ಯೆಹೆಜ್ಕೇಲನು 21:14 - ಕನ್ನಡ ಸತ್ಯವೇದವು C.L. Bible (BSI)14 ನರಪುತ್ರನೇ, ಪ್ರವಾದಿಸು, ಚಪ್ಪಾಳೆ ಬಡಿ, ಹತಿಸುವುದಾ ಖಡ್ಗ ಇಮ್ಮಡಿ ಮುಮ್ಮಡಿ. ಪ್ರಜೆಯನ್ನು ಸಂಹರಿಸುವುದಾ ಖಡ್ಗ ಅಧಿಪತಿಯನ್ನೇ ಸುತ್ತಲು ಬೀಸಿ ಹತಿಸುವುದಾ ಖಡ್ಗ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನರಪುತ್ರನೇ, ನೀನು ದೈವೋಕ್ತಿಯನ್ನು ಸಾರಿ ಚಪ್ಪಾಳೆ ಹೊಡಿ; ಖಡ್ಗವು ಎರಡರಷ್ಟು, ಮೂರರಷ್ಟು ಸಂಹರಿಸಲಿ! ಪ್ರಜೆಯನ್ನು ಹತಿಸುವ ಖಡ್ಗ! ಸುತ್ತಲು ಬೀಸಿ, ಅಧಿಪತಿಯನ್ನು ಹತಿಸುವ ಖಡ್ಗ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನರಪುತ್ರನೇ, ನೀನು ದೈವಸಂಕಲ್ಪವನ್ನು ಸಾರಿ ಚಪ್ಪಾಳೆಬಡಿ; ಖಡ್ಗವು ಎರಡರಷ್ಟು ಮೂರರಷ್ಟು ಸಂಹರಿಸಲಿ! ಪ್ರಜೆಯನ್ನು ಹತಿಸುವ ಖಡ್ಗ! ಸುತ್ತಲು ಬೀಸಿ ಅಧಿಪತಿಯನ್ನು ಹತಿಸುವ ಖಡ್ಗ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆತನು ಹೀಗೆ ಹೇಳಿದನು: “ನರಪುತ್ರನೇ, ಕೈತಟ್ಟಿ ನನ್ನ ಪರವಾಗಿ ಜನರೊಂದಿಗೆ ಮಾತನಾಡು. “ಖಡ್ಗವು ಎರಡು ಬಾರಿ ಕೆಳಕ್ಕೆ ಹಾಕಲ್ಪಡಲಿ, ಹೌದು, ಮೂರು ಬಾರಿ! ಈ ಖಡ್ಗವು ಜನರನ್ನು ಕೊಲ್ಲುವದಕ್ಕಾಗಿಯೇ ಇದೆ. ಇದು ಮಹಾಹತ್ಯೆ ಮಾಡುವದಕ್ಕಾಗಿ ಇದೆ. ಈ ಖಡ್ಗವು ಅವರನ್ನು ತೂರಿಹೋಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 “ಆದ್ದರಿಂದ ನೀನು ಮನುಷ್ಯಪುತ್ರನೇ, ಕೈಗೆ ಕೈತಟ್ಟಿ ಪ್ರವಾದಿಸು. ಹತರಾದವರ ಖಡ್ಗವಾದ ಆ ಖಡ್ಗವೇ ಎರಡರಷ್ಟು, ಮೂರರಷ್ಟು ಸಂಹರಿಸಲಿ. ಪ್ರಜೆಯನ್ನು ಹತಿಸುವ ಆ ಖಡ್ಗ ಸುತ್ತಲೂ ಬೀಸಿ ಆ ಕೊಠಡಿಗಳಲ್ಲಿ ಸೇರುವವರನ್ನು ಆ ದೊಡ್ಡ ಖಡ್ಗ ಸಂಹರಿಸುವುದು. ಅಧ್ಯಾಯವನ್ನು ನೋಡಿ |