Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 21:7 - ಕನ್ನಡ ಸತ್ಯವೇದವು C.L. Bible (BSI)

7 ‘ಏಕೆ ನರಳಾಡುತ್ತೀ?’ ಎಂದು ಅವರು ನಿನ್ನನ್ನು ಕೇಳುವರು. ಆಗ ನೀನು ಅವರಿಗೆ - ‘ದುರ್ವಾರ್ತೆಯ ನಿಮಿತ್ತ ನರಳುತ್ತಿದ್ದೇನೆ; ಇಗೋ, ವಿಪತ್ತು ಬಂದಿತು; ಎಲ್ಲರ ಹೃದಯವು ಕರಗಿ ನೀರಾಗುವುದು, ಎಲ್ಲರ ಕೈ ಜೋಲುಬೀಳುವುದು, ಎಲ್ಲರ ಮನಸ್ಸು ಕುಂದುವುದು, ಎಲ್ಲರ ಮೊಣಕಾಲು ನೀರಿನಂತೆ ಅದರುವುದು; ಇಗೋ, ಬಂದಿತು, ಬಂದಾಯಿತು! ಇದು ಸರ್ವೇಶ್ವರನಾದ ದೇವರ ನುಡಿ,’ ಎಂದು ಉತ್ತರಕೊಡು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ‘ಏಕೆ ನರಳಾಡುತ್ತೀ?’ ಎಂದು ಅವರು ನಿನ್ನನ್ನು ಕೇಳಲು ನೀನು ಅವರಿಗೆ, ‘ಕೆಟ್ಟ ವಾರ್ತೆಯ ನಿಮಿತ್ತ ನರಳುತ್ತೇನೆ; ಇಗೋ, ವಿಪತ್ತು ಬಂತು; ಎಲ್ಲರ ಹೃದಯವು ಕರಗಿ ನೀರಾಗುವುದು; ಎಲ್ಲರ ಕೈ ಜೋಲು ಬೀಳುವುದು, ಎಲ್ಲರ ಮನಸ್ಸು ಕುಂದುವುದು, ಎಲ್ಲರ ಮೊಣಕಾಲು ನೀರಿನಂತೆ ಚಂಚಲವಾಗುವುದು; ಇಗೋ, ಬಂದಿತು, ಬಂದಾಯಿತು’ ಇದು ಕರ್ತನಾದ ಯೆಹೋವನ ನುಡಿ ಎಂದು ಉತ್ತರಕೊಡು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಏಕೆ ನರಳಾಡುತ್ತೀ ಎಂದು ಅವರು ನಿನ್ನನ್ನು ಕೇಳಲು ನೀನು ಅವರಿಗೆ - ದುರ್ವಾರ್ತೆಯ ನಿವಿುತ್ತ ನರಳುತ್ತೇನೆ; ಇಗೋ, ವಿಪತ್ತು ಬಂತು; ಎಲ್ಲರ ಹೃದಯವು ಕರಗಿ ನೀರಾಗುವದು; ಎಲ್ಲರ ಕೈ ಜೋಲು ಬೀಳುವದು, ಎಲ್ಲರ ಮನಸ್ಸು ಕುಂದುವದು, ಎಲ್ಲರ ಮೊಣಕಾಲು ನೀರಿನಂತೆ ಚಂಚಲವಾಗುವದು; ಇಗೋ, ಬಂತು, ಆಯಿತು; ಇದು ಕರ್ತನಾದ ಯೆಹೋವನ ನುಡಿ ಎಂದು ಉತ್ತರಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆಗ ಅವರು, ‘ನೀನು ದುಃಖದಿಂದ ಅಳುವದೇಕೆ?’ ಎಂದು ವಿಚಾರಿಸುವರು. ಆಗ ನೀನು ಹೀಗೆ ಹೇಳಬೇಕು: ‘ಭೀತಿಯನ್ನು ಉಂಟು ಮಾಡುವ ವಾರ್ತೆ ಬರುವದರಿಂದ ಎಲ್ಲರ ಹೃದಯಗಳು ಭಯದಿಂದ ಕರಗಿಹೋಗಿರುತ್ತವೆ; ಕೈಗಳು ಬಲಹೀನವಾಗುತ್ತವೆ. ಪ್ರತಿ ಮನುಷ್ಯನ ಆತ್ಮವು ಕೃಶವಾಗುವುದು. ಮೊಣಗಂಟುಗಳು ನೀರಿನಂತಿರುವವು.’ ನೋಡಿ, ಆ ಕೆಟ್ಟ ಸುದ್ದಿಯು ಬರುತ್ತಲಿದೆ. ಇವೆಲ್ಲಾ ನಡೆಯುವವು.” ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ‘ನೀನು ಏಕೆ ನರಳಾಡುತ್ತೀ?’ ಎಂದು ಅವರು ನಿನಗೆ ಕೇಳಿದಾಗ, ನೀನು ಹೇಳಬೇಕಾದದ್ದೇನೆಂದರೆ, ‘ಆ ಸುದ್ದಿಯ ನಿಮಿತ್ತವೇ ಅದು ಬರುವುದು. ಏಕೆಂದರೆ ಆಗ ಹೃದಯಗಳೆಲ್ಲಾ ಕರಗುವುವು. ಕೈಗಳೆಲ್ಲಾ ನಿತ್ರಾಣವಾಗುವುವು. ಪ್ರತಿಯೊಂದು ಆತ್ಮವು ಕುಂದುವದು. ಎಲ್ಲಾ ಮೊಣಕಾಲುಗಳು ನೀರಿನಂತೆ ತೇವವಾಗಿರುತ್ತವೆ. ಅದು ಬರುತ್ತದೆ, ಅದು ತರಲಾಗುತ್ತದೆ,’ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 21:7
37 ತಿಳಿವುಗಳ ಹೋಲಿಕೆ  

ಎಲ್ಲರ ಕೈಗಳು ಜೋಲು ಬಿದ್ದಿರುವುವು; ಎಲ್ಲರ ಮೊಣಕಾಲುಗಳು ನೀರಿನಂತೆ ಅದರುವುವು.


ಆದ್ದರಿಂದ, ಜೋತುಬೀಳುವ ನಿಮ್ಮ ಕೈಗಳನ್ನು ಮೇಲೆತ್ತಿ, ಕುಸಿದುಬೀಳುವ ನಿಮ್ಮ ಮೊಣಕಾಲುಗಳನ್ನು ಚೇತರಿಸಿಕೊಳ್ಳಿ.


ನಿನೆವೆ ಬರಿದಾಗಿದೆ; ಬಟ್ಟಬರಿದಾಗಿ ಪಾಳುಬಿದ್ದಿದೆ; ಎದೆಕರಗಿದೆ, ಮೊಣಕಾಲುಗಳು ಅದರುತ್ತಿವೆ. ಎಲ್ಲರ ಸೊಂಟಗಳು ಮುರಿದಂತಾಗಿವೆ, ಅವರ ಮುಖಗಳು ಬಾಡಿಹೋಗಿವೆ.


ಉಪದ್ರವದ ಮೇಲೆ ಉಪದ್ರವ, ಸುದ್ದಿಯ ಮೇಲೆ ಸುದ್ದಿ ಹರಡುವುವು; ‘ದಿವ್ಯದರ್ಶನವಾಯಿತೆ’ ಎಂದು ಪ್ರವಾದಿಯನ್ನು ಕೇಳುತ್ತಲೇ ಇರುವರು; ಯಾಜಕರಲ್ಲಿ ಧರ್ಮೋಪದೇಶ ಅಡಗಿಹೋಗುವುದು, ಹಿರಿಯರಲ್ಲಿ ಸಲಹೆ ಸಮಾಲೋಚನೆ ಇಲ್ಲವಾಗುವುದು.


ಈ ಸುದ್ದಿ ಬಿತ್ತು ಬಾಬಿಲೋನಿನ ಅರಸನ ಕಿವಿಗೆ ಅವನ ಕೈಗಳಿದೋ ಜೋಲುಬಿದ್ದಿವೆ ಅವನನ್ನು ಹಿಡಿದಿದೆ ಪ್ರಸವವೇದನೆಯಂಥ ಯಾತನೆ.


ಈ ಕಾರಣ ಜೋಲುಬೀಳುವುವು ಎಲ್ಲರ ಕೈಗಳು; ಕರಗಿ ನೀರಾಗುವುವು ಎಲ್ಲರ ಹೃದಯಗಳು.


ಗ್ರಹಶಕ್ತಿಗಳು ಕದಲುವುದರಿಂದ ಧರೆಯಲ್ಲಿ ಏನೇನು ಸಂಭವಿಸುವುದೋ ಎಂಬ ಭಯಭೀತಿಯಿಂದ ಮಾನವರು ದಿಗ್ಭ್ರಮೆಗೊಳ್ಳುವರು.


ಜನರು, “ನೀನು ಹೀಗೆ ಮಾಡುವುದರಿಂದ ನಾವು ತಿಳಿಯತಕ್ಕದ್ದೇನು? ತಿಳಿಸುವುದಿಲ್ಲವೋ?’ ಎಂದು ನನ್ನನ್ನು ಕೇಳಿದರು.


ಆಗ ನಾನು - “ಅಯ್ಯೋ, ಸರ್ವೇಶ್ವರನಾದ ದೇವರೇ, ‘ಅವನು ಒಗಟುಗಾರನಲ್ಲವೆ?’ ಎಂದು ಈ ಜನರು ನನ್ನ ಬಗ್ಗೆ ಆಡಿಕೊಳ್ಳುತ್ತಾರೆ” ಎಂದು ಅರಿಕೆಮಾಡಿದೆನು.


ಈ ಕಾರಣ, ನಮ್ಮ ಹೃದಯ ಕುಂದಿದೆ ಇದೇ ಕಾರಣ, ನಮ್ಮ ಕಣ್ಣು ಮೊಬ್ಬಾಗಿದೆ.


ದಮಸ್ಕಸ್ ಅನ್ನು ಕುರಿತು ಸರ್ವೇಶ್ವರ ಹೀಗೆನ್ನುತ್ತಾರೆ: “ಹಮಾತ್ ಮತ್ತು ಅರ್ಪಾದ್ ನಗರಗಳು ಆಶಾಭಂಗಗೊಂಡಿವೆ. ಅಶುಭ ಸಮಾಚಾರವನ್ನು ಕೇಳಿ ಕರಗಿಹೋಗಿವೆ. ಸಮುದ್ರದಂತೆ ಅವು ತಲ್ಲಣಗೊಂಡು ಅಶಾಂತವಾಗಿವೆ.


ಅಯ್ಯೋ, ನಾನು ಮುಕ್ತನಾಗಿಲ್ಲ ದುಃಖದಿಂದ ನನ್ನ ಹೃದಯ ಕುಂದಿಹೋಗಿದೆ ಶೋಕದಿಂದ.


ಜೋಲುಬಿದ್ದ ಕೈಗಳನ್ನು ಬಲಗೊಳಿಸಿರಿ ನಡುಗುವ ಕಾಲುಗಳನ್ನು ದೃಢಗೊಳಿಸಿರಿ.


ಅದು ಹಾದುಹೋಗುವಾಗಲೆಲ್ಲಾ ನಿಮ್ಮನ್ನು ಹಿಡಿದುಬಿಡುವುದು. ಪ್ರತಿದಿನವೂ ಹಗಲೂ ರಾತ್ರಿ ಅದು ಹಾದುಹೋಗುವುದು. ಸರ್ವೇಶ್ವರ ಸ್ವಾಮಿಯ ಈ ಸಂದೇಶವನ್ನು ಅರ್ಥಮಾಡಿಕೊಳ್ಳುವವರಿಗೆ ಭಯಭ್ರಾಂತಿ ಉಂಟಾಗುವುದು.


ಸಿರಿಯರ ಸೈನಿಕರು ಈಗಾಗಲೇ ಇಸ್ರಯೇಲಿನ ಗಡಿಯೊಳಗಿದ್ದಾರೆ ಎಂಬ ಸುದ್ದಿ ಜುದೇಯದ ಅರಸನಿಗೆ ಮುಟ್ಟಿದ್ದೇ ತಡ, ಅವನೂ ಅವನ ಪ್ರಜೆಗಳೆಲ್ಲರೂ ಹೆದರಿದರು. ಬಿರುಗಾಳಿಗೆ ಸಿಕ್ಕಿದ ಗಿಡಮರಗಳಂತೆ ನಡುಗಿದರು.


ಆದ್ದರಿಂದ ಇಸ್ರಯೇಲ್ ದೇವರಾದ ಸರ್ವೇಶ್ವರ ಎಂಬ ನಾನು ಜೆರುಸಲೇಮಿನವರ ಮೇಲೂ ಜುದೇಯದವರ ಮೇಲೂ ಕೇಡನ್ನು ಬರಮಾಡುವೆನು; ಅದನ್ನು ಕೇಳುವವರ ಎರಡು ಕಿವಿಗಳೂ ಬಿರಿಯುವುವು.


ಆಗ ಸಿಂಹಹೃದಯಿಗಳಾದ ಶೂರರ ಎದೆಯೂ ಕರಗಿ ನೀರಾಗುವುದು. ನಿಮ್ಮ ತಂದೆ ರಣವೀರನೆಂದೂ ಅವನ ಸಂಗಡ ಇದ್ದವರು ಪರಾಕ್ರಮಶಾಲಿಗಳೆಂದೂ ಎಲ್ಲಾ ಇಸ್ರಯೇಲರು ಬಲ್ಲರಷ್ಟೆ.


ಜೋರ್ಡನಿನ ಪಶ್ಚಿಮದಲ್ಲಿದ್ದ ಅಮೋರಿಯರ ಎಲ್ಲ ಅರಸರು ಮತ್ತು ಸಮುದ್ರದ ಬಳಿಯಿದ್ದ ಸರ್ವ ಕಾನಾನ್ ರಾಜರು ಸರ್ವೇಶ್ವರ ಸ್ವಾಮಿ ಇಸ್ರಯೇಲರ ಕಣ್ಮುಂದೆಯೇ ಜೋರ್ಡನನ್ನು ಬತ್ತಿಸಿ ಆ ನದಿ ದಾಟಿಸಿದರೆಂದು ಕೇಳಿದರು. ಆಗ ಅವರ ಎದೆ ಒಡೆದುಕೋಯಿತು. ಇಸ್ರಯೇಲರ ಮುಂದೆ ಅವರಿಗೆ ಧೈರ್ಯವಿಲ್ಲದೆ ಹೋಯಿತು.


ಮತ್ತು ‘ಯಾವನಾದರೂ ಧೈರ್ಯ ಕಡಿಮೆಯಾಗಿ ಅಂಜಿಕೊಂಡರೆ ಅವನೂ ಮನೆಗೆ ಹೋಗಲಿ; ಅವನು ದಿಗಿಲುಪಡುವುದರಿಂದ ಅವನ ಜೊತೆಗಾರರೂ ದಿಗಿಲುಪಟ್ಟಾರು’, ಎಂದು ಹೇಳಬೇಕು.


“ನಿಮ್ಮಲ್ಲಿ ಯಾರ್ಯಾರು ಶತ್ರುದೇಶಗಳಲ್ಲಿ ಅಳಿದುಳಿದಿರುವಿರೋ ಅವರ ಅಂತರಾಳದಲ್ಲಿ ಭಯಭೀತಿಯನ್ನು ಹುಟ್ಟಿಸುವೆನು. ಗಾಳಿಗೆ ತೂರಾಡುವ ತರಗೆಲೆಯ ಸಪ್ಪಳವೂ ಅವರಲ್ಲಿ ದಿಗಿಲು ಹುಟ್ಟಿಸುವುದು.ಆ ಸಪ್ಪಳ ಕೇಳಿ, ಖಡ್ಗಕ್ಕೆ ಹೆದರಿ ಓಡಿಹೋಗುವವರಂತೆ ಫೇರಿಕೀಳುವರು. ಯಾರೂ ಬೆನ್ನಟ್ಟಿಬಾರದಿದ್ದರೂ ಅವರು ಎದ್ದುಬಿದ್ದು ಓಡುವರು.


ಕಳವಳಗೊಂಡರು ಎದೋಮ್ಯರ ಕುಲನಾಯಕರು ಗಡಗಡನೆ ನಡುಗುತ್ತಿಹರು ಮೋವಾಬ್ಯರ ಮುಖಂಡರು. ಕರಗಿ ನೀರಾಗಿ ಹೋದರು ಕಾನಾನ್ ನಾಡಿನವರು.


ಎಲ್ಲದರ ಅಂತ್ಯಕಾಲವು ಹತ್ತಿರವಾಯಿತು. ಈ ಕಾರಣ ನೀವು ಜಿತೇಂದ್ರಿಯರಾಗಿಯೂ ಜಾಗ್ರತರಾಗಿಯೂ ಪ್ರಾರ್ಥನೆಮಾಡುತ್ತಿರಿ.


ಆಯಿ ಊರಿನವರು ಅವರನ್ನು ಊರ ಬಾಗಿಲಿನಿಂದ ಕಲ್ಲುಗಣಿಯವರೆಗೂ ಹಿಂದಟ್ಟಿ ಇಳಿನೆಲದಲ್ಲಿ ಅವರನ್ನು ಸೋಲಿಸಿ ಸುಮಾರು ಮೂವತ್ತಾರು ಮಂದಿಯನ್ನು ಕೊಂದುಹಾಕಿದರು. ಇದರಿಂದ ಇಸ್ರಯೇಲರ ಧೈರ್ಯ ಕರಗಿ ನೀರಾಯಿತು.


ಅವರಾಗಲಿ ಬೇಗನೆ ಕಾಣದೆ ಹೋಗುವ ತೊರೆಯಂತೆ I ನಸುಕಿ ನಾಶವಾಗಲಿ ಪಾದದಡಿ ಸಿಲುಕಿದ ಗರಿಕೆಕಣದಂತೆ II


ನರಪುತ್ರನೇ, ಮೊರೆಯಿಡು; ಸೊಂಟಮುರಿದಷ್ಟು ದುಃಖದಿಂದ ಜನರ ಮುಂದೆ ನರಳಾಡು.


ಸರ್ವೇಶ್ವರ ನನಗೆ ಅನುಗ್ರಹಿಸಿದ ವಾಣಿ ಇದು:


ನೀರಾಗುವುದು ಜನರ ಹೃದಯ, ಎಡವಿ ಬೀಳುವರು ಬಹುಜನ. ಪುರದ್ವಾರಗಳಿಗೇ ತಂದಿರುವೆನು ಹತಿಸುವಾ ಖಡ್ಗವ. ಮಿನುಗುತಿಹುದದು ಮಿಂಚಿನಂತೆ ಹರಿತವಿದೆ ವಧೆಗಾಗುವ ಕತ್ತಿಯಂತೆ.


ನಾನು ನಿನ್ನನ್ನು ದಂಡಿಸುವ ಕಾಲದಲ್ಲಿ ಮನಸ್ಸನ್ನು ಗಟ್ಟಿಮಾಡಿಕೊಂಡಿರುವೆಯಾ? ಕೈಗಳನ್ನು ಬಲಪಡಿಸಿಕೊಂಡಿರುವೆಯಾ? ಸರ್ವೇಶ್ವರನಾದ ನಾನೇ ಇದನ್ನು ನುಡಿದಿದ್ದೇನೆ. ಅಂತೆಯೇ ನಡೆಸುತ್ತೇನೆ.


ಅದನ್ನು ಕಂಡದ್ದೆ ಅವನ ಮುಖ ಕಳೆಗುಂದಿತು, ಮನಸ್ಸು ಕಳವಳಗೊಂಡಿತು, ಸೊಂಟದ ಕೀಲು ಸಡಿಲಗೊಂಡಿತು, ಮೊಣಕಾಲುಗಳು ಒಂದಕ್ಕೊಂದು ಬಡಿದುಕೊಂಡವು.


ಆಗ ಯೆರೆಮೀಯನು, “ನೀವು ಕೇಳಿದ ಮಾತುಗಳನ್ನೆಲ್ಲ, ಅಂದರೆ ಈ ದೇವಾಲಯಕ್ಕೂ ನಗರಕ್ಕೂ ವಿರುದ್ಧವಾದ ಮಾತುಗಳನ್ನು ನುಡಿಯಲು ನನ್ನನ್ನು ಕಳಿಸಿದವರು ಸರ್ವೇಶ್ವರನೇ.


“ನರಪುತ್ರನೇ, ಇಸ್ರಯೇಲಿನ ಬೆಟ್ಟಗಳಿಗೆ ಅಭಿಮುಖನಾಗಿ ನಿಂತು ಅವುಗಳನ್ನು ಕುರಿತು ಈ ದೈವೋಕ್ತಿಯನ್ನು ನುಡಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು