ಯೆಹೆಜ್ಕೇಲನು 21:2 - ಕನ್ನಡ ಸತ್ಯವೇದವು C.L. Bible (BSI)2 “ನರಪುತ್ರನೇ, ನೀನು ಜೆರುಸಲೇಮಿಗೆ ಅಭಿಮುಖನಾಗಿ, ಅಲ್ಲಿನ ಪವಿತ್ರಸ್ಥಳಗಳ ಕಡೆಗೆ ಮಾತಾಡುತ್ತಾ , ಇಸ್ರಯೇಲ್ ನಾಡಿನ ಪ್ರಸ್ತಾಪವನ್ನೆತ್ತಿ ಆ ನಾಡಿಗೆ ಹೀಗೆ ಪ್ರವಾದಿಸು: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ನರಪುತ್ರನೇ, ನೀನು ಯೆರೂಸಲೇಮಿನ ಅಭಿಮುಖನಾಗಿ ಅಲ್ಲಿನ ಪವಿತ್ರ ಸ್ಥಾನಗಳ ಕಡೆಗೆ ಮಾತನಾಡುತ್ತಾ ಇಸ್ರಾಯೇಲ್ ದೇಶ ಕುರಿತು ಪ್ರವಾದಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನರಪುತ್ರನೇ, ನೀನು ಯೆರೂಸಲೇವಿುಗೆ ಅಭಿಮುಖನಾಗಿ ಅಲ್ಲಿನ ಪವಿತ್ರಸ್ಥಾನಗಳ ಕಡೆಗೆ ಮಾತಾಡುತ್ತಾ ಇಸ್ರಾಯೇಲ್ ದೇಶದ ಪ್ರಸ್ತಾಪವನ್ನೆತ್ತಿ ಆ ದೇಶಕ್ಕೆ ಹೀಗೆ ಸಾರಿಹೇಳು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 “ನರಪುತ್ರನೇ, ಜೆರುಸಲೇಮಿನ ಕಡೆಗೆ ನೋಡಿ ಅವರ ಪವಿತ್ರ ಸ್ಥಳಗಳಿಗೆ ವಿರುದ್ಧವಾಗಿ ಹೇಳು. ನನ್ನ ಪರವಾಗಿ ಇಸ್ರೇಲ್ ದೇಶದ ವಿರುದ್ಧವಾಗಿ ಮಾತನಾಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ಮನುಷ್ಯಪುತ್ರನೇ, ನೀನು ಯೆರೂಸಲೇಮಿಗೆ ಅಭಿಮುಖವಾಗಿ ಅಲ್ಲಿನ ಪರಿಶುದ್ಧ ಸ್ಥಳಗಳ ಕಡೆಗೆ ಮಾತನಾಡುತ್ತಾ ಇಸ್ರಾಯೇಲ್ ದೇಶಕ್ಕೆ ವಿರುದ್ಧವಾಗಿ ಪ್ರವಾದಿಸಿ, ಅಧ್ಯಾಯವನ್ನು ನೋಡಿ |
ನೀನು ನಿನ್ನ ಸೇವಕರ ಮೂಲಕ ಸರ್ವೇಶ್ವರನನ್ನು ನಿಂದಿಸಿರುವೆ. ಅಲ್ಲದೆ, ಈ ಮಾತುಗಳನ್ನಾಡಿ ಜಂಬಕೊಚ್ಚಿಕೊಂಡಿರುವೆ : ‘ಹತ್ತಿದ್ದೇನೆ ಗಿರಿಶಿಖರಗಳನ್ನು ರಥಸಮೂಹದೊಡನೆ ಸೇರಿದ್ದೇನೆ ಲೆಬನೋನಿನ ದುರ್ಗಮ ಸ್ಥಳಗಳನ್ನೇ. ಕಡಿದಿದ್ದೇನೆ ಅದರ ಎತ್ತರವಾದ ದೇವದಾರು ವೃಕ್ಷಗಳನ್ನೇ, ಕತ್ತರಿಸಿದ್ದೇನೆ ಅದರ ಶ್ರೇಷ್ಠವಾದ ತುರಾಯಿ ಮರಗಳನ್ನೇ. ಒಳಹೊಕ್ಕಿದ್ದೇನೆ ಅಲ್ಲಿನ ದೂರದ ಶಿಖರವನ್ನೇ, ಪ್ರವೇಶಿಸಿದ್ದೇನೆ ದಟ್ಟವಾದ ಆ ಕಾಡುಮೇಡುಗಳನ್ನೇ