Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 21:17 - ಕನ್ನಡ ಸತ್ಯವೇದವು C.L. Bible (BSI)

17 ನಾನೂ ರೋಷ ತೀರಿಸಿಕೊಳ್ವೆ ಚಪ್ಪಾಳೆ ತಟ್ಟಿ ಇದು ಸರ್ವೇಶ್ವರನಾದ ನನ್ನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಾನು ಚಪ್ಪಾಳೆ ಹೊಡೆದು ನನ್ನ ರೋಷವನ್ನು ತೀರಿಸಿಕೊಳ್ಳುವೆನು. ಕರ್ತನಾದ ನಾನೇ ಇದನ್ನು ನುಡಿದಿದ್ದೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನಾನು ಚಪ್ಪಾಳೆಬಡಿದು ನನ್ನ ರೋಷವನ್ನು ತೀರಿಸಿಕೊಳ್ಳುವೆನು. ಕರ್ತನಾದ ನಾನೇ ಇದನ್ನು ನುಡಿದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 “ಆಗ ನಾನೂ ಚಪ್ಪಾಳೆ ಬಡಿದು ನನ್ನ ಕೋಪವನ್ನು ನಿಲ್ಲಿಸುವೆನು. ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನಾನೂ ಸಹ ಕೈತಟ್ಟಿ ನನ್ನ ರೋಷವನ್ನು ತೀರಿಸಿಕೊಳ್ಳುವೆನು, ಎಂದು ಯೆಹೋವ ದೇವರಾದ ನಾನು ಹೇಳಿದ್ದೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 21:17
13 ತಿಳಿವುಗಳ ಹೋಲಿಕೆ  

“ಹೀಗೆ ನನ್ನ ಸಿಟ್ಟನ್ನು ತೀರಿಸಿಕೊಳ್ಳುವೆನು, ನನ್ನ ರೋಷವನ್ನು ಅವರ ಮೇಲೆ ಕಾರಿ ಶಾಂತನಾಗುವೆನು; ಆಗ್ರಹದಿಂದ ಮಾತಾಡಿದವನು ಸರ್ವೇಶ್ವರನಾದ ನಾನೇ ಎಂಬುದು ನನ್ನ ಕೋಪವನ್ನು ಅವರ ಮೇಲೆ ಹೊಯ್ದುಬಿಟ್ಟ ಬಳಿಕ ಅವರಿಗೆ ಗೊತ್ತಾಗುವುದು.


ನರಪುತ್ರನೇ, ಪ್ರವಾದಿಸು, ಚಪ್ಪಾಳೆ ಬಡಿ, ಹತಿಸುವುದಾ ಖಡ್ಗ ಇಮ್ಮಡಿ ಮುಮ್ಮಡಿ. ಪ್ರಜೆಯನ್ನು ಸಂಹರಿಸುವುದಾ ಖಡ್ಗ ಅಧಿಪತಿಯನ್ನೇ ಸುತ್ತಲು ಬೀಸಿ ಹತಿಸುವುದಾ ಖಡ್ಗ.


ಆಮೇಲೆ ದೂತನು ನನಗೆ, “ಉತ್ತರ ದೇಶಕ್ಕೆ ಹೊರಟ ಕುದುರೆಗಳ ರಥ ಸರ್ವೇಶ್ವರಸ್ವಾಮಿಯ ಕೋಪವನ್ನು ಶಮನಗೊಳಿಸಿದೆ,” ಎಂದು ಕೂಗಿ ಹೇಳಿದನು.


“ಇಗೋ, ನೀನು ದೋಚಿಕೊಂಡ ಲಾಭವನ್ನೂ ನೀನು ಸುರಿದ ರಕ್ತವನ್ನೂ ನೋಡಿ ಕೈ ಎತ್ತಿದ್ದೇನೆ.


ಹೀಗೆ ನಾನು ನಿನ್ನ ಮೇಲಣ ಸಿಟ್ಟನ್ನು ತೀರಿಸುವೆನು. ಆಗ ನನ್ನ ರೋಷವು ನಿನ್ನಿಂದ ದೂರವಾಗುವುದು; ನಾನು ಶಾಂತನಾಗಿ ಇನ್ನು ಮೇಲೆ ಕೋಪಗೊಳ್ಳೆನು.


ಇಂತಿರಲು ಒಡೆಯರು, ಸೇನಾಧೀಶ್ವರರು, ಇಸ್ರಯೇಲರ ಪರಾಕ್ರಮಿಯು ಆದ ಸರ್ವೇಶ್ವರ ಹೀಗೆನ್ನುತ್ತಾರೆ: “ಇಗೋ ನನ್ನ ಶತ್ರುಗಳಾದ ನಿಮ್ಮ ಮೇಲೆ ಸೇಡು ತೀರಿಸುವೆನು. ನನ್ನ ವಿರೋಧಿಗಳಾದ ನಿಮ್ಮನ್ನು ಸದೆಬಡಿದು ಶಾಂತನಾಗಿರುವೆನು.


ಸರ್ವೇಶ್ವರ ಈಗ ನಿಮ್ಮನ್ನು ಅಭಿವೃದ್ಧಿಪಡಿಸುವುದರಲ್ಲೂ ಹೆಚ್ಚಿಸುವುದರಲ್ಲೂ ಹೇಗೆ ಸಂತೋಷಪಡುತ್ತಾರೋ ಹಾಗೆಯೇ ಆಗ ನಿಮ್ಮನ್ನು ಕೆಡಿಸಿ ನಾಶಮಾಡುವುದರಲ್ಲಿ ಸಂತೋಷಪಡುವರು. ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ನಾಡಿನೊಳಗಿಂದ ನಿಮ್ಮನ್ನು ಕಿತ್ತುಹಾಕುವರು.


ಇದನ್ನು ಕೇಳಿ ಬಾಲಾಕನಿಗೆ ಬಿಳಾಮನ ಮೇಲೆ ಕಡುಕೋಪ ಉಂಟಾಯಿತು. ಅವನು ಕೈಕೈಹಿಸಿಕಿಕೊಂಡು ಬಿಳಾಮನಿಗೆ, “ಶತ್ರುಗಳನ್ನು ಶಪಿಸುವುದಕ್ಕೆ ನಿನ್ನನ್ನು ಕರೆಸಿದೆ; ಆದರೆ ನೀನು ಮೂರು ಸಾರಿಯೂ ಅವರನ್ನೇ ಆಶೀರ್ವದಿಸಿದೆ.


ಖಡ್ಗವೇ, ಏಕಾಗ್ರವಾಗಿ ಹೋಗು ಬಲಕೆ ಸಜ್ಜಾಗಿ ಸಾಗು ಎಡಕೆ ಹೊರಡು ನಿನ್ನ ಮುಖವಿದ್ದ ಕಡೆಗೆ.


ಸರ್ವೇಶ್ವರ ನನಗೆ ಮತ್ತೊಂದು ವಾಣಿಯನ್ನು ದಯಪಾಲಿಸಿದರು - “ನರಪುತ್ರನೇ,


ಊರ ಹೊರಗೆ ಹೋಗುವಂತಿಲ್ಲ, ದಾರಿಯಲ್ಲಿ ನಡೆಯುವಂತಿಲ್ಲ. ಸುತ್ತಮುತ್ತಲೂ ಶತ್ರುವಿನ ಕತ್ತಿ, ಎಲ್ಲೆಲ್ಲೂ ದಿಗಿಲು ಎಂದರೆ ದಿಗಿಲು!”


ತಿರುಗಿಸಲ್ಪಟ್ಟ ಮೇಲೆಯೆ ನಾನು ಪಶ್ಚಾತ್ತಾಪ ಪಟ್ಟೆ ತಿಳುವಳಿಕೆ ಹೊಂದಿದ ಮೇಲೆಯೆ ಕೆನ್ನೆಗೆ ಹಾಕಿಕೊಂಡೆ ನನ್ನ ಯೌವನ ನಡತೆ ನನಗೆ ಅವಮಾನದ ಹೊರೆ ಈ ಕಾರಣ ಲಜ್ಜೆಗೊಂಡೆ. ಹೌದು, ನಾಚಿಕೆಯಿಂದ ತಲೆತಗ್ಗಿಸಿದೆ’.”


ಆಗ ನೀವು ನಿಮ್ಮ ದುರ್ಮಾರ್ಗ, ದುರಾಚಾರಗಳನ್ನು ಜ್ಞಾಪಕಕ್ಕೆ ತಂದುಕೊಂಡು, ನಿಮ್ಮ ಅಪರಾಧಗಳ ಮತ್ತು ಅಸಹ್ಯಕಾರ್ಯಗಳ ನಿಮಿತ್ತ, ನಿಮಗೆ ನೀವೇ ಹೇಸಿಕೊಳ್ಳುವಿರಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು