Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 20:9 - ಕನ್ನಡ ಸತ್ಯವೇದವು C.L. Bible (BSI)

9 ಆದರೂ, ‘ನಿಮ್ಮನ್ನು ಈಜಿಪ್ಟಿನಿಂದ ಪಾರುಮಾಡುವೆನು,’ ಎಂಬುದಾಗಿ ಜನಾಂಗಗಳ ಮುಂದೆಯೇ ನನ್ನನ್ನು ಇವರಿಗೆ ಪ್ರಕಟಿಸಿಕೊಂಡೆನಲ್ಲಾ ಎಂದು ಯೋಚಿಸಿ ಅವರ ಸುತ್ತಮುತ್ತಲಿನ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗದಂತೆ ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ‘ಆದರೂ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಪಾರುಮಾಡುವೆನು ಎಂಬುದಾಗಿ ಜನಾಂಗಗಳ ಮುಂದೆಯೇ ನನ್ನನ್ನು ಇವರಿಗೆ ಪ್ರಕಟಿಸಿಕೊಂಡೆನಲ್ಲಾ ಎಂದು ಯೋಚಿಸಿ, ಅವರ ಸುತ್ತಣ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗದಂತೆ ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆದರೂ ನಿಮ್ಮನ್ನು ಐಗುಪ್ತದೇಶದೊಳಗಿಂದ ಪಾರುಮಾಡುವೆನು ಎಂಬದಾಗಿ ಜನಾಂಗಗಳ ಮುಂದೆಯೇ ನನ್ನನ್ನು ಇವರಿಗೆ ಪ್ರಕಟಿಸಿಕೊಂಡೆನಲ್ಲಾ ಎಂದು ಯೋಚಿಸಿ ಅವರ ಸುತ್ತಣ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗದಂತೆ ನನ್ನ ಹೆಸರಿನ ನಿವಿುತ್ತವೇ ಸಹಿಸಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆದರೆ ನಾನು ಅವರನ್ನು ನಾಶಮಾಡಲಿಲ್ಲ. ಇಸ್ರೇಲರು ವಾಸವಾಗಿರುವ ಸ್ಥಳದಲ್ಲಿ ಜನರ ಮುಂದೆ ನನ್ನ ಹೆಸರನ್ನು ಅವಮಾನಕ್ಕೆ ಗುರಿಮಾಡಲು ನನಗೆ ಇಷ್ಟವಿರಲಿಲ್ಲ. ಈಜಿಪ್ಟಿನಿಂದ ಹೊರಗೆ ತರುತ್ತೇನೆಂಬ ವಾಗ್ದಾನದೊಡನೆ ನಾನು ಇಸ್ರೇಲರಿಗೆ ಪ್ರಕಟಿಸಿಕೊಂಡಿದ್ದನ್ನು ಅವರು ನೋಡಿದ್ದರು. ಆದ್ದರಿಂದ ನಾನು ಇಸ್ರೇಲರನ್ನು ಅವರ ಮುಂದೆ ನಾಶಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆದರೆ ಅವರು ಯಾರ ಮಧ್ಯದಲ್ಲಿದ್ದರೋ, ನಾನು ಯಾರ ಮುಂದೆ ಅವರನ್ನು ಈಜಿಪ್ಟ್ ದೇಶದಿಂದ ಹೊರಗೆ ತಂದು ನನ್ನನ್ನು ತಿಳಿಯಪಡಿಸಿದೆನೋ ಆ ಜನಾಂಗಗಳ ಕಣ್ಣುಗಳ ಮುಂದೆ ನನ್ನ ಹೆಸರು ಅಪವಿತ್ರವಾಗದ ಹಾಗೆ ನನ್ನ ಹೆಸರಿಗೋಸ್ಕರವೇ ಈ ಕೆಲಸವನ್ನು ಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 20:9
16 ತಿಳಿವುಗಳ ಹೋಲಿಕೆ  

ನಾನು ನನ್ನ ಪವಿತ್ರನಾಮವನ್ನು ನನ್ನ ಜನರಾದ ಇಸ್ರಯೇಲರ ನಡುವೆ ವ್ಯಕ್ತಗೊಳಿಸುವೆನು, ಅದನ್ನು ಇನ್ನು ಮುಂದೆ ಅಪಕೀರ್ತಿಗೆ ಗುರಿಯಾಗಲುಬಿಡೆನು; ನಾನೇ ಸರ್ವೇಶ್ವರ, ಇಸ್ರಯೇಲಿನ ಪರಮಪಾವನಸ್ವಾಮಿ ಎಂದು ಜನಾಂಗಗಳಿಗೆ ಗೊತ್ತಾಗುವುದು.”


ಆದರೂ ನಾನು ಯಾವ ಜನಾಂಗಗಳ ಮುಂದೆ ಅವರನ್ನು ಬಿಡುಗಡೆ ಮಾಡಿದೆನೋ, ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗಬಾರದೆಂದು ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡು, ಕೈಯನ್ನು ಹಿಂದಕ್ಕೆ ತೆಗೆದುಕೊಂಡೆ.


ಆದರೂ ಯಾವ ಜನಾಂಗಗಳ ಮುಂದೆ ಅವರನ್ನು ಪಾರುಮಾಡಿದೆನೋ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಬರಬಾರದೆಂದು ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡೆ.


ಈಜಿಪ್ಟಿನವರು ತಮ್ಮ ವಿಷಯದಲ್ಲಿ, ‘ಸರ್ವೇಶ್ವರನು ಕೇಡುಮಾಡಬೇಕೆಂಬ ಉದ್ದೇಶದಿಂದಲೇ ಇಸ್ರಯೇಲರನ್ನು ಇಲ್ಲಿಂದ ಕರೆದುಕೊಂಡು ಹೋದದ್ದು; ಅವರನ್ನು ಬೆಟ್ಟಗುಡ್ಡಗಳಲ್ಲಿ ಸಾಯಿಸಿ ಇಳೆಯಲ್ಲಿ ಉಳಿಯದಂತೆ ನಿರ್ಮೂಲ ಮಾಡಬೇಕೆಂದೇ ಅವರನ್ನು ಕರೆದುಕೊಂಡು ಹೋದದ್ದು ಎಂದು ಆಡಿಕೊಳ್ಳುವುದಕ್ಕೆ ಎಡೆಮಾಡಿಕೊಳ್ಳಬೇಕೆ? ತಾವು ಕೋಪಾಗ್ನಿಯನ್ನು ಬಿಟ್ಟು ತಮ್ಮ ಪ್ರಜೆಗೆ ಕೇಡುಮಾಡಬೇಕೆಂಬ ಮನಸ್ಸನ್ನು ಮಾರ್ಪಡಿಸಿಕೊಳ್ಳಿ.


ಸರ್ವೇಶ್ವರನ ದಯೆ ನಿಮ್ಮನ್ನು ಸ್ವಕೀಯ ಜನರನ್ನಾಗಿ ಆರಿಸಿಕೊಂಡ ಮೇಲೆ, ಅವರು ತಮ್ಮ ಮಹೋನ್ನತ ನಾಮದ ನಿಮಿತ್ತ, ನಿಮ್ಮನ್ನು ಖಂಡಿತವಾಗಿ ಕೈಬಿಡುವುದಿಲ್ಲ.


ಅಕಟಾ, ಪ್ರತಾಪವುಳ್ಳ ಈ ದೇವರುಗಳ ಕೈಯಿಂದ ನಮ್ಮನ್ನು ಬಿಡಿಸುವವರಾರು? ಈಜಿಪ್ಟರನ್ನು ಅರಣ್ಯದಲ್ಲಿ ಸಂಪೂರ್ಣವಾಗಿ ನಾಶಮಾಡಿಬಿಟ್ಟ ದೇವರುಗಳು ಇವರೇ ಅಲ್ಲವೆ?


ನೀವು ಯಾವ ದೇಶದಿಂದ ನಮ್ಮನ್ನು ಬರಮಾಡಿದಿರೋ ಆ ದೇಶದವರು, ‘ಸರ್ವೇಶ್ವರ ಇಸ್ರಯೇಲರಿಗೆ ವಾಗ್ದಾನಮಾಡಿದ ನಾಡಿಗೆ ಅವರನ್ನು ಸೇರಿಸಲಾರದೆ ಹಗೆಮಾಡಿ, ಮರುಭೂಮಿಯಲ್ಲಿ ಕೊಲ್ಲುವುದಕ್ಕೇ ಕರೆದುಕೊಂಡು ಹೋದರು’ ಎಂದು ಹೇಳುವುದಕ್ಕೆ ಆಸ್ಪದವಾದೀತು.


ಕಾನಾನ್ಯರು ಮತ್ತು ನಾಡಿನ ಬೇರೆ ಎಲ್ಲಾ ನಿವಾಸಿಗಳೂ ಇದನ್ನು ಕೇಳಿ ನಮ್ಮನ್ನು ಸುತ್ತುವರೆದು ಲೋಕದಲ್ಲಿ ನಮ್ಮ ಹೆಸರೇ ಉಳಿಯದಂತೆ ಮಾಡುವರು. ಆಗ ನಿಮ್ಮ ಮಹತ್ತಾದ ಹೆಸರನ್ನು ಉಳಿಸಿಕೊಳ್ಳಲು ಏನು ಮಾಡುವಿರಿ?” ಎಂದನು.


ನೀವು ಈಜಿಪ್ಟಿನಿಂದ ಹೊರಟುಬಂದ ಮೇಲೆ ಸರ್ವೇಶ್ವರ ನಿಮ್ಮ ಮುಂದೆ ಕೆಂಪುಸಮುದ್ರವನ್ನು ಬತ್ತಿಸಿಬಿಟ್ಟರೆಂದು ಕೇಳಿದ್ದೇವೆ. ಅಲ್ಲದೆ ಜೋರ್ಡನ್ನಿನ ಆಚೆ ಇರುವ ಅಮೋರಿಯರ ಅರಸರಿಬ್ಬರನ್ನು ಅಂದರೆ, ಸೀಹೋನ್ ಮತ್ತು ಓಗ್ ಎಂಬವರನ್ನು ನೀವು ನಾಶಮಾಡಿದಿರೆಂದು ಕೇಳಿದ್ದೇವೆ.


ಆಗ ಮೋಶೆ ತನ್ನ ದೇವರಾದ ಸರ್ವೇಶ್ವರನನ್ನು ಹೀಗೆಂದು ಬೇಡಿಕೊಂಡನು: “ಸ್ವಾಮಿ ಸರ್ವೇಶ್ವರಾ, ಮಹಾಶಕ್ತಿಯಿಂದಲೂ ಭುಜಬಲದಿಂದಲೂ ತಾವೇ ಈಜಿಪ್ಟಿನಿಂದ ಬಿಡಿಸಿದ ತಮ್ಮ ಪ್ರಜೆಯ ಮೇಲೆ ಕೋಪಾಗ್ನಿ ಕಾರಬಹುದೆ?


ಆದರೂ ತನ್ನ ನಾಮಪ್ರಯುಕ್ತ ರಕ್ಷಿಸಿದನವರನು I ಪ್ರಕಟಿಸಿದನಾತ ಹೀಗೆ ತನ್ನ ಶಕ್ತಿಸಾಮರ್ಥ್ಯವನು II


ಇದನ್ನು ಮಾಡುವೆ ನನಗೋಸ್ಕರವೆ ಇದನ್ನು ಮಾಡುವೆ ಕಳಂಕಬಾರದಂತೆ ನನ್ನ ಹೆಸರಿಗೆ ಸಲ್ಲಗೊಡಿಸೆನು ನನ್ನ ಮಹಿಮೆಯನು ಮತ್ತೊಬ್ಬನಿಗೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು