ಯೆಹೆಜ್ಕೇಲನು 21:15 - ಕನ್ನಡ ಸತ್ಯವೇದವು C.L. Bible (BSI)15 ನೀರಾಗುವುದು ಜನರ ಹೃದಯ, ಎಡವಿ ಬೀಳುವರು ಬಹುಜನ. ಪುರದ್ವಾರಗಳಿಗೇ ತಂದಿರುವೆನು ಹತಿಸುವಾ ಖಡ್ಗವ. ಮಿನುಗುತಿಹುದದು ಮಿಂಚಿನಂತೆ ಹರಿತವಿದೆ ವಧೆಗಾಗುವ ಕತ್ತಿಯಂತೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅವರ ಹೃದಯವು ನೀರಾಗಿ ಬಹಳ ಜನರು ಎಡವಿ ಬೀಳುವಂತೆ ಸಂಹರಿಸುವ ಖಡ್ಗವನ್ನು ಅವರ ಪುರದ್ವಾರಗಳಿಗೆಲ್ಲಾ ತಂದಿದ್ದೇನೆ. ಆಹಾ, ಮಿಂಚಿನಂತೆ ಮಿಂಚುತ್ತದೆ, ವಧೆಗಾಗಿ ಹಂತವಾಗಿ ಸಿದ್ಧವಾಗಿದೆ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಅವರ ಹೃದಯವು ನೀರಾಗಿ ಬಹುಜನ ಎಡವಿಬೀಳುವಂತೆ ಸಂಹರಿಸುವ ಖಡ್ಗವನ್ನು ಅವರ ಪುರದ್ವಾರಗಳಿಗೆಲ್ಲಾ ತಂದಿದ್ದೇನೆ. ಆಹಾ, ವಿುಂಚಿನಂತೆ ವಿುಂಚುತ್ತದೆ, ವಧೆಗಾಗಿ ಉಜ್ಜಿದೆ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಅವರ ಹೃದಯಗಳು ಭಯದಿಂದ ಕರಗಿಹೋಗುವುದು. ಬಹು ಜನರು ಪ್ರಜ್ಞೆ ತಪ್ಪಿ ಬೀಳುವರು. ನಗರದ್ವಾರದ ಬಳಿಯಲ್ಲಿದ್ದು ಈ ಖಡ್ಗವು ಬಹು ಜನರನ್ನು ಕೊಲ್ಲುವುದು. ಹೌದು, ಖಡ್ಗವು ಮಿಂಚಿನಂತೆ ಹೊಳೆಯುವುದು. ಜನರನ್ನು ಕೊಲ್ಲುವುದಕ್ಕಾಗಿ ಅದು ಹೊಳಪುಮಾಡಲ್ಪಟ್ಟಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಅವರ ಹೃದಯವು ಕರಗುವ ಹಾಗೆಯೂ, ಅವರ ಎಲ್ಲಾ ಬಾಗಿಲುಗಳಲ್ಲಿ ಪತನವು ಹೆಚ್ಚಾಗುವ ಹಾಗೆಯೂ ಖಡ್ಗದ ಮೊನೆ ಇಟ್ಟಿದ್ದೇನೆ. ಆಹಾ, ಮಿಂಚಿನಂತೆ ಹೊಡೆಯಲು ಈ ಬಲೆ ಹೆಣೆಯಲಾಗಿದೆ ಅದನ್ನು ಕೊಲೆಮಾಡುವುದಕ್ಕೆ ಮಸೆಯಲಾಗಿದೆ. ಅಧ್ಯಾಯವನ್ನು ನೋಡಿ |
‘ಏಕೆ ನರಳಾಡುತ್ತೀ?’ ಎಂದು ಅವರು ನಿನ್ನನ್ನು ಕೇಳುವರು. ಆಗ ನೀನು ಅವರಿಗೆ - ‘ದುರ್ವಾರ್ತೆಯ ನಿಮಿತ್ತ ನರಳುತ್ತಿದ್ದೇನೆ; ಇಗೋ, ವಿಪತ್ತು ಬಂದಿತು; ಎಲ್ಲರ ಹೃದಯವು ಕರಗಿ ನೀರಾಗುವುದು, ಎಲ್ಲರ ಕೈ ಜೋಲುಬೀಳುವುದು, ಎಲ್ಲರ ಮನಸ್ಸು ಕುಂದುವುದು, ಎಲ್ಲರ ಮೊಣಕಾಲು ನೀರಿನಂತೆ ಅದರುವುದು; ಇಗೋ, ಬಂದಿತು, ಬಂದಾಯಿತು! ಇದು ಸರ್ವೇಶ್ವರನಾದ ದೇವರ ನುಡಿ,’ ಎಂದು ಉತ್ತರಕೊಡು.”