ಯೆಹೆಜ್ಕೇಲನು 21:23 - ಕನ್ನಡ ಸತ್ಯವೇದವು C.L. Bible (BSI)
23 ಆದರೆ ಪುರನಿವಾಸಿಗಳು ತಾವು ಆ ಅರಸನಿಂದ ಮಾಡಿಸಿಕೊಂಡ ಪ್ರಮಾಣಗಳಲ್ಲಿ ಭರವಸೆಯಿಟ್ಟು, ಈ ಶಕುನವು ಸುಳ್ಳೆಂದು ಭಾವಿಸುವರು; ಆದರೆ ಅವರು ತನ್ನ ಕೈಗೆ ಸಿಕ್ಕಿಬೀಳಲೆಂದು ಅವರ ಅಧರ್ಮವನ್ನು ಅವನು ಬೆಳಕಿಗೆ ತರುವನು.
23 ಪುರನಿವಾಸಿಗಳು ತಾವು ಆ ಅರಸನಿಂದ ಮಾಡಿಸಿಕೊಂಡ ಪ್ರಮಾಣಗಳಲ್ಲಿ ಭರವಸವಿಟ್ಟು, ಈ ಶಕುನವು ಸುಳ್ಳೆಂದು ಭಾವಿಸುವರು; ಆದರೆ ಅವನು ಅವರ ಅಧರ್ಮವನ್ನು ಬಯಲಿಗೆ ತರಲು ಅವನ ಕೈಗೆ ಸಿಕ್ಕಿಬೀಳುವರು.”
23 ಪುರನಿವಾಸಿಗಳು ತಾವು ಆ ಅರಸನಿಂದ ಮಾಡಿಸಿಕೊಂಡ ಪ್ರಮಾಣಗಳಲ್ಲಿ ಭರವಸವಿಟ್ಟು ಈ ಶಕುನವು ಸುಳ್ಳೆಂದು ಭಾವಿಸುವರು; ಆದರೆ ಅವನು ಅವರ ಅಧರ್ಮವನ್ನು ಬೈಲಿಗೆ ತರಲು [ಅವನ ಕೈಗೆ] ಸಿಕ್ಕಿಬೀಳುವರು.
23 ಇಸ್ರೇಲ್ ಜನರಿಗೆ ಆ ಮಂತ್ರತಂತ್ರಗಳ ಗುರುತು ಅರ್ಥವಿಲ್ಲದ್ದಾಗಿದೆ. ಅವರು ಮಾಡಿದ ವಾಗ್ದಾನವು ಅವರೊಂದಿಗಿದೆ. ಆದರೆ ಯೆಹೋವನು ಅವರ ಪಾಪಗಳನ್ನು ನೆನಪಿಗೆ ತರುವನು. ಆಗ ಇಸ್ರೇಲರು ಶತ್ರುವಶವಾಗುವರು.”
23 ಆದರೆ ಅವರು ತಾವು ಅರಸನಿಂದ ಮಾಡಿಸಿಕೊಂಡ ಪ್ರಮಾಣಗಳಲ್ಲಿ ನಂಬಿಕೆ ಇಟ್ಟಿದ್ದರಿಂದ, ಅವರಿಗೆ ಸುಳ್ಳು ಶಕುನದ ಹಾಗೆ ಕಾಣುವುದು. ಆದರೆ ಅವನು ಅವರ ಅಕ್ರಮವನ್ನು ಜ್ಞಾಪಕಪಡಿಸಿ, ಅವರನ್ನು ಸೆರೆಯಾಗಿ ಒಯ್ಯುವನು.
ಈ ಎರಡು ಸಂದರ್ಭಗಳಲ್ಲೂ ಆ ಗಂಡನು ತನ್ನ ಹೆಂಡತಿಯನ್ನು ಯಾಜಕನ ಬಳಿಗೆ ಕರೆದುಕೊಂಡು ಬರಬೇಕು. ಅವಳ ಸಂಗತಿಯನ್ನು ವಿಚಾರಿಸುವುದಕ್ಕಾಗಿ, ಅವನು ಯಾಜಕನಿಗೆ ಮೂರು ಸೇರು ಜವೆಗೋದಿ ಹಿಟ್ಟನ್ನು ಕಾಣಿಕೆಯಾಗಿ ತಂದುಕೊಡಬೇಕು. ಅದು ವ್ಯಭಿಚಾರ ಸಂಶಯವನ್ನು ಸೂಚಿಸುವುದಕ್ಕೂ ಪಾಪವನ್ನು ಹೊರಪಡಿಸುವುದಕ್ಕೂ, ಸರ್ವೇಶ್ವರನಿಗೆ ನೈವೇದ್ಯವಾದ ಕಾಣಿಕೆ. ಆದ್ದರಿಂದ ಆ ಹಿಟ್ಟಿನ ಮೇಲೆ ಎಣ್ಣೆಯನ್ನು ಹುಯ್ಯಬಾರದು, ಸಾಂಬ್ರಾಣಿಯನ್ನು ಹಾಕಬಾರದು.
ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ನಿಮ್ಮ ಅಪರಾಧಗಳು ಬೆಳಕಿಗೆ ಬಂದು, ನಿಮ್ಮ ಪಾಪಗಳು ನಿಮ್ಮ ಕಾರ್ಯಗಳಲ್ಲೆಲ್ಲಾ ಪ್ರತ್ಯಕ್ಷವಾಗಿ, ನೀವು ನಿಮ್ಮ ಅಧರ್ಮವನ್ನು ನನ್ನ ನೆನಪಿಗೆ ತಂದಿರುವಿರಿ; ಆದಕಾರಣ ಶತ್ರುವಿನ ಕೈಗೆ ಸಿಕ್ಕಿಬೀಳುವಿರಿ.
ಮಹಾನಗರವು ಮೂರು ಭಾಗವಾಗಿ ಸೀಳಿಹೋಯಿತು. ಎಲ್ಲಾ ದೇಶಗಳ ನಗರಗಳು ನಾಶವಾದವು. ಬಾಬಿಲೋನ್ ಎಂಬ ಮಹಾನಗರವನ್ನು ದೇವರು ಮರೆಯಲಿಲ್ಲ; ತಮ್ಮ ರೋಷವೆಂಬ ಮದ್ಯಪಾತ್ರೆಯಿಂದ ಅದಕ್ಕೆ ಕುಡಿಯಲು ಕೊಟ್ಟರು.
ಇದಲ್ಲದೆ, ನೆಬೂಕದ್ನೆಚ್ಚರನಿಗೆ ಒಳಗಾಗುತ್ತೇನೆಂದು, ದೇವರ ಮೇಲೆ ಆಣೆಯಿಟ್ಟು ಪ್ರಮಾಣಮಾಡಿದ್ದರೂ, ಅವನಿಗೆ ವಿರುದ್ಧ ದಂಗೆ ಎದ್ದನು. ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ ಅಭಿಮುಖನಾಗಲೊಲ್ಲದೆ, ಹಟಹಿಡಿದು ಮನಸ್ಸನ್ನು ಕಠಿಣಮಾಡಿಕೊಂಡನು.