಿಮ್ಮ ಪ್ರವಾದಿಗಳನು ಕೊಂದರು; ಹೌದು, ನಿಮಗೆ ಅಭಿಮುಖರಾಗಲು ಎಚ್ಚರಿಸಿದವರನೆ ಕೊಂದರು. ಕಡೆಗೆ ನಿಮ್ಮನ್ನೇ ಅಸಡ್ಡೆಮಾಡಿ, ಘೋರ ಅಪರಾಧಿಗಳಾದರು.


‘ಮೋಶೆ ಬೆಟ್ಟದಿಂದ ಇಳಿಯದೆ ತಡಮಾಡಿದ್ದನ್ನು ಇಸ್ರಯೇಲರು ನೋಡಿ, ಆರೋನನ ಬಳಿಗೆ ಕೂಡಿಬಂದರು. ಅವನಿಗೆ, “ಈಜಿಪ್ಟ್ ದೇಶದಿಂದ ನಮ್ಮನ್ನು ಕರೆದುಕೊಂಡು ಬಂದ ಆ ಮೋಶೆ ಏನಾದನೋ ಗೊತ್ತಿಲ್ಲ. ಆದ್ದರಿಂದ ಏಳು, ನಮ್ಮನ್ನು ಮುನ್ನಡೆಸಿಕೊಂಡು ಹೋಗಲು ನಮಗೊಬ್ಬ ದೇವರನ್ನು ಮಾಡಿಸಿಕೊಡು,” ಎಂದು ಕೇಳಿದರು.


ನೀವು ವಾಸವಾಗಿದ್ದ ಈಜಿಪ್ಟಿನ ಆಚಾರಗಳನ್ನು ಅನುಸರಿಸಬಾರದು; ನಾನು ನಿಮ್ಮನ್ನು ಕರೆದೊಯ್ಯುತ್ತಿರುವ ಕಾನಾನ್ ನಾಡಿನ ಆಚರಣೆಗಳನ್ನು ಕೂಡ ನೀವು ಅನುಸರಿಸಬಾರದು. ಅವರಲ್ಲಿರುವ ನಿಯಮಗಳಿಗೆ ನೀವು ಒಳಗಾಗಕೂಡದು.


ನಿನ್ನ ರೌದ್ರ ಅವರ ಮೇಲೆರಗಲಿ I ನಿನ್ನ ಕೋಪಾಗ್ನಿ ಅವರನು ದಹಿಸಲಿ II


ಎಂತಲೇ ‘ಸಂಹರಿಸುವೆ’ ಎನ್ನಲು ಪ್ರಭು ಅವರನು I ಆಪ್ತ ಮೋಶೆಯು ಮಧ್ಯಸ್ಥನಾಗಿ ಬಂದನು I ಸಂಹರಿಸದಂತೆ ಶಮನಗೊಳಿಸಿದನಾ ಕೋಪವನು II


ಆದರೆ ಅವರು ಕೇಳಲಿಲ್ಲ, ಕಿವಿಗೊಡಲಿಲ್ಲ. ತಮ್ಮ ಸ್ವಂತ ಆಲೋಚನೆಗಳನ್ನು ಅನುಸರಿಸಿದರು. ತಮ್ಮ ದುಷ್ಟಹೃದಯದ ನಿಮಿತ್ತ ಹಟಮಾರಿಗಳಂತೆ ನಡೆದುಕೊಂಡರು. ಮುಂದೆ ಸಾಗದೆ ಹಿಂದಿರುಗಿಯೇ ಹೋದರು.


ಅವರಾದರೋ ಕೇಳಲಿಲ್ಲ, ಕಿವಿಗೊಡಲಿಲ್ಲ, ಪ್ರತಿಯೊಬ್ಬನು ತನ್ನ ದುಷ್ಟ ಹೃದಯದ ನಿಮಿತ್ತ ಹಟಮಾರಿಯಂತೆ ನಡೆದುಕೊಂಡನು. ಆದಕಾರಣ, ಕೈಗೊಳ್ಳಬೇಕೆಂದು ನಾನು ಆಜ್ಞಾಪಿಸಿದ್ದರೂ ಅವರು ಕೈಗೊಳ್ಳದೆಹೋದ ಆ ಒಡಂಬಡಿಕೆಯಲ್ಲೆ ಸೂಚಿಸಲಾಗಿರುವ ಶಾಪಗಳನ್ನೆಲ್ಲ ಅವರ ಮೇಲೆ ಬರಮಾಡಿದೆ.”


ಏಕೆಂದರೆ, ಅವರ ಹೃದಯ ವಿಗ್ರಹಗಳಲ್ಲಿ ಆಸಕ್ತವಾಗಿ, ನನ್ನ ಆಜ್ಞಾವಿಧಿಗಳನ್ನು ಅವರು ಅನುಸರಿಸದೆ ಧಿಕ್ಕರಿಸಿ, ನಾನು ನೇಮಿಸಿದ ಸಬ್ಬತ್ ದಿನಗಳನ್ನು ಅಪವಿತ್ರಗೊಳಿಸಿದರು.


ಬೆಳ್ಳಿ ಕುಲುಮೆಯೊಳಗೆ ಕರಗುವಂತೆ ನೀವು ನನ್ನ ರೋಷಾಗ್ನಿಯಲ್ಲಿ ಕರಗಿಬಿಡುವಿರಿ; ನಿಮ್ಮ ಮೇಲೆ ರೋಷಾಗ್ನಿಯನ್ನು ಸುರಿಸಿದ ನಾನು ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು.”


ಬೆಂಗಾಡಿನಲ್ಲಿ ದ್ರಾಕ್ಷೆ ಸಿಕ್ಕಿದಂತೆ ಇಸ್ರಯೇಲ್ ನನಗೆ ಸಿಕ್ಕಿತು. ಅಂಜೂರದ ಮರದ ಮೊತ್ತಮೊದಲ ಹಣ್ಣು ಕಣ್ಣಿಗೆ ಬೀಳುವಂತೆ ನಿಮ್ಮ ಪಿತೃಗಳು ನನಗೆ ಕಾಣಿಸಿಕೊಂಡರು. ಆದರೆ ಅವರು ಬಾಳ್‍ಪೆಗೋರಿಗೆ ಬಂದು ಬಾಳ್ ದೇವತೆಯ ಭಕ್ತರಾದರು. ಅವರು ನೆಚ್ಚಿಕೊಂಡ ದೇವತೆಯಂತೆ ನೀಚರಾದರು.


ನನಗೆ ನಿಮ್ಮ ಪರಿಚಯವಾದಂದಿನಿಂದಲೂ ನೀವು ಸರ್ವೇಶ್ವರನ ಆಜ್ಞೆಯನ್ನು ಉಲ್ಲಂಘಿಸುತ್ತಾ ಬಂದಿದ್ದೀರಿ.


ಮರೆಯರು ನನ್ನ ಮಹತ್ಕಾರ್ಯಗಳನು I ಇಡುವರು ನನ್ನಲ್ಲೇ ಭರವಸೆಯನು I ಕೈಗೊಳ್ಳುವರು ನನ್ನ ಆಜ್ಞೆಗಳನು II


ಆದರೂ ಪಾಪಮಾಡುತ್ತಲೆ ಬಂದರು ದೇವರಿಗೆದುರಾಗಿ I ಪ್ರತಿಭಟಿಸಿದರು ಅಡವಿಯಲಿ ಪರಾತ್ಪರನಿಗೆ ವಿರುದ್ಧವಾಗಿ II


“ಎಂತಲೇ ಕೈಬಿಟ್ಟೆ ಅವರನು ಹಟಮಾರಿಗಳೆಂದು I ತಮಗಿಷ್ಟಬಂದಂತೆಯೆ ನಡೆದುಕೊಳ್ಳಲಿಯೆಂದು, II


ಅವರು ಈ ನಾಡನ್ನು ಸೇರಿದರು, ಅದನ್ನು ಅನುಭವಿಸಿದರು. ಆದರೆ ನಿಮ್ಮ ಮಾತಿಗೆ ಕಿವಿಗೊಡಲಿಲ್ಲ. ನಿಮ್ಮ ಧರ್ಮಶಾಸ್ತ್ರದ ಅನುಸಾರ ನಡೆಯಲಿಲ್ಲ. ನೀವು ಆಜ್ಞಾಪಿಸಿದವುಗಳಲ್ಲಿ ಒಂದನ್ನೂ ಮಾಡಲಿಲ್ಲ. ಆದಕಾರಣ ನೀವು ಈ ಕೇಡನ್ನೆಲ್ಲ ಅವರ ಮೇಲೆ ಬರಮಾಡಿದ್ದೀರಿ.


ಅವರು ಈಜಿಪ್ಟಿನಲ್ಲಿ ಸೂಳೆತನ ಮಾಡುತ್ತಿದ್ದರು. ಬಾಲ್ಯದಲ್ಲಿ ವೇಶ್ಯೆಯರಾಗಿ ನಡೆಯುತ್ತಿದ್ದರು. ಅಲ್ಲಿನ ಪುರುಷರು ಅವರ ಸ್ತನಗಳನ್ನು ಹಿಸುಕಿದರು, ಎಳೆಯ ತೊಟ್ಟುಗಳನ್ನು ಸವರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು